ಸ್ಥಳೀಯ
Mandya-ಬರ್ತ್ ಡೇ ಪಾರ್ಟಿಗೆ ತೆರಳಿದ ತೆರಳಿದ್ದ 19 ವರ್ಷದ ಯುವತಿ ಅನುಮಾನಾಸ್ಪದ ಸಾವು – ಅತ್ಯಾಚಾ#ರಕ್ಕೆ ಯತ್ನಿಸಿ ಕೊಲೆ; ಅಪಘಾತವೆಂದು ಬಿಂಬಿಸಲು ಶವವನ್ನಿಟ್ಟು ಕಾರು ಪಲ್ಟಿ?
ಮಂಡ್ಯ ಜಿಲ್ಲೆಯಲ್ಲಿ ಸಂಭವಿಸಿದ ಕಾರು ಅಪಘಾತವೊಂದು ಈಗ ಭೀಕರ ಕೊಲೆಯ ಸಂಚಿನ ರೂಪ ಪಡೆದಿದೆ. ಹುಟ್ಟುಹಬ್ಬ ಆಚರಣೆಗೆಂದು ತೆರಳಿದ್ದ 19 ವರ್ಷದ ಯುವತಿಯ ಅನುಮಾನಾಸ್ಪದ ಸಾವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಮೃತರ ಪೋಷಕರು “ಇದು ಅಪಘಾತವಲ್ಲ, ಅತ್ಯಾಚಾರಕ್ಕೆ ಯತ್ನಿಸಿ ನಡೆದ ಕೊಲೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.
ಮಂಡ್ಯ: ಜಿಲ್ಲೆಯಲ್ಲಿ ಸಂಭವಿಸಿದ ಕಾರು ಅಪಘಾತವೊಂದು ಈಗ ಭೀಕರ ಕೊಲೆಯ ಸಂಚಿನ ರೂಪ ಪಡೆದಿದೆ. ಹುಟ್ಟುಹಬ್ಬ ಆಚರಣೆಗೆಂದು ತೆರಳಿದ್ದ 19 ವರ್ಷದ ಯುವತಿಯ ಅನುಮಾನಾಸ್ಪದ ಸಾವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಮೃತರ ಪೋಷಕರು “ಇದು ಅಪಘಾತವಲ್ಲ, ಅತ್ಯಾಚಾರಕ್ಕೆ ಯತ್ನಿಸಿ ನಡೆದ ಕೊಲೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.
ಪ್ರಕರಣದ ಹಿನ್ನೆಲೆ:
ಮೃತ ಯುವತಿಯನ್ನು ಹೊನ್ನೆಮಡು ಗ್ರಾಮದ ನವೀನಾ (19) ಎಂದು ಗುರುತಿಸಲಾಗಿದೆ. ಈಕೆ ಮಂಡ್ಯದ ಹಣ್ಣಿನ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಾ ಪಿಜಿಯಲ್ಲಿ ವಾಸವಿದ್ದಳು. ಕಳೆದ ಭಾನುವಾರ ತನ್ನ ಸ್ನೇಹಿತರಾದ ಅಶ್ವಿನಿ, ವಿಷ್ಣು ಹಾಗೂ ಶಿವಕುಮಾರ್ ಜೊತೆ ಕೊಮ್ಮೇರಹಳ್ಳಿ ಬೆಟ್ಟಕ್ಕೆ ಕಾರಿನಲ್ಲಿ ತೆರಳಿದ್ದಳು. ಈ ವೇಳೆ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದ್ದು, ನವೀನಾ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಉಳಿದ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದರು.
ಪೋಷಕರ ಸಂಶಯ ಮತ್ತು ಗಂಭೀರ ಆರೋಪ:
ಈ ಅಪಘಾತವು ವ್ಯವಸ್ಥಿತವಾಗಿ ನಡೆದಿದೆ ಎಂಬುದು ಪೋಷಕರ ವಾದ. ಸಂಜೆ ನಡೆದ ಅಪಘಾತದ ವಿಷಯವನ್ನು ರಾತ್ರಿ 11 ಗಂಟೆಗೆ ತಿಳಿಸಿರುವುದು ಅನುಮಾನಕ್ಕೆ ಕಾರಣವಾಗಿದೆ. ನವೀನಾಳ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆಘಾತಕಾರಿ ಅಂಶಗಳನ್ನು ಉಲ್ಲೇಖಿಸಿದ್ದಾರೆ.
ಹುಟ್ಟುಹಬ್ಬದ ನೆಪದಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಲಾಗಿದೆ.
ಯುವತಿ ಪ್ರತಿರೋಧ ಒಡ್ಡಿದಾಗ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.
ಬಳಿಕ ಇದು ಅಪಘಾತ ಎಂದು ಬಿಂಬಿಸಲು, ಶವವನ್ನು ಕಾರಿನ ಮುಂಭಾಗದ ಸೀಟಿನಲ್ಲಿ ಕೂರಿಸಿ ಉದ್ದೇಶಪೂರ್ವಕವಾಗಿ ಕಂಬಕ್ಕೆ ಡಿಕ್ಕಿ ಹೊಡೆಸಲಾಗಿದೆ.
ಪೊಲೀಸ್ ತನಿಖೆ ಮತ್ತು ಬಂಧನ:
ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಂಡ್ಯ ಎಸ್ಪಿ ಡಾ.ಶೋಭರಾಣಿ ಅವರು, “ಪ್ರಕರಣದ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ಮೃತಳ ಸ್ನೇಹಿತರಾದ ಅಶ್ವಿನಿ, ಕಾರ್ಪೆಂಟರ್ ಕೆಲಸ ಮಾಡುವ ವಿಷ್ಣು ಮತ್ತು ಶಿವಕುಮಾರ್ ಅವರನ್ನು ಈಗಾಗಲೇ ಬಂಧಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ನಿಖರ ಕಾರಣ ತಿಳಿಯಲಿದೆ” ಎಂದು ಹೇಳಿದ್ದಾರೆ.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಶಿಕ್ಷಣ
RTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
ರಾಜಕೀಯ22 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಬಿಗ್ ನ್ಯೂಸ್6 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಸಿನೆಮಾ23 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ23 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
Uncategorized5 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಅಂತರ ರಾಜ್ಯ23 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಕಾರ್ಯಕ್ರಮಗಳು23 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಮಂಗಳೂರು6 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು















