Connect with us

ರಾಜಕೀಯ

Puttur-ರಾಹುಲ್ ಗಾಂಧಿ ವಿರುದ್ದ ವಿವಾದಾತ್ಮಕ ಹೇಳಿಕೆ: ಯಶ್‌ಪಾಲ್ ಸುವರ್ಣ ವಿರುದ್ಧಕಾಂಗ್ರೆಸ್ ಪ್ರಚಾರ ಸಮಿತಿಯಿಂದ ಪುತ್ತೂರಿನಲ್ಲಿ ದೂರು

Published

on



Ad Widget

Ad Widget

Ad Widget

Ad Widget

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿ, ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಂಗ್ರೆಸ್ ಪ್ರಚಾರ ಸಮಿತಿಯ ವತಿಯಿಂದ ಈ ದೂರು ನೀಡಲಾಗಿದ್ದು, ಶಾಸಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿ, ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಂಗ್ರೆಸ್ ಪ್ರಚಾರ ಸಮಿತಿಯ ವತಿಯಿಂದ ಈ ದೂರು ನೀಡಲಾಗಿದ್ದು, ಶಾಸಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾಂಗ್ರೆಸ್ ಪ್ರಚಾರ ಸಮಿತಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಡಾ. ರಾಜರಾಮ್ ಕೆ.ಬಿ. ಅವರು ಪುತ್ತೂರು ನಗರ ಠಾಣೆಗೆ ಅಧಿಕೃತ ದೂರು ಸಲ್ಲಿಸಿದರು.

Ad Widget

Ad Widget <> Ad Widget

ಪ್ರಕರಣದ ಹಿನ್ನೆಲೆ:
ಜುಲೈ 28ರಂದು ಉಡುಪಿ ನಗರದ ಬಸ್ ನಿಲ್ದಾಣದ ಸಮೀಪವಿರುವ ಜಟ್ಟಾ ಸ್ಟ್ಯಾಂಡ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಶಾಸಕ ಯಶ್‌ಪಾಲ್ ಸುವರ್ಣ, ರಾಹುಲ್ ಗಾಂಧಿ ಅವರನ್ನು “ಡ್ರಗ್ ಅಡಿಕ್ಟ್” ಎಂದು ಕರೆದು ಸುಳ್ಳು ಪ್ರಚಾರ ಮಾಡಿದ್ದಾರೆ. ಅಲ್ಲದೆ, “ಅಂದು ಬಾಬರಿ ಮಸೀದಿಯನ್ನು ಧ್ವಂಸ ಮಾಡಿದ ರೀತಿಯಲ್ಲೇ ಇಂದು ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುತ್ತೇವೆ” ಎಂದು ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.



Ad Widget

ದೂರಿನಲ್ಲಿರುವ ಪ್ರಮುಖ ಅಂಶಗಳು:
ಧರ್ಮಗಳ ನಡುವೆ ಸಂಘರ್ಷಕ್ಕೆ ಪ್ರಚೋದನೆ: ಬಾಬರಿ ಮಸೀದಿ ಧ್ವಂಸದ ಉದಾಹರಣೆ ನೀಡಿ ಸಮಾಜದಲ್ಲಿ ಧರ್ಮಗಳ ನಡುವೆ ಅಶಾಂತಿ ಮೂಡಿಸಲು ಮತ್ತು ಗುಂಪು ಗಲಭೆಗೆ ಪ್ರಚೋದನೆ ನೀಡಲು ಶಾಸಕರು ಯತ್ನಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ವಿದ್ಯಾರ್ಥಿಗಳಿಗೆ ಬೆದರಿಕೆ: ನೀಟ್ (NEET) ಪರೀಕ್ಷೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವರಿಗೆ ಬೆದರಿಕೆ ಒಡ್ಡಿದ್ದಾರೆ ಎಂಬ ಅಂಶವನ್ನೂ ದೂರಿನಲ್ಲಿ ದಾಖಲಿಸಲಾಗಿದೆ.
ಸೌಹಾರ್ದತೆಗೆ ಧಕ್ಕೆ: ಬಿಜೆಪಿ ಕಾರ್ಯಕರ್ತರನ್ನು ಪ್ರಚೋದಿಸಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲು ಸಂಚು ರೂಪಿಸಲಾಗಿದೆ ಮತ್ತು ಸಮಾಜದ ಸೌಹಾರ್ದತೆಗೆ ಧಕ್ಕೆ ತರುವ ಕೃತ್ಯ ಎಸಗಲಾಗಿದೆ ಎಂದು ದೂರಲಾಗಿದೆ.

Ad Widget

Ad Widget

ದೂರು ನೀಡಿದ ನಿಯೋಗ:
ಕಾಂಗ್ರೆಸ್ ಪ್ರಚಾರ ಸಮಿತಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಡಾ. ರಾಜರಾಮ್ ಕೆ.ಬಿ. ಅವರು ಪುತ್ತೂರು ನಗರ ಠಾಣೆಗೆ ಅಧಿಕೃತ ದೂರು ಸಲ್ಲಿಸಿದ್ದು ಈ ಸಂದರ್ಭದಲ್ಲಿ ದ ಕ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್. ಮಹಮ್ಮದ್ ಅಲಿ, ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಸಂಯೋಜಕರಾದ ಎನ್. ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಮರನಾಥ್ ಗೌಡ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಗಣೇಶ್ ರಾಜ್ ಬಿಳಿಯೂರು, ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಯತೀಶ್ ಕುಮಾರ್ ಗೌಡ ಬಾನಡ್ಕ, ಪುತ್ತೂರು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ್ ಶೆಟ್ಟಿ ಪೆರ್ನೆ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರೋಷನ್ ರೈ ಬನ್ನೂರು, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ವಿಕ್ರಂ ಶೆಟ್ಟಿ ಅಂತರ, ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ ಮೌರಿಸ್ ಮಸ್ಕರೇನಸ್,ನಗರ ಸಭೆಯ ಮಾಜಿ ಸದಸ್ಯ ರಿಯಾಜ್ ಪರ್ಲಡ್ಕ, ಕಾಂಗ್ರೆಸ್ ಮುಖಂಡ, ಉದ್ಯಮಿ ಶಿವರಾಮ್ ಆಳ್ವ, ಯಂಗ್ ಬ್ರಿಗೇಡ್ ಸೇವಾದಳದ ಪ್ರಹ್ಲಾದ್ ಬೆಳ್ಳಿಪ್ಪಾಡಿ, ಉದ್ಯಮಿ ರಾಜೇಶ್ ಶೆಟ್ಟಿ ಕೋಡಿoಬಾಡಿ, ಕಬೀರ್ ಕರ್ವೇಲು ಮೊದಲಾದವರು ಉಪಸ್ಥಿತರಿದ್ದರು.

ಸಾರ್ವಜನಿಕವಾಗಿ ಅಶಾಂತಿ ಹರಡುವ ಭಾಷಣ ಮಾಡಿರುವ ಶಾಸಕರ ವಿರುದ್ಧ ಪೊಲೀಸರು ಶೀಘ್ರವೇ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಈ ವೇಳೆ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು.

Ad Widget
Click to comment

Leave a Reply

ಸ್ಥಳೀಯ

B.Y. Vijayendra-ಬಣ ಕಿತ್ತಾಟ ಮುಂದುವರಿದರೆ ಗುಬ್ಬಿಯಲ್ಲಿ ನಾನೇ ಸ್ಪರ್ಧಿಸುತ್ತೇನೆ’: ಬಿ.ವೈ.ವಿಜಯೇಂದ್ರ

Published

on



Ad Widget

Ad Widget

Ad Widget

Ad Widget

ಗುಬ್ಬಿ ಕ್ಷೇತ್ರದ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಬಹಿರಂಗವಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ ಎರಡೂ ಬಣಗಳ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ ವಿಜಯೇಂದ್ರ, ಇದೇ ರೀತಿಯ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸಬೇಕಾದ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಚೇಳೂರು (ತುಮಕೂರು), ಅ.4: ಗುಬ್ಬಿ ಕ್ಷೇತ್ರದ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಬಹಿರಂಗವಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ ಎರಡೂ ಬಣಗಳ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ ವಿಜಯೇಂದ್ರ, ಇದೇ ರೀತಿಯ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸಬೇಕಾದ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಚೇಳೂರಿನಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ದಡಿ ಆಯೋಜಿಸಿದ್ದ ಬೂತ್ ಮಟ್ಟದ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಘಟನೆ ನಡೆದಿದೆ.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಹಾಗೂ 2023ರ ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ ದಿಲೀಪ್ ಕುಮಾರ್ ಮಾತನಾಡುವ ವೇಳೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಹೆಸರುಗಳನ್ನು ಪ್ರಸ್ತಾಪಿಸಿದರು. ಬಳಿಕ ಜಿಪಂ ಮಾಜಿ ಸದಸ್ಯ ಚಂದ್ರಶೇಖರ್ ಬಾಬು ಮಾತನಾಡುವಾಗ ದಿಲೀಪ್ ಕುಮಾರ್ ಅವರ ಹೆಸರನ್ನು ಉಲ್ಲೇಖಿಸದಿರುವುದು ಕೆಲವು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಯಿತು.



Ad Widget

ಈ ವಿಚಾರಕ್ಕೆ ಸಂಬಂಧಿಸಿ ಎರಡೂ ಬಣಗಳ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು. ರಾಜ್ಯಾಧ್ಯಕ್ಷರ ಸಮ್ಮುಖದಲ್ಲೇ ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಬಹಿರಂಗಗೊಂಡ ಹಿನ್ನೆಲೆಯಲ್ಲಿ ಕೆಲಕಾಲ ಕಾರ್ಯಕ್ರಮದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.

Ad Widget

Ad Widget

ಬಳಿಕ ಮಾತನಾಡಿದ ಬಿ.ವೈ.ವಿಜಯೇಂದ್ರ, ಗುಬ್ಬಿ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಕ್ಷದೊಳಗಿನ ಆಂತರಿಕ ಜಗಳ ಹಾಗೂ ಭಿನ್ನಾಭಿಪ್ರಾಯಗಳೇ ಅಡ್ಡಿಯಾಗುತ್ತಿವೆ ಎಂದು ಹೇಳಿದರು.

ಮುಖಂಡರು ಹಾಗೂ ಕಾರ್ಯಕರ್ತರು ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷದ ಸಂಘಟನೆ ಮತ್ತು ಗೆಲುವಿನತ್ತ ಗಮನಹರಿಸಬೇಕು ಎಂದು ವಿಜಯೇಂದ್ರ ಸೂಚಿಸಿದರು. ಇದೇ ರೀತಿ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸುವ ಸಂದರ್ಭ ಬರಬಹುದು ಎಂದು ಅವರು ಎಚ್ಚರಿಕೆ ನೀಡಿದರು.

Ad Widget
Continue Reading

ಸ್ಥಳೀಯ

Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ

Published

on



Ad Widget

Ad Widget

Ad Widget

Ad Widget

ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget

Ad Widget

ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.

Ad Widget

Ad Widget <> Ad Widget

ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.



Ad Widget

ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

Ad Widget

Ad Widget

ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ವಿವಿಧ ಭಾಗಗಳಿಂದ ಕಂಬಳ ಕೋಣಗಳು ಮೈಸೂರಿನತ್ತ ಪ್ರಯಾಣ ಬೆಳೆಸಲಿವೆ.

Ad Widget
Continue Reading

ರಾಜಕೀಯ

U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್

Published

on



Ad Widget

Ad Widget

Ad Widget

Ad Widget

ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್‌ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್‌ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್‌ ಬಿಚ್ಚಿಟ್ಟಿದ್ದಾರೆ

Ad Widget

Ad Widget <> Ad Widget

ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.



Ad Widget

ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.

Ad Widget

Ad Widget

ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ

ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading