ಸ್ಥಳೀಯ
Moodbidri-ಆ. 7, 8ರಂದು ಮೂಡುಬಿದಿರೆಯಲ್ಲಿ 16ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳ: 24 ಸಾವಿರಕ್ಕೂ ಅಧಿಕ ಉದ್ಯೋಗಾವಕಾಶಗಳು..!
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಳ್ಳಲಾಗುವ ಪ್ರತಿಷ್ಠಿತ ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳದ 16ನೇ ಆವೃತ್ತಿಯು ಇದೇ ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ.
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಳ್ಳಲಾಗುವ ಪ್ರತಿಷ್ಠಿತ ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳದ 16ನೇ ಆವೃತ್ತಿಯು ಇದೇ ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ.
ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, “ಈ ಬಾರಿಯ ಮೇಳದಲ್ಲಿ ಈಗಾಗಲೇ 329ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುವುದನ್ನು ಖಚಿತಪಡಿಸಿವೆ. ಸುಮಾರು 24,000ಕ್ಕೂ ಅಧಿಕ ಉದ್ಯೋಗಾವಕಾಶಗಳು ಲಭ್ಯವಿದ್ದು, ಗ್ರಾಮೀಣ ಭಾಗದ ಪ್ರತಿಭಾವಂತರಿಗೆ ಆದ್ಯತೆ ನೀಡಲಾಗುವುದು,” ಎಂದು ತಿಳಿಸಿದರು.
2026ನೇ ಸಾಲಿನಲ್ಲಿ ಪದವಿ ಪೂರ್ಣಗೊಳಿಸಿದವರು, ಅದಕ್ಕೂ ಹಿಂದಿನ ವರ್ಷಗಳಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿರುವ ಅಭ್ಯರ್ಥಿಗಳೂ ಭಾಗವಹಿಸಲು ಅರ್ಹರಾಗಿರುತ್ತಾರೆ. ಉದ್ಯೋಗ ಮೇಳದಲ್ಲಿ ವಿಶೇಷ ಎಐ ಆಧಾರಿತ ಚಾಟ್‌ಬಾಟ್ ವ್ಯವಸ್ಥೆಯನ್ನು ಪರಿಚಯಿಸಲಾಗಿದ್ದು, ಅಭ್ಯರ್ಥಿಗಳು ತಮ್ಮ ಬಯೋಡೇಟಾವನ್ನು ಅಪ್ ಲೋಡ್ ಮಾಡಿದ ತತ್ ಕ್ಷಣ ಅವರ ವಿದ್ಯಾರ್ಹತೆ, ಆರ್ಹತೆ ಅನುಗುಣ ವಾದ ಕಂಪೆನಿಗಳು, ಉದ್ಯೋಗಾವಕಾಶಗಳನ್ನು ಗುರುತಿಸಿ ಶಿಫಾರಸು ಮಾಡುವ ವ್ಯವಸ್ಥೆ ಇರಲಿದೆ. ಹೊರ ಜಿಲ್ಲೆ ಹೊರ ರಾಜ್ಯಗಳ ಅಭ್ಯರ್ಥಿಗಳಿಗಾಗಿ ಆ. 6ರಿಂದ ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾ ಗುತ್ತದೆ, ಐಟಿಐ, ಡಿಪ್ಲೊಮಾ ವಿದ್ಯಾರ್ಥಿ ಗಳಿಗೆ ಉಚಿತ ಬಸ್ ಸೌಲಭ್ಯ ಒದಗಿಸಲಾಗುತ್ತದೆ ಎಂದರು.
ಎಕ್ಸ್‌ಪರ್ಟೈಸ್ ಸಂಸ್ಥೆ ಡಿಪ್ಲೊಮಾ, ಐಟಿಐ ಅಭ್ಯರ್ಥಿಗಳಿಗಾಗಿ ಗಲ್ಫ್ ರಾಷ್ಟ್ರ ಗಳ ಉದ್ಯೋಗಾವಕಾಶ ಒದಗಿಸುತ್ತಿದೆ. ಎಂಬಿಎ, ಎಂಎಚ್ ಆರ್‌ಡಿ, ಎಂಎಸ್ ಡಬ್ಲ್ಯು, ಬಿಎಸ್‌ಡಬ್ಲ್ಯು ಅಭ್ಯರ್ಥಿಗಳಿ ಗಾಗಿ 70ಕ್ಕೂ ಹೆಚ್ಚು ಮಾನವ ಸಂಪನ್ಮೂಲ ಹುದ್ದೆಗಳು ಲಭ್ಯವಿವೆ. ಉತ್ಪಾದನ ಕ್ಷೇತ್ರದಲ್ಲಿ 74 ಕಂಪೆನಿಗಳು ಭಾಗವಹಿಸುತ್ತಿದ್ದು 5,877ಕ್ಕೂ ಹೆಚ್ಚು ಉದ್ಯೋಗಾವಕಾಶ ಒದಗಿಸುತ್ತಿವೆ. ಟಾಟಾ ಎಲೆಕ್ಟ್ರಾನಿಕ್ಸ್ ಸಿಸ್ಟಮ್ಸ್ ಸೊಲ್ಯೂ ಷನ್ಸ್ ಪ್ರೈ. ಲಿ. (ಕೋಲಾರ) ಮಹಿಳಾ ಅಭ್ಯರ್ಥಿಗಳಿಗಾಗಿ ವಿಶೇಷ ನೇಮಕಾತಿ ಅಭಿಯಾನ ನಡೆಸುತ್ತಿದೆ. ಐಟಿ/ಐಟಿಇಎಸ್ ಕ್ಷೇತ್ರದಲ್ಲಿ 35 ಕಂಪೆನಿ ಗಳಿಂದ 200ಕ್ಕೂ ಹೆಚ್ಚು ಕೋರ್ ಐಟಿ, 3,500ಕ್ಕೂ ಹೆಚ್ಚು ನಾನ್-ಐಟಿ ಉದ್ಯೋಗಾವಕಾಶಗಳು ಲಭ್ಯವಿವೆ. ವಿವಿಧ ಬ್ಯಾಂಕ್‌ಗಳು, ಆಸ್ಪತ್ರೆಗಳು, ಎಲೆಕ್ಟ್ರಾನಿಕ್ ಸಂಸ್ಥೆಗಳು, ಮಾರಾಟ ಕ್ಷೇತ್ರ, ನಿರ್ಮಾಣ ವಲಯ, ಚಿಲ್ಲರೆ ವ್ಯಾಪಾರ ಮತ್ತು ಮಾರಾಟ, ಶಿಕ್ಷಣ ಮತ್ತು ಸ್ವಯಂ ಸೇವಾ ಸಂಸ್ಥೆಗಳು, ಆತಿಥ್ಯ ವಲಯ, ಮಾಧ್ಯಮ, ಔಷಧ ತಯಾರಿ ಕಂಪೆನಿ, ದೂರಸಂಪರ್ಕ ವಲಯಗಳಲ್ಲಿ ವಿವಿಧ ಹುದ್ದೆಗಳು ಲಭ್ಯವಿವೆ ಎಂದರು.
ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ ಶೆಟ್ಟಿ ಪ್ಲೇಸ್ ಮೆಂಟ್ ವಿಭಾಗದ ಮುಖ್ಯಸ್ಥೆ ರಂಜಿತಾ ಆಚಾರ್ಯ ಉಪಸ್ಥಿತರಿದ್ದರು.
ಉಚಿತ, ಕಡ್ಡಾಯ ಆನ್‌ಲೈನ್ ನೋಂದಣಿ
ಅಭ್ಯರ್ಥಿಗಳಿಗೆ ಆನ್ ಲೈನ್ ನೋಂದಣಿ ಕಡ್ಡಾಯಗೊಳಿಸಲಾಗಿದ್ದು https://alvaspragati.com/candidate-registration ಮೂಲಕ ಉಚಿತವಾಗಿ ನೋಂದಾಯಿಸಿ ಕೊಳ್ಳಬಹುದಾಗಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪೆನಿಗಳ ಮಾಹಿತಿಯನ್ನು www.alvaspragati.com ವೆಬ್‌ಸೈಟ್ ನಲ್ಲಿ ನಿರಂತರವಾಗಿ ನವೀಕರಿಸಲಾಗುತ್ತದೆ. ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಅನುಗುಣವಾದ ಉದ್ಯೋಗಾವಕಾಶ, ಭಾಗವಹಿಸುವ ಕಂಪೆನಿಗಳ ಮಾಹಿತಿಗಾಗಿವೆಬ್ ಸೈಟ್ ಗೆ ನಿಯಮಿತವಾಗಿ ಭೇಟಿ ನೀಡಬೇಕು. ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಅನುಗುಣವಾದ ಉದ್ಯೋಗಾವಕಾಶಗಳನ್ನು ಈ ವೆಬ್ ಸೈಟ್‌ನಲ್ಲಿ ಸುಲಭವಾಗಿ ಹುಡುಕಬಹುದು ಎಂದು ವಿವೇಕ್ ಆಳ್ವ ತಿಳಿಸಿದರು.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಬಿಎಂ.ಡಿ ಕ್ಯಾಂಪ್ ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಶಿಕ್ಷಣ
RTE-ಆರ್‌ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್‌ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್‌ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್‌ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
-
ರಾಜಕೀಯ23 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಬಿಗ್ ನ್ಯೂಸ್6 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಸಿನೆಮಾ23 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ23 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
Uncategorized5 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಕಾರ್ಯಕ್ರಮಗಳು23 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ23 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಬಿಗ್ ನ್ಯೂಸ್6 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್















