ಸ್ಥಳೀಯ
Ujire-6 ವರ್ಷದ ಪೋರನ ಈಜು ಸಾಧನೆ: ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಉಜಿರೆಯ ಬೆನಕನಿಗೆ ಕಂಚಿನ ಪದಕ..!
ಸಾಧನೆ ಮಾಡಲು ವಯಸ್ಸು ಅಡ್ಡಿಯಲ್ಲ ಎಂಬುದನ್ನು ಉಜಿರೆಯ 6 ವರ್ಷದ ಬಾಲಕ ಬೆನಕ ಸಾಬೀತುಪಡಿಸಿದ್ದಾರೆ. ಹಾಸನದ ಎಸ್.ಕೆ. ಸ್ವಿಮ್ಮಿಂಗ್ ಸೆಂಟರ್‌ನಲ್ಲಿ ಆಗಸ್ಟ್ 9ರಂದು ಮಿಲೇನಿಯಮ್ ವರ್ಲ್ಡ್ ಸ್ಕೂಲ್ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ‘ನಾನ್-ಮೆಡಲಿಸ್ಟ್’ ಈಜು ಸ್ಪರ್ಧೆಯಲ್ಲಿ ಬೆನಕ ಗಮನಾರ್ಹ ಸಾಧನೆ ಮಾಡಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಹಾಸನ: ಸಾಧನೆ ಮಾಡಲು ವಯಸ್ಸು ಅಡ್ಡಿಯಲ್ಲ ಎಂಬುದನ್ನು ಉಜಿರೆಯ 6 ವರ್ಷದ ಬಾಲಕ ಬೆನಕ ಸಾಬೀತುಪಡಿಸಿದ್ದಾರೆ. ಹಾಸನದ ಎಸ್.ಕೆ. ಸ್ವಿಮ್ಮಿಂಗ್ ಸೆಂಟರ್‌ನಲ್ಲಿ ಆಗಸ್ಟ್ 9ರಂದು ಮಿಲೇನಿಯಮ್ ವರ್ಲ್ಡ್ ಸ್ಕೂಲ್ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ‘ನಾನ್-ಮೆಡಲಿಸ್ಟ್’ ಈಜು ಸ್ಪರ್ಧೆಯಲ್ಲಿ ಬೆನಕ ಗಮನಾರ್ಹ ಸಾಧನೆ ಮಾಡಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಪದಕದ ಹಾದಿ:
ಉಜಿರೆಯ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ಪರವಾಗಿ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಬೆನಕ, ಬ್ರೆಸ್ಟ್ ಸ್ಟ್ರೋಕ್ ವಿಭಾಗದಲ್ಲಿ ಕೇವಲ 25.50 ಸೆಕೆಂಡ್‌ಗಳಲ್ಲಿ ನಿಗದಿತ ಗುರಿಯನ್ನು ತಲುಪಿ ತೃತೀಯ ಸ್ಥಾನ ಗಳಿಸುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. 6.7 ವರ್ಷ ಪ್ರಾಯದ ಈ ಪುಟ್ಟ ಪೋರನ ವೇಗ ಕಂಡು ನೆರೆದಿದ್ದ ಕ್ರೀಡಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಾರ್ಗದರ್ಶನ ಮತ್ತು ಹಿನ್ನೆಲೆ:
ಬೆನಕ ಅವರು ಪದ್ಮನಾಭ ಹಾಗೂ ಅಶ್ವಿನಿ ದಂಪತಿಯ ಪುತ್ರ. ಇವರಿಗೆ ಉಜಿರೆಯ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್‌ನ ಎಚ್‌ಒಡಿ ಚರಣ್, ವಿಕ್ಷಿತಾ ಮತ್ತು ಶೀನ ಅವರ ಮಾರ್ಗದರ್ಶನದಲ್ಲಿ ಉತ್ತಮ ತರಬೇತಿ ನೀಡಲಾಗುತ್ತಿದೆ. ಪರಿಶ್ರಮ ಮತ್ತು ನಿರಂತರ ಅಭ್ಯಾಸವಿದ್ದರೆ ಕಿರಿಯ ವಯಸ್ಸಿನಲ್ಲೇ ದೊಡ್ಡ ಯಶಸ್ಸು ಗಳಿಸಬಹುದು ಎಂಬುದಕ್ಕೆ ಬೆನಕ ಅವರ ಈ ಗೆಲುವು ಸಾಕ್ಷಿಯಾಗಿದೆ.
ಈ ಪುಟ್ಟ ಸಾಧಕನ ಸಾಧನೆಗೆ ಎಸ್.ಡಿ.ಎಂ. ಸ್ವಿಮ್ಮಿಂಗ್ ಅಕಾಡೆಮಿ, ತರಬೇತುದಾರರು, ಪೋಷಕರು ಹಾಗೂ ಕ್ರೀಡಾಸಕ್ತರು ಅಭಿನಂದನೆ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದ್ದಾರೆ.
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
-
ನಿಧನ ವಾರ್ತೆ11 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು9 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ11 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಮಂಗಳೂರು7 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ರಾಜ್ಯ10 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ10 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ10 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ12 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?




















