ನಿಧನ ವಾರ್ತೆ
Kerala-ಪ್ರವಾಹದಲ್ಲಿ ಸಿಲುಕಿದವನಿಗೆ ತನ್ನ ಲೈಫ್ ಜಾಕೆಟ್ ನೀಡಿ ಪ್ರಾಣತೆತ್ತ ಈಜು ತರಬೇತುದಾರ..!
ಕೇರಳದಲ್ಲಿ ಮಳೆಯ ಆರ್ಭಟ ಮುಂದುವರಿಯುತ್ತಿರುವ ಬೆನ್ನಲ್ಲೇ, ಮನುಕುಲವೇ ಹೆಮ್ಮೆಪಡುವಂತಹ ಮತ್ತು ಅಷ್ಟೇ ನೋವಿನ ಘಟನೆಯೊಂದು ವರದಿಯಾಗಿದೆ. ಪ್ರವಾಹದಲ್ಲಿ ಸಿಲುಕಿದ್ದ ರೈತನನ್ನು ರಕ್ಷಿಸುವ ಭರದಲ್ಲಿ 36 ವರ್ಷದ ರಕ್ಷಣಾ ತರಬೇತುದಾರ ಆರ್ ರಾಜೇಶ್ ತಮ್ಮ ಲೈಫ್ ಜಾಕೆಟ್ ಅನ್ನೇ ನೀಡಿ, ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ.
ಕಣ್ಣೂರು/ತಿರುವನಂತಪುರಂ: ಕೇರಳದಲ್ಲಿ ಮಳೆಯ ಆರ್ಭಟ ಮುಂದುವರಿಯುತ್ತಿರುವ ಬೆನ್ನಲ್ಲೇ, ಮನುಕುಲವೇ ಹೆಮ್ಮೆಪಡುವಂತಹ ಮತ್ತು ಅಷ್ಟೇ ನೋವಿನ ಘಟನೆಯೊಂದು ವರದಿಯಾಗಿದೆ. ಪ್ರವಾಹದಲ್ಲಿ ಸಿಲುಕಿದ್ದ ರೈತನನ್ನು ರಕ್ಷಿಸುವ ಭರದಲ್ಲಿ 36 ವರ್ಷದ ರಕ್ಷಣಾ ತರಬೇತುದಾರ ಆರ್ ರಾಜೇಶ್ ತಮ್ಮ ಲೈಫ್ ಜಾಕೆಟ್ ಅನ್ನೇ ನೀಡಿ, ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ.
ಘಟನೆಯ ವಿವರ:
ಆಗಸ್ಟ್ 1 ರಂದು ಕಣ್ಣೂರು ಜಿಲ್ಲೆಯ ಕರಿಯಂಗೋಡ್ ನದಿಯಲ್ಲಿ ದಿಢೀರ್ ಪ್ರವಾಹ ಉಂಟಾದಾಗ, 61 ವರ್ಷದ ಬೆನ್ನಿ ಎಂಬ ರೈತ ಮೀನುಳ್ಳಿ ದ್ವೀಪದ ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದರು. ಇವರನ್ನು ರಕ್ಷಿಸಲು ಈಜು ಮತ್ತು ರ್ಯಾಪ್ಲಿಂಗ್ ತರಬೇತುದಾರರಾಗಿದ್ದ ರಾಜೇಶ್ ತಮ್ಮ ತಂಡದೊಂದಿಗೆ ನದಿಗೆ ಇಳಿದಿದ್ದರು.
ಜೀವ ಉಳಿಸಲು ಲೈಫ್ ಜಾಕೆಟ್ ತ್ಯಾಗ:
ರೈತನನ್ನು ಸುರಕ್ಷಿತವಾಗಿ ದಡಕ್ಕೆ ಕರೆತರುವಾಗ ನೀರಿನ ರಭಸ ಹೆಚ್ಚಾಗಿತ್ತು. ಈ ವೇಳೆ ರೈತ ತತ್ತರಿಸುತ್ತಿರುವುದನ್ನು ಕಂಡು, ರಾಜೇಶ್ ತಾವು ಧರಿಸಿದ್ದ ‘ಲೈಫ್ ಜಾಕೆಟ್’ ಅನ್ನು ಬಿಚ್ಚಿ ರೈತನಿಗೆ ತೊಡಿಸಿದ್ದಾರೆ. ಎಲ್ಲರೂ ಹಗ್ಗದ ಸಹಾಯದಿಂದ ದಡಕ್ಕೆ ಬರುತ್ತಿದ್ದಾಗ, ದಡದ ಹತ್ತಿರವೇ ರಾಜೇಶ್ ಅವರ ಕೈ ಜಾರಿ ನೀರಿನ ರಭಸಕ್ಕೆ ಕೊಚ್ಚಿಹೋದರು. ಮೂರು ದಿನಗಳ ತೀವ್ರ ಹುಡುಕಾಟದ ಬಳಿಕ ಮಂಗಳವಾರ ಅವರ ಮೃತದೇಹ ಪತ್ತೆಯಾಗಿದೆ.
ಸೇವೆಯೇ ಉಸಿರಾಗಿದ್ದ ಸಾಹಸಿ:
ತಿರುವನಂತಪುರಂ ಮೂಲದ ರಾಜೇಶ್ ಕೇವಲ ತರಬೇತುದಾರರಲ್ಲ, ಅಪ್ಪಟ ಜನಸೇವಕರಾಗಿದ್ದರು. 2018ರ ಕೇರಳದ ಭೀಕರ ಪ್ರವಾಹ ಹಾಗೂ ಇತ್ತೀಚಿನ ವಯನಾಡ್ ಗುಡ್ಡಕುಸಿತದ ದುರಂತದ ವೇಳೆಯೂ ನೂರಾರು ಜೀವಗಳನ್ನು ರಕ್ಷಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು. ಸದಾ ಇತರರ ಜೀವ ಉಳಿಸಲು ಶ್ರಮಿಸುತ್ತಿದ್ದ ಇವರು, ಈ ಮಳೆಗಾಲದಲ್ಲಿ ಒಬ್ಬ ಅಪರಿಚಿತ ರೈತನನ್ನು ಬದುಕಿಸಲು ಹೋಗಿ ತಾವೇ ಬಲಿಯಾಗಿದ್ದಾರೆ.
ಗಣ್ಯರಿಂದ ಸಂತಾಪ:
ಈ ಅಮೋಘ ತ್ಯಾಗಕ್ಕೆ ಕೇರಳ ರಾಜ್ಯಾದ್ಯಂತ ತೀವ್ರ ಕಂಬನಿ ಮಿಡಿಯಲಾಗಿದೆ. ಮುಖ್ಯಮಂತ್ರಿ ವಿ. ಡಿ. ಸತೀಶನ್, ಪ್ರತಿಪಕ್ಷ ನಾಯಕ ಪಿಣರಾಯಿ ವಿಜಯನ್ ಹಾಗೂ ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಸೇರಿದಂತೆ ಹಲವು ಪ್ರಮುಖರು ರಾಜೇಶ್ ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.
ಕೇರಳದಲ್ಲಿ ಮಳೆಯ ತಲ್ಲಣ:
ಕೇರಳದ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ವರ್ಷದ ಮಳೆಗಾಲಕ್ಕೆ ಈಗಾಗಲೇ 20ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. 12 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಇಂತಹ ಕಠಿಣ ಸ್ಥಿತಿಯಲ್ಲೂ ರಾಜೇಶ್ ತೋರಿದ ಧೈರ್ಯ ಕೇರಳದ ಜನರ ಮನಸ್ಸಿನಲ್ಲಿ ಎಂದಿಗೂ ಅಚ್ಚಳಿಯದೆ ಉಳಿಯಲಿದೆ.
ನಿಧನ ವಾರ್ತೆ
Kadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಕಡಬ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ.
ಹೆದ್ದಾರಿಯಲ್ಲಿ ಕಾರೊಂದು ಸಂಚರಿಸುತ್ತಿದ್ದ ವೇಳೆ ಏಕಾಏಕಿ ಅಡ್ಡ ಬಂದ ಕಡವೆಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಈ ಭಾಗದಲ್ಲಿ ಕಾಡುಪ್ರಾಣಿಗಳ ಸಂಚಾರ ಸಾಮಾನ್ಯವಾಗಿರುವ ಹಿನ್ನೆಲೆಯಲ್ಲಿ ಘಟನೆ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ರಾತ್ರಿ ಹಾಗೂ ಮುಂಜಾನೆ ವೇಳೆ ಕಾಡುಪ್ರಾಣಿಗಳು ಹೆದ್ದಾರಿಗೆ ಬರುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾದ ಅಗತ್ಯವಿದೆ.
ಈ ಹಿಂದೆಯೂ ಇದೇ ಪರಿಸರದಲ್ಲಿ ಕಾಡುಪ್ರಾಣಿಗಳಿಂದ ವಾಹನ ಸವಾರರಿಗೆ ಅಪಾಯ ಉಂಟಾದ ಘಟನೆಗಳು ನಡೆದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಾಡುಪ್ರಾಣಿಗಳ ಸಂಚಾರವಿರುವ ಪ್ರದೇಶಗಳಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದರ ಜತೆಗೆ, ರಸ್ತೆ ಬದಿಯ ಪೊದೆಗಳನ್ನು ತೆರವುಗೊಳಿಸಿ ವಾಹನ ಸವಾರರಿಗೆ ದೂರದಿಂದಲೇ ಪ್ರಾಣಿಗಳು ಕಾಣುವಂತೆ ಮಾಡುವ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾಡುಪ್ರಾಣಿಗಳು ಹೆದ್ದಾರಿಗೆ ಬರುವುದರಿಂದ ಉಂಟಾಗುವ ಅಪಘಾತಗಳನ್ನು ತಡೆಯಲು ಕ್ರಮ ವಹಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.
ನಿಧನ ವಾರ್ತೆ
Kasaragod-ಕಾಸರಗೋಡು: ಬೈಕ್-ಕಾರು ಮುಖಾಮುಖಿ ಡಿಕ್ಕಿ; ಸವಾರ ಸಾವು, ಪತ್ನಿ ಗಂಭೀರ
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ.
ಕಾಸರಗೋಡು: ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರ ಪತ್ನಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಮುಹಮ್ಮದ್ ಅಶ್ರಫ್ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಮುಖಾಮುಖಿಯಾಗಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಅಶ್ರಫ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ನಿಧನ ವಾರ್ತೆ
Mangalore-ಮಂಗಳೂರು: ನ್ಯಾಯಾಧೀಶರ ಕಾರು, ಗೂಡ್ಸ್ ಆಟೋ, ಬೈಕ್ ನಡುವೆ ಸರಣಿ ಅಪಘಾತ; ಗೂಡ್ಸ್ ಆಟೋ ಚಾಲಕ ಮೃತ್ಯು
ಮಂಗಳೂರು ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ. ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.
ಮಂಗಳೂರು: ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ.
ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿನಯ್ ಡಿ. ಅವರು ಕಾರಿನಲ್ಲಿ (ಕೆಎ-05-ಎನ್‌ಕೆ-2504) ಬೆಳಗ್ಗೆ ನ್ಯಾಯಾಲಯದತ್ತ ತೆರಳುತ್ತಿದ್ದರು. ಕರಂಗಲ್ಪಾಡಿಯ ರಾಧಾ ಮೆಡಿಕಲ್ಸ್ ಎದುರಿನ ತಿರುವಿನಲ್ಲಿ ಸಾಗುತ್ತಿದ್ದಾಗ, ಗೂಡ್ಸ್ ಆಟೋ ರಿಕ್ಷಾ (ಕೆಎ-19-ಎಡಿ-4395) ನಿಯಂತ್ರಣ ತಪ್ಪಿ ನ್ಯಾಯಾಧೀಶರ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಬಳಿಕ ಗೂಡ್ಸ್ ಆಟೋ ರಿಕ್ಷಾ ಅದೇ ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ (ಕೆಎ-19-ಎಚ್‌ವೈ-1664)ಕ್ಕೂ ಢಿಕ್ಕಿ ಹೊಡೆದು ಮಗುಚಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಚಂದ್ರ ಕೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಗೂಡ್ಸ್ ಆಟೋ ರಿಕ್ಷಾ ಢಿಕ್ಕಿಯಿಂದ ದ್ವಿಚಕ್ರ ವಾಹನ ಸವಾರ ಪ್ಲೆವಿಯನ್ ಮೆರ್ವಿನ್ ಅವರಿಗೂ ಗಾಯಗಳಾಗಿವೆ. ಅಪಘಾತದಲ್ಲಿ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನ ಜಖಂಗೊಂಡಿವೆ.
ಅಪಘಾತದಲ್ಲಿ ನ್ಯಾಯಾಧೀಶ ವಿನಯ್ ಡಿ. ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ನ್ಯಾಯಾಧೀಶ ವಿನಯ್ ಡಿ. ಅವರು ನೀಡಿದ ದೂರಿನ ಆಧಾರದ ಮೇಲೆ ಕದ್ರಿ ಟ್ರಾಫಿಕ್ ಈಸ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
-
ಪುತ್ತೂರು19 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್22 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು22 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್21 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ22 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ಅಪರಾಧ20 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ21 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
-
ಶಿಕ್ಷಣ21 hours agoVivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ


















