ಶಿಕ್ಷಣ
Ambika-ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ವಿಶಿಷ್ಟ ಕಾರ್ಯಕ್ರಮ; ಮಾಜಿ ಸೈನಿಕರೊಂದಿಗೆ ಸಮ್ಮಿಲನ, ಭೋಜನಕೂಟ
ಶನಿವಾರ ದೇಶವೆಲ್ಲಾ ಸ್ವಾತಂತ್ರ್ಯದ ಹರ್ಷಾಚರಣೆಯಲ್ಲಿ ತೊಡಗಿದ್ದರೆ ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಕೇವಲ ಸಂಭ್ರಮಕ್ಕಷ್ಟೇ ಸೀಮತವಾಗದೆ ಒಂದು ಹೆಜ್ಜೆ ಮುಂದಿರಿಸಿ ವಿಶೇಷ ಕಾರ್ಯಕ್ರಮವೊಂದರ ಆಯೋಜನೆಯ ಮೂಲಕ ದೇಶಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿವೆ. ದೇಶದ ಸ್ವಾತಂತ್ರ್ಯವನ್ನು ರಕ್ಷಿಸಿದವರನ್ನು ಗೌರವಿಸುವ, ಆದರಿಸುವ ಮೂಲಕ ಸಮಾಜಕ್ಕೊಂದು ಸುಂದರ ಸಂದೇಶ ನೀಡಿವೆ.
ಪುತ್ತೂರು : ಶನಿವಾರ ದೇಶವೆಲ್ಲಾ ಸ್ವಾತಂತ್ರ್ಯದ ಹರ್ಷಾಚರಣೆಯಲ್ಲಿ ತೊಡಗಿದ್ದರೆ ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಕೇವಲ ಸಂಭ್ರಮಕ್ಕಷ್ಟೇ ಸೀಮತವಾಗದೆ ಒಂದು ಹೆಜ್ಜೆ ಮುಂದಿರಿಸಿ ವಿಶೇಷ ಕಾರ್ಯಕ್ರಮವೊಂದರ ಆಯೋಜನೆಯ ಮೂಲಕ ದೇಶಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿವೆ. ದೇಶದ ಸ್ವಾತಂತ್ರ್ಯವನ್ನು ರಕ್ಷಿಸಿದವರನ್ನು ಗೌರವಿಸುವ, ಆದರಿಸುವ ಮೂಲಕ ಸಮಾಜಕ್ಕೊಂದು ಸುಂದರ ಸಂದೇಶ ನೀಡಿವೆ.
ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ವಿಭಿನ್ನವಾಗಿ ಆಯೋಜಿಸುವ ಯೋಚನೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜರಿಗೆ ಮೂಡಿತು. ಪರಿಣಾಮ, ಭಾರತೀಯ ಸೇನೆ ಹಾಗೂ ಬಿಎಸ್ಎಫ್ ನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪುತ್ತೂರು ತಾಲೂಕಿನ ವೀರಯೋಧರ ಸಮ್ಮಿಲನ ಕಾರ್ಯಕ್ರಮ ರೂಪುರೇಷೆ ಪಡೆಯಿತು.

ಪುತ್ತೂರಿನಲ್ಲಿ ದಕ್ಷಿಣ ಭಾರತದ ಮೊದಲ ಖಾಸಗಿ ಅಮರ್ ಜವಾನ್ ಜ್ಯೋತಿ ಸ್ಥಾಪಿಸಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ದೇಶ, ದೇಶಭಕ್ತಿ, ಭಾರತೀಯ ಸೇನೆಯೆಡೆಗಿನ ಅಭಿಮಾನಗಳೆಲ್ಲ ನಿತ್ಯ ಭಾವವಾಗಿ ಒಡಮೂಡಿದೆ. ಹಾಗಾಗಿ ದೇಶಕ್ಕಾಗಿ ತಮ್ಮ ತಾರುಣ್ಯವನ್ನು ನೀಡಿ ನಾಗರಿಕರನ್ನು ರಕ್ಷಿಸಿದವರನ್ನು ಅವರ ಕುಟುಂಬ ವರ್ಗದೊಡನೆ ಆದರದಿಂದ ಬರಮಾಡಿಕೊಂಡು ಸಮ್ಮಿಲನ ಕಾರ್ಯಕ್ರಮ ಆಯೋಜಿಸಿ, ಪ್ರತಿಯೊಬ್ಬರಿಗೂ ಸ್ಮರಣಿಕೆ ನೀಡಿ ಗೌರವಿಸಿ, ಭೋಜನಕೂಟ ಏರ್ಪಡಿಸಿ, ಈ ಬಾರಿಯ ಸ್ವಾತಂತ್ರೋತ್ಸವವನ್ನು ಸ್ಮರಣೀಯವಾಗುವಂತೆ ಮಾಡಲಾಯಿತು.
ನಮಗಾಗಿ ನಮ್ಮ ಹೆಮ್ಮೆಯ ಸೈನಿಕರು ಬದುಕನ್ನು ಸಮರ್ಪಿಸಿದ್ದಾರೆ. ನಮ್ಮ ತ್ರಿವರ್ಣ ಧ್ವಜ ಹಾರಾಡುತ್ತಿರುವುದು ಗಾಳಿಯಿಂದಲ್ಲ, ಸೈನಿಕರ ಉಸಿರಿನಿಂದ. ಹಾಗಾಗಿ ನಾವೆಲ್ಲರೂ ಸೈನಿಕರ ಋಣದಲ್ಲಿದ್ದೇವೆ. ಆ ಋಣದಲ್ಲಿ ಕನಿಷ್ಟವನ್ನಾದರೂ ತೀರಿಸುವ ಪ್ರಯತ್ನಮಾಡಬೇಕಿದೆ. ಅದಕ್ಕಾಗಿ ನಮ್ಮ ಮಾಜಿ ಸೈನಿಕರನ್ನೆಲ್ಲಾ ಅವರ ಕುಟುಂಬ ವರ್ಗದೊಡನೆ ಆಹ್ವಾನಿಸಿ ಸಮ್ಮಿಲನ ಕಾರ್ಯಕ್ರಮನಡೆಸಿ ಭೋಜನ ಕೂಟ ಹಮ್ಮಿಕೊಳ್ಳಲಾಗಿದೆ ಎಂಬುದು ಅಂಬಿಕಾ ಸಂಸ್ಥೆಗಳ ಅಧ್ಯಕ್ಷರಾದ ಸುಬ್ರಮಣ್ಯ ನಟ್ಟೋಜರ ಮಾತು.
ಸಭಾ ಕಾರ್ಯಕ್ರಮ : ಭೋಜನಕೂಟಕ್ಕೂ ಪೂರ್ವದಲ್ಲಿ ಸಮ್ಮಿಲನದ ಅಂಗವಾಗಿ ಸಭಾ ಕಾರ್ಯಕ್ರಮ ನಡೆಯಿತು. ಪುತ್ತೂರಿನ ಮಾಜಿ ಸೈನಿಕರ ಸಂಘದ ಅಧ್ಯಕ್ಷ ವಸಂತ ಕುಮಾರ್, ಗಡಿ ಭದ್ರತಾ ಪಡೆಯ ಮಾಜಿ ಸೈನಿಕರ ಸಂಘದ ಮುಖ್ಯಸ್ಥ ಚಂದಪ್ಪ ಮೂಲ್ಯ, ಕರ್ನಲ್ ಡಿ.ಜಿ.ಭಟ್ ಅನಿಸಿಕೆ ವ್ಯಕ್ತ ಪಡಿಸಿದರು.

ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಆಡಳಿತ ಮಂಡಳಿ ಸದಸ್ಯರಾದ, ವಿಶ್ರಾಂತ ಪ್ರಾಚಾರ್ಯ ಡಾ.ಎಚ್.ಮಾಧವ ಭಟ್, ಬಾಲಕೃಷ್ಣ ಬೋರ್ಕರ್,
ನೂರಾರು ಮಂದಿ ಮಾಜಿ ಯೋಧರು ಹಾಗೂ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾದರು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾಜಿ ಸೈನಿಕರೆಲ್ಲರನ್ನೂ ಸ್ವಾಗತಿಸಿದರು. ಉಪನ್ಯಾಸಕ ಸತೀಶ್ ಇರ್ದೆ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
ಶಿಕ್ಷಣ
Narendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.
ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.
ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ಮಾತನಾಡಿದರು.
ಪುತ್ತೂರು,ಅ.1: ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಸರ್ಟಿಫಿಕೇಟ್ ಮಾತ್ರವಲ್ಲ, ಉಜ್ವಲ ಭವಿಷ್ಯ, ಒಳ್ಳೆಯ ವೇತನ ಹಾಗೂ ಹೆಸರು ಇತ್ಯಾದಿಗಳೆಲ್ಲವೂ ಲಭಿಸಲಿದೆ. ಇಂದಿನ ಕಾಲದಲ್ಲಿ ಕಲಿಕೆಗೆ ಬೇಕಾದ ಅನೇಕ ಸಂಪನ್ಮೂಲಗಳು ಲಭ್ಯವಿರುವಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪೂರ್ವಸಿದ್ಧತೆ ಎಂಬುದು ನಾವು ಉತ್ತೀರ್ಣರಾಗಲು ಅತ್ಯಗತ್ಯ. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಸಕ್ರಿಯರಾಗಿ ಅಧ್ಯಯನ ನಡೆಸಿ ಎಲ್ಲಾ ರೀತಿಯಿಂದಲೂ ಸಿದ್ಧರಾಗಿ ಪರೀಕ್ಷೆಯನ್ನು ಜಯಿಸಬೇಕು ಎಂದು ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ತಿಳಿಸಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ ಅಧ್ಯಾಪಕ ವೃತ್ತಿಯನ್ನು ಬಯಸಿ ಹೋಗುವವರಿಗೆ, ಸಂಶೋಧನಾ ಕ್ಷೇತ್ರವನ್ನು ಆರಿಸುವವರಿಗೆ ನೆಟ್ ಹಾಗೂ ಕೆ-ಸೆಟ್ ಪರೀಕ್ಷೆಗಳನ್ನು ಪೂರ್ಣಗೊಳಿಸುವುದು ಅಗತ್ಯ. ಪರೀಕ್ಷೆಗೆ ಸಿದ್ಧರಾಗಲು ನಿರಂತರವಾಗಿ ಓದಿನಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಇವುಗಳ ಪಠ್ಯಕ್ರಮಗಳನ್ನು ಅಭ್ಯಾಸಿಸಿ ಪರಿಣತರಿಂದ ಮಾರ್ಗದರ್ಶನವನ್ನು ಪಡೆದು ಯಶಸ್ಸು ಗಳಿಸಬೇಕಿದೆ ಎಂದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ.ಬಿ ಸ್ವಾಗತಿಸಿ ಪ್ರಥಮ ಎಂಕಾಂ ವಿದ್ಯಾರ್ಥಿ ಧನರಾಜ್ ವಂದಿಸಿದರು. ಪ್ರಥಮ ಎಂಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಯು.ಕೆ ನಿರೂಪಿಸಿದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಯಿದೆ ದೇವುಸ್ ಚರ್ಚ್ ಸಹಾಯಕ ಧರ್ಮಗುರು
ಫಾ. ಮರ್ವಿನ್ ಲೋಬೊ ಮಾತನಾಡಿ, ಗಾಂಧೀಜಿಯವರ ಜೀವನ ನಮಗೆ ದಾರಿದೀಪವಾಗಿದ್ದು, ಪ್ರತಿಯೊಬ್ಬರು ಅವರು ತೋರಿಸಿಕೊಟ್ಟ ಹಾದಿಯಲ್ಲಿ ಮುನ್ನಡೆಯಬೇಕು.
ಮುಖ್ಯವಾಗಿ ಸತ್ಯ ಮತ್ತು ಅಹಿಂಸೆ ಗಾಂಧೀಜಿಯವರು ತೋರಿಸಿದ ಎರಡು ಮಾರ್ಗಗಳು. ಇಂದು ಅಹಿಂಸೆ ಕೇವಲ ಭೌತಿಕವಾಗಿ ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಗಳಲ್ಲಿ ಕೂಡ ಪಾಲನೆಯನ್ನು ಮಾಡಬೇಕಾಗಿದೆ. ಗಾಂಧೀಜಿಯ ಮರಣದ 78 ವರ್ಷಗಳ ನಂತರವೂ ಗಾಂಧೀಜಿಯವರ ಜೀವನ ಅತ್ಯಂತ ಪ್ರಸ್ತುತವಾಗಿದೆ ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಮಹಾತ್ಮಾ ಗಾಂದೀಜಿಯವರ ಸರಳ ಜೀವನ ನಮಗೆ ಪಾಠವಾಗಬೇಕು. ಅವರಿಗೆ ಅತ್ಯಂತ ವಿಲಾಸಿ ಜೀವನವನ್ನು ನಡೆಸುವ ಅವಕಾಶ ಇದ್ದರೂ, ಕೂಡ ಭಾರತೀಯರಿಗಾಗಿ ಅವರು ಸರಳ ಮತ್ತು ನ್ಯಾಯ ಸಮ್ಮತ ಜೀವನವನ್ನು ಆಯ್ಕೆ ಮಾಡಿಕೊಂಡರು.

ಸತ್ಯದೊಂದಿಗಿನ ನನ್ನ ಪ್ರಯೋಗಗಳು ಎನ್ನುವ ಪುಸ್ತಕದಲ್ಲಿ ಅವರು ಅವರ ಜೀವನದಲ್ಲಿ ನಡೆದಂತಹ ಘಟನೆಗಳನ್ನು ವಿವರಿಸಿದ್ದು, ಇಂದಿನ ಯುವಕರು ಕಡ್ಡಾಯವಾಗಿ ಈ ಪುಸ್ತಕವನ್ನು ಓದಬೇಕೆಂದು ತಿಳಿಸಿದರು.
ಉಪನ್ಯಾಸಕರಾದ ಭರತ್ ಕುಮಾರ್ ಗಾಂಧೀಜಿಯವರ ತತ್ವ, ಸಿದ್ಧಾಂತಗಳ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಉಪನ್ಯಾಸಕರಾದ ಯಶವಂತ್ ಎಂ ಡಿ ಹಾಗೂ ಗೋವಿಂದ್ ಪ್ರಕಾಶ್ ಸಿ. ಏಚ್ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾಲೇಜಿನ ಬೋಧಕ/ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕರಾದ ಸುಮಾ ಡಿ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.
-
ಪುತ್ತೂರು19 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್23 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು22 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್21 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ22 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ಅಪರಾಧ21 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ22 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
-
ಶಿಕ್ಷಣ22 hours agoVivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ


















