Connect with us

ಉಡುಪಿ

Padubidri-ಪಡುಬಿದ್ರಿ: ಕಾಂಗ್ರೆಸ್ ಮುಖಂಡ, ಮಾಜಿ ಗ್ರಾ.ಪಂ. ಅಧ್ಯಕ್ಷ ಡೇವಿಡ್ ಡಿಸೋಜಗೆ ಗುಂಡಿಕ್ಕಿ ಕೊಲೆ

Published

on



Ad Widget

Ad Widget

Ad Widget

Ad Widget

ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪದ ಮುದರಂಗಡಿಯಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ (David D’Souza) ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪದ ಮುದರಂಗಡಿಯಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ (David D’Souza) ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಇಂದು ಮಧ್ಯಾಹ್ನ ವಾಹನವೊಂದರಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಡೇವಿಡ್ ಅವರ ಮೇಲೆ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

Ad Widget

Ad Widget <> Ad Widget

ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ದಾರಿ ಮಧ್ಯೆಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.



Ad Widget

ಮೃತ ಡೇವಿಡ್ ಡಿಸೋಜ ಅವರು ಗುತ್ತಿಗೆದಾರರಾಗಿಯೂ ಗುರುತಿಸಿಕೊಂಡಿದ್ದರು. ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಹಂತಕರ ಪತ್ತೆಗಾಗಿ ಜಾಲ ಬೀಸಿದ್ದಾರೆ. ಹತ್ಯೆಗೆ ಹಳೆಯ ದ್ವೇಷ ಅಥವಾ ಬೇರೆ ಯಾವುದಾದರೂ ಕಾರಣವಿದೆಯೇ ಎಂಬ ಕುರಿತು ತನಿಖೆ ಮುಂದುವರಿದಿದೆ.

Click to comment

Leave a Reply

ಉಡುಪಿ

Manipal-ಮಣಿಪಾಲ: ಕೆಎಂಸಿ ಆಸ್ಪತೆಯ 4ನೇ ಮಹಡಿಯಿಂದ ಬಿದ್ದ ವ್ಯಕ್ತಿಗೆ ಗಂಭೀರ ಗಾಯ

Published

on



Ad Widget

Ad Widget

Ad Widget

Ad Widget

ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಉಡುಪಿ, ಸೆ.30: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಪತ್ನಿಯೊಂದಿಗೆ ನಡೆದ ಜಗಳದ ಬಳಿಕ ಕೆಲವು ದಿನಗಳ ಹಿಂದೆ ರಾಜೇಶ್ ವಿಷ ಸೇವಿಸಿದ್ದರು ಎನ್ನಲಾಗಿದ್ದು, ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಡಿಸ್‌ಚಾರ್ಜ್‌ಗೆ ಸಿದ್ಧತೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.



Ad Widget

ಬುಧವಾರ ಆಸ್ಪತ್ರೆ ಸಿಬ್ಬಂದಿಯೊಂದಿಗೆ ವಾಕಿಂಗ್‌ಗೆ ತೆರಳುವುದಾಗಿ ಹೇಳಿ ಕೊಠಡಿಯಿಂದ ರಾಜೇಶ್ ಹೊರಬಂದಿದ್ದರು. ಬಳಿಕ ಕಿಟಕಿಯ ಬಳಿ ತೆರಳಿ ಗ್ರಿಲ್ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಜಾಲರಿಯನ್ನು ಹರಿದು ಕೆಳಗೆ ಇಳಿಯುತ್ತಿದ್ದಾಗ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

ಕೆಳಗೆ ಬಿದ್ದ ಪರಿಣಾಮ ರಾಜೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆ ಸಿಬ್ಬಂದಿ ಅವರನ್ನು ರಕ್ಷಿಸಿ ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಿಸಿದ್ದಾರೆ.

ಸದ್ಯ ರಾಜೇಶ್ ಅವರ ಸ್ಥಿತಿ ಗಂಭೀರವಾಗಿದ್ದು, ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಚಿಕಿತ್ಸೆ ಮುಂದುವರಿಸಿದೆ.

Ad Widget
Continue Reading

ಉಡುಪಿ

Clarification-ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿ ಹತ್ಯೆ? ಪೊಲೀಸರಿಂದ ಮಹತ್ವದ ಸ್ಪಷ್ಟನೆ

Published

on



Ad Widget

Ad Widget

Ad Widget

Ad Widget

ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮ ಸೇರಿದಂತೆ ಕೆಲವು ಸ್ಥಳೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮ ಸೇರಿದಂತೆ ಕೆಲವು ಸ್ಥಳೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಡುಪಿ ಮೂಲದ ವ್ಯಕ್ತಿಯೊಬ್ಬರು ಯುಎಇಯ ಶಾರ್ಜಾದಲ್ಲಿ ಹತ್ಯೆಯಾಗಿದ್ದಾರೆ ಎಂಬ ವರದಿಗಳು ಪ್ರಸಾರವಾಗುತ್ತಿವೆ. ಆದರೆ, ಈ ಕುರಿತು ಶಾರ್ಜಾ ಪೊಲೀಸ್ ಇಲಾಖೆ ಅಥವಾ ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ/ಕಾನ್ಸುಲೇಟ್‌ನಿಂದ ಉಡುಪಿ ಜಿಲ್ಲಾ ಪೊಲೀಸರಿಗೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಅಥವಾ ದೃಢೀಕರಣ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget <> Ad Widget

ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕೃತ ಮಾಹಿತಿ ಲಭ್ಯವಾದಲ್ಲಿ, ಅದನ್ನು ಪರಿಶೀಲಿಸಿದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ.



Ad Widget

ಹೀಗಾಗಿ, ಸದ್ಯ ಸಾಮಾಜಿಕ ಮಾಧ್ಯಮ ಹಾಗೂ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಶಾರ್ಜಾ ಹತ್ಯೆ ಕುರಿತ ಸುದ್ದಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಉಡುಪಿ

Murder-ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಕೊಲೆ; ಕಾರಿನಲ್ಲಿ ತುಂಡು ತುಂಡಾದ ಮೃತದೇಹ ಪತ್ತೆ; ಪತ್ನಿ, ಅಪ್ರಾಪ್ತ ಮಗ ನಾಪತ್ತೆ

Published

on



Ad Widget

Ad Widget

Ad Widget

Ad Widget

ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಕೊಲೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಯಾದ ವ್ಯಕ್ತಿಯ ಪತ್ನಿ ಹಾಗೂ ಅಪ್ರಾಪ್ತ ಮಗ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಉಡುಪಿ, ಸೆ.22: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಕೊಲೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಯಾದ ವ್ಯಕ್ತಿಯ ಪತ್ನಿ ಹಾಗೂ ಅಪ್ರಾಪ್ತ ಮಗ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಉಡುಪಿ ಮೂಲದ ಪ್ರಕಾಶ್ ಕುಂದರ್ ಎಂದು ಗುರುತಿಸಲಾಗಿದೆ. ಅವರು ಶಾರ್ಜಾದಲ್ಲಿ ಪತ್ನಿ ಟೀನಾ ಹಾಗೂ ಅಪ್ರಾಪ್ತ ಮಗನೊಂದಿಗೆ ವಾಸಿಸುತ್ತಿದ್ದರು. ಪ್ರಕಾಶ್ ಅವರ ಸಾವಿನ ಬಳಿಕ ಪತ್ನಿ ಹಾಗೂ ಮಗನ ಸಂಪರ್ಕವೂ ಲಭ್ಯವಾಗದಿರುವುದು ಪ್ರಕರಣದ ಬಗ್ಗೆ ಮತ್ತಷ್ಟು ಕುತೂಹಲ ಮೂಡಿಸಿದೆ.

Ad Widget

Ad Widget <> Ad Widget

ವರದಿಗಳ ಪ್ರಕಾರ, ಜುಲೈ 20ರ ಸುಮಾರಿಗೆ ಪ್ರಕಾಶ್ ತಮ್ಮ ಸಹೋದರನನ್ನು ಸಂಪರ್ಕಿಸಲು ಪ್ರಯತ್ನಿಸಿದ್ದರು. ಸಾಮಾನ್ಯವಾಗಿ ವಾಯ್ಸ್ ಮೆಸೇಜ್ ಮೂಲಕ ಪ್ರತಿಕ್ರಿಯಿಸುತ್ತಿದ್ದ ಅವರು, ಆ ದಿನ ಟೆಕ್ಸ್ಟ್ ಮೆಸೇಜ್ ಕಳುಹಿಸಿದ್ದರು. ಸಹೋದರರು ದೂರವಾಣಿ ಮೂಲಕ ಮಾತನಾಡುವಂತೆ ಒತ್ತಾಯಿಸಿದಾಗ ಸಂಭಾಷಣೆ ಕಡಿತಗೊಂಡಿತ್ತು ಎನ್ನಲಾಗಿದೆ.



Ad Widget

ಇದರಿಂದ ಆತಂಕಗೊಂಡ ಸಂಬಂಧಿಕರು ಪ್ರಕಾಶ್ ಕೆಲಸ ಮಾಡುತ್ತಿದ್ದ ಕಂಪನಿಯನ್ನು ಸಂಪರ್ಕಿಸಿದ್ದಾರೆ. ಈ ವೇಳೆ ಅವರು ಭಾರತಕ್ಕೆ ತೆರಳಿದ್ದಾರೆ ಎಂದು ಕಂಪನಿ ತಿಳಿಸಿತ್ತು. ಆದರೆ ಪ್ರಕಾಶ್ ತಮ್ಮ ಸ್ವಗ್ರಾಮಕ್ಕೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರಿಗೆ ಅನುಮಾನ ಮೂಡಿದ್ದು, ಶಾರ್ಜಾ ಅಧಿಕಾರಿಗಳನ್ನು ಸಂಪರ್ಕಿಸಿ ನಾಪತ್ತೆ ದೂರು ನೀಡಿದ್ದಾರೆ.

Ad Widget

Ad Widget

ದೂರಿನ ಆಧಾರದ ಮೇಲೆ ಶಾರ್ಜಾ ಪೊಲೀಸರು ತನಿಖೆ ಆರಂಭಿಸಿದ್ದು, ಹುಡುಕಾಟದ ವೇಳೆ ಪ್ರಕಾಶ್ ಅವರದ್ದೇ ಕಾರಿನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ಅವರನ್ನು ಕೊಲೆ ಮಾಡಲಾಗಿದ್ದು, ಮೃತದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಲಾಗಿತ್ತು ಎನ್ನಲಾಗಿದೆ.

ಪ್ರಕಾಶ್ ಅವರ ಪತ್ನಿ ಟೀನಾ ಹಾಗೂ ಅಪ್ರಾಪ್ತ ಮಗ ಪ್ರಸ್ತುತ ಪತ್ತೆಯಾಗದ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳ ಗಮನ ಅವರತ್ತವೂ ಹರಿದಿದೆ. ಕೊಲೆ ಪ್ರಕರಣದಲ್ಲಿ ಟೀನಾ ಅವರ ಪಾತ್ರವಿದೆಯೇ ಅಥವಾ ಬೇರೆ ಕಾರಣಗಳಿಂದ ಅವರು ಮಗನೊಂದಿಗೆ ಶಾರ್ಜಾದಿಂದ ತೆರಳಿದ್ದಾರೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು ಶಾರ್ಜಾದಿಂದ ತೆರಳಿ ಭಾರತಕ್ಕೆ ಬಂದಿರುವ ಸಾಧ್ಯತೆಯ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ ಎಂದು ವರದಿಯಾಗಿದೆ.

ಪ್ರಕಾಶ್ ಶಾರ್ಜಾ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ಟೀನಾ ಶಿಕ್ಷಕಿಯಾಗಿ ಉದ್ಯೋಗದಲ್ಲಿದ್ದರು. ದಂಪತಿಗೆ ಸುಮಾರು 20 ವರ್ಷಗಳ ಹಿಂದೆ ವಿವಾಹವಾಗಿದ್ದು, 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪುತ್ರನಿದ್ದಾನೆ.

ದಂಪತಿಗಳ ನಡುವೆ ಯಾವುದೇ ಗಂಭೀರ ವೈಮನಸ್ಸು ಅಥವಾ ವಿವಾದವಿದ್ದ ಬಗ್ಗೆ ತಿಳಿದಿರಲಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಪ್ರಕಾಶ್ ಕಳೆದ ವರ್ಷ ಡಿಸೆಂಬರ್‌ನಲ್ಲಿ ಭಾರತಕ್ಕೆ ಬಂದು ತೆರಳಿದ್ದರು ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಾರ್ಜಾ ಪೊಲೀಸರು ತನಿಖೆ ಮುಂದುವರಿಸಿದ್ದು, ಪ್ರಕಾಶ್ ಅವರ ಪತ್ನಿ ಹಾಗೂ ಮಗನ ಇರುವಿಕೆ ಸೇರಿದಂತೆ ಕೊಲೆಯ ಹಿಂದಿನ ನಿಖರ ಕಾರಣಗಳ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗವಾಗಬೇಕಿದೆ. ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಪ್ರಕಾಶ್ ಅವರ ಮೃತದೇಹವನ್ನು ತಾಯ್ನಾಡಿಗೆ ತರಲು ಕುಟುಂಬಸ್ಥರು ಕಾಯುತ್ತಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading