ನಿಧನ ವಾರ್ತೆ
Bangalore-ಬೆಂಗಳೂರು: ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಬಲಿ
ಬೆಂಗಳೂರು ನಗರದ ಕಂಠೀರವ ಸ್ಟೂಡಿಯೋ ಸಮೀಪದ ಎಫ್ಟಿಐ (FTI) ಸರ್ಕಲ್ ಬಳಿ ಬಿಡಿಎ (BDA) ವತಿಯಿಂದ ನಡೆಯುತ್ತಿದ್ದ ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಬೆಂಗಳೂರು: ನಗರದ ಕಂಠೀರವ ಸ್ಟೂಡಿಯೋ ಸಮೀಪದ ಎಫ್ಟಿಐ (FTI) ಸರ್ಕಲ್ ಬಳಿ ಬಿಡಿಎ (BDA) ವತಿಯಿಂದ ನಡೆಯುತ್ತಿದ್ದ ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ದುರಂತ ನಡೆದಿದ್ದು ಹೇಗೆ?:
ಅಂಡರ್ ಪಾಸ್ ನಿರ್ಮಾಣಕ್ಕಾಗಿ ರಸ್ತೆಯಲ್ಲಿ ಸುಮಾರು 20 ಅಡಿ ಆಳದ ಗುಂಡಿ ತೋಡಲಾಗಿತ್ತು. ಇಂದು ಎಂದಿನಂತೆ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದರು. ಆರ್.ಸಿ.ಸಿ (RCC) ಹಾಕುವ ಸಲುವಾಗಿ ಗುಂಡಿಯಲ್ಲಿ ತುಂಬಿದ್ದ ನೀರನ್ನು ಖಾಲಿ ಮಾಡುತ್ತಿದ್ದ ಸಂದರ್ಭದಲ್ಲಿ, ಪಕ್ಕದಲ್ಲಿದ್ದ ಮಣ್ಣಿನ ಬೃಹತ್ ತಡೆಗೋಡೆ ಏಕಾಏಕಿ ಕುಸಿದು ಬಿದ್ದಿದೆ. ಈ ವೇಳೆ ಸ್ಥಳದಲ್ಲಿದ್ದ ಐವರು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ.
ಮೃತರ ವಿವರ:
ಮಣ್ಣಿನ ಅಡಿಯಲ್ಲಿ ಸಿಲುಕಿ ಉಸಿರಾಡಲಾಗದೆ ನರಳಾಡುತ್ತಿದ್ದವರ ಪೈಕಿ ಪರಿಮಳ್ (31) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಕಾರ್ಮಿಕ ಸೋನಾರಾಮ್ (26) ಎಂಬುವವರನ್ನು ಮಣ್ಣಿನಿಂದ ಹೊರತೆಗೆದು ತಕ್ಷಣ ಕಣ್ವ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಮೂವರ ರಕ್ಷಣೆ:
ಸುತ್ತಮುತ್ತಲ ಸಾರ್ವಜನಿಕರು ಹಾಗೂ ಸಹೋದ್ಯೋಗಿಗಳ ಸಮಯಪ್ರಜ್ಞೆಯಿಂದಾಗಿ ಮಣ್ಣಿನಡಿ ಸಿಲುಕಿದ್ದ ಉಳಿದ ಮೂವರು ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಘಟನೆಯಲ್ಲಿ ಸದಾನಂದ್, ಸುನೀಲ್ ಮತ್ತು ಇಮ್ತಿಯಾಜ್ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸ್ ಮತ್ತು ಅಗ್ನಿಶಾಮಕ ದಳದ ಕಾರ್ಯಾಚರಣೆ:
ಘಟನೆ ಸಂಭವಿಸಿದ ತಕ್ಷಣ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮಣ್ಣಿನಡಿ ಇನ್ನು ಯಾರಾದರೂ ಸಿಲುಕಿದ್ದಾರೆಯೇ ಎಂದು ಪತ್ತೆ ಹಚ್ಚಲು ಸುದೀರ್ಘ ಶೋಧ ನಡೆಸಲಾಯಿತು. ಈ ಕುರಿತು ಪ್ರಕರಣ ದಾಖಲಾಗಿದ್ದು, ಕಾಮಗಾರಿ ವೇಳೆ ಸುರಕ್ಷತಾ ಕ್ರಮಗಳ ಲೋಪವಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ನಿಧನ ವಾರ್ತೆ
Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!
ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್ನ ಫುಟ್ಬೋರ್ಡ್ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.
ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.
ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.
ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Puttur-ಪುತ್ತೂರು: ಬೈಕ್ ಡಿಕ್ಕಿಯಾಗಿ ಹರಿಪ್ರಸಾದ್ ಹೋಟೆಲ್ ಸಪ್ಲೈಯರ್ ಸಾವು
ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಇವರು ಪುತ್ತೂರಿನ ಹರಿಪ್ರಸಾದ್ ಹೋಟೆಲ್ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದರು.
ನ.16ರಂದು ರಾತ್ರಿ ಹೋಟೆಲ್ ಕೆಲಸ ಮುಗಿಸಿ ಹೊರಬಂದ ಚಂದ್ರಶೇಖರ ಅವರು ಹೋಟೆಲ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
-
ಬಿಗ್ ನ್ಯೂಸ್20 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ22 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ5 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ4 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ4 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಚಿನ್ನ-ಬೆಳ್ಳಿ ದರ3 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ3 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
Uncategorized6 hours ago
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ















