ಏನಿದು ಘಟನೆ?ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಮಾಹಿತಿಯ […]" /> ಏನಿದು ಘಟನೆ?ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಮಾಹಿತಿಯ […]"> YouTuber Akhil-ಖ್ಯಾತ ಮಲಯಾಳಂ ಯೂಟ್ಯೂಬರ್ ಅಖಿಲ್ ಪತ್ನಿ ನಾಪತ್ತೆ: ಬಸ್ ಕಂಡಕ್ಟರ್ ಜೊತೆ ಓಡಿಹೋದರೆಂಬ ಸುದ್ದಿ ವೈರಲ್..! - Nikhara News | Kannada News Website
Connect with us

ಅಂತರ ರಾಜ್ಯ

YouTuber Akhil-ಖ್ಯಾತ ಮಲಯಾಳಂ ಯೂಟ್ಯೂಬರ್ ಅಖಿಲ್ ಪತ್ನಿ ನಾಪತ್ತೆ: ಬಸ್ ಕಂಡಕ್ಟರ್ ಜೊತೆ ಓಡಿಹೋದರೆಂಬ ಸುದ್ದಿ ವೈರಲ್..!

Published

on

Ad Widget

Ad Widget

Ad Widget

Ad Widget

ಮಲಯಾಳಂನ ಖ್ಯಾತ ಯೂಟ್ಯೂಬರ್ ಹಾಗೂ ನಟ ಅಖಿಲ್ ಎನ್‌ಆರ್‌ಡಿ (Akhil NRD) ಅವರ ಪತ್ನಿ ಮೇಘಾ ರಾತ್ರೋರಾತ್ರಿ ಮನೆ ಬಿಟ್ಟು ಹೋಗಿರುವ ವಿಚಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದೆ.

Ad Widget

Ad Widget

Ad Widget

Ad Widget

ಆಲಪ್ಪುಳ: ಮಲಯಾಳಂನ ಖ್ಯಾತ ಯೂಟ್ಯೂಬರ್ ಹಾಗೂ ನಟ ಅಖಿಲ್ ಎನ್‌ಆರ್‌ಡಿ (Akhil NRD) ಅವರ ಪತ್ನಿ ಮೇಘಾ ರಾತ್ರೋರಾತ್ರಿ ಮನೆ ಬಿಟ್ಟು ಹೋಗಿರುವ ವಿಚಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದೆ.

Ad Widget

Ad Widget alt="Ad Widget"/>

Ad Widget

ಏನಿದು ಘಟನೆ?
ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ಮೇಘಾ ಅವರು ಬಸ್ ಕಂಡಕ್ಟರ್ ಒಬ್ಬರ ಜೊತೆ ಓಡಿ ಹೋಗಿದ್ದಾರೆ ಎನ್ನಲಾಗುತ್ತಿದೆ. ಪತ್ನಿ ಕಾಣೆಯಾಗಿರುವ ಬಗ್ಗೆ ಅಖಿಲ್ ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮೇಘಾ ಅವರು ಬ್ಯಾಗ್ ಹಿಡಿದುಕೊಂಡು ಮತ್ತೊಬ್ಬ ವ್ಯಕ್ತಿಯ ಜೊತೆ ಹೋಗುತ್ತಿರುವುದು ಪತ್ತೆಯಾಗಿದೆ ಎಂದು ವರದಿಯಾಗಿದೆ.

Ad Widget

Ad Widget <> Ad Widget

ಗೆಳೆಯನ ಭಾವುಕ ಮನವಿ:
ಈ ವಿಚಾರವಾಗಿ ಅಖಿಲ್ ಅವರನ್ನು ನೆಟ್ಟಿಗರು ವಿಪರೀತವಾಗಿ ಟ್ರೋಲ್ ಮಾಡುತ್ತಿರುವುದಕ್ಕೆ ಅವರ ಆಪ್ತ ಸ್ನೇಹಿತ, ಬಿಗ್ ಬಾಸ್ ಮಾಜಿ ಸ್ಪರ್ಧಿ ಸಾಯಿ ಕೃಷ್ಣ ಆಕ್ರೋಶ ಹೊರಹಾಕಿದ್ದಾರೆ. “ನಾನು ಅಖಿಲ್ ಜೊತೆ ಮಾತನಾಡಿದೆ, ಆತ ಒಳಗಿನಿಂದ ನೋವಿನಲ್ಲಿದ್ದರೂ ತುಂಬಾ ಶಾಂತನಾಗಿದ್ದಾನೆ. ‘ಹೋದವರು ಹೋದರು, ಅಲ್ಲಿಗೆ ಬಿಟ್ಟುಬಿಡಿ’ ಎನ್ನುವುದು ಆತನ ನಿಲುವು. ಆದರೆ ಕೆಲವರು ಅಖಿಲ್‌ನನ್ನೇ ನಿಂದಿಸುತ್ತಾ ವಿಕೃತ ಕಾಮೆಂಟ್ ಮಾಡುತ್ತಿದ್ದಾರೆ. ದಯವಿಟ್ಟು ಒಬ್ಬರ ವೈಯಕ್ತಿಕ ಬದುಕಿನ ಬಗ್ಗೆ ಈ ರೀತಿ ಕೆಟ್ಟದಾಗಿ ಮಾತನಾಡಬೇಡಿ” ಎಂದು ಸಾಯಿ ಕೃಷ್ಣ ವಿನಂತಿಸಿದ್ದಾರೆ.

ಯಾರು ಈ ಅಖಿಲ್ ಎನ್‌ಆರ್‌ಡಿ?
ಭಾರತೀಯ ನೌಕಾಪಡೆಯ (Indian Navy) ಉದ್ಯೋಗವನ್ನು ತೊರೆದು ಪೂರ್ಣಾವಧಿ ಕಂಟೆಂಟ್ ಕ್ರಿಯೇಟರ್ ಆಗಿ ಗುರುತಿಸಿಕೊಂಡಿರುವ ಅಖಿಲ್, ಯೂಟ್ಯೂಬ್‌ನಲ್ಲಿ 49 ಲಕ್ಷ ಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ 18 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿದ್ದಾರೆ. ಸಿನಿಮಾ ಕ್ಷೇತ್ರಕ್ಕೂ ಕಾಲಿಟ್ಟಿರುವ ಇವರು ‘ಮಹಾರಾಜ ಹಾಸ್ಟೆಲ್’ ಎಂಬ ಚಿತ್ರದಲ್ಲೂ ನಟಿಸಿದ್ದಾರೆ.

Ad Widget

Ad Widget

ಕೇವಲ ಎರಡು ವರ್ಷಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ಈ ಜೋಡಿಯ ಸಂಸಾರದಲ್ಲಿ ಈಗ ಬಿರುಕು ಮೂಡಿರುವುದು ಅವರ ಅಭಿಮಾನಿಗಳಿಗೆ ಆಘಾತ ತಂದಿದೆ. ಮೇಘಾ ಅವರ ಸೋಷಿಯಲ್ ಮೀಡಿಯಾ ಪ್ರೊಫೈಲ್‌ನಲ್ಲಿನ ಬದಲಾವಣೆಗಳನ್ನು ಗಮನಿಸಿರುವ ನೆಟ್ಟಿಗರು, ಈ ಮೊದಲೇ ಇವರ ನಡುವೆ ಭಿನ್ನಾಭಿಪ್ರಾಯವಿತ್ತು ಎಂದು ಚರ್ಚಿಸುತ್ತಿದ್ದಾರೆ. ಆದರೂ, ಮೇಘಾ ಅವರು ಕಂಡಕ್ಟರ್ ಜೊತೆಯೇ ಹೋಗಿದ್ದಾರೆ ಎಂಬ ಬಗ್ಗೆ ಈವರೆಗೆ ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

Ad Widget
Click to comment

Leave a Reply

ಸಿನೆಮಾ

Aakasham Lo Ok Tara-ಬಾಕ್ಸ್ ಆಫೀಸ್‌ನಲ್ಲಿ ದುಲ್ಕರ್ ಸಲ್ಮಾನ್ ಅಬ್ಬರ: 4 ದಿನಕ್ಕೆ 20 ಕೋಟಿ ರೂ. ಗಳಿಸಿದ ‘ಆಕಾಶಮ್ ಲೋ ಒಕ ತಾರ’

Published

on

Ad Widget

Ad Widget

Ad Widget

Ad Widget

ಮಲಯಾಳಂ ಚಿತ್ರರಂಗದ ಸ್ಟಾರ್ ನಟ ದುಲ್ಕರ್ ಸಲ್ಮಾನ್ ಅಭಿನಯದ ತೆಲುಗು ಸಿನಿಮಾ ‘ಆಕಾಶಮ್ ಲೋ ಒಕ ತಾರ’ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಿಡುಗಡೆಯಾದ ಮೊದಲ ದಿನದಿಂದಲೇ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ಚಿತ್ರ, ದಿನದಿಂದ ದಿನಕ್ಕೆ ತನ್ನ ಗಳಿಕೆಯನ್ನು ಹೆಚ್ಚಿಸಿಕೊಳ್ಳುತ್ತಿದೆ.

Ad Widget

Ad Widget

Ad Widget

Ad Widget

ಹೈದರಾಬಾದ್: ಮಲಯಾಳಂ ಚಿತ್ರರಂಗದ ಸ್ಟಾರ್ ನಟ ದುಲ್ಕರ್ ಸಲ್ಮಾನ್ ಅಭಿನಯದ ತೆಲುಗು ಸಿನಿಮಾ ‘ಆಕಾಶಮ್ ಲೋ ಒಕ ತಾರ’ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಿಡುಗಡೆಯಾದ ಮೊದಲ ದಿನದಿಂದಲೇ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ಚಿತ್ರ, ದಿನದಿಂದ ದಿನಕ್ಕೆ ತನ್ನ ಗಳಿಕೆಯನ್ನು ಹೆಚ್ಚಿಸಿಕೊಳ್ಳುತ್ತಿದೆ.

Ad Widget

Ad Widget alt="Ad Widget"/>

Ad Widget

ಸಿನಿಮಾದ ನೈಜ ಯಶಸ್ಸನ್ನು ನಿರ್ಧರಿಸುವಲ್ಲಿ ಸೋಮವಾರದ ಕಲೆಕ್ಷನ್ ಪ್ರಮುಖ ಪಾತ್ರ ವಹಿಸುತ್ತದೆ. ಈ ಪರೀಕ್ಷೆಯಲ್ಲೂ ‘ಆಕಾಶಮ್ ಲೋ ಒಕ ತಾರ’ ಯಶಸ್ವಿಯಾಗಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 4 ಕೋಟಿ ರೂಪಾಯಿ ಗಳಿಸಿದೆ. ವಿಶೇಷವೆಂದರೆ, ಈ ಗಳಿಕೆ ಚಿತ್ರದ ಮೊದಲ ದಿನದ ಕಲೆಕ್ಷನ್‌ಗಿಂತ ಶೇ.10ರಷ್ಟು ಹೆಚ್ಚಾಗಿದೆ.

Ad Widget

Ad Widget <> Ad Widget

ಚಿತ್ರ ಬಿಡುಗಡೆಯಾಗಿ ನಾಲ್ಕು ದಿನಗಳಲ್ಲಿ ಭಾರತದ ಬಾಕ್ಸ್ ಆಫೀಸ್‌ನಲ್ಲಿ ಒಟ್ಟು 20 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಇದೇ ವೇಗ ಮುಂದುವರಿದರೆ ಮೊದಲ ವಾರದ ಅಂತ್ಯಕ್ಕೆ 30 ಕೋಟಿ ರೂಪಾಯಿ ಗಡಿ ದಾಟುವ ನಿರೀಕ್ಷೆಯಿದೆ. ಮುಂದಿನ ವಾರವೂ ಉತ್ತಮ ಪ್ರದರ್ಶನ ಮುಂದುವರಿಸಿದರೆ ಚಿತ್ರ ಹಿಟ್ ಪಟ್ಟಿಗೆ ಸೇರುವ ಸಾಧ್ಯತೆಯಿದೆ. ಈ ಮೂಲಕ ತೆಲುಗು ಚಿತ್ರರಂಗದಲ್ಲಿ ದುಲ್ಕರ್ ಸಲ್ಮಾನ್ ಅವರ ಯಶಸ್ಸಿನ ಓಟ ಮುಂದುವರಿದಂತಾಗಲಿದೆ.

ಪವನ್ ಸಾಧಿನೇನಿ ನಿರ್ದೇಶನದ ಈ ಚಿತ್ರದಲ್ಲಿ ದುಲ್ಕರ್ ಸಲ್ಮಾನ್‌ಗೆ ನಾಯಕಿಯಾಗಿ ಹೊಸ ಪ್ರತಿಭೆ ಸಾತ್ವಿಕಾ ವೀರವಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರುತಿ ಹಾಸನ್, ರುಹಾನಿ ಶರ್ಮಾ, ಸ್ವಾಸಿಕಾ, ಮುರಳಿ ಶರ್ಮಾ, ಗೌತಮ್ ವಾಸುದೇವ್ ಮೆನನ್, ಗೆಟಪ್ ಶ್ರೀನು ಹಾಗೂ ಪ್ರವೀಣ್ ಸೇರಿದಂತೆ ಹಲವು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Ad Widget

Ad Widget

ಜಿ.ವಿ. ಪ್ರಕಾಶ್ ಕುಮಾರ್ ಅವರ ಸಂಗೀತ, ಸುಜಿತ್ ಸಾರಂಗ್ ಅವರ ಛಾಯಾಗ್ರಹಣ ಹಾಗೂ ಪ್ರವೀಣ್ ಕೆ.ಎಲ್. ಅವರ ಸಂಕಲನ ಚಿತ್ರಕ್ಕೆ ಮತ್ತಷ್ಟು ಮೆರುಗು ನೀಡಿದೆ. ಪ್ರೇಕ್ಷಕರಿಂದ ಸಿಗುತ್ತಿರುವ ಉತ್ತಮ ಪ್ರತಿಕ್ರಿಯೆ ಚಿತ್ರತಂಡದ ನಿರೀಕ್ಷೆಯನ್ನು ಹೆಚ್ಚಿಸಿದೆ.

Ad Widget
Continue Reading

ಅಂತರ ರಾಜ್ಯ

Kerala government-ಪೋಷಕರ ಆಸ್ತಿ ಬರೆಸಿಕೊಂಡು ನಿರ್ಲಕ್ಷಿಸಿದರೆ ಮಕ್ಕಳಿಗೆ 3 ವರ್ಷ ಜೈಲು: ಕೇರಳ ಸರ್ಕಾರದ ಮಹತ್ವದ ನಿರ್ಧಾರ..!

Published

on

Ad Widget

Ad Widget

Ad Widget

Ad Widget

ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಕೊಲ್ಲಂ: ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಕೊಲ್ಲಂ ಜಿಲ್ಲೆಯ ಪಟ್ಟಣಪುರಂನ ಗಾಂಧಿ ಭವನದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ವೃದ್ಧ ಪುರುಷರಿಗಾಗಿ ಅತ್ಯಾಧುನಿಕ ವಸತಿ ಸೌಲಭ್ಯವಾದ ‘ಪಿತೃಮಂದಿರಂ’ ಉದ್ಘಾಟಿಸಿ ಅವರು ಮಾತನಾಡಿದರು.

Ad Widget

Ad Widget <> Ad Widget

ಅಕ್ಟೋಬರ್‌ನಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿರುವ ಹಿರಿಯ ನಾಗರಿಕರ ಕಾಳಜಿ ಮತ್ತು ರಕ್ಷಣೆಗೆ ಸಂಬಂಧಿಸಿದ ಮಸೂದೆಯ ಪ್ರಮುಖ ಅಂಶಗಳನ್ನು ವಿವರಿಸಿದ ಅವರು, ಪೋಷಕರ ಆಸ್ತಿಯನ್ನು ಸಂಪೂರ್ಣವಾಗಿ ತಮ್ಮ ಹೆಸರಿಗೆ ಬರೆಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಮಕ್ಕಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ನಿಬಂಧನೆಯನ್ನು ಉದ್ದೇಶಪೂರ್ವಕವಾಗಿಯೇ ಕಾಯ್ದೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.

ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೈಗೊಂಡ ಮೊದಲ ನಿರ್ಧಾರವೇ ಹಿರಿಯ ನಾಗರಿಕರಿಗಾಗಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿತ್ತು. ಹಿರಿಯ ನಾಗರಿಕರಿಗೆ ಹಲವು ಹಕ್ಕುಗಳನ್ನು ಒದಗಿಸುವ ವಿಶೇಷ ಕಾನೂನನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.

Ad Widget

Ad Widget

ಈ ಮಸೂದೆಗೆ ರಾಜ್ಯಪಾಲರ ಅಂಕಿತ ದೊರೆತ ಬಳಿಕ ಕಾನೂನಾಗಿ ಜಾರಿಗೆ ಬರಲಿದೆ. ಪೋಷಕರ ಆಸ್ತಿಯನ್ನು ಪಡೆದುಕೊಂಡು ಅವರನ್ನು ಬೀದಿಗೆ ತಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.

ಮಕ್ಕಳನ್ನು ಬೆಳೆಸಲು ಪೋಷಕರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅಪಾರ ತ್ಯಾಗ ಮಾಡುತ್ತಾರೆ. ಆದರೆ ಮಕ್ಕಳು ದೊಡ್ಡವರಾದ ಬಳಿಕ ಅದೇ ಪೋಷಕರನ್ನು ನಿರ್ಲಕ್ಷಿಸುವ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಸಂಸ್ಕೃತಿ ಕೇರಳದಲ್ಲಿ ಬೆಳೆಯಬಾರದು ಎಂದು ಅವರು ಹೇಳಿದರು.

ಪೋಷಕರನ್ನು ತಮ್ಮೊಂದಿಗೆ ಇರಿಸಿಕೊಂಡು ಪ್ರೀತಿ ಹಾಗೂ ಗೌರವದಿಂದ ನೋಡಿಕೊಳ್ಳುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ಕೇರಳದಲ್ಲಿ ಯಾವೊಬ್ಬ ಹಿರಿಯ ನಾಗರಿಕರೂ ಏಕಾಂಗಿಯಾಗಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದೇ ತಮ್ಮ ದೊಡ್ಡ ಕನಸು ಎಂದು ಮುಖ್ಯಮಂತ್ರಿ ತಿಳಿಸಿದರು.

Ad Widget
Continue Reading

ಅಂತರ ರಾಜ್ಯ

Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ

Published

on

Ad Widget

Ad Widget

Ad Widget

Ad Widget

ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.

Ad Widget

Ad Widget alt="Ad Widget"/>

Ad Widget

ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.

Ad Widget

Ad Widget <> Ad Widget

ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!