Connect with us

ಬಿಗ್ ನ್ಯೂಸ್

Puttur-ಅನುಮತಿ ಪಡೆಯದೆ ದೇವಳದ ವಠಾರಕ್ಕೆ ಪಿಕಪ್‌ ಪ್ರವೇಶಿಸಿ ‌ ಮಣ್ಣು ಸಾಗಾಟ ವಿವಾದ; ಅಧ್ಯಕ್ಷರು, ಇಒ ಅನುಮತಿ ಪಡೆಯದೇ ತಪ್ಪು ಮಾಡಿದ್ದೇವೆ; ಕ್ಷಮೆಯಾಚಿಸಿದ ಪಿಕಪ್ ಚಾಲಕ; ಪ್ರಕರಣಕ್ಕೆ ಬೇರೆ ಬಣ್ಣ ಬಳಿದಿದ್ದಕ್ಕೆ ಬೇಸರ : ವೆಂಕಟರಮಣ ಗೌಡ

Published

on



Ad Widget

Ad Widget

Ad Widget

Ad Widget

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಮೂಲಕ ದೇವಳದ ಅನುಮತಿ ಪಡೆಯದೆ ಪಿಕಪ್‌ ವಾಹನದಲ್ಲಿ ಮಣ್ಣು ಸಾಗಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಆ.13ರ ರಾತ್ರಿ ಭಕ್ತರ ಗುಂಪು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ. ಬಳಿಕ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಾಹನ ಮಾಲಕರಿಗೆ ನೋಟಿಸ್ ನೀಡುವುದಾಗಿ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಮೂಲಕ ದೇವಳದ ಅನುಮತಿ ಪಡೆಯದೆ ಪಿಕಪ್‌ ವಾಹನದಲ್ಲಿ ಮಣ್ಣು ಸಾಗಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಆ.13ರ ರಾತ್ರಿ ಭಕ್ತರ ಗುಂಪು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ. ಬಳಿಕ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಾಹನ ಮಾಲಕರಿಗೆ ನೋಟಿಸ್ ನೀಡುವುದಾಗಿ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ದೇವಸ್ಥಾನದ ಹೊರಾಂಗಣದಲ್ಲಿ ಶ್ರೀ ಅಯ್ಯಪ್ಪ ಗುಡಿಗೆಂದು ಕಾದಿರಿಸಲಾಗಿರುವ ಸ್ಥಳದ ಸಮೀಪದಲ್ಲಿರುವ ಖಾಸಗಿ ಅಂಗಡಿಯೊಂದರ ಕಟ್ಟಡ ಕಾಮಗಾರಿಗೆ ಮಣ್ಣು ಸಾಗಿಸಲಾಗಿತ್ತು ಎನ್ನಲಾಗಿದೆ. ಪಿಕಪ್‌ ವಾಹನ ದೇವಳದ ವಠಾರದೊಳಗೆ ಸಂಚರಿಸಿ ಮಣ್ಣನ್ನು ರಾಶಿ ಹಾಕಿದ ಬಳಿಕ ಸಮೀಪದ ಜಾಗಕ್ಕೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಭಕ್ತರು ಸ್ಥಳದಲ್ಲಿ ಜಮಾಯಿಸಿದ್ದರು.

Ad Widget

Ad Widget <> Ad Widget

ದೇವಸ್ಥಾನದ ಅಧ್ಯಕ್ಷರು ಅಥವಾ ಕಾರ್ಯನಿರ್ವಹಣಾಧಿಕಾರಿ ಸ್ಥಳಕ್ಕೆ ಆಗಮಿಸಿ ಈ ಕುರಿತು ಸ್ಪಷ್ಟನೆ ನೀಡಬೇಕು ಎಂದು ಭಕ್ತರು ಆಗ್ರಹಿಸಿದರು. ದೇವಸ್ಥಾನ ಸಂರಕ್ಷಣಾ ಸಮಿತಿ ಪ್ರಮುಖ ಹರಿಪ್ರಸಾದ್ ಶೆಟ್ಟಿ ಮಾತನಾಡಿ, ದೇವಳದ ಹೊರಾಂಗಣದಲ್ಲಿ ಅನುಮತಿ ಇಲ್ಲದೆ ಮಣ್ಣು ಹಾಕಲಾಗಿದ್ದು, ಅದನ್ನು ಬೇರೆ ಜಾಗಕ್ಕೆ ಸಾಗಿಸಲಾಗುತ್ತಿದೆ. ಈ ಬಗ್ಗೆ ದೇವಳದ ನೌಕರರನ್ನು ವಿಚಾರಿಸಿದಾಗ ತಮಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ ಎಂದು ಹೇಳಿದರು.



Ad Widget

ಅಜಿತ್ ರೈ ಹೊಸಮನೆ ಅವರು ಮಾತನಾಡಿ, ದೇವಳದ ಭದ್ರತಾ ಸಿಬ್ಬಂದಿ ಹಾಗೂ ಕಾರ್ಯನಿರ್ವಹಣಾಧಿಕಾರಿಯವರಿಗೆ ಮಾಹಿತಿ ಇಲ್ಲದೆ ಹೊರಗಿನವರು ದೇವಳದ ಸಮೀಪ ಮಣ್ಣು ತಂದು ಹಾಕಿರುವುದು ಪ್ರಶ್ನಾರ್ಹವಾಗಿದೆ. ಸಂಬಂಧಪಟ್ಟವರು ತಕ್ಷಣ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

Ad Widget

Ad Widget
ಮಣ್ಣು ಹಾಕಿರುವುದು

ಸ್ಥಳಕ್ಕೆ ಭೇಟಿ ನೀಡಿದ ಇಒ
ಭಕ್ತರು ಜಮಾಯಿಸಿರುವ ಮಾಹಿತಿ ತಿಳಿದು ಕೆಲ ಹೊತ್ತಿನ ಬಳಿಕ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್ ಸ್ಥಳಕ್ಕೆ ಆಗಮಿಸಿದರು. ದೇವಳದ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿ, ಅನುಮತಿ ಇಲ್ಲದೆ ಪಿಕಪ್‌ ವಾಹನ ವಠಾರಕ್ಕೆ ಪ್ರವೇಶಿಸಿರುವುದು ದೃಢಪಟ್ಟರೆ ವಾಹನ ಮಾಲಕರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಬಳಿಕ ಭಕ್ತರು ಸ್ಥಳದಿಂದ ತೆರಳಿದರು.

ಈ ಸಂದರ್ಭದಲ್ಲಿ ಜಯಂತ್ ಕುಂಜೂರುಪಂಜ, ಹರಿಪ್ರಸಾದ್ ದೋಲ್ಪಾಡಿ, ಚೇತನ್, ಜಗದೀಶ್, ನಾಗೇಶ್ ಟಿ.ಎಸ್., ಶಶಿಧರ್ ನಾಯಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಿಸಿ ಕ್ಯಾಮಾರ ಪರಿಶೀಲಿಸಿ ಕ್ರಮ : ಇಒ
ದೇವಳದ ಸಿಸಿ ಕ್ಯಾಮರಾ ಪರಿಶೀಲನೆಯಿಂದ ಪಿಕಪ್‌ ವಾಹನದ ಸಂಖ್ಯೆಯನ್ನು ದಾಖಲಿಸಿಕೊಳ್ಳಲಾಗಿದೆ. ಅನುಮತಿ ಇಲ್ಲದೆ ವಠಾರಕ್ಕೆ ವಾಹನ ತಂದಿರುವ ಕುರಿತು ಮಾಲಕರಿಗೆ ನೋಟಿಸ್ ನೀಡಿ ಎಚ್ಚರಿಕೆ ನೀಡಲಾಗುವುದು. ಭದ್ರತಾ ಸಿಬ್ಬಂದಿಯನ್ನೂ ವಿಚಾರಿಸಲಾಗುವುದು. ಮುಂದಿನ ದಿನಗಳಲ್ಲಿ ದೇವಳದ ಹಿಂಬದಿಯ ಕೆರೆ ಹಾಗೂ ಎದುರಿನ ಭಾಗದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು ಎಂದು ಇಒ ಕೆ.ವಿ. ಶ್ರೀನಿವಾಸ್ ತಿಳಿಸಿದ್ದಾರೆ.

ತಪ್ಪೊಪ್ಪಿಗೆ, ಕ್ಷಮೆಯಾಚನೆ


ಮುಂದುವರಿದ ಭಾಗವಾಗಿ ಆ 14ರಂದು ದೇವಸ್ಥಾನದ ಅಡಳಿತ ಕಛೇರಿಗೆ ಆಗಮಿಸಿದ ಪಿಕಪ್‌ ಚಾಲಕ ದಿನೇಶ್ ನಾಯ್ಕ ಕೆ. ಅವರು ದೇವಸ್ಥಾನದ ವ್ಯವಸ್ಥಾಪನ ಮಂಡಳಿ ಅಧ್ಯಕ್ಷರು ಹಾಗೂ ಕಾರ್ಯನಿರ್ವಹಣಾಧಿಕಾರಿಗೆ ಪತ್ರ ಸಲ್ಲಿಸಿ ಘಟನೆ ಕುರಿತು ಕ್ಷಮೆಯಾಚಿಸಿದ್ದಾರೆ. ಈ ವೇಳೆ ಅಲ್ಲಿಗೆ ಮಣ್ಣು ಹಾಕಲು ಸೂಚಿಸಿದ ಪಿಡಬ್ಲ್ಯೂಡಿ ಗುತ್ತಿಗೆದಾರ ವೆಂಕಟರಮಣ ಗೌಡ ಕೊಡಿಪ್ಪಾಡಿಯವರು ಜತೆಗಿದ್ದರು.
ಆ.13ರಂದು ದೇವಾಲಯದ ಹಿಂಭಾಗದಿಂದ ಕೆಎ 21 ಬಿ 7663 ಸಂಖ್ಯೆಯ ಪಿಕಪ್‌ನಲ್ಲಿ ಮಣ್ಣನ್ನು ಸಾಗಿಸಿ ಖಾಸಗಿ ಅಂಗಡಿಗೆ ಹಾಕಿರುವುದಾಗಿ ಅವರು ಪತ್ರದಲ್ಲಿ ತಿಳಿಸಿದ್ದಾರೆ. ದೇವಸ್ಥಾನದ ಅಧ್ಯಕ್ಷರು ಹಾಗೂ ಕಾರ್ಯನಿರ್ವಹಣಾಧಿಕಾರಿಯವರ ಗಮನಕ್ಕೆ ತಾರದೆ ಮಣ್ಣು ಸಾಗಿಸಿರುವುದು ತಮ್ಮ ತಪ್ಪು ಎಂದು ಒಪ್ಪಿಕೊಂಡಿರುವ ಅವರು, ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳುವುದಾಗಿ ತಿಳಿಸಿ ಕ್ಷಮೆಯಾಚಿಸಿದ್ದಾರೆ. ಬಾಕಿ ಉಳಿದಿರುವ ಮಣ್ಣನ್ನು ತಾವೇ ನಿಂತು ತೆರವುಗೊಳಿಸುವುದಾಗಿಯೂ ಹೇಳಿದ್ದಾರೆ.

ಬಳಿಕ ಮಾಧ್ಯಮ ಹೇಳಿಕೆ ನೀಡಿದ ದಿನೇಶ್ ನಾಯ್ಕ, ಪಿಡಬ್ಲ್ಯೂಡಿ ಗುತ್ತಿಗೆದಾರ ವೆಂಕಟರಮಣ ಗೌಡ ಕೊಡಿಪ್ಪಾಡಿ ಅವರ ಸೂಚನೆಯಂತೆ ಮೂರು ಟ್ರಿಪ್ ಮಣ್ಣು ತಂದು ಹಾಕಿದ್ದಾಗಿ ತಿಳಿಸಿದ್ದಾರೆ. ದೇವಸ್ಥಾನದ ಅನುಮತಿ ಪಡೆಯದೆ ಮಣ್ಣು ಹಾಕಿರುವುದು ತಮ್ಮ ತಪ್ಪು ಎಂದು ಪುನರುಚ್ಚರಿಸಿದ್ದಾರೆ. ತಮ್ಮಿಂದಾದ ಪ್ರಮಾದಕ್ಕಾಗಿ ದೇವಸ್ಥಾನದಲ್ಲಿ ತುಪ್ಪದ ದೀಪ ಹಚ್ಚಿ ಪ್ರಾರ್ಥಿಸುವುದಾಗಿಯೂ ಹೇಳಿದ್ದಾರೆ.

ಮಣ್ಣು ಹಾಕಲು ಸೂಚಿಸಿದ್ದಾಗಿ ಹೇಳಲಾದ ಪಿಡಬ್ಲ್ಯೂಡಿ ಗುತ್ತಿಗೆದಾರ ವೆಂಕಟರಮಣ ಗೌಡ ಕೊಡಿಪ್ಪಾಡಿ ಅವರು ಕೂಡ ಇದೆ ವೇಳೆ ನಿಖರ ನ್ಯೂಸಿಗೆ ಸ್ಪಷ್ಟನೆ ನೀಡಿದ್ದಾರೆ.
ಸಾಮೆತ್ತಡ್ಕದಲ್ಲಿ ಮನೆ ನಿರ್ಮಾಣಕ್ಕಾಗಿ ಮಣ್ಣು ತೆಗೆಯುವ ಕೆಲಸ ತನಗೆ ದೊರೆತಿದ್ದು, ತಮ್ಮ ವಾಹನ ಲಭ್ಯವಿಲ್ಲದ ಹಿನ್ನೆಲೆಯಲ್ಲಿ ದಿನೇಶ್ ನಾಯ್ಕ ಅವರಿಗೆ ಸೇರಿದ ‘ಶ್ರೀ ಲಕ್ಷ್ಮೀ ಪ್ರಸಾದ್’ ಹೆಸರಿನ ವಾಹನದಲ್ಲಿ ಮಣ್ಣು ಸಾಗಿಸಲಾಗಿತ್ತು ಎಂದು ತಿಳಿಸಿದ್ದಾರೆ. ದೇವಸ್ಥಾನದ ಪಕ್ಕದ ಅಂಗಡಿಗೆ ಮಣ್ಣಿನ ಅಗತ್ಯವಿದ್ದ ಕಾರಣ ಅಲ್ಲಿಗೆ ಮಣ್ಣು ಹಾಕಲಾಗಿತ್ತು ಎಂದಿದ್ದಾರೆ.

ದೇವಸ್ಥಾನದ ಅಧ್ಯಕ್ಷರ ಅನುಮತಿ ಪಡೆಯದೆ ಮಣ್ಣು ಹಾಕಿರುವುದು ತಮ್ಮ ತಪ್ಪಾಗಿದ್ದು, ಅದಕ್ಕಾಗಿ ಕ್ಷಮೆಯಾಚಿಸುವುದಾಗಿ ಅವರು ಹೇಳಿದ್ದಾರೆ. ಆದರೆ ಪ್ರಕರಣವನ್ನು ಮುಂದಿಟ್ಟುಕೊಂಡು ಅನ್ಯಕೋಮಿನವರ ವಾಹನದಲ್ಲಿ ಅಕ್ರಮವಾಗಿ ದೇವಳದ ವಠಾರಕ್ಕೆ ಪ್ರವೇಶಿಸಿ ಮಣ್ಣು ಹಾಕಲಾಗಿದೆ ಎಂದು ಬಿಂಬಿಸಿರುವುದು ಬೇಸರ ತಂದಿದೆ. ಮಣ್ಣು ಸಾಗಿಸಿದವರು ತಮ್ಮ ಪರಿಚಯದವರು ಎಂದು ಸ್ಪಷ್ಟಪಡಿಸಿದ್ದಾರೆ. ನಾನು ಹಿಂದೂ ಕಾರ್ಯಕರ್ತನಾಗಿದ್ದು, ವಾಹನದಲ್ಲಿ “ಶ್ರೀ ಲಕ್ಷ್ಮೀ ಪ್ರಸಾದ್‌ “ಎಂದು ಬರೆಯಲಾಗಿದೆ. ಹಾಗಿದ್ದೂ ಅನ್ಯಕೋಮಿನವರು ಬಂದು ದುರುದ್ಧೇಶ ಮಾಡಿರುವುದಾಗಿ ಹೇಳಿರುವುದು ದೊಡ್ಡ ತಪ್ಪು ಇದು ನನಗೆ ಭಾರೀ ಬೇಸರ ಮೂಡಿಸಿದೆ ಎಂದರು.

ದೇವಸ್ಥಾನದ ಅಧ್ಯಕ್ಷರನ್ನು ಗೌರವದಿಂದ ಕಾಣುತ್ತೇವೆ. ಆದರೆ ಘಟನೆಯ ಸಂದರ್ಭದಲ್ಲಿ ಅಧ್ಯಕ್ಷರೊಂದಿಗೆ ನಡೆದ ತಳ್ಳಾಟದ ರೀತಿಯ ಬೆಳವಣಿಗೆಗಳು ನೋವುಂಟು ಮಾಡಿವೆ. ಸತ್ಯಾಂಶ ತಿಳಿಯದೆ ಪ್ರಕರಣಕ್ಕೆ ಕೋಮು ಬಣ್ಣ ನೀಡಬಾರದು ಎಂದು ಅವರು ಮನವಿ ಮಾಡಿದ್ದಾರೆ.

( ಪಿಕಪ್‌ ಚಾಲಕ ದಿನೇಶ್ ನಾಯ್ಕ ಕೆ ಹಾಗೂ ಅವರಿಗೆ ಮಣ್ಣು ಹಾಕಲು ಸೂಚಿಸಿದ ವೆಂಕಟರಮಣ ಗೌಡ ಅವರ ಹೇಳಿಕೆ ನಿಖರ ನ್ಯೂಸಿನ ಯೂಟ್ಯೂಬ್‌ ಚಾನೆಲ್‌ ನಲ್ಲಿದೆ )

Ad Widget
Click to comment

Leave a Reply

ಬಿಗ್ ನ್ಯೂಸ್

Nagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಂವಾದವೊಂದರಲ್ಲಿ ಮಾತನಾಡಿದ ಚೌದರಿ , ಎಸ್‌ಐಟಿ ತನಿಖಾ ವರದಿಯಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳ ಸಂಖ್ಯೆ ಹಾಗೂ ಗ್ರಾಮ ಪಂಚಾಯತ್‌ನಲ್ಲಿ ದಾಖಲಾಗಿರುವ ಸಾವುಗಳ ವಿವರಗಳಲ್ಲಿ ವ್ಯತ್ಯಾಸವಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಅಳವಾಗಿ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು ಎಂದು ಎಸ್‌ಐಟಿ ತಿಳಿಸಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.

Ad Widget

Ad Widget <> Ad Widget

ಬಂಗ್ಲೆ ಗುಡ್ಡೆಯಲ್ಲಿ ಹಲವಾರು ಅಸ್ತಿಪಂಜರಗಳು ಪತ್ತೆಯಾಗಿರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಬಂಗ್ಲೆ ಗುಡ್ಡೆ ಸ್ಮಶಾನವಲ್ಲದಿದ್ದರೂ ಅಲ್ಲಿ ಇಷ್ಟೊಂದು ಎಲುಬುಗಳು ಮತ್ತು ಅಸ್ತಿಪಂಜರಗಳು ಪತ್ತೆಯಾಗಿರುವುದು ಹೇಗೆ ಎಂಬುದರ ಕುರಿತು ಉನ್ನತ ತನಿಖೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.



Ad Widget

ಪತ್ತೆಯಾದ ಕೆಲವು ಅಸ್ತಿಪಂಜರಗಳ ಪರೀಕ್ಷೆಯಲ್ಲಿ ಅವು ಪುರುಷರದ್ದು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಒಂದು ಹುಡುಗಿಯ ಅಸ್ತಿಪಂಜರವನ್ನು ಆಸಿಡ್‌ನಿಂದ ಸುಟ್ಟಿರುವ ಸ್ಥಿತಿಯಲ್ಲಿ ಹೂತುಹಾಕಲಾಗಿದೆ ಎಂಬ ಮಾಹಿತಿ ನೀಡಲಾಗಿತ್ತು. ಆದರೆ, ಆ ವ್ಯಕ್ತಿ ಆಸಿಡ್‌ನಿಂದ ಮೃತಪಟ್ಟಿಲ್ಲ ಎಂಬುದು ಡಿಎನ್‌ಎ ವರದಿಯಲ್ಲಿ ತಿಳಿದುಬಂದಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.

Ad Widget

Ad Widget

ಈ ರೀತಿಯಾಗಿ ವಿವಿಧ ವರದಿಗಳ ನಡುವೆ ವ್ಯತ್ಯಾಸ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಟಿಗೆ ಪೂರಕ ತನಿಖೆ ನಡೆಸಲು ಸಂಪೂರ್ಣ ಅಧಿಕಾರ ನೀಡಬೇಕು ಎಂದು ಸರ್ಕಾರಕ್ಕೆ ಪತ್ರದ ಮೂಲಕ ಶಿಫಾರಸು ಮಾಡಿರುವುದಾಗಿ ಅವರು ತಿಳಿಸಿದ್ದಾರೆ.

ಪ್ರಸ್ತುತ ರಚನೆಯಾಗಿರುವ ಎಸ್‌ಐಟಿ ವ್ಯಾಪ್ತಿಗೆ ಈ ಹೊಸ ಮಾಹಿತಿಗಳು ಸ್ವಯಂಚಾಲಿತವಾಗಿ ಸೇರುತ್ತವೆಯೇ ಎಂಬ ಬಗ್ಗೆ ಕಾನೂನುಬದ್ಧ ಸ್ಪಷ್ಟತೆ ಅಗತ್ಯವಿದೆ. ಆದ್ದರಿಂದ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿ, ಈ ಎಲ್ಲ ವಿಷಯಗಳನ್ನು ಈಗಾಗಲೇ ರಚಿಸಿರುವ ಎಸ್‌ಐಟಿಗೆ ವಹಿಸಬೇಕು. ಅಗತ್ಯವಿದ್ದರೆ ಅದರ ‘ಟರ್ಮ್ಸ್ ಆಫ್ ರೆಫರೆನ್ಸ್’ (ತನಿಖೆಯ ವ್ಯಾಪ್ತಿ) ವಿಸ್ತರಿಸಬೇಕು ಎಂದು ಮಹಿಳಾ ಆಯೋಗ ಶಿಫಾರಸು ಮಾಡಿದೆ.

ಸರ್ಕಾರದ ಪ್ರತಿಕ್ರಿಯೆಗಾಗಿ ಇನ್ನೂ 15 ದಿನ ಕಾಯಲಾಗುವುದು. ಬಳಿಕ ಎರಡು ಬಾರಿ ಸರ್ಕಾರಕ್ಕೆ ನೆನಪಿನ ಪತ್ರ ಕಳುಹಿಸುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Arshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್

Published

on



Ad Widget

Ad Widget

Ad Widget

Ad Widget

ನವರಾತ್ರಿ ಸಂದರ್ಭ ನಡೆಯಲಿರುವ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನದಲ್ಲಿ ವಿಟ್ಲದ ಯಕ್ಷಗಾನ ಕಲಾವಿದೆ ಅರ್ಷಿಯಾ ಖಾನ್ ಅವರು ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ರಂಗಸ್ಥಳವೇರಲು ಸಜ್ಜಾಗಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ನವರಾತ್ರಿ ಸಂದರ್ಭ ನಡೆಯಲಿರುವ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನದಲ್ಲಿ ವಿಟ್ಲದ ಯಕ್ಷಗಾನ ಕಲಾವಿದೆ ಅರ್ಷಿಯಾ ಖಾನ್ ಅವರು ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ರಂಗಸ್ಥಳವೇರಲು ಸಜ್ಜಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

‘ಯಕ್ಷಪ್ರಿಯೆ ತನು ವಿಟ್ಲ’ ಎಂದೇ ಪರಿಚಿತರಾಗಿರುವ ಅರ್ಷಿಯಾ ಖಾನ್ ಅವರು ಕದ್ರಿಯ ಕದಳಿ ಕಲಾ ಕೇಂದ್ರದ ವಿದ್ಯಾರ್ಥಿನಿ. ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಕದಳಿ ಕಲಾ ಕೇಂದ್ರ ಆಯೋಜಿಸಿರುವ ‘ಕದಳಿ ದಶಾಹಃ’ ಯಕ್ಷಗಾನ ಹಬ್ಬದ ಅಂಗವಾಗಿ ಅ.20ರಂದು ಸಂಪೂರ್ಣ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಈ ಪ್ರದರ್ಶನದಲ್ಲಿ ಅರ್ಷಿಯಾ ಅವರು ದೇವಿ ಪಾತ್ರ ನಿರ್ವಹಿಸಲಿದ್ದಾರೆ.

Ad Widget

Ad Widget <> Ad Widget

ಕಳೆದ 12 ವರ್ಷಗಳಿಂದ ಯಕ್ಷಗಾನದಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸುತ್ತಿರುವ ಅರ್ಷಿಯಾ, ಆದಿಮಾಯೆ ಸೇರಿದಂತೆ ಹಲವು ಅಸುರ ಪಾತ್ರಗಳಲ್ಲೂ ಕಾಣಿಸಿಕೊಂಡಿದ್ದಾರೆ.



Ad Widget

“ಉಳ್ಳಾಲ್ತಿ ಅಮ್ಮನ (ಕಟೀಲು ದುರ್ಗಾಪರಮೇಶ್ವರಿ) ಮೇಲಿನ ಭಕ್ತಿಯೇ ನನ್ನಲ್ಲಿ ಯಕ್ಷಗಾನದ ಆಸಕ್ತಿ ಮೂಡಲು ಕಾರಣ. ಈ ಬಾರಿ ನವರಾತ್ರಿಯ ಪರ್ವಕಾಲದಲ್ಲಿ ದೇವಿ ಪಾತ್ರ ನಿರ್ವಹಿಸುವ ಅವಕಾಶ ದೊರೆತಿದೆ. ಅಷ್ಟಭುಜ ಧರಿಸಿ ರಂಗಸ್ಥಳ ಏರುವ ಆ ಪವಿತ್ರ ಕ್ಷಣವನ್ನು ಕಲ್ಪಿಸಿಕೊಂಡಾಗಲೇ ರೋಮಾಂಚನವಾಗುತ್ತದೆ” ಎಂದು ಅರ್ಷಿಯಾ ಹೇಳಿದ್ದಾರೆ.

Ad Widget

Ad Widget

ಯಕ್ಷಗಾನಕ್ಕೆ ತನ್ನದೇ ಆದ ಪಾವಿತ್ರ್ಯವಿದೆ ಎಂದು ಹೇಳಿದ ಅವರು, ದೇವಿ ಪಾತ್ರ ನಿರ್ವಹಿಸುವ ಸಂದರ್ಭದಲ್ಲಿ ಪರಿಶುದ್ಧತೆಯನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಕಳೆದ ಆರು ತಿಂಗಳಿಂದ ಮಾಂಸಾಹಾರ ತ್ಯಜಿಸಿ ವ್ರತ ಆಚರಿಸುತ್ತಿರುವುದಾಗಿ ತಿಳಿಸಿದ್ದಾರೆ.

ಪ್ರತಿದಿನ ದೈವಸ್ಥಾನ ಅಥವಾ ದೇವಸ್ಥಾನಕ್ಕೆ ಭೇಟಿ ನೀಡಿ ಧ್ಯಾನ ಮಾಡುತ್ತಿದ್ದೇನೆ. ನವರಾತ್ರಿ ಆರಂಭವಾದ ಬಳಿಕ ಇನ್ನಷ್ಟು ಕಟ್ಟುನಿಟ್ಟಿನ ವ್ರತ ಆಚರಿಸಲು ಉದ್ದೇಶಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಯಕ್ಷಗಾನ ಪ್ರೇಮಕ್ಕೆ ಕುಟುಂಬದ ಬೆಂಬಲ
“ಯಕ್ಷಗಾನವು ಪೌರಾಣಿಕ ಕಥಾನಕಗಳನ್ನು ಆಧರಿಸಿದೆ. ನಮ್ಮ ಧರ್ಮ ಬೇರೆಯಾಗಿರುವುದರಿಂದ ಯಕ್ಷಗಾನದ ಕಥಾನಕಗಳಲ್ಲಿನ ಪ್ರತಿಯೊಂದು ಪಾತ್ರವನ್ನೂ ಓದಿ ತಿಳಿದುಕೊಳ್ಳುವುದು ಅಗತ್ಯ. ಇದು ನನಗಿರುವ ದೊಡ್ಡ ಸವಾಲು. ಆದರೆ ಯಕ್ಷಗುರು ರಮೇಶ್ ಭಟ್ ಅವರ ಮಾರ್ಗದರ್ಶನದಲ್ಲಿ ಎಲ್ಲವನ್ನೂ ಕಲಿಯಲು ಪ್ರಯತ್ನಿಸುತ್ತಿದ್ದೇನೆ” ಎಂದು ಅರ್ಷಿಯಾ ತಿಳಿಸಿದ್ದಾರೆ.

ತಮ್ಮ ಯಕ್ಷಗಾನ ಆಸಕ್ತಿಗೆ ಕುಟುಂಬದವರ ಸಂಪೂರ್ಣ ಸಹಕಾರವಿದೆ. ಸಾರ್ವಜನಿಕರಿಂದಲೂ ಸಾಕಷ್ಟು ಬೆಂಬಲ ದೊರೆತಿದೆ. ಕೆಲವರು ಟೀಕಿಸಿದರೂ ಅದನ್ನೂ ಮುಕ್ತ ಮನಸ್ಸಿನಿಂದ ಸ್ವೀಕರಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಪದವೀಧರೆಯಾಗಿರುವ ಅರ್ಷಿಯಾ ಖಾನ್ ಅವರು ಪ್ರಸ್ತುತ ಮಾಧ್ಯಮ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದಾರೆ.

Ad Widget
Continue Reading

ರಾಜ್ಯ

Temperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!

Published

on



Ad Widget

Ad Widget

Ad Widget

Ad Widget

ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.

Ad Widget

Ad Widget

Ad Widget alt="Ad Widget"/>

Ad Widget

ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗಿನ ಹಿಂಗಾರು ಅವಧಿಯಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಈ ಅವಧಿಯ ವಾಡಿಕೆ ಸರಾಸರಿ ಮಳೆ 182.2 ಮಿ.ಮೀ. ಆಗಿದ್ದು, ದಕ್ಷಿಣ ಒಳನಾಡಿನಲ್ಲಿ 201.9 ಮಿ.ಮೀ. ವಾಡಿಕೆ ಮಳೆಯಿದೆ. ಆದರೆ ಈ ಬಾರಿ ಈ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget

Ad Widget <> Ad Widget

ಮಳೆ ಕೊರತೆಯ ಮುನ್ಸೂಚನೆಯು ಕೃಷಿ ಹಾಗೂ ಜಲಾಶಯಗಳ ನೀರಿನ ನಿರ್ವಹಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ನೀರಿನ ಮಿತವ್ಯಯ ಹಾಗೂ ಪರ್ಯಾಯ ಬೆಳೆ ಯೋಜನೆಗಳತ್ತ ಗಮನಹರಿಸುವ ಅಗತ್ಯವಿದೆ.



Ad Widget

ಮಳೆ ಕೊರತೆಗೆ ಕಾರಣವೇನು?
ಎಲ್ ನಿನೋ ಪ್ರಭಾವ: ಸಮಭಾಜಕ ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನಿನೋ ಪರಿಸ್ಥಿತಿ ಮುಂದುವರಿದಿದ್ದು, ಸಮುದ್ರದ ಮೇಲ್ಮೈ ತಾಪಮಾನ ವಾಡಿಕೆಗಿಂತ ಹೆಚ್ಚಾಗಿದೆ. ಈ ಪರಿಸ್ಥಿತಿ ವರ್ಷಾಂತ್ಯದವರೆಗೂ ಮುಂದುವರಿಯುವ ಸಾಧ್ಯತೆಯಿದ್ದು, ಹಿಂಗಾರು ಮಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ತಟಸ್ಥ ಐಒಡಿ: ಹಿಂದೂ ಮಹಾಸಾಗರದಲ್ಲಿನ ಇಂಡಿಯನ್ ಓಷನ್ ಡೈಪೋಲ್ (IOD) ಸದ್ಯ ತಟಸ್ಥ ಸ್ಥಿತಿಯಲ್ಲಿದ್ದು, ಹಿಂಗಾರು ಅವಧಿಯಲ್ಲೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.

Ad Widget

Ad Widget

ದಕ್ಷಿಣ ಭಾರತದಲ್ಲಿ ಹೇಗಿರಲಿದೆ ಮಳೆ?
ತಮಿಳುನಾಡು, ಪುದುಚೇರಿ-ಕಾರೈಕಲ್, ಕರಾವಳಿ ಆಂಧ್ರಪ್ರದೇಶ-ಯಾನಾಂ, ರಾಯಲಸೀಮೆ, ಕೇರಳ-ಮಾಹೆ ಸೇರಿದಂತೆ ದಕ್ಷಿಣ ಭಾರತದ ಕೆಲವು ಹವಾಮಾನ ಉಪವಿಭಾಗಗಳಲ್ಲಿ ಹಿಂಗಾರು ಮಳೆ ಸಾಮಾನ್ಯ ಅಥವಾ ವಾಡಿಕೆಯಷ್ಟಿರುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ ಮಳೆ ವಾಡಿಕೆಯಷ್ಟಿರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ತಿಳಿಸಿದೆ.

ದೇಶದ ಮಟ್ಟದಲ್ಲಿ ಅಕ್ಟೋಬರ್‌ನಲ್ಲಿ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಆದರೆ ವಾಯವ್ಯ ಭಾರತದ ಕೆಲವು ಭಾಗಗಳು, ದಕ್ಷಿಣ ಪರ್ಯಾಯ ದ್ವೀಪ ಹಾಗೂ ಪೂರ್ವ ಭಾರತದ ಕೆಲವೆಡೆ ವಾಡಿಕೆ ಅಥವಾ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ಮಳೆಯಷ್ಟೇ ಅಲ್ಲ, ತಾಪಮಾನವೂ ಏರಿಕೆ
ಹಿಂಗಾರು ಮಳೆಯ ಕೊರತೆಯೊಂದಿಗೆ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆ ಇದೆ.

ಈಶಾನ್ಯ ಮತ್ತು ವಾಯವ್ಯ ಭಾರತದ ಕೆಲವು ಭಾಗಗಳನ್ನು ಹೊರತುಪಡಿಸಿ, ದೇಶದ ಬಹುತೇಕ ಕಡೆ ಹಗಲಿನ ಗರಿಷ್ಠ ತಾಪಮಾನ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದೆ. ಇದೇ ರೀತಿ ಈಶಾನ್ಯ ಭಾರತ ಹೊರತುಪಡಿಸಿ ಬಹುತೇಕ ಪ್ರದೇಶಗಳಲ್ಲಿ ರಾತ್ರಿಯ ಕನಿಷ್ಠ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದ್ದು, ಸೆಕೆ ಮುಂದುವರಿಯುವ ಮುನ್ಸೂಚನೆ ಇದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading