ರಾಷ್ಟ್ರೀಯ
Mohan Bhagavat On CJP Protest: ಪ್ರತಿಭಟಿಸುವ ಯುವಕರು ದೇಶದ್ರೋಹಿಗಳಲ್ಲ; ಜೆನ್ ಝೀಗಳ ನೋವು ನಿಜ: ಬಿಜೆಪಿ ನಾಯಕರು ಹಾಗೂ ಬೆಂಬಲಿಗರ ವಾದಕ್ಕಿಂತ ತದ್ವಿರುದ್ಧ ನಿಲುವು ವ್ಯಕ್ತಪಡಿಸಿದ ಮೋಹನ್ ಭಾಗವತ್

ಮುಂಬೈ, ಆ.6: ಇತ್ತೀಚೆಗೆ ನಡೆದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಪ್ರತಿಭಟನೆ ನಡೆಸುತ್ತಿರುವ ಯುವಕರ ಅಸಮಾಧಾನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಜನರೇಷನ್ ಝಡ್ (Gen Z) ಯುವಕರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದರೆ ಅವರನ್ನು ದೇಶದ್ರೋಹಿಗಳೆಂದು ಕರೆಯಬಾರದು. ಅವರು ನಮ್ಮವರೇ, ದೇಶದ ಮುಂದಿನ ಪೀಳಿಗೆ. ಅವರೊಂದಿಗೆ ಸಂವಾದ ನಡೆಸುವುದು ಅಗತ್ಯ,” ಎಂದು ಹೇಳಿದರು.
ಯುವಕರು ವ್ಯಕ್ತಪಡಿಸುತ್ತಿರುವ ಅಸಮಾಧಾನವನ್ನು ಸಮರ್ಥಿಸಿಕೊಂಡ ಭಾಗವತ್, “ಶಿಕ್ಷಣ ಕ್ಷೇತ್ರದಲ್ಲಿ ಇನ್ನೂ ಸಾಕಷ್ಟು ಸುಧಾರಣೆ ಅಗತ್ಯವಿದೆ. ಆಗಬೇಕಾದ ಬದಲಾವಣೆಗಳು ಆಗದ ಕಾರಣ ಯುವಕರು ತಮ್ಮ ಧ್ವನಿ ಎತ್ತುತ್ತಿದ್ದಾರೆ. ಅವರ ಅಸಮಾಧಾನ ನಿಜವಾದದ್ದೇ,” ಎಂದರು.
ಪ್ರತಿಭಟನೆ ಕೂಡ ಪ್ರಜಾಪ್ರಭುತ್ವದಲ್ಲಿ ಸಂವಾದದ ಒಂದು ರೂಪ ಎಂದು ಅವರು ಅಭಿಪ್ರಾಯಪಟ್ಟರು.
“ಒಬ್ಬರ ಸಮಸ್ಯೆಯನ್ನು ಮತ್ತೊಬ್ಬರು ಪರಿಹರಿಸಬಹುದಾದರೂ ಅದು ಆಗದಿದ್ದರೆ ಜನರು ತಮ್ಮ ಧ್ವನಿಯನ್ನು ಜೋರಾಗಿ ವ್ಯಕ್ತಪಡಿಸುತ್ತಾರೆ. ಪ್ರತಿಭಟನೆ ಕೂಡ ಸಂವಾದದ ಒಂದು ವಿಧಾನವೇ,” ಎಂದು ಹೇಳಿದರು.
ಇಂದಿನ ಯುವಕರು ಹಿಂದಿನ ತಲೆಮಾರಿನವರಿಗಿಂತ ಹೆಚ್ಚು ಪ್ರಶ್ನಿಸುವ ಸ್ವಭಾವ ಹೊಂದಿದ್ದಾರೆ ಎಂದು ಹೇಳಿದ ಅವರು, “ನಾವು ಚಿಕ್ಕವರಿದ್ದಾಗ ಹಿರಿಯರು ಹೇಳಿದ್ದನ್ನು ಪ್ರಶ್ನಿಸದೆ ಒಪ್ಪಿಕೊಳ್ಳುತ್ತಿದ್ದೆವು. ಆದರೆ ಇಂದಿನ Gen Z ಮತ್ತು Gen Alpha ಯುವಕರು ತಾರ್ಕಿಕ ಉತ್ತರಗಳನ್ನು ಕೇಳುತ್ತಾರೆ. ಅವರು ನಮ್ಮ ತಲೆಮಾರಿಗಿಂತ ಹೆಚ್ಚು ಪ್ರಾಮಾಣಿಕರು,” ಎಂದು ಅಭಿಪ್ರಾಯಪಟ್ಟರು.
ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳಿಗೆ ಚರ್ಚೆ ಮತ್ತು ಸಂವಾದವೇ ಪರಿಹಾರ ಎಂದು ಅವರು ಹೇಳಿದರು. ಪ್ರತಿಭಟನೆಗಳು ವ್ಯಕ್ತಿಗಳ ವಿರುದ್ಧವಾಗಿರದೆ, ವ್ಯವಸ್ಥೆಯ ಸುಧಾರಣೆಗಾಗಿ ನಡೆಯಬೇಕು ಎಂದರು.
ಯುವ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಹಾಗೂ ಪೆಲೆಟ್ ಗನ್ ಬಳಕೆಯ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಆ ಘಟನೆಗಳ ಬಗ್ಗೆ ಸಂಪೂರ್ಣ ಮಾಹಿತಿ ನನ್ನ ಬಳಿ ಇಲ್ಲ. ಆದ್ದರಿಂದ ಅದರ ಬಗ್ಗೆ ಸ್ಪಷ್ಟ ಅಭಿಪ್ರಾಯ ಹೇಳಲು ಸಾಧ್ಯವಿಲ್ಲ,” ಎಂದು ಹೇಳಿದರು.
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಷ್ಟ್ರೀಯ
Crude oil-100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ : ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ..!
ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ನ್ಯೂಯಾರ್ಕ್: ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಪ್ರಮುಖ ಮಾನದಂಡವಾಗಿರುವ ಬ್ರೆಂಟ್ ಕ್ರೂಡ್ ಬೆಲೆ ಶೇ.2ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 100 ಡಾಲರ್ ಮಟ್ಟ ತಲುಪಿದೆ.
ಕಚ್ಚಾ ತೈಲದ ಬೆಲೆ ಏರಿಕೆಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಜೆಟ್ ಇಂಧನದ ಬೆಲೆಗಳ ಮೇಲೂ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಪ್ರಯಾಣ ವೆಚ್ಚ ಹೆಚ್ಚುವುದರ ಜೊತೆಗೆ, ತಾಜಾ ಆಹಾರ ಪದಾರ್ಥಗಳು ಸೇರಿದಂತೆ ತ್ವರಿತವಾಗಿ ಸಾಗಿಸಬೇಕಾದ ಸರಕುಗಳ ಬೆಲೆಯೂ ಏರಿಕೆಯಾಗಬಹುದು. ದೂರದ ಪ್ರದೇಶಗಳಿಗೆ ಸಾಗಿಸುವ ಪೀಠೋಪಕರಣ, ವಿದ್ಯುತ್ ಉಪಕರಣ ಸೇರಿದಂತೆ ವಿವಿಧ ವಸ್ತುಗಳ ಬೆಲೆಯ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.
ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ!
ಕಚ್ಚಾ ತೈಲದ ಬೆಲೆ 100 ಡಾಲರ್ ದಾಟಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಲ್ಲಿ ಸುಮಾರು ₹5 ಹಾಗೂ ಡೀಸೆಲ್ ಮಾರಾಟದಲ್ಲಿ ₹23ರಷ್ಟು ನಷ್ಟ ಉಂಟಾಗುತ್ತಿದೆ ಎಂದು ವರದಿಯಾಗಿದೆ.
-
ನಿಧನ ವಾರ್ತೆ21 hours agoKadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
-
ಬಿಗ್ ನ್ಯೂಸ್16 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಪುತ್ತೂರು13 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಅಪರಾಧ23 hours ago
Vittal Police raid :ಕೋಳಿ ಅಂಕಕ್ಕೆ ವಿಟ್ಲ ಪೊಲೀಸ್ ದಾಳಿ – ನಾಲ್ವರು ವಶಕ್ಕೆ
-
ಅಂತರ ರಾಜ್ಯ19 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
Uncategorized21 hours agoಅ.6: ಮಂಗಳೂರಿನ ಪುರಭವನದಲ್ಲಿ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ
-
ಮಂಗಳೂರು16 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್15 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ


















