Connect with us

ರಾಜಕೀಯ

Emergency meeting-ಸಂಪುಟದಲ್ಲಿ ಅತೃಪ್ತಿ ಸ್ಫೋಟ: ಸಿದ್ದರಾಮಯ್ಯ ಜೊತೆ ಸಿಎಂ ಶಿವಕುಮಾರ್ ತುರ್ತು ಸಮಾಲೋಚನೆ..!

Published

on



Ad Widget

Ad Widget

Ad Widget

Ad Widget

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಅಸಮಾಧಾನದ ಹೊಗೆ ಬುಗಿಲೆದ್ದಿದ್ದು, ಖಾತೆ ಹಂಚಿಕೆಗೂ ಮುನ್ನವೇ ಸಚಿವರ ಪಟ್ಟಿಯಲ್ಲಿ ಬದಲಾವಣೆ ಮಾಡುವ ಆಲೋಚನೆಯಲ್ಲಿ ಕಾಂಗ್ರೆಸ್ ನಾಯಕರು ಇದ್ದಾರೆ ಎಂದು ತಿಳಿದುಬಂದಿದೆ. ಸಚಿವ ಸ್ಥಾನ ಸಿಗದ ಕಾರಣಕ್ಕೆ ಮುನಿಸಿಕೊಂಡಿರುವ ಹಿರಿಯ ಶಾಸಕರನ್ನು ಸಮಾಧಾನಪಡಿಸಲು ಈ ‘ಸರ್ಜರಿ’ ಅನಿವಾರ್ಯವಾಗಿದೆ ಎನ್ನಲಾಗುತ್ತಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಅಸಮಾಧಾನದ ಹೊಗೆ ಬುಗಿಲೆದ್ದಿದ್ದು, ಖಾತೆ ಹಂಚಿಕೆಗೂ ಮುನ್ನವೇ ಸಚಿವರ ಪಟ್ಟಿಯಲ್ಲಿ ಬದಲಾವಣೆ ಮಾಡುವ ಆಲೋಚನೆಯಲ್ಲಿ ಕಾಂಗ್ರೆಸ್ ನಾಯಕರು ಇದ್ದಾರೆ ಎಂದು ತಿಳಿದುಬಂದಿದೆ. ಸಚಿವ ಸ್ಥಾನ ಸಿಗದ ಕಾರಣಕ್ಕೆ ಮುನಿಸಿಕೊಂಡಿರುವ ಹಿರಿಯ ಶಾಸಕರನ್ನು ಸಮಾಧಾನಪಡಿಸಲು ಈ ‘ಸರ್ಜರಿ’ ಅನಿವಾರ್ಯವಾಗಿದೆ ಎನ್ನಲಾಗುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

ಸಿದ್ದರಾಮಯ್ಯ-ಶಿವಕುಮಾರ್ ಭೇಟಿ:
ಸಚಿವ ಪಟ್ಟಿಗೆ ತಮ್ಮ ಗಮನಕ್ಕೆ ಬಾರದಂತೆ ಕೆಲವು ಹೆಸರುಗಳನ್ನು ಸೇರಿಸಿದ್ದಕ್ಕೆ ಎಐಸಿಸಿ ಕಾರ್ಯಕಾರಿ ಮಂಡಳಿ ಸದಸ್ಯ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ರಾತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ, ಅತೃಪ್ತ ಶಾಸಕರ ಮನವೊಲಿಕೆ ಮತ್ತು ಸಂಭವನೀಯ ಬದಲಾವಣೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದ್ದಾರೆ.

Ad Widget

Ad Widget <> Ad Widget

ಯಾರಿಗೆ ಕೊಕ್? ಯಾರಿಗೆ ಚಾನ್ಸ್?
ಮೂಲಗಳ ಪ್ರಕಾರ, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಕೆ.ಎಚ್. ಮುನಿಯಪ್ಪ ಅಥವಾ ಬಿ. ನಾಗೇಂದ್ರ ಮತ್ತು ಎಚ್.ಸಿ. ಬಾಲಕೃಷ್ಣ ಅವರನ್ನು ಪಟ್ಟಿಯಿಂದ ಕೈಬಿಡುವ ಬಗ್ಗೆ ಚರ್ಚೆ ನಡೆದಿದೆ. ಅವರ ಬದಲಿಗೆ ಸಚಿವ ಸ್ಥಾನಕ್ಕಾಗಿ ಬಿಗಿಪಟ್ಟು ಹಿಡಿದಿರುವ ಹಿರಿಯ ಶಾಸಕ ಎಂ. ಕೃಷ್ಣಪ್ಪ., ಕೆ.ಎಚ್. ಮುನಿಯಪ್ಪ ಅವರ ಪುತ್ರಿ ಎಂ. ರೂಪಕಲಾ., ಸಿದ್ದರಾಮಯ್ಯ ಅವರ ಆಪ್ತ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ್ ಅವರಿಗೆ ಸ್ಥಾನ ನೀಡುವ ಸಾಧ್ಯತೆಯಿದೆ.



Ad Widget

ಹಿರಿಯ ಶಾಸಕರ ಬಹಿರಂಗ ಆಕ್ರೋಶ:
ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ ಎಚ್.ಕೆ. ಪಾಟೀಲ್, ಎಂ. ಕೃಷ್ಣಪ್ಪ, ಟಿ.ಬಿ. ಜಯಚಂದ್ರ ಸೇರಿದಂತೆ 15ಕ್ಕೂ ಹೆಚ್ಚು ಹಿರಿಯ ನಾಯಕರು ಸಿಡಿದೆದ್ದಿದ್ದಾರೆ. “ನಾನು ನಾಲ್ಕು ಬಾರಿ ಶಾಸಕನಾಗಿದ್ದೇನೆ, ನನಗೂ ಮತ್ತು ನನ್ನ ಮಗನಿಗೂ ಜನ ಬೆಂಬಲ ನೀಡಿದ್ದಾರೆ. ಸಚಿವ ಸ್ಥಾನದ ಬೇಡಿಕೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ” ಎಂದು ಎಂ. ಕೃಷ್ಣಪ್ಪ ಖಡಕ್ ಆಗಿ ಹೇಳಿದ್ದಾರೆ.

Ad Widget

Ad Widget

ಸಿಎಂ ಶಿವಕುಮಾರ್ ಪ್ರತಿಕ್ರಿಯೆ:
ಈ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಹಿರಿಯ ನಾಯಕರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ. ಎಲ್ಲ ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸುತ್ತೇವೆ. ಶೀಘ್ರದಲ್ಲೇ ಮಹಿಳೆಯೊಬ್ಬರಿಗೆ ಸಚಿವ ಸ್ಥಾನ ನೀಡಲಾಗುವುದು” ಎಂದರು. ಸಂಪುಟ ಸರ್ಜರಿ ಕುರಿತ ಪ್ರಶ್ನೆಗೆ “ಸದ್ಯಕ್ಕೆ ಮಾಧ್ಯಮಗಳಿಗೆ ಸರ್ಜರಿ ಮಾಡಬೇಕಿದೆ” ಎಂದು ನಗುತ್ತಲೇ ಉತ್ತರಿಸಿ ಜಾರಿಕೊಂಡರು.

ಒಟ್ಟಾರೆಯಾಗಿ, ಖಾತೆ ಹಂಚಿಕೆಯ ಮೊದಲು ಕಾಂಗ್ರೆಸ್ ಪಾಳಯದಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳು ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿವೆ.

Ad Widget
Click to comment

Leave a Reply

ಸ್ಥಳೀಯ

Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ

Published

on



Ad Widget

Ad Widget

Ad Widget

Ad Widget

ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget

Ad Widget

ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.

Ad Widget

Ad Widget <> Ad Widget

ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.



Ad Widget

ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

Ad Widget

Ad Widget

ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ವಿವಿಧ ಭಾಗಗಳಿಂದ ಕಂಬಳ ಕೋಣಗಳು ಮೈಸೂರಿನತ್ತ ಪ್ರಯಾಣ ಬೆಳೆಸಲಿವೆ.

Ad Widget
Continue Reading

ರಾಜಕೀಯ

U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್

Published

on



Ad Widget

Ad Widget

Ad Widget

Ad Widget

ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್‌ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್‌ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್‌ ಬಿಚ್ಚಿಟ್ಟಿದ್ದಾರೆ

Ad Widget

Ad Widget <> Ad Widget

ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.



Ad Widget

ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.

Ad Widget

Ad Widget

ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ

ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548

Ad Widget
Continue Reading

ಅಂತರ ರಾಜ್ಯ

Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್

Published

on



Ad Widget

Ad Widget

Ad Widget

Ad Widget

ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.

Ad Widget

Ad Widget <> Ad Widget

ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.



Ad Widget

ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.

Ad Widget

Ad Widget

ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.

ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.

ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.

ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್‌ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.

ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.

ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading