ಶಿಕ್ಷಣ
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ‘ಫಿಲೋ ಆಟಿದ ಕೂಟ’
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕ ಇದರ ಆಶ್ರಯದಲ್ಲಿ ಆಗಸ್ಟ್ 13 ರಂದು ‘ಫಿಲೋ ಆಟಿದ ಕೂಟ’ ವು ಕಾಲೇಜಿನ ರಜತ ಮಹೋತ್ಸವ ಸ್ಮಾರಕ ಭವನದಲ್ಲಿ ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕ ಇದರ ಆಶ್ರಯದಲ್ಲಿ ಆಗಸ್ಟ್ 13 ರಂದು ‘ಫಿಲೋ ಆಟಿದ ಕೂಟ’ ವು ಕಾಲೇಜಿನ ರಜತ ಮಹೋತ್ಸವ ಸ್ಮಾರಕ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ “ತುಳುನಾಡ ಮಾಣಿಕ್ಯ” ಅರವಿಂದ್ ಬೋಳಾರ್ ಮಾತನಾಡಿ, ಕಾಲೇಜಿನಲ್ಲಿ ಇಂತಹ ಆಚರಣೆಗಳು, ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸುತ್ತದೆ. ಈ ಸಂಸ್ಕೃತಿಯ ವಾರಸುದಾರರಾಗಿ ವಿದ್ಯಾರ್ಥಿಗಳು ಮುಂದಿನ ಪೀಳಿಗೆಗೆ ಇದನ್ನು ಕೈದಾಟಿಸುವ ಕೆಲಸವನ್ನು ಮಾಡಬೇಕು ಎಂದು ತಿಳಿಸಿದರು.
ಹಾಗೆಯೇ ನಮ್ಮ ಸಂಸ್ಕೃತಿಯ ಮೂಲವೇ ನಮ್ಮ ತಂದೆ ತಾಯಿಗಳಿಗೆ ನಾವು ಕೊಡುವ ಗೌರವ. ವಿದ್ಯಾರ್ಥಿಗಳು ತಮ್ಮ ಕರ್ತವ್ಯವನ್ನು ಅರ್ಥ ಮಾಡಿಕೊಂಡು, ಉತ್ತಮ ನಡತೆಯ ಮೂಲಕ ವಿದ್ಯಾಭ್ಯಾಸವನ್ನು ಪಡೆದು ಉತ್ತಮ ಸ್ಥಾನಮಾನವನ್ನು ಪಡೆಯಬೇಕು ಎಂದು ತಿಳಿಸಿದರು. ಉತ್ತಮ ನಡತೆಯ ಮೂಲಕ ಮಾದರಿ ವಿದ್ಯಾರ್ಥಿಗಳು ನೀವಾಗಬೇಕು, ದುರ್ವ್ಯಸನ ಮುಕ್ತ ಸಮಾಜ ನಿರ್ಮಿಸುವಲ್ಲಿ ನಿಮ್ಮ ಪಾತ್ರ ಮಹತ್ವದ್ದು ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ನಾವು ಈ ವರ್ಷ ಮೂರನೇ ವರ್ಷದ ಆಟಿ ಕೂಟವನ್ನು ಆಚರಿಸುತ್ತಿದ್ದು, ನಮ್ಮ ಆಚರಣೆಗಳು ಮಕ್ಕಳಲ್ಲಿ ಹಾಸುಹೊಕ್ಕಾಗಿರಬೇಕು ಎನ್ನುವ ಕಲ್ಪನೆಯೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರ ಜೊತೆಗೆ, ಜವಾಬ್ದಾರಿಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಾ, ಸರಳ ಜೀವನದೊಂದಿಗೆ ಉನ್ನತ ಮಟ್ಟಕ್ಕೆ ಏರಬೇಕೆಂದು ಹೇಳಿದರು.

ವೇದಿಕೆಯಲ್ಲಿ ಪುತ್ತೂರು ಮಾಯಿ ದೆ ದೇವುಸ್ ಚರ್ಚ್ ಸಹಾಯಕ ಧರ್ಮಗುರುಗಳಾದ ಫಾ. ವಿವಿಯಾನ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಆಂಥೋನಿ ಒಲಿವೇರಾ ಹಾಗೂ ಉಪನ್ಯಾಸಕರಾದ ಭರತ್ ಕುಮಾರ್, ಗೋವಿಂದ್ ಪ್ರಕಾಶ್ ಸಿ. ಎಚ್ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವಿಶೇಷ ಆಕರ್ಷಣೆಯಾಗಿ ಕಾಲೇಜಿನ ವಿದ್ಯಾ ರ್ಥಿಗಳಿಂದ ಕಂಗೀಲು, ಆಟಿಕಳೆಂಜ, ಹುಲಿ ಕುಣಿತ, ತುಳುನಾಡಿನ ವೈಭವವನ್ನು ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭದಲ್ಲಿ ಆಟಿ ತಿಂಡಿಯ ಪ್ರದರ್ಶನವು ನಡೆಯಿತು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಜೂನಿಯರ್ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಜ್ಯೋತಿ ಅತಿಥಿಗಳನ್ನು ಸ್ವಾಗತಿಸಿದರು. ಉಪನ್ಯಾಸಕರಾದ ಉಷಾ ಎ ವಂದಿಸಿ, ವಿದ್ಯಾರ್ಥಿನಿ ಧೃತಿ ರೈ ಕಾರ್ಯಕ್ರಮವನ್ನು ನಿರೂಪಿಸಿದರು.
ಶಿಕ್ಷಣ
Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.
ಶಿಕ್ಷಣ
Ambika-ಅಂಬಿಕಾ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ
ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು.
ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು
ನೀಡಿದ್ದು, ದೇಶದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯಲ್ಲಿ ತನ್ನದೇ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಹೇಳಿದರು.

ಅವರು ನವೆಂಬರ್ 20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತ,
ರೆ. ಫಾ. ಪತ್ರವೋ ಇವರ ದೂರದರ್ಶಿ ಚಿಂತನೆಯ ಫಲವಾಗಿ ಈ ಕಾಲೇಜು ಜನ್ಮತಾಳಿದ್ದು, ಇಂದು ಮತ್ತಷ್ಟು ಮೂಲ ಸೌಕರ್ಯಗಳ ವಿಸ್ತರಣೆಯೊಂದಿಗೆ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಅಣಿಯಾಗಿದೆ. ಸುಸಜ್ಜಿತ ಮೂಲ ಸೌಕರ್ಯಗಳ ವಿಸ್ತರಣೆಗೆ ಕಾರಣೀಕರ್ತರಾದ ಎಲ್ಲರನ್ನೂ ಅಭಿನಂದಿಸಿ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

ಇನ್ನೋರ್ವ ಮುಖ್ಯ ಅತಿಥಿಗಳಾದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಕಾರ್ಯದರ್ಶಿಗಳಾದ ರೆ. ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಳೆದ ಹಲವಾರು ದಶಕಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿದೆ. ಇಂದು ಬದಲಾದ ಪರಿಸ್ಥಿತಿಯಲ್ಲಿ ಮೂಲ ಸೌಕರ್ಯಗಳ ವಿಸ್ತರಣೆಯನ್ನು ಮನಗಂಡು ದಾನಿಗಳ ಸಹಾಯದಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಉತ್ತಮ ಸೌಕರ್ಯಗಳನ್ನು ನಿರ್ಮಿಸಿದ್ದೇವೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಉಪಾಧ್ಯಕ್ಷರಾದ ಮೊನ್ಸಿಂಜೋರ್ ಮ್ಯಾಕ್ಸಿಮ್ ಎಲ್ ನೋರೋನ್ಹ ಮಾತನಾಡಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬೆಳವಣಿಗೆಗಳು ತುಂಬಾ ಸಂತೋಷವನ್ನು ನೀಡುತ್ತಿದ್ದು, ಇಂದು ವಿದ್ಯಾರ್ಥಿಗಳಿಗೆ ನೀಡಿದ ಹೆಚ್ಚುವರಿ ಸೌಲಭ್ಯಗಳು ಸಂಸ್ಥೆಯ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲೂ ಕಾಲೇಜು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲಿ ಎಂದು ಆಶಿಸಿದರು.
ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಮೇಲ್ವಿಚಾರಣೆಯನ್ನು ನಿರ್ವಹಿಸಿದ ಓಸ್ವಾಡ್ಡ್ ಲೂಯಿಸ್ ಹಾಗೂ ಜೋಸೆಫ್ ಸೆರವೋರನ್ನು ಸನ್ಮಾನಿಸಲಾಯಿತು.
ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ಅ್ಯಂಟೋನಿ ಒಲಿವೆರಾ, ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ರೆ. ಫಾ. ಮ್ಯಾಕ್ಸಿಮ್ ಡಿ’ ಸೋಜಾ, ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಪ್ಯಾರಿಸ್ ಧರ್ಮ ಗುರುಗಳಾದ ರೆ.ಫಾ ಮಾರ್ವಿನ್ ಪ್ರವೀಣ್ ಲೋಬೋ ಹಾಗೂ ಚ್ಯಾರಿಟಿ ಟೀಮ್ ನ ಸದಸ್ಯರಾದ ಸ್ಟೀಫನ್ ಪಿಂಟೋ, ಓಸ್ವಾಲ್ಡ್ ರೋಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ದಾನಿಗಳು, ಗಣ್ಯರು, ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ನೂತನ ಕಟ್ಟಡದಲ್ಲಿ ವಿಸ್ತೃತ ಸಭಾಂಗಣ, ವಿಜ್ಞಾನ ಪ್ರಯೋಗಾಲಯಗಳು, ಉಪನ್ಯಾಸಕರ ಕೊಠಡಿಗಳು, ತರಗತಿ ಕೋಣೆಗಳು ಹಾಗೂ ಸುಸಜ್ಜಿತ ಶೌಚಾಲಯಗಳು ವಿಧ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಿದೆ.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ, ಉಪನ್ಯಾಸಕರಾದ ಸುಮಾ ಡಿ ವಂದಿಸಿ, ಡಾ. ಆಶಾ ಸಾವಿತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.
-
ಮಂಗಳೂರು9 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಬಿಗ್ ನ್ಯೂಸ್15 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ14 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ನಿಧನ ವಾರ್ತೆ15 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಸಿನೆಮಾ14 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ15 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಅಂತರ ರಾಜ್ಯ8 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ14 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















