ನಿಧನ ವಾರ್ತೆ
Medical student-ಆಂಧ್ರ: ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿ ಸ್ಕೂಟರ್‌ಗೆ ಡಿಕ್ಕಿ; ಚಿಕಿತ್ಸೆ ಫಲಿಸದೆ ವೈದ್ಯಕೀಯ ವಿದ್ಯಾರ್ಥಿನಿ ಸಾವು
ಮದ್ಯದ ಅಮಲಿನಲ್ಲಿದ್ದ ಯುವಕರ ಅತಿವೇಗದ ಕಾರು ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದ ಸ್ನಾತಕೋತ್ತರ ವೈದ್ಯಕೀಯ (PG Medical) ವಿದ್ಯಾರ್ಥಿನಿ ಡಾ. ಪ್ರಿಯಾಂಕಾ (28) ಅವರು ಭಾನುವಾರ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಹೈದರಾಬಾದ್/ರಾಜಮಂಡ್ರಿ: ಮದ್ಯದ ಅಮಲಿನಲ್ಲಿದ್ದ ಯುವಕರ ಅತಿವೇಗದ ಕಾರು ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದ ಸ್ನಾತಕೋತ್ತರ ವೈದ್ಯಕೀಯ (PG Medical) ವಿದ್ಯಾರ್ಥಿನಿ ಡಾ. ಪ್ರಿಯಾಂಕಾ (28) ಅವರು ಭಾನುವಾರ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಘಟನೆಯ ಹಿನ್ನೆಲೆ:
ಆಗಸ್ಟ್ 3 ರಂದು ರಾಜಮಂಡ್ರಿಯ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಡಾ. ಪ್ರಿಯಾಂಕಾ ಅವರು ತಮ್ಮ ಸ್ನೇಹಿತೆಯೊಂದಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ನಗರದ ಮಾಲ್ ಒಂದರ ಬಳಿ ಮದ್ಯದ ಅಮಲಿನಲ್ಲಿದ್ದ ಇಬ್ಬರು ಯುವಕರು ಭದ್ರತಾ ಸಿಬ್ಬಂದಿಯೊಂದಿಗೆ ಜಗಳವಾಡಿ, ತಮ್ಮ ಟಾಟಾ ನೆಕ್ಸಾನ್ ಕಾರಿನಲ್ಲಿ ಅತಿವೇಗವಾಗಿ ಹೊರಟಿದ್ದಾರೆ. ಈ ವೇಳೆ ಮುಂದೆ ಹೋಗುತ್ತಿದ್ದ ಪ್ರಿಯಾಂಕಾ ಅವರ ಸ್ಕೂಟರ್‌ಗೆ ಹಿಂದಿನಿಂದ ಜೋರಾಗಿ ಡಿಕ್ಕಿ ಹೊಡೆದಿದ್ದಲ್ಲದೆ, ಅವರ ಮೇಲೆಯೇ ಕಾರು ಹರಿಸಿ ಪರಾರಿಯಾಗಿದ್ದರು.
ಚಿಕಿತ್ಸೆ ಫಲಿಸಲಿಲ್ಲ:
ಅಪಘಾತದ ತೀವ್ರತೆಗೆ ಪ್ರಿಯಾಂಕಾ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದು ಮೆದುಳು ನಿಷ್ಕ್ರಿಯಗೊಂಡಿತ್ತು (Brain Dead). ತಕ್ಷಣ ಅವರನ್ನು ರಾಜಮಂಡ್ರಿಯ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ಗೆ ಸ್ಥಳಾಂತರಿಸಲಾಗಿತ್ತು. ವೆಂಟಿಲೇಟರ್ ಮೂಲಕ ಬದುಕುಳಿಸಲು ಪ್ರಯತ್ನ ನಡೆಸಲಾಯಿತಾದರೂ, ಭಾನುವಾರ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. “ಇಡೀ ಕುಟುಂಬದಲ್ಲಿ ಆಕೆ ಮೊದಲ ವೈದ್ಯೆಯಾಗಿದ್ದಳು” ಎಂದು ಮೃತರ ತಂದೆ ಕಣ್ಣೀರು ಹಾಕಿದ್ದಾರೆ.
ಆರೋಪಿಗಳ ಬಂಧನ:
ಘಟನೆ ಬಳಿಕ ಪರಾರಿಯಾಗಿದ್ದ ಸುರವರಪು ದುಷ್ಯಂತ್ ಮತ್ತು ಆಂಡ್ರ್ಯೂ ಜೋಸೆಫ್ ಎಡ್ವರ್ಡ್ಸ್ ಎಂಬ ಇಬ್ಬರು ಆರೋಪಿಗಳನ್ನು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಇವರ ವಿರುದ್ಧ ಆರಂಭದಲ್ಲಿ ನಿರ್ಲಕ್ಷ್ಯದ ಚಾಲನೆ ಪ್ರಕರಣ ದಾಖಲಿಸಲಾಗಿತ್ತು, ಆದರೆ ಈಗ ಅದನ್ನು ‘ಅಪರಾಧಿಕ ನರಹತ್ಯೆಯತ್ನ’ (BNS Sec 308) ಮತ್ತು ಇತರ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾಗಿದೆ.
ನಿಧನ ವಾರ್ತೆ
Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!
ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್‌ನ ಫುಟ್‌ಬೋರ್ಡ್‌ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್‌ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್‌ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.
ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.
ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.
ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Puttur-ಪುತ್ತೂರು: ಬೈಕ್ ಡಿಕ್ಕಿಯಾಗಿ ಹರಿಪ್ರಸಾದ್ ಹೋಟೆಲ್ ಸಪ್ಲೈಯರ್ ಸಾವು
ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಇವರು ಪುತ್ತೂರಿನ ಹರಿಪ್ರಸಾದ್ ಹೋಟೆಲ್‌ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದರು.
ನ.16ರಂದು ರಾತ್ರಿ ಹೋಟೆಲ್ ಕೆಲಸ ಮುಗಿಸಿ ಹೊರಬಂದ ಚಂದ್ರಶೇಖರ ಅವರು ಹೋಟೆಲ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
-
ರಾಜಕೀಯ20 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ21 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ21 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಬಿಗ್ ನ್ಯೂಸ್3 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕಾರ್ಯಕ್ರಮಗಳು20 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ21 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಬಿಗ್ ನ್ಯೂಸ್4 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು4 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು















