ನಿಧನ ವಾರ್ತೆ
Suicide-ಪತ್ನಿಯ ಕೊಂದು ಆತ್ಮಹ#ತ್ಯೆ ಮಾಡಿಕೊಂಡ ಬೆಳ್ತಂಗಡಿಯ ಯುವಕ – 3 ವರ್ಷಗಳ ಹಿಂದೆ ಪ್ರಿತೀಸಿ ಮದುವೆಯಾಗಿದ್ದ ಜೋಡಿ; ವಾಯ್ಸ್ ಮೆಸೇಜ್ನಲ್ಲಿ ಸ್ಫೋಟಕ ಕಾರಣ ಬಹಿರಂಗ!
ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಸುಂದರ ಬದುಕಿನ ಕನಸು ಕಂಡಿದ್ದ ಇಂಜಿನಿಯರ್ ಜೋಡಿಯ ಕಥೆ ಈಗ ಸ್ಮಶಾನ ಮೌನಕ್ಕೆ ಶರಣಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿಯನ್ನು ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ನಗರದ ಹೆಗ್ಗನಹಳ್ಳಿಯ ರಾಜೇಶ್ವರಿ ನಗರದಲ್ಲಿ ಶುಕ್ರವಾರ ನಡೆದಿದೆ.
ಬೆಂಗಳೂರು: ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಸುಂದರ ಬದುಕಿನ ಕನಸು ಕಂಡಿದ್ದ ಇಂಜಿನಿಯರ್ ಜೋಡಿಯ ಕಥೆ ಈಗ ಸ್ಮಶಾನ ಮೌನಕ್ಕೆ ಶರಣಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿಯನ್ನು ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ನಗರದ ಹೆಗ್ಗನಹಳ್ಳಿಯ ರಾಜೇಶ್ವರಿ ನಗರದಲ್ಲಿ ಶುಕ್ರವಾರ ನಡೆದಿದೆ.
ಮೃತರ ವಿವರ:
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಎಳನೀರು ಗ್ರಾಮದ ನಿವಾಸಿ ಸುಮಂತ್ ಜೈನ್ (32) ಹಾಗೂ ಹುಬ್ಬಳ್ಳಿ ಮೂಲದ ಪದ್ಮಾವತಿ (29) ಮೃತಪಟ್ಟ ದಂಪತಿ. ಸುಮಂತ್ ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರೆ, ಪದ್ಮಾವತಿ ಅವರು ವೈಟ್ಫೀಲ್ಡ್ನ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದರು.
ಜಗಳಕ್ಕೆ ಕಾರಣವಾದ ‘ಮನೆ’:
ಪರಸ್ಪರ ಪ್ರೀತಿಸಿ ವಿವಾಹವಾಗಿದ್ದ ಈ ದಂಪತಿ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಲಗ್ಗೆರೆ ರಾಜೇಶ್ವರಿ ನಗರದ ಮನೆಗೆ ಶಿಫ್ಟ್ ಆಗಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಇವರ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಶುಕ್ರವಾರ ರಾತ್ರಿಯೂ ದಂಪತಿ ನಡುವೆ ವಾಗ್ವಾದ ನಡೆದಿದ್ದು, ಅದು ವಿಕೋಪಕ್ಕೆ ತಿರುಗಿದೆ. ಈ ವೇಳೆ ಸುಮಂತ್ ತನ್ನ ಪತ್ನಿ ಪದ್ಮಾವತಿಯನ್ನು ಕೊಲೆ ಮಾಡಿದ್ದಾನೆ. ಆ ಬಳಿಕ ತಾನೂ ನೇಣಿಗೆ ಶರಣಾಗಿದ್ದಾನೆ.
ತಾಯಿಗೆ ಕಳುಹಿಸಿದ ಕೊನೆಯ ವಾಯ್ಸ್ ಮೆಸೇಜ್:
ಆತ್ಮಹತ್ಯೆಗೂ ಮುನ್ನ ಸುಮಂತ್ ತನ್ನ ತಾಯಿಗೆ ವಾಟ್ಸಾಪ್ನಲ್ಲಿ ವಾಯ್ಸ್ ಮೆಸೇಜ್ ಕಳುಹಿಸಿದ್ದು, ಅದರಲ್ಲಿ ಸಾವಿಗೆ ಕಾರಣ ಬಿಚ್ಚಿಟ್ಟಿದ್ದಾನೆ. “ಅಮ್ಮಾ, ನಾನು ಸಾಯುತ್ತಿದ್ದೇನೆ. ಈ ಮನೆ ನನ್ನದು, ನನ್ನದು ಎಂದು ಅವಳು (ಪತ್ನಿ) ಯಾವಾಗಲೂ ಜಗಳವಾಡುತ್ತಿದ್ದಾಳೆ. ಆ ಕಾರಣಕ್ಕೆ ನಾನು ಈ ನಿರ್ಧಾರ ಕೈಗೊಳ್ಳುತ್ತಿದ್ದೇನೆ. ನನ್ನ ಪಿಎಫ್ ಹಣ ಹಾಗೂ ಮನೆಯಲ್ಲಿರುವ ವಸ್ತುಗಳನ್ನು ನೀವೇ ಬಂದು ತೆಗೆದುಕೊಂಡು ಹೋಗಿ” ಎಂದು ಸುಮಂತ್ ನೋವಿನಿಂದ ನುಡಿದಿದ್ದಾನೆ.
ನಿಧನ ವಾರ್ತೆ
Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!
ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್ನ ಫುಟ್ಬೋರ್ಡ್ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.
ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.
ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.
ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Puttur-ಪುತ್ತೂರು: ಬೈಕ್ ಡಿಕ್ಕಿಯಾಗಿ ಹರಿಪ್ರಸಾದ್ ಹೋಟೆಲ್ ಸಪ್ಲೈಯರ್ ಸಾವು
ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಇವರು ಪುತ್ತೂರಿನ ಹರಿಪ್ರಸಾದ್ ಹೋಟೆಲ್ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದರು.
ನ.16ರಂದು ರಾತ್ರಿ ಹೋಟೆಲ್ ಕೆಲಸ ಮುಗಿಸಿ ಹೊರಬಂದ ಚಂದ್ರಶೇಖರ ಅವರು ಹೋಟೆಲ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
-
ಬಿಗ್ ನ್ಯೂಸ್23 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಶಿಕ್ಷಣ8 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ7 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಚಿನ್ನ-ಬೆಳ್ಳಿ ದರ6 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ7 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಸಿನೆಮಾ6 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ6 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಆರೋಗ್ಯ6 hours agoBantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ















