ಶಿಕ್ಷಣ
Vivekananda-ವಿವೇಕಾನಂದ ಮಹಾವಿದ್ಯಾಲಯದಲ್ಲಿ ನಾಯಕತ್ವ ತರಬೇತಿ ಶಿಬಿರಕ್ಕೆ ಚಾಲನೆ
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ಟ್ರೈನಿಂಗ್ ಆ್ಯಂಡ್ ಪ್ಲೇಸ್‌ಮೆಂಟ್ ಹಾಗೂ ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಮುಂಬೈನ ಎಂ.ಆರ್.ಪೈ ಫೌಂಡೇಶನ್ ಮತ್ತು ಫೋರಂ ಆಫ್ ಫ್ರೀ ಎಂಟರ್‌ಪ್ರೈಸ್ ಸಂಸ್ಥೆ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಎರಡು ದಿನದ ನಾಯಕತ್ವ ತರಬೇತಿ ಶಿಬಿರವನ್ನು ಉದ್ಘಾಟಿಸಿ ಪುತ್ತೂರಿನ ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿದರು.
ಪುತ್ತೂರು, ಜು.31: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ಉದ್ಯೋಗ ಪಡೆಯಲು ಪಠ್ಯ ಜ್ಞಾನ ಒಂದೇ ಮುಖ್ಯವಲ್ಲ. ಬದಲಾಗಿ ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ವಿಶೇಷ ಕೌಶಲ್ಯಗಳನ್ನು ಬೆಳೆಸಿಕೊಂಡರೆ ಉತ್ತಮ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಪ್ರತಿಭೆ ಅಡಗಿದ್ದು, ಅದನ್ನು ಗುರುತಿಸಿ ಪೋಷಿಸಲು ಕೌಸಲ್ಯಾಭಿರ್ವದ್ಧಿ ಕಾರ್ಯಕ್ರಮಗಳು, ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನ ಅಗತ್ಯ. ಹಾಗಾಗಿ ಇಂತಹ ಕಾರ್ಯಕ್ರಮಗಳ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗಿಸಿಕೊಂಡು ಭಾಗವಹಿಸಬೇಕು ಎಂದು ಪುತ್ತೂರಿನ ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಹೇಳಿದರು.
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ಟ್ರೈನಿಂಗ್ ಆ್ಯಂಡ್ ಪ್ಲೇಸ್‌ಮೆಂಟ್ ಹಾಗೂ ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಮುಂಬೈನ ಎಂ.ಆರ್.ಪೈ ಫೌಂಡೇಶನ್ ಮತ್ತು ಫೋರಂ ಆಫ್ ಫ್ರೀ ಎಂಟರ್‌ಪ್ರೈಸ್ ಸಂಸ್ಥೆ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಎರಡು ದಿನದ ನಾಯಕತ್ವ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಮುಂಬೈನ ಎಂಪವರ್‌ಗ್ರಾಫ್‌ನ ಸಂಸ್ಥಾಪಕಿ ಹಾಗೂ ಜೀವನ ಮತ್ತು ಉದ್ಯಮಶೀಲತೆಯ ತರಬೇತುದಾರರಾದ ಕ್ಲಾರಿಸ್ಸಾ ಜಥನ್ನಾ ಮತ್ತು ಮುಂಬೈನ ಕಾರ್ಪೊರೇಟ್ ವೃತ್ತಿಪರ ತರಬೇತುದಾರರಾದ ಸುಧೀರ್ ಪೈ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ನಾಯಕತ್ವ, ವ್ಯಕ್ತಿತ್ವ ವಿಕಸನ ಹಾಗೂ ಉದ್ಯೋಗ ಕೌಶಲ್ಯಗಳ ಕುರಿತು ಸಂವಾದ ನಡೆಸಿದರು. ಸ್ನಾತಕೋತ್ತರ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ರಾಘವೇಂದ್ರ ಸ್ವಾಗತಿಸಿ, ಟ್ರೈನಿಂಗ್ ಆ್ಯಂಡ್ ಪ್ಲೇಸ್‌ಮೆಂಟ್ ಘಟಕದ ಸಂಯೋಜಕಿ, ವ್ಯವಹಾರ ಆಡಳಿತ ವಿಭಾಗದ ಉಪನ್ಯಾಸಕಿ ದೀಪಿಕಾ ವಂದಿಸಿ, ಆಂಗ್ಲ ವಿಭಾಗದ ಉಪನ್ಯಾಸಕಿ ಡಾ. ನಿಶಿತಾ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಣ
Narendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.
ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.
ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ಮಾತನಾಡಿದರು.
ಪುತ್ತೂರು,ಅ.1: ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಸರ್ಟಿಫಿಕೇಟ್ ಮಾತ್ರವಲ್ಲ, ಉಜ್ವಲ ಭವಿಷ್ಯ, ಒಳ್ಳೆಯ ವೇತನ ಹಾಗೂ ಹೆಸರು ಇತ್ಯಾದಿಗಳೆಲ್ಲವೂ ಲಭಿಸಲಿದೆ. ಇಂದಿನ ಕಾಲದಲ್ಲಿ ಕಲಿಕೆಗೆ ಬೇಕಾದ ಅನೇಕ ಸಂಪನ್ಮೂಲಗಳು ಲಭ್ಯವಿರುವಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪೂರ್ವಸಿದ್ಧತೆ ಎಂಬುದು ನಾವು ಉತ್ತೀರ್ಣರಾಗಲು ಅತ್ಯಗತ್ಯ. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಸಕ್ರಿಯರಾಗಿ ಅಧ್ಯಯನ ನಡೆಸಿ ಎಲ್ಲಾ ರೀತಿಯಿಂದಲೂ ಸಿದ್ಧರಾಗಿ ಪರೀಕ್ಷೆಯನ್ನು ಜಯಿಸಬೇಕು ಎಂದು ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ತಿಳಿಸಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ ಅಧ್ಯಾಪಕ ವೃತ್ತಿಯನ್ನು ಬಯಸಿ ಹೋಗುವವರಿಗೆ, ಸಂಶೋಧನಾ ಕ್ಷೇತ್ರವನ್ನು ಆರಿಸುವವರಿಗೆ ನೆಟ್ ಹಾಗೂ ಕೆ-ಸೆಟ್ ಪರೀಕ್ಷೆಗಳನ್ನು ಪೂರ್ಣಗೊಳಿಸುವುದು ಅಗತ್ಯ. ಪರೀಕ್ಷೆಗೆ ಸಿದ್ಧರಾಗಲು ನಿರಂತರವಾಗಿ ಓದಿನಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಇವುಗಳ ಪಠ್ಯಕ್ರಮಗಳನ್ನು ಅಭ್ಯಾಸಿಸಿ ಪರಿಣತರಿಂದ ಮಾರ್ಗದರ್ಶನವನ್ನು ಪಡೆದು ಯಶಸ್ಸು ಗಳಿಸಬೇಕಿದೆ ಎಂದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ.ಬಿ ಸ್ವಾಗತಿಸಿ ಪ್ರಥಮ ಎಂಕಾಂ ವಿದ್ಯಾರ್ಥಿ ಧನರಾಜ್ ವಂದಿಸಿದರು. ಪ್ರಥಮ ಎಂಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಯು.ಕೆ ನಿರೂಪಿಸಿದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಯಿದೆ ದೇವುಸ್ ಚರ್ಚ್ ಸಹಾಯಕ ಧರ್ಮಗುರು
ಫಾ. ಮರ್ವಿನ್ ಲೋಬೊ ಮಾತನಾಡಿ, ಗಾಂಧೀಜಿಯವರ ಜೀವನ ನಮಗೆ ದಾರಿದೀಪವಾಗಿದ್ದು, ಪ್ರತಿಯೊಬ್ಬರು ಅವರು ತೋರಿಸಿಕೊಟ್ಟ ಹಾದಿಯಲ್ಲಿ ಮುನ್ನಡೆಯಬೇಕು.
ಮುಖ್ಯವಾಗಿ ಸತ್ಯ ಮತ್ತು ಅಹಿಂಸೆ ಗಾಂಧೀಜಿಯವರು ತೋರಿಸಿದ ಎರಡು ಮಾರ್ಗಗಳು. ಇಂದು ಅಹಿಂಸೆ ಕೇವಲ ಭೌತಿಕವಾಗಿ ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಗಳಲ್ಲಿ ಕೂಡ ಪಾಲನೆಯನ್ನು ಮಾಡಬೇಕಾಗಿದೆ. ಗಾಂಧೀಜಿಯ ಮರಣದ 78 ವರ್ಷಗಳ ನಂತರವೂ ಗಾಂಧೀಜಿಯವರ ಜೀವನ ಅತ್ಯಂತ ಪ್ರಸ್ತುತವಾಗಿದೆ ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಮಹಾತ್ಮಾ ಗಾಂದೀಜಿಯವರ ಸರಳ ಜೀವನ ನಮಗೆ ಪಾಠವಾಗಬೇಕು. ಅವರಿಗೆ ಅತ್ಯಂತ ವಿಲಾಸಿ ಜೀವನವನ್ನು ನಡೆಸುವ ಅವಕಾಶ ಇದ್ದರೂ, ಕೂಡ ಭಾರತೀಯರಿಗಾಗಿ ಅವರು ಸರಳ ಮತ್ತು ನ್ಯಾಯ ಸಮ್ಮತ ಜೀವನವನ್ನು ಆಯ್ಕೆ ಮಾಡಿಕೊಂಡರು.

ಸತ್ಯದೊಂದಿಗಿನ ನನ್ನ ಪ್ರಯೋಗಗಳು ಎನ್ನುವ ಪುಸ್ತಕದಲ್ಲಿ ಅವರು ಅವರ ಜೀವನದಲ್ಲಿ ನಡೆದಂತಹ ಘಟನೆಗಳನ್ನು ವಿವರಿಸಿದ್ದು, ಇಂದಿನ ಯುವಕರು ಕಡ್ಡಾಯವಾಗಿ ಈ ಪುಸ್ತಕವನ್ನು ಓದಬೇಕೆಂದು ತಿಳಿಸಿದರು.
ಉಪನ್ಯಾಸಕರಾದ ಭರತ್ ಕುಮಾರ್ ಗಾಂಧೀಜಿಯವರ ತತ್ವ, ಸಿದ್ಧಾಂತಗಳ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಉಪನ್ಯಾಸಕರಾದ ಯಶವಂತ್ ಎಂ ಡಿ ಹಾಗೂ ಗೋವಿಂದ್ ಪ್ರಕಾಶ್ ಸಿ. ಏಚ್ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾಲೇಜಿನ ಬೋಧಕ/ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕರಾದ ಸುಮಾ ಡಿ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.
-
Uncategorized17 hours ago
ಚಿನ್ನಾಭರಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ
-
ದಕ್ಷಿಣ ಕನ್ನಡ19 hours ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು
-
ಬಿಗ್ ನ್ಯೂಸ್6 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ6 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ5 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ5 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ5 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
-
ನಿಧನ ವಾರ್ತೆ3 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು


















