Connect with us

ಕಾರ್ಯಕ್ರಮಗಳು

Gramajanya-ಗ್ರಾಮಜನ್ಯ ಎಫ್‌ಪಿಸಿಗೆ ‘ರೈತ ರತ್ನ ಪ್ರಶಸ್ತಿ 2026’ ಗೌರವ

Published

on



Ad Widget

Ad Widget

Ad Widget

Ad Widget

ಕೃಷಿ, ಜೇನು ಕೃಷಿ, ಗ್ರಾಮೀಣ ಉದ್ಯೋಗ ಸೃಷ್ಟಿ, ರೈತರ ಸಬಲೀಕರಣ ಹಾಗೂ ಮೌಲ್ಯವರ್ಧಿತ ಕೃಷಿ ಉತ್ಪನ್ನಗಳ ಅಭಿವೃದ್ಧಿಯಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಗುರುತಿಸಿ, *ಪುತ್ತೂರಿನ ಗ್ರಾಮಜನ್ಯ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್ (Gramajanya FPC)*ಗೆ ಪ್ರತಿಷ್ಠಿತ ‘ರೈತ ರತ್ನ ಪ್ರಶಸ್ತಿ 2026’ ಪ್ರದಾನ ಮಾಡಲಾಯಿತು.

Ad Widget

Ad Widget

Ad Widget

Ad Widget

ಬೆಂಗಳೂರು, ಆಗಸ್ಟ್ 2: ಕೃಷಿ, ಜೇನು ಕೃಷಿ, ಗ್ರಾಮೀಣ ಉದ್ಯೋಗ ಸೃಷ್ಟಿ, ರೈತರ ಸಬಲೀಕರಣ ಹಾಗೂ ಮೌಲ್ಯವರ್ಧಿತ ಕೃಷಿ ಉತ್ಪನ್ನಗಳ ಅಭಿವೃದ್ಧಿಯಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಗುರುತಿಸಿ, *ಪುತ್ತೂರಿನ ಗ್ರಾಮಜನ್ಯ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್ (Gramajanya FPC)*ಗೆ ಪ್ರತಿಷ್ಠಿತ ‘ರೈತ ರತ್ನ ಪ್ರಶಸ್ತಿ 2026’ ಪ್ರದಾನ ಮಾಡಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ‘ರೈತ ರತ್ನ ಪ್ರಶಸ್ತಿ – ಸೀಸನ್ 6’ ಸಮಾರಂಭವು ಭಾನುವಾರ ಬೆಂಗಳೂರಿನ ಹೋಟೆಲ್ ಕಾನ್ರಾಡ್ನಲ್ಲಿ ಅದ್ಧೂರಿಯಾಗಿ ನಡೆಯಿತು.

Ad Widget

Ad Widget <> Ad Widget

ಕಾರ್ಯಕ್ರಮಕ್ಕೆ ಶ್ರೀ ಶ್ರೀ ಶ್ರೀ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗಿಗಳ ಮಹಾಸ್ವಾಮೀಜಿ (ಅಜ್ಜಯ್ಯ) ದಿವ್ಯ ಸಾನಿಧ್ಯ ವಹಿಸಿದ್ದರು. ಕರ್ನಾಟಕದ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವಿಶೇಷ ಅತಿಥಿಗಳಾಗಿ ನಟಿ ಅದಿತಿ ಪ್ರಭುದೇವ, ದುಬೈನ ಉದ್ಯಮಿ ನೀಲೇಶ್ ಎಂ. ಬಿ. ಹಾಗೂ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಸಮೂಹ ಸಂಪಾದಕೀಯ ನಿರ್ದೇಶಕ ರವಿ ಹೆಗಡೆ ಉಪಸ್ಥಿತರಿದ್ದರು.



Ad Widget

2020ರಲ್ಲಿ ಸ್ಥಾಪನೆಯಾದ ಗ್ರಾಮಜನ್ಯ ಎಫ್‌ಪಿಸಿ, ರೈತ ಉತ್ಪಾದಕರ ಸಂಸ್ಥೆಯಾಗಿ ಜೇನು ಕೃಷಿ, ಜೇನು ಸಂಸ್ಕರಣೆ, ಗುಣಮಟ್ಟದ ಜೇನು ಉತ್ಪನ್ನಗಳ ತಯಾರಿಕೆ, ಮಹಿಳಾ ಸ್ವಸಹಾಯ ಗುಂಪುಗಳಿಗೆ ಉದ್ಯೋಗ, ರೈತರಿಗೆ ಮಾರುಕಟ್ಟೆ ಸಂಪರ್ಕ ಹಾಗೂ ಮೌಲ್ಯವರ್ಧಿತ ಕೃಷಿ ಉತ್ಪನ್ನಗಳ ಅಭಿವೃದ್ಧಿಯಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಸಂಸ್ಥೆಯು ಸಾವಿರಕ್ಕೂ ಹೆಚ್ಚು ರೈತ ಷೇರುದಾರರನ್ನು ಒಗ್ಗೂಡಿಸಿ, ಅತ್ಯಾಧುನಿಕ 10 ಮೆಟ್ರಿಕ್ ಟನ್ ಸಾಮರ್ಥ್ಯದ ಜೇನು ಸಂಸ್ಕರಣಾ ಘಟಕ, ಆಹಾರ ಪರೀಕ್ಷಾ ಪ್ರಯೋಗಾಲಯ, ಹಾಗೂ ಶೀತಲ ಸಂಗ್ರಹಣಾ ಸೌಲಭ್ಯಗಳನ್ನು ನಿರ್ಮಿಸಿ ರೈತರಿಗೆ ಸೇವೆ ಸಲ್ಲಿಸುತ್ತಿದೆ.

Ad Widget

Ad Widget

ಈ ಸಂದರ್ಭದಲ್ಲಿ ಗ್ರಾಮಜನ್ಯ ಸಂಸ್ಥೆಯ ನಿರ್ದೇಶಕರಾದ ಶಂಕರ ನಾರಾಯಣ ಖಂಡಿಗೆ, ಬಲರಾಮ ಕೆ. ಹಾಗೂ ಹರ್ಷ ಕುಮಾರ್, ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (CEO) ರಾಮಪ್ರತೀಕ್ ಕರಿಯಾಲ್ ಅವರೊಂದಿಗೆ ವೇದಿಕೆಯಲ್ಲಿ *‘ರೈತ ರತ್ನ ಪ್ರಶಸ್ತಿ 2026’*ಯನ್ನು ಸ್ವೀಕರಿಸಿದರು.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಸಂಸ್ಥೆಯ ಪ್ರತಿನಿಧಿಗಳು, “ಇದು ಗ್ರಾಮಜನ್ಯದ ಸಾಧನೆ ಮಾತ್ರವಲ್ಲ; ನಮ್ಮೊಂದಿಗೆ ಕೈಜೋಡಿಸಿರುವ ಪ್ರತಿಯೊಬ್ಬ ರೈತ ಷೇರುದಾರ, ಜೇನು ಸಾಕಣೆದಾರ, ಮಹಿಳಾ ಸ್ವಸಹಾಯ ಗುಂಪು, ಸಿಬ್ಬಂದಿ, ನಿರ್ದೇಶಕರು ಹಾಗೂ ಬೆಂಬಲಿಗರ ಪರಿಶ್ರಮಕ್ಕೆ ಸಂದ ಗೌರವವಾಗಿದೆ. ಈ ಪ್ರಶಸ್ತಿ ರೈತರ ಅಭಿವೃದ್ಧಿಗಾಗಿ ಇನ್ನಷ್ಟು ಸಮರ್ಪಣೆಯಿಂದ ಕಾರ್ಯನಿರ್ವಹಿಸಲು ನಮಗೆ ಹೊಸ ಉತ್ಸಾಹ ನೀಡಿದೆ” ಎಂದು ತಿಳಿಸಿದರು.

‘ರೈತ ರತ್ನ ಪ್ರಶಸ್ತಿ 2026’ ಗ್ರಾಮಜನ್ಯ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿಯ ರೈತಪರ ಸೇವೆ, ಕೃಷಿ ಕ್ಷೇತ್ರದಲ್ಲಿನ ನವೀನ ಪ್ರಯತ್ನಗಳು ಹಾಗೂ ಗ್ರಾಮೀಣಾಭಿವೃದ್ಧಿಗೆ ನೀಡಿದ ಕೊಡುಗೆಗೆ ಸಂದ ಮತ್ತೊಂದು ಪ್ರತಿಷ್ಠಿತ ಗೌರವವಾಗಿದೆ.

Ad Widget
Click to comment

Leave a Reply

ಸ್ಥಳೀಯ

Dharmasthala-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ; ಶಿಬಿರಾರ್ಥಿಗಳಿಗೆ ಭಜನಾ ತರಬೇತಿ

Published

on



Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ‌.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.

Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ‌.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.

Ad Widget

Ad Widget

Ad Widget alt="Ad Widget"/>

Ad Widget

ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.



Ad Widget
Ad Widget
Continue Reading

ಕಾರ್ಯಕ್ರಮಗಳು

Swachha Bharat Mission-ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿಟ್ಲದಲ್ಲಿ 3 ಟಿಪಿಡಿ ಸಾಮರ್ಥ್ಯದ ಎಂಆರ್‌ಎಫ್ ಘಟಕಕ್ಕೆ ಸಂಸದ ಕ್ಯಾ. ಚೌಟ ಚಾಲನೆ

Published

on



Ad Widget

Ad Widget

Ad Widget

Ad Widget

ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್‌ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್‌ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ವಚ್ಛ ಭಾರತ್ ಮಿಷನ್ 2.0 ಹಾಗೂ ಕೇಂದ್ರ ಪುರಸ್ಕೃತ ವಿವಿಧ ಯೋಜನೆಯಡಿ ಸುಮಾರು 60.10 ಲಕ್ಷ ರೂಪಾಯಿಗಳ ಅನುದಾನದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಈ ಘನ ತ್ಯಾಜ್ಯ ಘಟಕದಲ್ಲಿ ಒಣತ್ಯಾಜ್ಯ ಸಂಗ್ರಹಿಸುವುದಕ್ಕೆ 3 ಟಿಪಿಡಿ ಸಾಮರ್ಥ್ಯದ ಮೆಟೀರಿಯಲ್‌ ರಿಕವರಿ ಫೆಸಿಲಿಟಿ ಘಟಕವನ್ನು ನಿರ್ಮಿಸಲಾಗುತ್ತದೆ. ಆ ಮೂಲಕ ವಿಟ್ಲ ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ ಬಹಳ ವೈಜ್ಞಾನಿಕವಾದ ಒಣ ಕಸ ಸಂಗ್ರಹ ಹಾಗೂ ವಿಲೇವಾರಿ ವ್ಯವಸ್ಥೆ ಅಳವಡಿಕೆಯಾಗುತ್ತಿದೆ. ಇದು ಗ್ರಾಮೀಣ ಭಾಗದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್‌ ಮಿಷನ್‌ ಅನುಷ್ಠಾನ ಪ್ರಕ್ರಿಯೆಗಳಿಗೆ ಮತ್ತಷ್ಟು ಉತ್ತೇಜನ ನೀಡಲಿದೆ.

Ad Widget

Ad Widget <> Ad Widget

ವಿಟ್ಲದ ಎಂಆರ್‌ಎಫ್‌ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು , ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದರಿಂದ ಪರಿಸರ ಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಅಲ್ಲದೆ, ಒಣ ಕಸವನ್ನು ಈ ರೀತಿಯ ಅತ್ಯಾಧುನಿಕ ವ್ಯವಸ್ಥೆಯಡಿ ಸಂಗ್ರಹಿಸಿ ವಿಲೇವಾರಿ ಮಾಡುವುದರಿಂದ ಸ್ಥಳೀಯವಾಗಿ ಉದ್ಯೋಗಾವಕಾಶವನ್ನು ಒದಗಿಸುವ ಜತೆಗೆ ಆರ್ಥಿಕವಾಗಿ ಸಂಪನ್ಮೂಲ ಕ್ರೋಢೀಕರಣಕ್ಕೂ ಅನುಕೂಲ ಕಲ್ಪಿಸುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ದ ಕನಸು ನನಸಾಗಬೇಕಾದರೆ, ಗ್ರಾಮ ಮತ್ತು ಪಟ್ಟಣ ಮಟ್ಟದಲ್ಲೇ ಆಧುನಿಕ ಮೂಲಸೌಕರ್ಯಗಳು ಬೆಳೆಯಬೇಕು. ಈ ₹60.10 ಲಕ್ಷದ ಯೋಜನೆಯು ನಮ್ಮ ವಿಟ್ಲ ಪಟ್ಟಣ ಪಂಚಾಯತಿಯನ್ನು ಮಾದರಿ ಮತ್ತು ಸ್ವಾವಲಂಬಿ ಪಟ್ಟಣವನ್ನಾಗಿ ಪರಿವರ್ತಿಸಲು ನಾಂದಿ ಹಾಡಲಿದೆ ಎಂದರು. ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ನ ಅಧಿಕಾರಿಗಳು ಉಪಸ್ಥಿತರಿದ್ದರು.



Ad Widget

ಈ ಕಾರ್‍ಯಕ್ರಮದ ಬಳಿಕ ಪ್ರಧಾನಮಂತ್ರಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಪ್ರಯುಕ್ತ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ ಮಹಾಶಕ್ತಿ ಕೇಂದ್ರದ ಬೂತ್ ಸಂಖ್ಯೆ 5ರ ಪಳಿಕೆಯಲ್ಲಿ ಸಂಸದ ಕ್ಯಾ.ಚೌಟ ಅವರು ಕಾರ್ಯಕರ್ಯರೊಂದಿಗೆ ಸಸಿ ನೆಟ್ಟು ನೀರುಣಿಸಿದರು.

Ad Widget

Ad Widget

ಈ ವೇಳೆ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ಸಂಗೀತಾ ಪಾಣೆಮಜಲು, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ, ಬಿಜೆಪಿ ಮುಖಂಡರಾದ ದೇವಪ್ಪ ಪೂಜಾರಿ, ಸಂಜಯ್ ಪ್ರಭು, ಪ್ರಸನ್ನ ದರ್ಬೆ, ನಿತೀಶ್ ಕುಮಾರ್ ಶಾಂತಿವನ, ಹರಿಪ್ರಸಾದ್ ಯಾದವ್, ವಿದ್ಯಾಧರ ಜೈನ್, ಶ್ರೀಕೃಷ್ಣ ವಿಟ್ಲ, ಪ್ರೀತಂ ಪೂಂಜಾ , ಉದಯ ಆಲಂಗಾರ್, ಹರೀಶ್ ಸಿ.ಎಚ್ ಉಪಸ್ಥಿತರಿದ್ದರು.

Ad Widget
Continue Reading

ಕಾರ್ಯಕ್ರಮಗಳು

Bantare Serige-2026-ಅ.3ರಂದು ‘ಬಂಟೆರೆ ಸೇರಿಗೆ-2026’: 15 ಸಾಧಕರಿಗೆ ಪ್ರಶಸ್ತಿ; ಬಂಟರ ಸಂಘಕ್ಕೆ 5.50 ಎಕರೆ ಜಾಗದ ಹಕ್ಕುಪತ್ರ ಹಸ್ತಾಂತರ; 3,000 ಮಂದಿಯ ಸಾಮರ್ಥ್ಯದ ಮದುವೆ ಹಾಲ್ ನಿರ್ಮಾಣಕ್ಕೆ ಯೋಜನೆ

Published

on



Ad Widget

Ad Widget

Ad Widget

Ad Widget

ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಬೆಳಿಗ್ಗೆ 9ಕ್ಕೆ ದುಗ್ಗಮ್ಮ ದೇರಣ್ಣ ಶೆಟ್ಟಿ ಸಭಾಭವನದಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಎರಡು ರಥಗಳಲ್ಲಿ ಸಾಧಕರು, ಶಾಸಕ ಅಶೋಕ್ ಕುಮಾರ್ ರೈ ಹಾಗೂ ಅತಿಥಿಗಳನ್ನು ರಾಜರಸ್ತೆ ಮೂಲಕ ಬಂಟರ ಭವನಕ್ಕೆ ಕರೆತರಲಾಗುವುದು. ಅರಿಯಡ್ಕ ಚಿಕ್ಕಪ್ಪ ನ್ಯಾಕ್ ಮಹಾದ್ವಾರ ಉದ್ಘಾಟಿಸಲಿದ್ದು, ದಂಬೆಕ್ಕಾನ ಸದಾಶಿವ ರೈ ಧ್ವಜಾರೋಹಣ ನೆರವೇರಿಸಲಿದ್ದಾರೆ.

Ad Widget

Ad Widget <> Ad Widget

ಬೆಳಿಗ್ಗೆ 11ಕ್ಕೆ ಶಾಸಕ ಅಶೋಕ್ ಕುಮಾರ್ ರೈ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಜಿತ್ ಕುಮಾರ್ ರೈ ಮಾಲಾಡಿ ಶುಭಾಶಂಸನೆ ಮಾಡಲಿದ್ದು, ಶಶಿಧರ್ ಶೆಟ್ಟಿ ಬರೋಡಾ ಪ್ರಶಸ್ತಿ ಪ್ರದಾನ, ಆರ್.ಕೆ. ಶೆಟ್ಟಿ ಮುಂಬೈ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ಜಗನ್ನಾಥ ರೈ ಬೀಡು ಮುಖ್ಯ ಅತಿಥಿಯಾಗಿರುವರು.



Ad Widget

ಪ್ರಶಸ್ತಿ ಪುರಸ್ಕೃತರು: ಸಹಕಾರರತ್ನ *ಸವಣೂರು ಸೀತಾರಾಮ ರೈ, **ಚನಿಲ ತಿಮ್ಮಪ್ಪ ಶೆಟ್ಟಿ, **ಮಿತ್ರಂಪಾಡಿ ಪುರಂದರ ರೈ, **ಡಾ. ಸಂದೀಪ್ ರೈ, ಸಹಕಾರರತ್ನ **ಅಗರಿ ನವೀನ್ ಭಂಡಾರಿ, **ಸುಬೇದಾರ್ ಮೇಜರ್ ರಮೇಶ್ ರೈ ಬೋಳೋಡಿ, **ಚಂದ್ರಹಾಸ್ ರೈ ಬನ್ನೂರು ಬಾಳಿಕೆ, **ಜಯಲಕ್ಷ್ಮಿ ಶೆಟ್ಟಿ, **ಸತೀಶ್ ರೈ ಕುತ್ಯಾಡಿ, **ಪ್ರವೀಣ್ ಭಂಡಾರಿ ಪುರ, **ಡಾ. ಸತ್ಯವತಿ ಆಳ್ವ, **ಸರೋಜ ಉಮೇಶ್ ರೈ ಮನವಳಿಕೆ, ಪಿಯುಸಿ ವಿಭಾಗದ **ಸಸ್ತಿ ಶೆಟ್ಟಿ, *ಸಮೃದ್ಧಿ ಶೆಟ್ಟಿ ಹಾಗೂ ಶರಣ್ಯ ಶೆಟ್ಟಿ ಅವರಿಗೆ ವಿವಿಧ ಕ್ಷೇತ್ರಗಳ ಪ್ರಶಸ್ತಿ ಹಾಗೂ ಪುರಸ್ಕಾರಗಳನ್ನು ಪ್ರದಾನ ಮಾಡಲಾಗುವುದು.

Ad Widget

Ad Widget

ಅಶೋಕ್ ರೈಗೆ ವಿಶೇಷ ಸನ್ಮಾನ

ಪುತ್ತೂರಿನ ಮರೀಲ್‌ನಲ್ಲಿ ಬಂಟರ ಸಂಘಕ್ಕೆ ಸರ್ಕಾರದಿಂದ 5.50 ಎಕರೆ ಜಾಗ ಮಂಜೂರು ಮಾಡಿಸಲು ಸಹಕರಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಹಕ್ಕುಪತ್ರವನ್ನು ಸಂಘಕ್ಕೆ ಹಸ್ತಾಂತರಿಸಲಿದ್ದು, ಜಾಗಕ್ಕೆ ಸರ್ಕಾರಕ್ಕೆ ಪಾವತಿಸಬೇಕಾದ ಮೊತ್ತವನ್ನು ಶಾಸಕರೇ ಭರಿಸಿದ್ದಾರೆ ಎಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ.

ಮಂಜೂರಾದ ಜಾಗದಲ್ಲಿ ಮೊದಲ ಹಂತವಾಗಿ ಅಡ್ಯಾರ್ ಗಾರ್ಡನ್ ಮಾದರಿಯ ಮದುವೆ ಹಾಲ್ ಮತ್ತು ಭೋಜನ ಶಾಲೆ ನಿರ್ಮಿಸಲು ಉದ್ದೇಶಿಸಲಾಗಿದೆ. ಸುಮಾರು 3,000 ಮಂದಿಗೆ ಅವಕಾಶ, ವಿಶಾಲ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು. ಮುಂದಿನ ಹಂತಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.

ಬೆಂಗಳೂರು ಬಂಟರ ಸಂಘದ ಚುನಾವಣೆಯಲ್ಲಿ ಆಯ್ಕೆಯಾದ ಪುತ್ತೂರು ಮೂಲದ ಸೌಮ್ಯ ಪ್ರಿಯ ಹೆಗ್ಡೆ ಅರಿಯಡ್ಕ ಹಾಗೂ ಉಮೇಶ್ ಪೂಂಜ ದೇರ್ಲ ಅವರನ್ನು ಸನ್ಮಾನಿಸಲಾಗುವುದು. ಪ್ರಧಾನ ಕಾರ್ಯದರ್ಶಿ ಅಮರನಾಥ ಶೆಟ್ಟಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಮಾಂಸಾಹಾರಿ ಭೋಜನದ ವ್ಯವಸ್ಥೆ ಇದೆ.

ಸುದ್ದಿಗೋಷ್ಠಿಯಲ್ಲಿ ದಂಬೆಕ್ಕಾನ ಸದಾಶಿವ ರೈ, ಸಾಜ ರಾಧಾಕೃಷ್ಣ ಆಳ್ವ, ನಿತ್ಯಾನಂದ ಶೆಟ್ಟಿ ಮನವಳಿಕೆ, ಸಂತೋಷ್ ಕುಮಾರ್ ಶೆಟ್ಟಿ ಸಾಜ ಹಾಗೂ ಭಾಗ್ಗೇಶ್ ರೈ ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading