Connect with us

ಬಿಗ್ ನ್ಯೂಸ್

Panjigudde Ishwara Bhat-Big News: ದೇವಸ್ಥಾನಕ್ಕೆ ಭದ್ರತೆ ಬೇಡ್ವಾ? ರಥ ಬೀದಿಯಲ್ಲಿ ಹೆಣ ತಕ್ಕೊಂಡು ಹೋಗುವುದು ಒಳ್ಳೆಯದ್ದಾ? : ಪಂಜಿಗುಡ್ಡೆ ಈಶ್ವರ ಭಟ್

Published

on

Ad Widget

Ad Widget

Ad Widget

Ad Widget

ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿ ಶುದ್ಧವಾಗಿರಬೇಕು ಎಂದು ಈ ಹಿಂದೆ ಪ್ರತಿಪಾದಿಸಿದ್ದವರೇ, ಈಗ ಅದೇ ಉದ್ದೇಶದ ಅಭಿವೃದ್ಧಿ ಕೆಲಸಗಳಿಗೆ ವಿರೋಧ ವ್ಯಕ್ತಪಡಿಸುತ್ತಿರುವುದು ತೀವ್ರ ಬೇಸರದ ಸಂಗತಿ. ಈ ವಿರೋಧದ ಹಿಂದೆ ಭೂ ಮಾಫಿಯಾ ಕೈವಾಡವಿರುವ ಶಂಕೆ ವ್ಯಕ್ತವಾಗುತ್ತಿದೆ ಎಂದು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಗಂಭೀರ ಆರೋಪ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿ ಶುದ್ಧವಾಗಿರಬೇಕು ಎಂದು ಈ ಹಿಂದೆ ಪ್ರತಿಪಾದಿಸಿದ್ದವರೇ, ಈಗ ಅದೇ ಉದ್ದೇಶದ ಅಭಿವೃದ್ಧಿ ಕೆಲಸಗಳಿಗೆ ವಿರೋಧ ವ್ಯಕ್ತಪಡಿಸುತ್ತಿರುವುದು ತೀವ್ರ ಬೇಸರದ ಸಂಗತಿ. ಈ ವಿರೋಧದ ಹಿಂದೆ ಭೂ ಮಾಫಿಯಾ ಕೈವಾಡವಿರುವ ಶಂಕೆ ವ್ಯಕ್ತವಾಗುತ್ತಿದೆ ಎಂದು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಗಂಭೀರ ಆರೋಪ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ದೇವಸ್ಥಾನದ ಕಛೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಅಪಪ್ರಚಾರಗಳಿಗೆ ಭಕ್ತಾದಿಗಳು ಕಿವಿಗೊಡದೆ, ಯಾವುದೇ ಸಂಶಯಗಳಿದ್ದರೂ ನೇರವಾಗಿ ಸಮಿತಿಯನ್ನು ಸಂಪರ್ಕಿಸಿ ಸ್ಪಷ್ಟನೆ ಪಡೆಯಬೇಕು ಎಂದು ಮನವಿ ಮಾಡಿದರು.

Ad Widget

Ad Widget <> Ad Widget

ರಥಬೀದಿಯಲ್ಲಿ ಶವ ಸಾಗಾಟ, ಕಸ ಚೆಲ್ಲುವುದು, ಮದ್ಯಪಾನ ಮಾಡಿ ಖಾಲಿ ಬಾಟಲಿ ಎಸೆಯುವುದು ಹಾಗೂ ದೇವಸ್ಥಾನದ ಸನಿಹದಲ್ಲೇ ನಡೆಯುವ ಗೋವುಗಳ ಕಳ್ಳತನವನ್ನು ಸಂಪೂರ್ಣವಾಗಿ ತಡೆಯಬೇಕೆಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯು ವ್ಯವಸ್ಥಾಪನಾ ಸಮಿತಿಗೆ ಮನವಿ ಸಲ್ಲಿಸಿತ್ತು. ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರವಾಗಿ, ತೋಡಿಗೆ 4 ಕೋಟಿ ರೂಪಾಯಿ ವೆಚ್ಚದಲ್ಲಿ ತಡೆಗೋಡೆ ನಿರ್ಮಿಸಿ, ಅದರ ಬದಿಯಲ್ಲೇ ನೂತನ ರಸ್ತೆ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ. ಇದರಿಂದಾಗಿ ದೇವಸ್ಥಾನದ ಮುಂಭಾಗ ಹಾಗೂ ರಥಬೀದಿಯಲ್ಲಿ ಅನಗತ್ಯ ವಾಹನ ಸಂಚಾರ ಸಂಪೂರ್ಣ ಬಂದ್ ಆಗಲಿದೆ ಎಂದರು.

ಮುಂದಿನ ದಿನಗಳಲ್ಲಿ ದೇವಸ್ಥಾನದ ಆಸ್ತಿಯ ಸುತ್ತಲೂ ಆವರಣ ಬೇಲಿ ನಿರ್ಮಿಸಿ, ಮೂರು ಗೇಟ್‌ಗಳನ್ನು ಅಳವಡಿಸುವ ಕಾರ್ಯವೂ ನಡೆಯಲಿದೆ.

Ad Widget

Ad Widget

ಹೊಸದಾಗಿ ನಿರ್ಮಾಣವಾಗಲಿರುವ ರಸ್ತೆಯನ್ನು ಸಾರ್ವಜನಿಕ ರಸ್ತೆಯೆಂದು ಬಿಂಬಿಸುವ ಅಪಪ್ರಚಾರ ನಡೆಯುತ್ತಿದ್ದು, ಯಾವುದೇ ಕಾರಣಕ್ಕೂ ಈ ರಸ್ತೆಯನ್ನು ನಗರಸಭೆಗೆ ಹಸ್ತಾಂತರಿಸುವ ಉದ್ದೇಶ ಸಮಿತಿಗಿಲ್ಲ ಎಂದು ಸ್ಪಷ್ಟಪಡಿಸಿದರು.

ದೇವಸ್ಥಾನದಲ್ಲಿ ಟೆಂಡರ್ ಕರೆಯದೆ ಯಾವುದೇ ಕೆಲಸ ಮಾಡುತ್ತಿಲ್ಲ. ಭಕ್ತರು ಅಥವಾ ಸಾರ್ವಜನಿಕರು ಮಾಹಿತಿ ಹಕ್ಕು ಕಾಯ್ದೆಯಡಿ (RTI) ಈ ಕುರಿತು ದಾಖಲೆಗಳನ್ನು ಪಡೆಯಲು ಮುಕ್ತ ಅವಕಾಶವಿದೆ ಎಂದರು.

ಅಭಿವೃದ್ಧಿ ಕಾಮಗಾರಿಗಳ ಕುರಿತು ಈಗಾಗಲೇ ಎರಡು ಬಾರಿ ಭಕ್ತರ ಗಮನಕ್ಕೆ ತರಲಾಗಿದ್ದು, ಸಭೆಗೆ ಬಾರದೆ ಇದ್ದವರಿಗೆ ಯಾರು ಹೊಣೆ ಎಂದು ಪ್ರಶ್ನಿಸಿದ ಅವರು, ಭಕ್ತರ ಕಾಣಿಕೆ ಹಣದಲ್ಲಿ ಕೆಲಸ ನಡೆಯುವಾಗ ಅವರಿಗೆ ತಿಳಿಸದೆ ಮಾಡುವ ಪ್ರಶ್ನೆಯೇ ಇಲ್ಲ ಎಂದರು.

ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ಇಂಜಿನಿಯರ್ ಮಾಹಿತಿ ನೀಡುವ ಸಂದರ್ಭದಲ್ಲಿ ಯಾವುದೇ ಆಕ್ಷೇಪ ಎತ್ತದವರು, ಈಗ ಮೋರಿಯಲ್ಲಿ ಕುಳಿತು ಸಾರ್ವಜನಿಕ ರಸ್ತೆ ಮತ್ತು ದೇವಸ್ಥಾನದ ಜಾಗ ಹೋಗುತ್ತದೆ ಎಂದು ಆರೋಪ ಮಾಡುವುದು ಸರಿಯಲ್ಲ ಎಂದರು

ಅಶ್ವತ್ಥ ಮರದ ಕೆಳಗೆ ಮಾಂಸಾಹಾರ ಸೇವನೆ ಮಾಡಿದಾಗ ತಡೆಯಲು ಹೋಗದವರು, ಈಗ ಟೀಕಿಸುವುದನ್ನು ಬಿಟ್ಟು ಅಭಿವೃದ್ಧಿಗೆ ಸಹಕರಿಸಬೇಕು ಎಂದು ತರಾಟೆಗೆ ತೆಗೆದುಕೊಂಡರು. ಶಾಸಕರ ಮಾರ್ಗದರ್ಶನದಲ್ಲಿ ಈಗಾಗಲೇ ದೇವಸ್ಥಾನಕ್ಕೆ ಸೇರಿದ 11 ಎಕರೆ ಜಾಗವನ್ನು ಯಶಸ್ವಿಯಾಗಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸದಸ್ಯರಾದ ಸುಭಾಶ್ ರೈ ಬೆಳ್ಳಿಪ್ಪಾಡಿ, ಮಹಾಬಲ ರೈ ವಳತ್ತಡ್ಕ, ಬಿ. ಈಶ್ವರ ನಾಯ್ಕ ಹಾಗೂ ನಳಿನಿ ಪಿ. ಶೆಟ್ಟಿ ಉಪಸ್ಥಿತರಿದ್ದರು.

Ad Widget
Click to comment

Leave a Reply

ಬಿಗ್ ನ್ಯೂಸ್

Muraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ

Published

on

Ad Widget

Ad Widget

Ad Widget

Ad Widget

ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಕೋಡಿಂಬಾಡಿ ಮಠಂತಬೆಟ್ಟುವಿನ ಪ್ರತಿಷ್ಠಿತ ಬಂಟ ಕುಟುಂಬದ ಹಿರಿಯ ಕಾಂಗ್ರೆಸ್ ಮುಖಂಡ ಅನಂತ ರೈಯವರ ಪುತ್ರ ಮುರಳೀಧರ ರೈ ಮಠಂತಬೆಟ್ಟು ಅವರು ಹಿರಿಯರ ಕಾಲದಿಂದಲೇ ಕಾಂಗ್ರೆಸ್ ಕುಟುಂಬದಲ್ಲಿ ಬೆಳೆದು ಬಂದವರು.ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಸುಮಾರು ವರ್ಷಗಳ ಕಾಲ ವಲಯ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಜನ ಸೇವೆ ಆರಂಭಿದ ಇವರು ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿರುವ ಮುರಳೀಧರ ರೈಯವರನ್ನು ಇದೀಗ ಕರ್ನಾಟಕ ಸರಕಾರ ಮೆಸ್ಕಾಂ ನಿರ್ದೇಶಕರಾಗಿ ನೇಮಕ ಮಾಡಿದೆ.

Ad Widget

Ad Widget <> Ad Widget

Ad Widget
Continue Reading

ಬಿಗ್ ನ್ಯೂಸ್

Shashikumar Bhat-ಶಶಿಕುಮಾರ್ ಭಟ್ ಪಡಾರು ಅವರಿಗೆ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿ

Published

on

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ
ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಪುತ್ತೂರು ಕೇಂದ್ರಿತವಾಗಿ ಹಲವು ಕೃಷಿ ಸಂಬಂಧಿ ಸಮಾವೇಶಗಳನ್ನೂ ಆಯೋಜಿಸುತ್ತಿರುವ ಶಶಿಕುಮಾರ್ ಭಟ್ಪ ಡಾರು ಅವರು ಕೃಷಿ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ, ತರಬೇತಿ, ಸಲಹೆ – ಮಾರ್ಗದರ್ಶನಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ಕೊಡಮಾಡಕಲಾಗುತ್ತಿದೆ. ಪ್ರಶಸ್ತಿ ಪ್ರದಾನ
ಸಮಾರಂಭ ನವೆಂಬರ್ 22ರಂದು ವಾಸ್ಕೋ ಗೋವಾದ ಬೈನಾದಲ್ಲಿನ ರವೀಂದ್ರ ಭವನದಲ್ಲಿ ನಡೆಯಲಿದೆ.

Ad Widget

Ad Widget <> Ad Widget

ಶಶಿಕುಮಾರ್ ಭಟ್ ಪಡಾರು ಅವರ ಸಾಧನೆಯ ಹಾದಿ:
ಕರಾವಳಿಯ ಜೀವನಾಡಿಯಾದ ಅಡಿಕೆ ಕೃಷಿ ಇಂದು ಹಳದಿ ಎಲೆ ರೋಗ, ಮಾರುಕಟ್ಟೆ ಅಸ್ಥಿರತೆ, ಹವಾಮಾನ ವೈಪರೀತ್ಯ, ಕೂಲಿ ಸಮಸ್ಯೆ ಮೊದಲಾದ ನಾನಾ ಸಂಕಷ್ಟಗಳಿಂದ ನಲುಗಿ ಹೋಗುತ್ತಿರುವ ಈ ಆಧುನಿಕ ದಿನಮಾನಗಳಲ್ಲಿ, ಕೃಷಿಕರಿಗೆ ಹೊಸ ದಾರಿ, ಹೊಸ ಸಾಧ್ಯತೆಯ ಬೆಳಕನ್ನು ತೋರಿಸಿದ ದೀಪಸ್ತಂಭ ಶಶಿಕುಮಾರ ಭಟ್ ಪಡಾರು.

ಕಾಳುಮೆಣಸಿನ ಕ್ರಾಂತಿಯ ಹರಿಕಾರ:
ಅಡಿಕೆಯೊಂದಿಗೆ ಕಾಳುಮೆಣಸು ಬೆಳೆದರೆ ರೈತನ ಆದಾಯ ದ್ವಿಗುಣವಾಗುತ್ತದೆ ಎಂಬ ಸತ್ಯವನ್ನು ಮನಗಂಡು, ಅದನ್ನು ಕೇವಲ ತಮ್ಮ ತೋಟಕ್ಕೆ ಸೀಮಿತಗೊಳಿಸದೆ ಸಾವಿರಾರು ರೈತರಿಗೆ
ಮನದಟ್ಟು ಮಾಡಿದವರು. ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ವಿನಿಮಯಕ್ಕಾಗಿ ವಾಟ್ಸಾಪ್ ತಂಡಗಳನ್ನು ರಚಿಸಿ, ಸಾವಿರಾರು ಮಂದಿಯನ್ನು ಒಗ್ಗೂಡಿಸಿ, ಪ್ರತಿನಿತ್ಯ ತಳಿ ಆಯ್ಕೆ, ನಾಟಿ ವಿಧಾನ,
ರೋಗ ನಿರ್ವಹಣೆ, ಇಳುವರಿ ಹೆಚ್ಚಳದ ಬಗ್ಗೆ ಚರ್ಚಿಸಿ, ಅವರಲ್ಲಿ ಕಾಳುಮೆಣಸಿನ ಬಗೆಗೆ ಆಸಕ್ತಿ ಹಚ್ಚಿಸಿದ ಅಪರೂಪದ ಸಂಘಟಕರು. ಇಂದು ಕರಾವಳಿಯ ಸಾವಿರಾರು ಯುವ ರೈತರು ಅವರ ವಾಟ್ಸಾಪ್ ತಂಡಗಳಿಂದಲೇ ಕೃಷಿಗೆ ಮರಳಿದ್ದಾರೆ.

Ad Widget

Ad Widget

ಮನೆ ಬಾಗಿಲಿಗೆ ಕೃಷಿ ಸೇವೆ – ಕೇವಲ ಮಾರಾಟವಲ್ಲ ಬದ್ಧತೆ:
ಕೇವಲ ಪ್ರೇರಣೆ ನೀಡುವುದಕ್ಕೆ ಸೀಮಿತವಾಗದೆ, ಆಸಕ್ತ ಕೃಷಿಕರ ಮನೆ ಬಾಗಿಲಿಗೇ ಗುಣಮಟ್ಟದ, ರೋಗ ನಿರೋಧಕ ಶಕ್ತಿಯುಳ್ಳ ಕಾಳುಮೆಣಸಿನ ಗಿಡಗಳನ್ನು ತಲುಪಿಸುವುದು, ನಂತರ ತಜ್ಞರ ಮೂಲಕ ಬೆಳೆಸುವ ವೈಜ್ಞಾನಿಕ ವಿಧಾನವನ್ನು ತಿಳಿಸಿಕೊಡುವುದು ಮತ್ತು ಫಸಲು ಬರುವವರೆಗೂ ದೀರ್ಘಕಾಲಿಕ ಮಾರ್ಗದರ್ಶನ ನೀಡುವುದರ ಮೂಲಕ ಹೊಸಬರೂ ಧೈರ್ಯದಿಂದ ಕೃಷಿಗಿಳಿಯುವಂತೆ ಮಾಡಿದ್ದಾರೆ. ರೈತರು ಗಿಡಗಳಿಗೆ ಉಂಟಾದ ತೊಂದರೆಗೆ ಸಂಬಂಧಿಸಿದಂತೆ ಫೋಟೋ ಕಳುಹಿಸಿದರೆ ತಕ್ಷಣ ಪರಿಹಾರ ಸೂಚಿಸುವ ಅವರ ಕಾಳಜಿ ಅನನ್ಯ.

ದಾಖಲೆಯ ಸಾಧನೆ – ಮೂವತ್ತು ಲಕ್ಷದತ್ತ ಪಯಣ:
ಕಳೆದ ಬೆರಳೆಣಿಕೆಯ ವರ್ಷಗಳಲ್ಲಿ ಸರಿಸುಮಾರು ಇದುವರೆಗೆ ಮೂವತ್ತು ಲಕ್ಷಕ್ಕಿಂತಲೂ ಅಧಿಕ ಕಾಳುಮೆಣಸಿನ ಗಿಡಗಳನ್ನು ಕೃಷಿಕರ ತೋಟಗಳಿಗೆ ತಲುಪಿಸುವ ಮೂಲಕ ಕರಾವಳಿ
ಜಿಲ್ಲೆಗಳಲ್ಲಿ ಕಾಳುಮೆಣಸಿನ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ. ಇದು ಕೇವಲ ಸಂಖ್ಯೆಯಲ್ಲ, ಕರಾವಳಿಯ ಕೃಷಿ ಭೂಪಟವನ್ನೇ ಬದಲಾಯಿಸಿದ ಸಾಧನೆ.

ಅಡಿಕೆಯೊಂದಿಗೆ ಸಮಗ್ರ ಸಹಬೆಳೆಗಳ ಕನಸು:
ಕಾಳುಮೆಣಸಿಗೆ ಮಾತ್ರ ಸೀಮಿತವಾಗದೆ, ಇವರು ಅಡಿಕೆಯ ಸಹಬೆಳೆಗಳಾಗಿ ಕಾಫಿ, ಏಲಕ್ಕಿ ಬೆಳೆಯುವುದಕ್ಕೂ ರೈತರನ್ನು ದೊಡ್ಡ ಮಟ್ಟದಲ್ಲಿ ಪ್ರೋತ್ಸಾಹಿಸುತ್ತಿದ್ದಾರೆ. ಅಡಿಕೆ ತೋಟದಲ್ಲಿ ಖಾಲಿ
ಇರುವ ಜಾಗದಲ್ಲಿ ಕಾಫಿ ಮತ್ತು ಏಲಕ್ಕಿ ಬೆಳೆದು ಹೆಚ್ಚುವರಿ ಆದಾಯ ಗಳಿಸುವ ವೈಜ್ಞಾನಿಕ ಮಾದರಿಯನ್ನು ಪರಿಚಯಿಸಿದ್ದಾರೆ. ಅದಕ್ಕಾಗಿ ಗುಣಮಟ್ಟದ ಕಾಫಿ ಮತ್ತು ಏಲಕ್ಕಿ ಗಿಡಗಳನ್ನೂ ರೈತರಿಗೆ
ಒದಗಿಸುತ್ತಿದ್ದಾರೆ.

ಸಮಗ್ರ ತೋಟಗಾರಿಕಾ ಸೇವೆ:

ಇದೀಗ ಸಮಾನ ಮನಸ್ಕ ಸ್ನೇಹಿತರನ್ನು ಕೂಡಿಕೊಂಡು, ಗುಣಮಟ್ಟದ ಕಾಫಿ, ಅಡಿಕೆ, ತೆಂಗು, ಅತ್ಯಧಿಕ ಇಳುವರಿಯ ಲಿಂಬೆ, ಏಪಲ್, ಏಲಕ್ಕಿ ಮುಂತಾದ ತೋಟಗಾರಿಕಾ ಬೆಳೆಗಳ ಗಿಡಗಳನ್ನು
ಒದಗಿಸುವ ಮಹತ್ಕಾರ್ಯದಲ್ಲೂ ನಿರತರಾಗಿದ್ದಾರೆ. ರೈತನಿಗೆ ಬೇಕಾದ ಎಲ್ಲಾ ಗಿಡಗಳು – ಮಾಹಿತಿಗಳನ್ನು ಒಂದೇ ಸೂರಿನಡಿ, ಒಂದೇ ವಿಶ್ವಾಸಾರ್ಹ ಮೂಲದಲ್ಲಿ ಸಿಗುವಂತಹ ವ್ಯವಸ್ಥೆಯನ್ನು
ಕಟ್ಟಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!