ಅಪರಾಧ
Bangalore-ಆಹಾರದ ಹೆಸರಲ್ಲಿ ವಿಷ ಉಣಿಸುತ್ತಿವೆಯೇ ಆನ್‌ಲೈನ್ ಸಂಸ್ಥೆಗಳು.? ಬೆಂಗಳೂರಿನಲ್ಲಿ ಝೆಪ್ಟೋ ಗೋದಾಮು ಸೀಲ್, ಬ್ಲಿಂಕಿಟ್ ಲೈಸೆನ್ಸ್ ಅಮಾನತು..!
ಆಹಾರದ ಗುಣಮಟ್ಟ ಮತ್ತು ಸಂಗ್ರಹಣೆಯಲ್ಲಿ ಗಂಭೀರ ಲೋಪಗಳನ್ನು ಎಸಗುತ್ತಿದ್ದ ಹೆಸರಾಂತ ಸಂಸ್ಥೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರಿನಲ್ಲಿ ಕ್ವಿಕ್-ಕಾಮರ್ಸ್ ಸಂಸ್ಥೆ ‘ಝೆಪ್ಟೋ’ ಗೋದಾಮು ಹಾಗೂ ಇಂದಿರಾ ಕ್ಯಾಂಟೀನ್ ಒಂದನ್ನು ಸೀಲ್ ಮಾಡಲಾಗಿದ್ದರೆ, ಮುಂಬೈನಲ್ಲಿ ‘ಬ್ಲಿಂಕಿಟ್’ (Blinkit) ಸಂಸ್ಥೆಯ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ.
ಬೆಂಗಳೂರು/ಮುಂಬೈ: ಆಹಾರದ ಗುಣಮಟ್ಟ ಮತ್ತು ಸಂಗ್ರಹಣೆಯಲ್ಲಿ ಗಂಭೀರ ಲೋಪಗಳನ್ನು ಎಸಗುತ್ತಿದ್ದ ಹೆಸರಾಂತ ಸಂಸ್ಥೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರಿನಲ್ಲಿ ಕ್ವಿಕ್-ಕಾಮರ್ಸ್ ಸಂಸ್ಥೆ ‘ಝೆಪ್ಟೋ’ ಗೋದಾಮು ಹಾಗೂ ಇಂದಿರಾ ಕ್ಯಾಂಟೀನ್ ಒಂದನ್ನು ಸೀಲ್ ಮಾಡಲಾಗಿದ್ದರೆ, ಮುಂಬೈನಲ್ಲಿ ‘ಬ್ಲಿಂಕಿಟ್’ (Blinkit) ಸಂಸ್ಥೆಯ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ.
ಬೆಂಗಳೂರಿನಲ್ಲಿ ಝೆಪ್ಟೋ ಗೋದಾಮಿಗೆ ಬೀಗ:
ಹೊಸಕೋಟೆ ತಾಲೂಕಿನ ನಿಪ್ಪಾನ್ ಎಕ್ಸೆಸ್‌ನಲ್ಲಿರುವ ‘ಝೆಪ್ಟೋ’ ಗೋದಾಮಿನ ಮೇಲೆ ದಾಳಿ ನಡೆಸಿದ ಕರ್ನಾಟಕ ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು, ಅಲ್ಲಿನ ಅವ್ಯವಸ್ಥೆಯನ್ನು ಕಂಡು ದಂಗಾಗಿದ್ದಾರೆ. ಆಹಾರ ಸುರಕ್ಷತಾ ಕಾಯ್ದೆ-2006 ರ ನಿಯಮಗಳನ್ನು ಗಾಳಿಗೆ ತೂರಿ ಆಹಾರ ಸಂಗ್ರಹಣೆ ಮಾಡಲಾಗಿತ್ತು. ಅಶುದ್ಧ ಪರಿಸರ, ಸರಿಯಾದ ಲೇಬಲಿಂಗ್ ಇಲ್ಲದಿರುವುದು ಮತ್ತು ಕಳಪೆ ನಿರ್ವಹಣೆಯ ಕಾರಣದಿಂದಾಗಿ ಗೋದಾಮನ್ನು ತಕ್ಷಣವೇ ಸೀಲ್ ಮಾಡಲಾಗಿದೆ.
ಝೆಪ್ಟೋ ಪ್ರತಿಕ್ರಿಯೆ:
“ನಾವು ಇಲಾಖೆಯ ತಪಾಸಣೆಗೆ ಪೂರ್ಣ ಸಹಕಾರ ನೀಡಿದ್ದೇವೆ. ಅಧಿಕಾರಿಗಳು ಸೂಚಿಸಿರುವ ನ್ಯೂನತೆಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳುತ್ತಿದ್ದೇವೆ,” ಎಂದು ಕಂಪನಿ ವಕ್ತಾರರು ತಿಳಿಸಿದ್ದಾರೆ.
ಇಂದಿರಾ ಕ್ಯಾಂಟೀನ್‌ಗಳಲ್ಲೂ ಅವ್ಯವಸ್ಥೆ:
ಬೆಂಗಳೂರಿನ ಗೊಟ್ಟಿಗೆರೆ, ಸಿಂಗಸಂದ್ರ ಮತ್ತು ಲಿಂಗರಾಜಪುರದಲ್ಲಿರುವ ಇಂದಿರಾ ಕ್ಯಾಂಟೀನ್‌ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಲ್ಲಿನ ಆಹಾರ ಪದಾರ್ಥಗಳಲ್ಲಿ ಲೇಬಲಿಂಗ್ ಲೋಪ ಹಾಗೂ ಕಳಪೆ ಗುಣಮಟ್ಟ ಕಂಡುಬಂದಿದೆ. ಈ ಪೈಕಿ ಗೊಟ್ಟಿಗೆರೆ ಕ್ಯಾಂಟೀನ್ ಅನ್ನು ಸೀಲ್ ಮಾಡಲಾಗಿದ್ದು, ಉಳಿದ ಮೂರು ಮಳಿಗೆಗಳಿಗೆ ನೋಟಿಸ್ ನೀಡಲಾಗಿದೆ. ಬೇಳೆ, ಎಣ್ಣೆ, ಬೆಲ್ಲ ಸೇರಿದಂತೆ ಆಹಾರದ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಮುಂಬೈ ಬ್ಲಿಂಕಿಟ್‌ನಲ್ಲಿ ಜಿರಳೆಗಳ ಹಾವಳಿ
ಮಹಾರಾಷ್ಟ್ರದ ಮಲಾಡ್‌ನಲ್ಲಿರುವ ‘ಬ್ಲಿಂಕಿಟ್’ ಸೌಲಭ್ಯದ ಪರವಾನಗಿಯನ್ನು ಅಲ್ಲಿನ ಇಲಾಖೆ ಅಮಾನತುಗೊಳಿಸಿದೆ. ತಪಾಸಣೆಯ ವೇಳೆ ಅಲ್ಲಿ ಜಿರಳೆಗಳ ಹಾವಳಿ ಇರುವುದು ಪತ್ತೆಯಾಗಿದೆ. ಅಲ್ಲದೆ, ತುಕ್ಕು ಹಿಡಿದ ರಾಕ್‌ಗಳಲ್ಲಿ ಆಹಾರ ಪದಾರ್ಥಗಳನ್ನು ಇರಿಸಲಾಗಿತ್ತು ಮತ್ತು ಅವಧಿ ಮುಗಿದ ಉತ್ಪನ್ನಗಳು ಮಾರಾಟಕ್ಕೆ ಸಿದ್ಧವಾಗಿದ್ದವು. ಈ ಘಟಕವು ಆಹಾರ ಮಾರಾಟ ಮಾಡದಂತೆ ನಿಷೇಧ ಹೇರಲಾಗಿದೆ.
ಕಾಜು ಕಟ್ಲಿಯಲ್ಲಿ ಜೀವಂತ ಹುಳುಗಳು
ಮಹಾರಾಷ್ಟ್ರದ ಬುಲ್ಲಾನ ಜಿಲ್ಲೆಯಲ್ಲಿರುವ ARD ಸಿನಿಮಾಲ್ನಲ್ಲಿರುವ ರಿಲಯನ್ಸ್ ರಿಟೇಲ್ ಮಳಿಗೆಯಲ್ಲಿ ಜನಪ್ರಿಯ ಸಿಹಿವಸ್ತುವಿನಲ್ಲಿ ಜೀವಂತ ಲಾರ್ವಾ ಪತ್ತೆಯಾದ ಹಿನ್ನೆಲೆಯಲ್ಲಿ ತನಿಖೆ ಕೈಗೊಳ್ಳಲಾಗಿದೆ.
ಈ ಮಳಿಗೆಯಲ್ಲಿ ಇರಿಸಲಾಗಿದ್ದ ‘ಲಕ್ಷ್ಮಿನಾರಾಯಣ’ ಬ್ರಾಂಡ್ ನ ‘ಕಾಜು ಕಟ್ಲಿ’ಯಲ್ಲಿ ಜೀವಂತ ಲಾರ್ವಾ ಪತ್ತೆಯಾಗಿದೆ ಎಂಬ ದೂರಿನ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ತಪಾಸಣೆಯ ಸಮಯದಲ್ಲಿ ಮೇ 29ರಂದು ತಯಾರಿಸಲ್ಪಟ್ಟ ಮತ್ತು ಆಗಸ್ಟ್ 29ರ ಮುಕ್ತಾಯ ದಿನಾಂಕವನ್ನು ಹೊಂದಿರುವ ದೂರಿನಲ್ಲಿ ಉಲ್ಲೇಖಿಸಲಾದ ಬ್ಯಾಚ್ ಸ್ಟೋರ್ನಲ್ಲಿ ಲಭ್ಯವಿರಲಿಲ್ಲ. ಆದರೆ, ಜುಲೈ 20ರಂದು ತಯಾರಿಸಲ್ಪಟ್ಟ ಮತ್ತು ಅಕ್ಟೋಬರ್ 20ರವರೆಗೆ ಮಾನ್ಯತೆಯಿದ್ದ ಮತ್ತೊಂದು ಬಾಕ್ಸ್ ನಿಂದ ಆಹಾರದ ಮಾದರಿಯನ್ನು ಅಧಿಕಾರಿಗಳು ಸಂಗ್ರಹಿಸಿದರು.
ಲಭ್ಯವಿರುವ ಸ್ಟಾಕ್ ನಿಂದ 11.340 ಕೆಜಿ ತೂಕದ ಮತ್ತು ರೂ. 10,238 ಕೋಟಿ ಮೌಲ್ಯದ ಕನಿಷ್ಠ 54 ಬಾಕ್ಸ್ ಗಳ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು HT ವರದಿ ಮಾಡಿದೆ. ಪರೀಕ್ಷೆಗಾಗಿ ಮಾದರಿಯನ್ನು ಅಧಿಕೃತ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವ ಮತ್ತು ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಯಾವುದೇ ಸಂಸ್ಥೆ ಅಥವಾ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಸರ್ಕಾರ ಎಚ್ಚರಿಕೆ ನೀಡಿದೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಅಪರಾಧ
Madikeri-ಗಾಂಜಾ ಸೇವಿಸಿದವನಿಗೆ ವಿಭಿನ್ನ ಶಿಕ್ಷೆ: ದಿನವಿಡೀ ಟ್ರಾಫಿಕ್ ಕರ್ತವ್ಯ ನಿರ್ವಹಿಸಿದ ಆರೋಪಿ
ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಮಡಿಕೇರಿ, ನ.17: ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಗಾಂಜಾ ಸೇವನೆ ಮಾಡಿದ ಆರೋಪದಡಿ ಸಿದ್ದಾಪುರ ನಿವಾಸಿ ಆಸೀಮ್ ಎಂಬಾತನಿಗೆ ನ್ಯಾಯಾಲಯ ₹5,000 ದಂಡ ವಿಧಿಸಿತ್ತು. ಇದರೊಂದಿಗೆ ಸಮುದಾಯ ಸೇವೆಯನ್ನೂ ಶಿಕ್ಷೆಯ ಭಾಗವಾಗಿ ನೀಡುವಂತೆ ಆದೇಶಿಸಿತ್ತು.
ದಿನವಿಡೀ ಸಂಚಾರ ನಿಯಂತ್ರಣ ಕರ್ತವ್ಯ
ನ್ಯಾಯಾಲಯದ ಆದೇಶದಂತೆ ನವೆಂಬರ್ 15ರಂದು ಆಸೀಮ್ ಸಿದ್ದಾಪುರ ಪಟ್ಟಣದಲ್ಲಿ ಪೊಲೀಸರ ಮೇಲ್ವಿಚಾರಣೆಯಲ್ಲಿ ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದರ ಜೊತೆಗೆ ಪಾದಚಾರಿಗಳ ಸಂಚಾರವನ್ನೂ ನಿಯಂತ್ರಿಸಿ ದಿನವಿಡೀ ಕರ್ತವ್ಯ ನಿರ್ವಹಿಸುವ ಮೂಲಕ ನ್ಯಾಯಾಲಯ ವಿಧಿಸಿದ್ದ ಸಮುದಾಯ ಸೇವೆಯ ಶಿಕ್ಷೆಯನ್ನು ಪೂರ್ಣಗೊಳಿಸಿದರು.
ಸಾಮಾಜಿಕ ಜವಾಬ್ದಾರಿ ಮೂಡಿಸುವ ಉದ್ದೇಶ
ಅಪರಾಧಿಗಳಿಗೆ ಕೇವಲ ದಂಡ ಅಥವಾ ಜೈಲು ಶಿಕ್ಷೆ ವಿಧಿಸುವ ಬದಲು, ಸಾರ್ವಜನಿಕ ಸೇವೆಯಲ್ಲಿ ತೊಡಗಿಸುವ ಮೂಲಕ ಅವರಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ತಮ್ಮ ತಪ್ಪಿನ ಅರಿವು ಮೂಡಿಸುವ ಉದ್ದೇಶದಿಂದ ನ್ಯಾಯಾಲಯ ಇಂತಹ ವಿಭಿನ್ನ ಶಿಕ್ಷೆಯನ್ನು ವಿಧಿಸಿದೆ.
ಇದೇ ವರ್ಷದ ಮಾರ್ಚ್‌ನಲ್ಲಿ ಕಡೂರು ಉಪವಿಭಾಗದಲ್ಲಿ ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡಿದ್ದ ವ್ಯಕ್ತಿಯೊಬ್ಬರಿಗೆ ರಸ್ತೆ ಬದಿಯಲ್ಲಿ ನಿಂತು ಸಂಚಾರ ನಿಯಮಗಳ ಜಾಗೃತಿ ಫಲಕ ಹಿಡಿಯುವಂತೆ ನ್ಯಾಯಾಲಯ ಆದೇಶಿಸಿತ್ತು.
ಸಿದ್ದಾಪುರದಲ್ಲಿ ಜಾರಿಗೊಂಡಿರುವ ಈ ವಿಭಿನ್ನ ಶಿಕ್ಷೆಯ ಮಾದರಿ ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದ್ದು, ಅಪರಾಧಿಗಳಿಗೆ ಪಾಠ ಕಲಿಸುವುದರ ಜೊತೆಗೆ ಸಮಾಜಮುಖಿ ಚಿಂತನೆ ಬೆಳೆಸುವ ಪ್ರಯತ್ನವಾಗಿ ಮೆಚ್ಚುಗೆಗೆ ಪಾತ್ರವಾಗಿದೆ.
ಅಪರಾಧ
Mangalore-Big Shocking : ಮಂಗಳೂರು: ‘ಕೋಲ್ಡ್ ಪ್ರೆಸ್ಡ್’ ಹೆಸರಿನಲ್ಲಿ ಗ್ರಾಹಕರಿಗೆ ವಂಚನೆ ಆರೋಪ; ಪ್ರತಿಷ್ಠಿತ ‘ಬೋಳಾಸ್’ ಆಗ್ರೋ ಘಟಕದಿಂದ 1,240 ಕೆ.ಜಿ. ಅಡುಗೆ ಎಣ್ಣೆ ವಶ..!
ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್‌ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ, ನ.17: ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್‌ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.
ಕಚ್ಚಾ ಎಣ್ಣೆಗೆ ‘ಕೋಲ್ಡ್ ಪ್ರೆಸ್ಡ್’ ಲೇಬಲ್!
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ಘಟಕದಲ್ಲಿ ಪರಿಶೀಲನೆ ನಡೆಸಿದಾಗ ಲೇಬಲಿಂಗ್ ಹಾಗೂ ಬ್ರಾಂಡಿಂಗ್ ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳು ಕಂಡುಬಂದಿವೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಿಂದ ಕಚ್ಚಾ ಕಡಲೆಕಾಯಿ ಎಣ್ಣೆಯನ್ನು (Raw Groundnut Oil) ಖರೀದಿಸಿ, ಅದನ್ನು ‘ಕೋಲ್ಡ್ ಪ್ರೆಸ್ಡ್ ಕಡಲೆಕಾಯಿ ಎಣ್ಣೆ’ (Cold Pressed Groundnut Oil) ಎಂಬ ಹೆಸರಿನಲ್ಲಿ ಮರುಪ್ಯಾಕ್ ಮಾಡಲಾಗುತ್ತಿತ್ತು ಎಂಬುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಉತ್ಪನ್ನದ ನೈಜ ಸ್ವರೂಪಕ್ಕೆ ವಿರುದ್ಧವಾಗಿ ಲೇಬಲ್ ಬಳಸುವ ಮೂಲಕ ಗ್ರಾಹಕರನ್ನು ದಾರಿತಪ್ಪಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಜಪ್ತಿ ಕ್ರಮ ಕೈಗೊಂಡಿದ್ದಾರೆ.
ವಶಪಡಿಸಿಕೊಂಡ ಎಣ್ಣೆಯ ಪ್ರಮಾಣ ಹೀಗಿದೆ:
ಘಟಕದಿಂದ ಒಟ್ಟು 1,240 ಕೆ.ಜಿ. ತೂಕದ ಅಡುಗೆ ಎಣ್ಣೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಅದರ ವಿವರ ಹೀಗಿದೆ:
- ಕಡಲೆಕಾಯಿ ಎಣ್ಣೆ (ಬಾಕ್ಸ್): ತಲಾ 10 ಕೆ.ಜಿ. ತೂಕದ 11 ಬಾಕ್ಸ್‌ಗಳು.
- ಕಡಲೆಕಾಯಿ ಎಣ್ಣೆ (ಕ್ಯಾನ್): ತಲಾ 35 ಲೀಟರ್‌ನ 30 ಕ್ಯಾನ್‌ಗಳು.
- ತೆಂಗಿನ ಎಣ್ಣೆ (ಬಾಕ್ಸ್): ತಲಾ 20 ಕೆ.ಜಿ. ತೂಕದ 4 ಬಾಕ್ಸ್‌ಗಳು.
- ಮಿಸ್‌ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳ ಉಲ್ಲಂಘನೆ ವಿರುದ್ಧ ಆಹಾರ ಸುರಕ್ಷತಾ ಇಲಾಖೆ ಕೈಗೊಂಡಿರುವ ಈ ಕ್ರಮವು ಗ್ರಾಹಕರ ಹಿತಾಸಕ್ತಿ ಮತ್ತು ಆಹಾರ ಉತ್ಪನ್ನಗಳ ಗುಣಮಟ್ಟದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.
-
ಬಿಗ್ ನ್ಯೂಸ್10 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
Uncategorized9 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್10 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು10 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ಅಂತರ ರಾಜ್ಯ8 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ರಾಜಕೀಯ8 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್9 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
-
ಸುಳ್ಯ8 hours agoSullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ















