ಶಿಕ್ಷಣ
Puttur-ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ: ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕರಾಟೆ ಪಂದ್ಯಾವಳಿ ಯಶಸ್ವಿ
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 2026–27ನೇ ಸಾಲಿನ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕರಾಟೆ ಪಂದ್ಯಾವಳಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಆಗಸ್ಟ್ 5 ರಂದು ಅದ್ದೂರಿಯಾಗಿ ನಡೆಯಿತು.
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 2026–27ನೇ ಸಾಲಿನ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕರಾಟೆ ಪಂದ್ಯಾವಳಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಆಗಸ್ಟ್ 5 ರಂದು ಅದ್ದೂರಿಯಾಗಿ ನಡೆಯಿತು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ವಿಜಯನಾರಾಯಣ ಎಂ ಅವರು ದೀಪ ಬೆಳಗಿಸುವ ಮೂಲಕ ಪಂದ್ಯಾವಳಿಯನ್ನು ಉದ್ಘಾಟಿಸಿ, ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತವೆ ಎಂದು ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಅವರು ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಎಲ್ಲರನ್ನು ಅಭಿನಂದಿಸಿ, ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಸೆಲ್ವಿಯ ಕ್ರಾಸ್ತಾ, ಅವರು ಸ್ಪರ್ಧಾಳುಗಳನ್ನು ಉದ್ದೇಶಿಸಿ ಮಾತನಾಡಿ, ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಆತ್ಮವಿಶ್ವಾಸ, ಶಿಸ್ತು ಹಾಗೂ ಆರೋಗ್ಯವನ್ನು ಬೆಳೆಸಿಕೊಳ್ಳುವಂತೆ ಸ್ಪೂರ್ತಿದಾಯಕ ಸಂದೇಶ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾದ ಶಿವಪ್ರಕಾಶ್ ಎಂ ಅವರು ಮಾತನಾಡಿ, ಕರಾಟೆ ಕೇವಲ ಕ್ರೀಡೆಯಲ್ಲ, ಅದು ಆತ್ಮರಕ್ಷಣೆಯ ಕಲೆ ಹಾಗೂ ದೈಹಿಕ–ಮಾನಸಿಕ ಸದೃಢತೆಯನ್ನು ಬೆಳೆಸುವ ಅತ್ಯುತ್ತಮ ಸಾಧನವಾಗಿದೆ . ದೈಹಿಕ ಸಾಮರ್ಥ್ಯವು ದೇಶದ ಪ್ರಗತಿ ಮತ್ತು ಭದ್ರತೆಗೆ ಅತ್ಯಗತ್ಯವಾಗಿದ್ದು, ಸದೃಢ ಯುವಶಕ್ತಿಯ ಮೂಲಕ ಭಾರತವು ವಿಶ್ವಗುರುವಾಗಿ ಹೊರಹೊಮ್ಮಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ತಾಲೂಕು ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷರಾದ ಪ್ರವೀಣ ರೈ, ತಾಲೂಕು ದೈಹಿಕ ಶಿಕ್ಷಣ ಸಂಘದ ಗ್ರೇಡ್ 1 ಅಧ್ಯಕ್ಷರಾದ ಚಕ್ರಪಾಣಿ, ತಾಲೂಕು ದೈಹಿಕ ಶಿಕ್ಷಣ ಸಂಘದ ಗ್ರೇಡ್ 2 ಅಧ್ಯಕ್ಷರಾದ ಬಾಲಕೃಷ್ಣ ಹಾಗೂ ಜಿಲ್ಲಾ ದೈಹಿಕ ಶಿಕ್ಷಣ ಸಂಘದ ಕಾರ್ಯಾಧ್ಯಕ್ಷರಾದ ಮಾಮಚನ್, ಸಿಆರ್ ಪಿ ಶಶಿಕಲಾ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರಾದ ಸತೀಶ್ ಕುಮಾರ್ ರೈ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಶಾಲೆಯ ಸಂಚಾಲಕರಾದ ರವಿ ನಾರಾಯಣ ಎಂ ಅತಿಥಿಗಳಿಗೆ ಹೂ ನೀಡಿ ಗೌರವಿಸಿದರು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ನಾಗಭೂಷಣ ಕಿಣಿ ಮತ್ತು ಅದ್ವೈತ್ ರವರು ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಮೆರಗು ತಂದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಭಾಸ್ಕರ್ ಅವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮವನ್ನು ಸೌಮ್ಯಕುಮಾರಿ ಹಾಗೂ ಪವಿತ್ರ ಅವರು ಅಚ್ಚುಕಟ್ಟಾಗಿ ನಿರೂಪಿಸಿದರು.
ಪಂದ್ಯಾವಳಿಯಲ್ಲಿ ತಾಲೂಕಿನ ವಿವಿಧ ಶಾಲೆಗಳ ನೂರಾರು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಉತ್ತಮ ಸಂಘಟನೆ, ಶಿಸ್ತು ಹಾಗೂ ಕ್ರೀಡಾಸ್ಫೂರ್ತಿಯಿಂದ ಕೂಡಿದ ಈ ಪಂದ್ಯಾವಳಿಯು ಎಲ್ಲರ ಪ್ರಶಂಸೆಗೆ ಪಾತ್ರವಾಗಿ ಯಶಸ್ವಿಯಾಗಿ ಸಂಪನ್ನಗೊಂಡಿತು.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ ಬಿ.ಎಸ್ಸಿ. ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು 35 ವರ್ಷಗಳ ಬಳಿಕ ತಮ್ಮ ಎರಡನೇ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕಾಗಿ ರವಿವಾರ ಪಿಜಿ ಸೆಮಿನಾರ್ ಹಾಲ್‌ನಲ್ಲಿ ಸೇರಿ, ಹಳೆಯ ಸ್ನೇಹ, ಗೌರವ ಮತ್ತು ಆತ್ಮೀಯತೆಯನ್ನು ಮರುಕಳಿಸಿದರು.

ಪುತ್ತೂರು, ಅ.4: ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ ಬಿ.ಎಸ್ಸಿ. ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು 35 ವರ್ಷಗಳ ಬಳಿಕ ತಮ್ಮ ಎರಡನೇ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕಾಗಿ ರವಿವಾರ ಪಿಜಿ ಸೆಮಿನಾರ್ ಹಾಲ್‌ನಲ್ಲಿ ಸೇರಿ, ಹಳೆಯ ಸ್ನೇಹ, ಗೌರವ ಮತ್ತು ಆತ್ಮೀಯತೆಯನ್ನು ಮರುಕಳಿಸಿದರು.
ಅತ್ಯಂತ ಸುಂದರ ಹಾಗೂ ಮನೋಜ್ಞವಾಗಿ ನಡೆದ ಈ ಪುನರ್ಮಿಲನ ಕಾರ್ಯಕ್ರಮದಲ್ಲಿ 1991ರ ಬ್ಯಾಚ್‌ನ ಹಳೆ ವಿದ್ಯಾರ್ಥಿಗಳು ತಮ್ಮ ಕಾಲೇಜು ದಿನಗಳ ನೆನಪುಗಳನ್ನು ಮೆಲುಕು ಹಾಕುತ್ತಾ, ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ವೃತ್ತಿ ಹಾಗೂ ಸಾಮಾಜಿಕ ಬದುಕಿನಲ್ಲಿ ವಿವಿಧ ಉನ್ನತ ಸ್ಥಾನಗಳನ್ನು ಅಲಂಕರಿಸಿರುವ ಅವರು, ಕಾಲೇಜಿನ ಆವರಣದಲ್ಲಿ ಮತ್ತೆ ವಿದ್ಯಾರ್ಥಿಗಳಂತೆಯೇ ಬೆರೆತು, ತಮ್ಮ ಸುವರ್ಣ ದಿನಗಳನ್ನು ನೆನಪಿಸಿಕೊಂಡರು.

ಕಾಲೇಜಿನ ಪ್ರಾಂಶುಪಾಲರಾದ ರೆ.ಡಾ. ಆಂಟನಿ ಪ್ರಕಾಶ್ ಮೊಂತೆರೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಅವರು ಮಾತನಾಡಿ, “ಕಾಲೇಜು ಬದುಕಿತ್ತು; ಬದುಕುತ್ತಿದೆ; ಮುಂದೆಯೂ ಬದುಕಲಿದೆ. ಆದರೆ ಅದಕ್ಕಿಂತ ಮುಖ್ಯವಾದುದು ಪ್ರೀತಿ, ಗೌರವ ಮತ್ತು ಸದ್ಭಾವನೆ. ನಿಮ್ಮಂತಹ ಹಿರಿಯ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸದ್ಭಾವನೆಯಿಂದಲೇ ಕಾಲೇಜು ನಿರಂತರವಾಗಿ ಬೆಳೆಯುತ್ತಿದೆ,” ಎಂದು ಹೇಳಿ, ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಅತ್ಯಂತ ಶಿಸ್ತಿನಿಂದ ಹಾಗೂ ಸಮಯಪಾಲನೆಯೊಂದಿಗೆ ಸಂಘಟಿಸಿರುವುದನ್ನು ಶ್ಲಾಘಿಸಿದ ಅವರು, ಅವರ ಶಿಸ್ತು ಮತ್ತು ಸಮಯ ನಿರ್ವಹಣೆಯ ಸೂಕ್ಷ್ಮತೆಯು ಯಾರಿಗಾದರೂ ಮಾದರಿಯಾಗಬಲ್ಲದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಲೇಜಿನ ಅಭಿವೃದ್ಧಿಗೆ ₹2 ಲಕ್ಷ ಕೊಡುಗೆ- ನೆನಪಿನಿಂದ ನಂಟಿಗೆ, ನಂಟಿನಿಂದ ಕೊಡುಗೆಗೆ
ಪುನರ್ಮಿಲನವು ಕೇವಲ ಹಳೆಯ ನೆನಪುಗಳನ್ನು ಮೆಲುಕು ಹಾಕುವ ಕಾರ್ಯಕ್ರಮವಾಗಿ ಉಳಿಯದೆ, ತಾವು ಕಲಿತ ಸಂಸ್ಥೆಯ ಮೇಲಿನ ಋಣ ತೀರಿಸುವ ಸಾರ್ಥಕ ಸಂದರ್ಭವಾಗಿಯೂ ಪರಿಣಮಿಸಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 1991ರ ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು ಒಟ್ಟಾಗಿ ₹2 ಲಕ್ಷವನ್ನು ಕಾಲೇಜಿನ ಅಭಿವೃದ್ಧಿ ಕಾರ್ಯಗಳಿಗಾಗಿ ದೇಣಿಗೆಯಾಗಿ ನೀಡಿದರು.ತಾವು ವಿದ್ಯಾಭ್ಯಾಸ ಪಡೆದ ಸಂಸ್ಥೆಯ ಅಭಿವೃದ್ಧಿಗೆ ದಶಕಗಳ ಬಳಿಕವೂ ಕೈಜೋಡಿಸಿದ ಹಿರಿಯ ವಿದ್ಯಾರ್ಥಿಗಳ ಈ ಕೊಡುಗೆ ಕಾಲೇಜಿನ ಮೇಲಿನ ಅವರ ಪ್ರೀತಿ, ಕೃತಜ್ಞತೆ ಹಾಗೂ ಸದ್ಭಾವನೆಯ ಪ್ರತೀಕವಾಗಿ ಮೂಡಿಬಂತು.
ವೃತ್ತಿ ಸಾಧನೆಗೆ ಗೌರವ
ಹಿರಿಯ ವಿದ್ಯಾರ್ಥಿಗಳ ವೃತ್ತಿಪರ ಸಾಧನೆಗಳನ್ನೂ ಕಾರ್ಯಕ್ರಮದಲ್ಲಿ ಗುರುತಿಸಲಾಯಿತು. ಡಾ. ಗಿರೀಶ್ ಭಟ್ ಅಜಕ್ಕಳ ಹಾಗೂ ಶ್ರೀ ನವೀನ್ ಕುಮಾರ್ ಅವರನ್ನು ಅವರ ವೃತ್ತಿಪರ ಸಾಧನೆಗಳಿಗಾಗಿ ಗೌರವಿಸಲಾಯಿತು. ವೃತ್ತಿಜೀವನದಲ್ಲಿನ ಸಾಧನೆಗಳು ಹಾಗೂ ಪ್ರಗತಿಯನ್ನು ಗುರುತಿಸಿ ವಿವಿಧ ಗೌರವಗಳನ್ನು ನೀಡಿ ಅಭಿನಂದಿಸಲಾಯಿತು. ರೈಲ್ವೆ ಉದ್ಯೋಗದಲ್ಲಿನ ಪದೋನ್ನತಿಯೂ ಸೇರಿದಂತೆ ವೃತ್ತಿಪರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ವಿದ್ಯಾರ್ಥಿಗಳ ಯಶಸ್ಸನ್ನು ಕಾರ್ಯಕ್ರಮದಲ್ಲಿ ಮೆಚ್ಚುಗೆಯಿಂದ ಸ್ಮರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ವಾಣಿ ಹಾಗೂ ಡಾ. ಚಂದ್ರಶೇಖರ್ ಕೆ ಜಿ ಪ್ರಾರ್ಥನೆ ನೆರವೇರಿಸಿದರು. ಡಾ. ಕೃಷ್ಣಪ್ರಭಾ ಕಾರ್ಯಕ್ರಮ ನಿರ್ವಹಿಸಿದರು. ಶಿವಕುಮಾರ್ ಸ್ವಾಗತಿಸಿದರು. ಶಿವನಾಥ ರೈ ಮೆಗಿನಗುತ್ತು ಪ್ರಾಸ್ತಾವಿಕ ನುಡಿಗಳ ಮೂಲಕ ಕಾರ್ಯಕ್ರಮದ ಆಶಯವನ್ನು ವಿವರಿಸಿದರು.
ಡಾ. ಗಿರೀಶ್ ಭಟ್ ಅಜಕ್ಕಳ ವಂದಿಸಿದರು.
ನೆನಪುಗಳೊಂದಿಗೆ ಮತ್ತೆ ವಿದ್ಯಾರ್ಥಿಗಳಾದ ಹಿರಿಯ ವಿದ್ಯಾರ್ಥಿಗಳು
ಇತ್ತೀಚಿನ ವರ್ಷಗಳಲ್ಲಿ ಕಾಲೇಜಿನ ವಿವಿಧ ಬ್ಯಾಚ್‌ಗಳ ಹಿರಿಯ ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳನ್ನು ಒಗ್ಗೂಡಿಸಿಕೊಂಡು ಕಾಲೇಜಿಗೆ ಭೇಟಿ ನೀಡುತ್ತಿರುವುದು ಗಮನಾರ್ಹವಾಗಿದೆ. ಇಂತಹ ಪುನರ್ಮಿಲನಗಳು ಕೇವಲ ಭೇಟಿಗೆ ಸೀಮಿತವಾಗದೆ, ಹಳೆಯ ಸುವರ್ಣ ನೆನಪುಗಳನ್ನು ಮರುಕಳಿಸುವ, ಸ್ನೇಹದ ನಂಟನ್ನು ಗಟ್ಟಿಗೊಳಿಸುವ ಹಾಗೂ ತಾವು ಬೆಳೆದ ಸಂಸ್ಥೆಯೊಂದಿಗೆ ಭಾವನಾತ್ಮಕ ಸಂಬಂಧವನ್ನು ಪುನಃ ಜೋಡಿಸುವ ವೇದಿಕೆಗಳಾಗಿವೆ.
ವೃತ್ತಿ ಮತ್ತು ಸಾಮಾಜಿಕ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ, ಕಾಲೇಜಿನ ಆವರಣಕ್ಕೆ ಕಾಲಿಟ್ಟ ಕ್ಷಣ ಅವರು ತಮ್ಮ ಹುದ್ದೆ, ಸ್ಥಾನಮಾನಗಳನ್ನು ಮರೆತು ಮತ್ತೆ ತಮ್ಮ ಕಾಲೇಜು ದಿನಗಳ ವಿದ್ಯಾರ್ಥಿಗಳಾಗಿ, ಸ್ನೇಹಿತರಾಗಿ, ಸಹಪಾಠಿಗಳಾಗಿ ಬೆರೆತದ್ದು ಕಾರ್ಯಕ್ರಮದ ವಿಶೇಷತೆಯಾಗಿತ್ತು.
ಒಂದು ಋಣಸ್ಮರಣೆ; ಗುರುಗಳಿಗೆ ಭಾವಪೂರ್ಣ ಗುರುವಂದನೆ
ಪ್ರೊ. ಅಣ್ಣಾಜಿರಾವ್ | ಪ್ರೊ. ಹರಿನಾರಾಯಣ ಮಾಡಾವು | ಪ್ರೊ. ವಿಷ್ಣು ಭಟ್ | ಡಾ. ಎ.ಪಿ. ರಾಧಾಕೃಷ್ಣ | ಡಾ. ಕೃಷ್ಣಕುಮಾರ್ | ಪ್ರೊ. ಗಣೇಶ್ ಭಟ್ | ಪ್ರೊ. ಬಾಲಕೃಷ್ಣ | ಪ್ರೊ. ವಸಂತಿ | ಪ್ರೊ. ಇಟಾ ಡಿಸೋಜಾ
1991ರ ಬಿ.ಎಸ್ಸಿ. ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ತಮ್ಮ ಬದುಕಿಗೆ ಜ್ಞಾನ ಮತ್ತು ದಿಕ್ಕು ನೀಡಿದ ಈ ಗುರುಗಳನ್ನು ಏಲಕ್ಕಿ ಹಾರ, ಸರಸ್ವತಿ ವಿಗ್ರಹ, ಶಾಲು ಹಾಗೂ ಹಣ್ಣುಗಳನ್ನು ನೀಡಿ ಗುರುವಂದನೆಯೊಂದಿಗೆ ಸನ್ಮಾನಿಸಿದರು.
ಗುರುವಂದನೆ ಸ್ವೀಕರಿಸಲು ಅನಾರೋಗ್ಯ ಮತ್ತು ವಯೋಸಹಜ ಕಾರಣಗಳಿಗೆ ಸಮಾರಂಭಕ್ಕೆ ಬರಲಾಗದ ಪ್ರೊ. ಲಕ್ಷ್ಮಿನಾರಾಯಣ ಕಡಂಬಳಿತ್ತಾಯ, ಪ್ರೊ.ಕೇಶವ ಭಟ್,ಪ್ರೊ.ಕಾನ್ಸೆಪ್ಟ ಲೋಬೋ, ಪ್ರೊಸಿರಿಲ್ ಮಥಿಯಾಸ್ ಅವರ ನಿವಾಸಗಳಿಗೇ ಹುಡುಕಿಕೊಂಡು ಹೋದ ಹಿರಿಯ ವಿದ್ಯಾರ್ಥಿಗಳು ಅಲ್ಲಿಯೇ ಗುರುವಂದನೆ ಸಲ್ಲಿಸಿ ಕೃತಾರ್ಥರಾದದ್ದು ವಿಶೇಷವಾಗಿತ್ತು.
ಇದು ಕೇವಲ ಸನ್ಮಾನವಾಗಿರದೆ, ತಮ್ಮ ಬದುಕಿಗೆ ಜ್ಞಾನ, ಶಿಸ್ತು, ಮೌಲ್ಯ ಮತ್ತು ದಿಕ್ಕು ನೀಡಿದ ಗುರುಗಳೆಡೆಗೆ ಹಳೆಯ ವಿದ್ಯಾರ್ಥಿಗಳು ಸಲ್ಲಿಸಿದ ಕೃತಜ್ಞತೆಯ ಸಂಕೇತವಾಗಿತ್ತು. ಕಾಲೇಜು ದಿನಗಳಲ್ಲಿ ಶಿಕ್ಷಕರಿಂದ ಪಡೆದ ಮಾರ್ಗದರ್ಶನವನ್ನು ಹಲವು ದಶಕಗಳ ಬಳಿಕವೂ ಸ್ಮರಿಸಿ ಗೌರವ ಸಲ್ಲಿಸಿದ ಕ್ಷಣವು ಕಾರ್ಯಕ್ರಮಕ್ಕೆ ವಿಶೇಷ ಭಾವನಾತ್ಮಕ ಸ್ಪರ್ಶ ನೀಡಿತು.
ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಡಾ ಕೃಷ್ಣಪ್ರಭಾ, ರಾಜ್ಯ ಮಾಹಿತಿ ಆಯುಕ್ತ ಬದ್ರುದ್ದೀನ್ ಮಾಣಿ, ಶಿವನಾಥ ರೈ ಮೆಗಿನಗುತ್ತು, ಲಕ್ಷ್ಮೀನಾರಾಯಣ ಕಡಂಬಳಿತ್ತಾಯ ಹಾಗೂ ವಾಲೇರಿಯನ್ ಡಿಸೋಜಾ ಪ್ರಮುಖ ಪಾತ್ರ ವಹಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಪೊನ್ನಪ್ಪ ಅಡ್ಲ್ಯಾಬ್ಸ್, ಕಾಲೇಜಿನ ಪಿಆರ್‌ಒ ಡಾ. ಭಾರತಿ ಎಸ್. ರೈ, ಉಪಕುಲಸಚಿವ (ಶೈಕ್ಷಣಿಕ) ವಿಪಿನ್ ನಾಯಕ್, ಎನ್‌ಸಿಸಿ ನೌಕಾ ವಿಭಾಗದ ಸಬ್ ಲೆಫ್ಟಿನೆಂಟ್ ತೇಜಸ್ವಿ ಭಟ್, ಉಪಕುಲಸಚಿವ (ಮೌಲ್ಯಮಾಪನ) ಅಭಿಷೇಕ್ ಸುವರ್ಣ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಹರ್ಷಿತ್ ಕುಮಾರ್ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಗಳಿಂದ ಚಾರಣ ಹಾಗೂ ಸ್ವಚ್ಛತಾ ಅಭಿಯಾನ
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ಇದರ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಅಕ್ಟೋಬರ್ 3ರಂದು ಪರ್ಲಡ್ಕ ಮಾರ್ಗವಾಗಿ ಬಿರುಮಲೆ ಬೆಟ್ಟಕ್ಕೆ ಒಂದು ದಿನದ ಚಾರಣ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನ ನಡೆಯಿತು.
ಪುತ್ತೂರು, ಅ.3: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ಇದರ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಅಕ್ಟೋಬರ್ 3ರಂದು ಪರ್ಲಡ್ಕ ಮಾರ್ಗವಾಗಿ ಬಿರುಮಲೆ ಬೆಟ್ಟಕ್ಕೆ ಒಂದು ದಿನದ ಚಾರಣ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನ ನಡೆಯಿತು.
ಸಾಹಸ ಚಟುವಟಿಕೆಯೊಂದಿಗೆ ಪರಿಸರ ಜಾಗೃತಿ ಮತ್ತು ಸಮಾಜ ಸೇವೆಯನ್ನು ಸಂಯೋಜಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಂಗವಾಗಿ ರೋವರ್ಸ್ ಮತ್ತು ರೇಂಜರ್ಸ್ಗಳು ಚಾರಣದ ಮಾರ್ಗದುದ್ದಕ್ಕೂ ಸ್ವಚ್ಛತಾ ಅಭಿಯಾನವನ್ನು ಕೈಗೊಂಡರು. ಪ್ರವಾಸಿಗರು ಹಾಗೂ ಸಾರ್ವಜನಿಕರು ಎಸೆದಿದ್ದ ಪ್ಲಾಸ್ಟಿಕ್ ಬಾಟಲಿಗಳು, ಕವರ್‌ಗಳು, ಆಹಾರದ ಪ್ಯಾಕೆಟ್‌ಗಳು ಮತ್ತು ಇತರ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ವಿದ್ಯಾರ್ಥಿಗಳು ಸಂಗ್ರಹಿಸಿ, ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿದರು. ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಅಲ್ಲದೆ, ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಹಾಗೂ ನೈಸರ್ಗಿಕ ಮತ್ತು ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯನ್ನು ಕಾಪಾಡುವಂತೆ ಮನವಿ ಮಾಡಿದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು.
ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕಿಶನ್ ಕೆ ವೈ, ತ್ರಿಶಿಕ್ ಕೆ. ಗೌಡ , ಯಶ್ವಿತ್ ಗೌಡ, ಪವನ್ ಕುಮಾರ್, ಮೋಕ್ಷಿತ್ ಕೆ.ಜೆ, ಅನ್ವಿತ್ ಎಸ್ .ಪಿ, ನಿದೀಶ್ ಶೆಟ್ಟಿ, ಮನ್ವಂತ್ ದ್ವಿತೀಯ ಪಿಯುಸಿ ಪ್ರಣಮ್ ಪಿ ಶೆಟ್ಟಿ ,ಚಿಂತನ್ ಕೆ, ಕೆ ಆರ್ ದಿಶಾಂತ್ ಹಾಗೂ ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿನ್ಯಾ ರೈ, ಸೃಷ್ಟಿ ಎಸ್. ಆರ್. ರೈ, ವೀಕ್ಷಾ ಬಿ. ಆರ್, ಧರಣಿ ಕೆ. ಟಿ, ಶ್ರಾವ್ಯ, ಕೆ. ಸುಶಾನಿ, ಸಿ. ಎಸ್. ಚಿನ್ಮಯ್ ಗೌಡ, ಪಾವನಿ ಕೆ. ವಸಿಷ್ಠ, ಸಾನ್ವಿ ಎಸ್, ತನ್ವಿ ದ್ವಿತೀಯ ಪಿಯುಸಿ ಧನ್ವಿ ಎ. ಆರ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
-
ದಕ್ಷಿಣ ಕನ್ನಡ15 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
Uncategorized21 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ಸಿನೆಮಾ22 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ22 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ಅಪರಾಧ22 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಅಪರಾಧ14 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಬಿಗ್ ನ್ಯೂಸ್20 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ಮಂಗಳೂರು21 hours agoPandamburu-ಪಣಂಬೂರು ಬೀಚ್ನಲ್ಲಿ ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ನೀರುಪಾಲು


















