ಘಟನೆಗೆ ಸಂಬಂಧಿಸಿದಂತೆ ತುಮಕೂರು […]" /> ಘಟನೆಗೆ ಸಂಬಂಧಿಸಿದಂತೆ ತುಮಕೂರು […]"> FIR-ಕರ್ತವ್ಯ ನಿರತ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ; ಬಿಜೆಪಿ ಶಾಸಕ ಸುರೇಶ್ ಗೌಡ ಪುತ್ರಿ ವಿರುದ್ಧ ಎಫ್‌ಐಆರ್ - Nikhara News | Kannada News Website
Connect with us

ಸ್ಥಳೀಯ

FIR-ಕರ್ತವ್ಯ ನಿರತ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ; ಬಿಜೆಪಿ ಶಾಸಕ ಸುರೇಶ್ ಗೌಡ ಪುತ್ರಿ ವಿರುದ್ಧ ಎಫ್‌ಐಆರ್

Published

on

Ad Widget

Ad Widget

Ad Widget

Ad Widget

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಆರತಿ ಉಕ್ಕಡದ ಮಾರಮ್ಮನ ದೇವಸ್ಥಾನದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಬಿಜೆಪಿ ಶಾಸಕರೊಬ್ಬರ ಪುತ್ರಿ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

Ad Widget

Ad Widget

Ad Widget

Ad Widget

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಆರತಿ ಉಕ್ಕಡದ ಮಾರಮ್ಮನ ದೇವಸ್ಥಾನದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಬಿಜೆಪಿ ಶಾಸಕರೊಬ್ಬರ ಪುತ್ರಿ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

Ad Widget

Ad Widget alt="Ad Widget"/>

Ad Widget

ಘಟನೆಗೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಸುರೇಶ್‌ಗೌಡ ಅವರ ಪುತ್ರಿ ಹಾಗೂ ಡಿವೈಎಸ್‌ಪಿ ಗೌತಮ್ ಅವರ ಪತ್ನಿಯೂ ಆಗಿರುವ ಐಶ್ವರ್ಯ ವಿರುದ್ಧ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಐಶ್ವರ್ಯ ಅವರ ವಿರುದ್ಧ ಬಿಎನ್‌ಎಸ್ ಸೆಕ್ಷನ್ 132, 115(2), 352 ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Ad Widget

Ad Widget <> Ad Widget

ಘಟನೆಯ ಹಿನ್ನೆಲೆ:
ಆಗಸ್ಟ್ 12ರಂದು ಭೀಮನ ಅಮಾವಾಸ್ಯೆ ನಿಮಿತ್ತ ಆರತಿ ಉಕ್ಕಡ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ದೇವಸ್ಥಾನದ ಭದ್ರತಾ ಉಸ್ತುವಾರಿಗಾಗಿ ಮಂಡ್ಯ ಮಹಿಳಾ ಪೊಲೀಸ್ ಠಾಣೆಯ ಪಿಎಸ್‌ಐ ಸವಿತಾ ಬಿ. ಪಾಟೀಲ್ ಅವರನ್ನು ನಿಯೋಜಿಸಲಾಗಿತ್ತು. ದೂರಿನ ಪ್ರಕಾರ, ಸಂಜೆ 4:30ರ ಸುಮಾರಿಗೆ ಐಶ್ವರ್ಯ ಅವರು ನಿಯಮಗಳನ್ನು ಮೀರಿ ದೇವಸ್ಥಾನದ ಗರ್ಭಗುಡಿ ಪ್ರವೇಶಿಸಲು ಪ್ರಯತ್ನಿಸಿದ್ದರು.

ಈ ವೇಳೆ ಕರ್ತವ್ಯನಿರತ ಪಿಎಸ್‌ಐ ಸವಿತಾ ಅವರು ಅವರನ್ನು ತಡೆದಾಗ ಆಕ್ರೋಶಗೊಂಡ ಐಶ್ವರ್ಯ, ಅಧಿಕಾರಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಕಪಾಳಮೋಕ್ಷ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

Ad Widget

Ad Widget

ಸಾರ್ವಜನಿಕವಾಗಿ ಕ್ಷಮೆ ಕೇಳಿದ ಶಾಸಕ:
ಈ ಪ್ರಕರಣದ ಕುರಿತು ಶುಕ್ರವಾರ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಶಾಸಕ ಸುರೇಶ್ ಗೌಡ ಅವರು ಮಗಳ ಪರವಾಗಿ ವಿಷಾದ ವ್ಯಕ್ತಪಡಿಸಿದ್ದಾರೆ. “ಭೀಮನ ಅಮಾವಾಸ್ಯೆ ದಿನ ನನ್ನ ಮಗಳು ಇಬ್ಬರು ಸಣ್ಣ ಮಕ್ಕಳೊಂದಿಗೆ ದೇವಸ್ಥಾನಕ್ಕೆ ಹೋಗಿದ್ದಳು. ಅಲ್ಲಿ ಅಧಿಕಾರಿಗಳೊಂದಿಗೆ ಮಾತಿಗೆ ಮಾತು ಬೆಳೆದು ಏನಾಯಿತು ಎಂಬುದು ಪೂರ್ಣವಾಗಿ ತಿಳಿದಿಲ್ಲ. ಆದರೂ, ನನ್ನ ಮಗಳ ಕಡೆಯಿಂದ ತಪ್ಪಾಗಿದ್ದರೆ ನಾನು ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ,” ಎಂದು ಹೇಳಿದರು.

“ಘಟನೆಯಲ್ಲಿ ಕ್ರಿಯೆ-ಪ್ರತಿಕ್ರಿಯೆ ಸಹಜ. ನನ್ನ ಮಗಳು ತಾಳ್ಮೆ ಕಳೆದುಕೊಂಡಿರಬಹುದು. ಹಿರಿಯ ಅಧಿಕಾರಿಗಳ ಜೊತೆ ಈ ಬಗ್ಗೆ ಮಾತನಾಡಿದ್ದೇನೆ,” ಎಂದು ಅವರು ತಿಳಿಸಿದರು. ಸದ್ಯ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆದ ಪ್ರಕರಣ ರಾಜ್ಯ ರಾಜಕೀಯ ಹಾಗೂ ಪೊಲೀಸ್ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

Ad Widget
Click to comment

Leave a Reply

ಕ್ರೀಡೆ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್‌ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಚೆನ್ನೈನ ವಿನಾಯಕ ಮಿಶನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.

Ad Widget

Ad Widget <> Ad Widget

ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.

Ad Widget
Continue Reading

ಸ್ಥಳೀಯ

Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು

Published

on

Ad Widget

Ad Widget

Ad Widget

Ad Widget

ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget alt="Ad Widget"/>

Ad Widget

ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

Ad Widget

Ad Widget <> Ad Widget

ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

Ad Widget

Ad Widget

ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.

ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

Ad Widget
Continue Reading

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!