ಉಡುಪಿ
Udupi-ಉಡುಪಿ : ಉದ್ಯಮಿ ಡೇವಿಡ್ ಗುಂಡಿಟ್ಟು ಹತ್ಯೆ – ಸುಪಾರಿ ಪಡೆದ ಮೂವರು ಹಂತಕರ ಬಂಧನ
ಮುದರಂಗಡಿ ನಿವಾಸಿ, ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅನ್ಯರಾಜ್ಯದ ಹಂತಕರನ್ನು ಉಡುಪಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಹಣಕಾಸಿನ ವಿಚಾರದಲ್ಲಿ ಉಂಟಾದ ವೈಮನಸ್ಸಿನಿಂದಾಗಿ ಸುಪಾರಿ ನೀಡಿ ಈ ಹತ್ಯೆ ಮಾಡಿಸಿರುವುದು ತನಿಖೆಯಿಂದ ಬಯಲಾಗಿದೆ.
ಉಡುಪಿ: ಮುದರಂಗಡಿ ನಿವಾಸಿ, ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅನ್ಯರಾಜ್ಯದ ಹಂತಕರನ್ನು ಉಡುಪಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಹಣಕಾಸಿನ ವಿಚಾರದಲ್ಲಿ ಉಂಟಾದ ವೈಮನಸ್ಸಿನಿಂದಾಗಿ ಸುಪಾರಿ ನೀಡಿ ಈ ಹತ್ಯೆ ಮಾಡಿಸಿರುವುದು ತನಿಖೆಯಿಂದ ಬಯಲಾಗಿದೆ.
ಬಂಧಿತ ಹಂತಕರು:
ಬಂಧಿತರನ್ನು ಉತ್ತರ ಪ್ರದೇಶದ ರಾಜು (42), ಉತ್ತರಾಖಂಡದ ಅಜಯ್ ರಸ್ತೋಗಿ ಅಲಿಯಾಸ್ ಅನ್ನೋಲ್ (23) ಮತ್ತು ಬಿಹಾರದ ಜಿಯಾಹುಲ್ ವಜೂಲ್ ಶೇಖ್ ಅಲಿಯಾಸ್ ದೀಪಕ್ (38) ಎಂದು ಗುರುತಿಸಲಾಗಿದೆ. ಇವರಿಂದ ಕೃತ್ಯಕ್ಕೆ ಬಳಸಿದ ಪಿಸ್ತೂಲ್ ಮತ್ತು ಎರ್ಮಾಳಿನಲ್ಲಿ ಬಿಟ್ಟು ಹೋಗಿದ್ದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಹತ್ಯೆಗೆ ಕಾರಣವೇನು?
ಗುತ್ತಿಗೆದಾರರಾಗಿದ್ದ ಡೇವಿಡ್ ಡಿಸೋಜ ಅವರು ನಡೆಸುತ್ತಿದ್ದ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅನ್ಯ ರಾಜ್ಯದ ಕಂಪನಿಯೊಂದರ ಜೊತೆಗೆ ಹಣಕಾಸಿನ ತೀವ್ರ ವೈಮನಸ್ಸು ಉಂಟಾಗಿತ್ತು. ಇದೇ ಕಾರಣಕ್ಕೆ ಆ ಕಂಪನಿಯವರು ಡೇವಿಡ್ ಹತ್ಯೆಗೆ ಸುಪಾರಿ ನೀಡಿದ್ದರು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.
ಬೈಂದೂರಿನಲ್ಲಿ ನಡೆದ ಶೂಟೌಟ್:
ಕೊಲೆ ಮಾಡಿದ ನಂತರ ಆರೋಪಿಗಳು ಬಸ್ಸಿನಲ್ಲಿ ಭಟ್ಕಳದ ಕಡೆಗೆ ಪರಾರಿಯಾಗಲು ಯತ್ನಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಬೈಂದೂರಿನ ಒತ್ತಿನಾಣೆ ಎಂಬಲ್ಲಿ ಬಸ್ಸನ್ನು ತಡೆದು ನಿಲ್ಲಿಸಿದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಬಸ್ಸಿನಿಂದ ಇಳಿದು ಓಡಿದ ಪ್ರಮುಖ ಆರೋಪಿ ರಾಜು, ತನ್ನನ್ನು ಹಿಡಿಯಲು ಬಂದ ಕಾಪು ಪಿಎಸ್‌ಐ ತೇಜಸ್ವಿ ಅವರನ್ನು ದೂಡಿ ಹಾಕಿ, ಪಿಸ್ತೂಲಿನಿಂದ ಗುಂಡು ಹಾರಿಸಿದ್ದಾನೆ. ತಕ್ಷಣ ಎಚ್ಚೆತ್ತ ಪೊಲೀಸರು ಆತ್ಮರಕ್ಷಣೆಗಾಗಿ ರಾಜು ಕಾಲಿಗೆ ಗುಂಡು ಹಾರಿಸಿ ಆತನನ್ನು ಹೆಡೆಮುರಿ ಕಟ್ಟಿದ್ದಾರೆ.
ಇತರರ ಬಂಧನ:
ಈ ಗೊಂದಲದ ನಡುವೆ ಪರಾರಿಯಾಗಿದ್ದ ಇನ್ನಿಬ್ಬರು ಆರೋಪಿಗಳಾದ ಅಜಯ್ ರಸ್ತೋಗಿಯನ್ನು ಕುಮಟಾದಲ್ಲಿ ಮತ್ತು ಜಿಯಾಹುಲ್ ಶೇಖ್‌ನನ್ನು ಭಟ್ಕಳದಲ್ಲಿ ಅಲ್ಲಿನ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಇಂದು ಬೆಳಿಗ್ಗೆ ಬಂಧಿಸಲಾಗಿದೆ.
ಪೊಲೀಸರ ಸಾಹಸ:
ಈ ಕಾರ್ಯಾಚರಣೆಯ ವೇಳೆ ಕಾಪು ಪಿಎಸ್‌ಐ ತೇಜಸ್ವಿ ಅವರಿಗೆ ಗಾಯಗಳಾಗಿದ್ದು, ಅವರು ಉಡುಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡ ಹಂತಕ ರಾಜುನನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಪೊಲೀಸರ ಮೇಲೆ ಗುಂಡು ಹಾರಿಸಿದ ಸಂಬಂಧ ರಾಜು ವಿರುದ್ಧ ಬೈಂದೂರು ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಉಡುಪಿ ಎಸ್‌ಪಿ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಬೆಳ್ಳಿಯಪ್ಪ ನೇತೃತ್ವದ ಬೃಹತ್ ಪೊಲೀಸ್ ತಂಡವು ಕೇವಲ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವ ಮೂಲಕ ಸಾರ್ವಜನಿಕರ ಶ್ಲಾಘನೆಗೆ ಪಾತ್ರವಾಗಿದೆ. ಈ ಕೃತ್ಯದ ಹಿಂದೆ ಸುಪಾರಿ ನೀಡಿದವರು ಯಾರು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
ಉಡುಪಿ
H.D.K.-ಕರಾವಳಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕೆ. ಟೆಂಪಲ್ ರನ್: ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ನವಚಂಡಿಕಾಯಾಗ
ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಉಡುಪಿ: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕುಟುಂಬದ ದೋಷ ಪರಿಹಾರ ಹಾಗೂ ಹರಕೆ ತೀರಿಸುವ ಉದ್ದೇಶದಿಂದ ಕುಮಾರಸ್ವಾಮಿ ಅವರು ನವಚಂಡಿಕಾಯಾಗ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ಹರಕೆ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇದೀಗ ಯಾಗ ನೆರವೇರಿಸುತ್ತಿದ್ದಾರೆ ಎನ್ನಲಾಗಿದೆ.
ಅರ್ಚಕ ಶ್ರೀಕಾಂತ್ ಅಡಿಗ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಯಿಂದ 10 ಗಂಟೆಯವರೆಗೆ ನವಚಂಡಿಕಾಯಾಗ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಪೂರ್ಣಾಹುತಿ ನೆರವೇರಲಿದೆ.
ಕುಮಾರಸ್ವಾಮಿ ಅವರು ಪತ್ನಿ, ಪುತ್ರ ಹಾಗೂ ಸೊಸೆಯೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಯಾಗದಲ್ಲಿ ಭಾಗವಹಿಸಲಿದ್ದಾರೆ.
ಉಡುಪಿ
Udupi-ಉಡುಪಿ: ತಾಯಿ ಅಂತ್ಯಕ್ರಿಯೆಗೆ ಹಾಜರಾಗಲು ಭೂಗತ ಪಾತಕಿ ರವಿ ಪೂಜಾರಿಗೆ ಕೋರ್ಟ್ ಅನುಮತಿ
ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ನ್ಯಾಯಾಲಯ ಸೂಚಿಸಿದೆ.
ಉಡುಪಿ: ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ.
ರವಿ ಪೂಜಾರಿ ಅವರ ತಾಯಿ ಸುಶೀಲಾ ಪೂಜಾರಿ ಅವರು ನವೆಂಬರ್ 12ರ ರಾತ್ರಿ ನಿಧನರಾಗಿದ್ದಾರೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ ನ್ಯಾಯಾಲಯ ಅನುಮತಿ ನೀಡಿದ್ದು, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ಸೂಚಿಸಿದೆ.
ಮಲ್ಪೆ ಸಮೀಪದ ನೆರ್ಗಿಯಲ್ಲಿರುವ ಕುಟುಂಬದ ಹಿರಿಯರ ಮನೆಯಲ್ಲಿ ಬೆಳಗ್ಗೆ ಅಂತ್ಯಕ್ರಿಯೆ ನಡೆಯಲಿದೆ. ಭದ್ರತೆಯ ಜವಾಬ್ದಾರಿಯನ್ನು ಬೆಂಗಳೂರು ಕಾರಾಗೃಹ ಸಿಬ್ಬಂದಿ ವಹಿಸಿಕೊಳ್ಳಲಿದ್ದು, ಹೆಚ್ಚುವರಿ ಭದ್ರತೆಯನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಒದಗಿಸಲಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
ಸುಮಾರು 26 ವರ್ಷಗಳ ಕಾಲ ಭೂಗತ ಜಗತ್ತಿನಲ್ಲಿ ಪ್ರಭಾವ ಹೊಂದಿದ್ದ ರವಿ ಪೂಜಾರಿ 2019ರ ಜನವರಿ 19ರಂದು ಆಫ್ರಿಕಾದ ಸೆನೆಗಲ್‌ನಲ್ಲಿ ಬಂಧಿತನಾಗಿದ್ದ. ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಬೆಂಗಳೂರಿಗೆ ಕರೆತರಲಾಗಿತ್ತು.
ಕರ್ನಾಟಕ ಮತ್ತು ಮುಂಬೈ ಸೇರಿದಂತೆ ವಿವಿಧೆಡೆ ರವಿ ಪೂಜಾರಿ ವಿರುದ್ಧ 120ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆಂಧ್ರಪ್ರದೇಶ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿಯೂ ಈತನ ವಿರುದ್ಧ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕಲ್ಮಾಡಿಯ ಬಪ್ಪು ತೋಟದ ನಿವಾಸಿಯಾಗಿರುವ ರವಿ ಪೂಜಾರಿ, ಚಿಕ್ಕ ವಯಸ್ಸಿನಲ್ಲೇ ತಂದೆಯೊಂದಿಗೆ ಮುಂಬೈಗೆ ತೆರಳಿದ್ದ. 1992ರಲ್ಲಿ ಬಂಧನಕ್ಕೊಳಗಾಗಿದ್ದ ಈತ ಬಳಿಕ ಅಲ್ಲಿಂದ ತಪ್ಪಿಸಿಕೊಂಡಿದ್ದ.
-
ಬಿಗ್ ನ್ಯೂಸ್11 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
Uncategorized10 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್11 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು11 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ಅಂತರ ರಾಜ್ಯ8 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ರಾಜಕೀಯ9 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್10 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
-
ಬಿಗ್ ನ್ಯೂಸ್3 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ















