Connect with us

ಸ್ಥಳೀಯ

Charvaka-ಚಾರ್ವಾಕ ಸಹಕಾರ ಸಂಘದಿಂದ ಶೇ. 100 ಸಾಲ ವಸೂಲಾತಿ ಸಾಧನೆ : ಕಡಿಮೆ ಬಡ್ಡಿದರದಲ್ಲಿ ಇವಿ ಸಾಲ ಹಾಗೂ ವಿಮಾ ಯೋಜನೆ ಕುರಿತು ಸಮಾಲೋಚನೆ

Published

on

Ad Widget

Ad Widget

Ad Widget

Ad Widget

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ಶೇ. 100ರಷ್ಟು ಸಾಲ ವಸೂಲಾತಿ ಸಾಧನೆ ಮಾಡುವ ಮೂಲಕ ಅಭೂತಪೂರ್ವ ಯಶಸ್ಸು ಕಂಡಿದೆ. ಈ ಹಿನ್ನೆಲೆಯಲ್ಲಿ ಸಂಘದ ಮುಂದಿನ ಯೋಜನೆಗಳು ಹಾಗೂ ಸದಸ್ಯರ ಕಲ್ಯಾಣ ಕಾರ್ಯಕ್ರಮಗಳ ಕುರಿತು ಆಗಸ್ಟ್ 8ರಂದು ಕಾಣಿಯೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಯಿತು.

Ad Widget

Ad Widget

Ad Widget

Ad Widget

ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ಶೇ. 100ರಷ್ಟು ಸಾಲ ವಸೂಲಾತಿ ಸಾಧನೆ ಮಾಡುವ ಮೂಲಕ ಅಭೂತಪೂರ್ವ ಯಶಸ್ಸು ಕಂಡಿದೆ. ಈ ಹಿನ್ನೆಲೆಯಲ್ಲಿ ಸಂಘದ ಮುಂದಿನ ಯೋಜನೆಗಳು ಹಾಗೂ ಸದಸ್ಯರ ಕಲ್ಯಾಣ ಕಾರ್ಯಕ್ರಮಗಳ ಕುರಿತು ಆಗಸ್ಟ್ 8ರಂದು ಕಾಣಿಯೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಯಿತು.

Ad Widget

Ad Widget alt="Ad Widget"/>

Ad Widget

ಸದಸ್ಯರಿಗಾಗಿ ಹೊಸ ಯೋಜನೆಗಳು:
ಸಂಘದ ಅಧ್ಯಕ್ಷ ಗಣೇಶ್ ಕೆ. ಎಸ್. ಉದನಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ಚರ್ಚಿಸಲಾಯಿತು.

Ad Widget

Ad Widget <> Ad Widget

ಎಲೆಕ್ಟ್ರಿಕ್ ವಾಹನ ಸಾಲ: ಸಂಘದ ಸದಸ್ಯರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಇವಿ ವಾಹನಗಳನ್ನು ಖರೀದಿಸಲು ಸಾಲ ಸೌಲಭ್ಯ.

ಸ್ವಯಂ ಉದ್ಯೋಗ ಸಾಲ: ಅರ್ಹ ಸದಸ್ಯರು ಸ್ವಂತ ಉದ್ಯೋಗ ಆರಂಭಿಸಲು ಸಂಘದ ಸ್ವಂತ ಬಂಡವಾಳದಿಂದ ಆರ್ಥಿಕ ನೆರವು.

Ad Widget

Ad Widget

ವಿಮಾ ಯೋಜನೆ: ಸದಸ್ಯರ ಕುಟುಂಬಗಳಿಗೆ ಸಾಮಾಜಿಕ ಭದ್ರತೆ ಒದಗಿಸುವ ದೃಷ್ಟಿಯಿಂದ ವಿಶೇಷ ವಿಮಾ ಸೌಲಭ್ಯ.

ಸಾಧನೆಯ ಹೆಮ್ಮೆ:
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಟ್ಟು ಸಹಕಾರ ಸಂಘಗಳಲ್ಲಿ ಕೇವಲ 13 ಸಂಘಗಳು ಮಾತ್ರ ಶೇ. 100ರಷ್ಟು ಸಾಲ ವಸೂಲಾತಿ ಸಾಧನೆ ಮಾಡಿದ್ದು, ಅದರಲ್ಲಿ ಚಾರ್ವಾಕ ಸಂಘವೂ ಒಂದಾಗಿರುವುದು ಗಮನಾರ್ಹ.

ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸತ್ಯನಾರಾಯಣ ಕಲ್ಲೂರಾಯ, ದೋಳ್ಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಶಿವರಾಮ ದೋಳ್ಪಾಡಿ, ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಸುರೇಶ್ ಓಡಬಾಯಿ, ವಿಮಾ ಕಂಪೆನಿಯ ರಾಮ ಮೋಹನ್, ರಾಹುಲ್ ಶೆಟ್ಟಿ, ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಭೆಯಲ್ಲಿ ಉತ್ತಮ ಸಲಹೆ ಸೂಚನೆ ನೀಡಿ ಸಂಘದ ಅಭಿವೃದ್ಧಿಗೆ ಸದಾ ಸಹಕಾರ ನೀಡುವ ಬಗ್ಗೆ ಸದಸ್ಯರು ಅಭಿಪ್ರಾಯ ವ್ಯಕ್ತ ಪಡಿಸಿದರು.

ಈ ಸಂದರ್ಭದಲ್ಲಿ ದೈಪಿಲ ಶ್ರೀ ಕ್ಷೇತ್ರ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷೆ ಚಂದ್ರಕಲಾ ಜಯರಾಮ್ ಅರುವಗುತ್ತು, ಚಾರ್ವಾಕ ಜೋಡುದೈವಗಳ ಕ್ಷೇತ್ರದ ಆಡಳಿತದಾರ ಕುಸುಮಾಧರ ರೈ ಕಾಸ್ಪಾಡಿಗುತ್ತು, ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೊರಗಪ್ಪ ಗೌಡ ಕುಕ್ಕುನಡ್ಕ, ಪುತ್ತೂರು ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕಿ ಚಂದ್ರಾವತಿ ಅಭಿಕಾರ, ಮಾಜಿ ನಿರ್ದೇಶಕ ದೇವಯ್ಯ ಗೌಡ ಖಂಡಿಗ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಮೋಹನ ಗೌಡ ಇಡ್ಯಡ್ಯ ಸಹಿತ ಹಲವರು ಉಪಸ್ಥಿತರಿದ್ದರು.

ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶೋಕ್ ಗೌಡ ಸ್ವಾಗತಿಸಿ, ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ ವಂದಿಸಿದರು.

Ad Widget
Click to comment

Leave a Reply

ಅಪರಾಧ

Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.

ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 236/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಕಿರು ಖನಿಜ ರಿಯಾಯಿತಿ ನಿಯಮಗಳು, MMDR ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ.

Ad Widget
Continue Reading

ಅಪರಾಧ

Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ

Published

on

Ad Widget

Ad Widget

Ad Widget

Ad Widget

ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.

Ad Widget

Ad Widget <> Ad Widget

ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget

ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2), MMDR ಕಾಯ್ದೆ 1957ರ ಕಲಂ 4(1), 21 ಹಾಗೂ ಕರ್ನಾಟಕ ಕಿರು ಖನಿಜ ನಿಯಮಾವಳಿ 1994ರ ಕಲಂ 3, 44ರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ರಾಜಕೀಯ

BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ

Published

on

Ad Widget

Ad Widget

Ad Widget

Ad Widget

ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget alt="Ad Widget"/>

Ad Widget

ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

Ad Widget

Ad Widget <> Ad Widget

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.

ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!