ಶಿಕ್ಷಣ
Puttur:-ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮ
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ಹಾಗೂ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ಪುತ್ತೂರು : ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ಹಾಗೂ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ ಫಾ ಅಶೋಕ್ ರಾಯನ್ ಕ್ರಾಸ್ತಾರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯದ ನಂತರ ನಮ್ಮ ದೇಶದಲ್ಲಿ ವಿವಿಧ ಅಭಿವೃದ್ಧಿಗಳನ್ನು ನಾವು ಕಾಣಬಹುದು. ಶಿಕ್ಷಣದ ಮಟ್ಟದಲ್ಲೂ ಅಭಿವೃದ್ಧಿಯನ್ನು ನಾವು ಕಾಣಬಹುದು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆಯಲು ಸಾಕ್ಷರತೆಯು ಹೆಚ್ಚುತ್ತಿದೆ. ನಮ್ಮಿಂದಲೇ ಪ್ರಾರಂಭಿಸೋಣ, ನಮ್ಮ ಸಮಾಜದಲ್ಲಿ ಏನೇನು ಮಾಡಬೇಕು ಮತ್ತು ಉತ್ತಮ ರಾಷ್ಟ್ರವನ್ನು ಹೇಗೆ ನಿರ್ಮಿಸಬೇಕು ಎಂಬುದನ್ನು ನೋಡೋಣ ಎಂದು ಹೇಳಿದರು.

ಉಪ ಪ್ರಾಂಶುಪಾಲರಾದ ಡಾ ವಿಜಯ್ ಕುಮಾರ್ ಎಂ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಸಂದೇಶವನ್ನು ನೀಡಿ, ಯಂತ್ರಗಳು ಮನುಷ್ಯರಿಗಿಂತ ಅತ್ಯಂತ ವೇಗವಾಗಿ ಯೋಚಿಸಬಲ್ಲವು, ಬರೆಯಬಲ್ಲವು ಆದರೆ ನೆನಪಿಡಿ ಯಂತ್ರಗಳಿಗೆ ಬುದ್ಧಿವಂತಿಕೆ ಇರಬಹುದು ಆದರೆ ವಿವೇಕ ಇರುವುದಿಲ್ಲ, ದೇಶವನ್ನು ಕಟ್ಟಲು ಡಿಗ್ರಿ ಸರ್ಟಿಫಿಕೇಟ್ ಬಳಿಸಿದರೆ ಸಾಲದು ಪುಸ್ತಕದಂತಹ ದೈಹಿಕ ಮತ್ತು ಮಾನಸಿಕ ಶಕ್ತಿ ಬೇಕು. ದೈನಂದಿನ ಜೀವನದಲ್ಲಿ ಕ್ರೀಡೆ, ಯೋಗ, ವ್ಯಾಯಾಮ ಹಾಗೂ ಸಕರಾತ್ಮಕ ಚಿಂತನೆಗಳನ್ನು ಅಳವಡಿಸಿಕೊಳ್ಳಿ, ಸೋಲುಗಳಿಗೆ ಹೆದರಬೇಡಿ ಎಂದು ಹೇಳಿದರು .
ಸಂತ ಫಿಲೋಮಿನಾ ಪದವಿ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ವಂ ಫಾ ಡಾ ಆಂಟೋನಿ ಪ್ರಕಾಶ್ ಮೊಂತೆರೊ ಮಾತನಾಡಿ, ದೈವಿಕ ಕೃಪೆ, ಪವಿತ್ರತೆ ಮತ್ತು ಸಮೃದ್ಧಿ ಈ ಮೂರು ಪದಗಳನ್ನು ನಾವು ಯಾವಾಗಲು ನೆನಪಿನಲ್ಲಿಡಬೇಕು . ನಾವೆಲ್ಲರೂ ಪವಿತ್ರವಾಗಿರುವ ಮೂಲಕ ಮತ್ತು ಸಮೃದ್ಧಿಯನ್ನು ಹೊಂದುವ ಮೂಲಕ ದೇವರ ಕೃಪೆಯನ್ನು ಅರಿತು, ನಮ್ಮ ದೇಶವನ್ನು ಅಭಿವೃದ್ಧಿಪಡಿಸೋಣ ಎಂದು ಹಾರೈಸಿದರು.
ಫಾದರ್ ಪತ್ರಾವೋ ಆಸ್ಪತ್ರೆಯ ಕೌಂಸೆಲ್ಲೆರ್ ಆದ ಚಂದನ್ ಸಿ. ಅಂಚನ್ ಅವರು ನಶಾ ಮುಕ್ತ ಭಾರತ ಅಭಿಯಾನದ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭವನ್ನು ನೆರವೇರಿಸಿದರು.
3/19 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ, 5 ಕರ್ನಾಟಕ ನೇವಲ್ ಎನ್‌ಸಿಸಿ ಯೂನಿಟ್, ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್), ರೋವರ್ಸ್ ಅಂಡ್ ರೇಂಜರ್ಸ್, ಯೂತ್ ರೆಡ್ ಕ್ರಾಸ್ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಮತ್ತು ಬ್ಯಾಂಡ್ ಟ್ರೂಪ್ ಭಾಗವಹಿಸಿದರು.ದಿಗಂತ್ ವಿ ಎಸ್ ಪೆರೇಡ್‌ನ ನೇತೃತ್ವ ವಹಿಸಿದರು.

ಎನ್ ಸಿ ಸಿ ಕ್ಯಾಪ್ಟನ್ ಜಾನ್ಸನ್ ಡೇವಿಡ್ ಸಿಕ್ವೆರಾ, ಸಬ್ ಲೆಫ್ಟಿನೆಂಟ್ ತೇಜಸ್ವಿ, ಐ ಕ್ಯೂ ಎ ಸಿ ಸಂಯೋಜಕರಾದ ಡಾ ಎಡ್ವಿನ್ ಎಸ್ ಡಿಸೋಜಾ,ಶೈಕ್ಷಣಿಕಾ ಕುಲಸಚಿವರಾದ ಡಾ ನೋರ್ಬಟ್ ಮಸ್ಕರೇನ್ಹಸ್, ಪರೀಕ್ಷಾಂಗ ಕುಲಸಚಿವರಾದ ಡಾ ವಿನಯಚಂದ್ರ ,ಲಲಿತ ಕಲಾ ಸಂಘದ ಸಂಚಾಲಕರಾದ ಪ್ರಶಾಂತ್ ರೈ ಹಾಗೂ ಪಿ ಆರ್ ಒ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ಲಲಿತ ಕಲಾ ಸಂಘದ ವಿದ್ಯಾರ್ಥಿಗಳು ಸ್ವಾತಂತ್ರೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ ಡಿಂಪಲ್ ಫೆರ್ನಾಂಡಿಸ್ ವಂದಿಸಿದರು. ಭೌತಶಾಸ್ತ್ರ ವಿಭಾಗದ ಪ್ರಾಧ್ಯಪಕಿ ಪೂಜಾಶ್ರೀ ವಿ ರೈ ಕಾರ್ಯಕ್ರಮವನ್ನು ನಿರೂಪಿಸಿದರು.
ಶಿಕ್ಷಣ
Narendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.
ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.
ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ಮಾತನಾಡಿದರು.
ಪುತ್ತೂರು,ಅ.1: ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಸರ್ಟಿಫಿಕೇಟ್ ಮಾತ್ರವಲ್ಲ, ಉಜ್ವಲ ಭವಿಷ್ಯ, ಒಳ್ಳೆಯ ವೇತನ ಹಾಗೂ ಹೆಸರು ಇತ್ಯಾದಿಗಳೆಲ್ಲವೂ ಲಭಿಸಲಿದೆ. ಇಂದಿನ ಕಾಲದಲ್ಲಿ ಕಲಿಕೆಗೆ ಬೇಕಾದ ಅನೇಕ ಸಂಪನ್ಮೂಲಗಳು ಲಭ್ಯವಿರುವಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪೂರ್ವಸಿದ್ಧತೆ ಎಂಬುದು ನಾವು ಉತ್ತೀರ್ಣರಾಗಲು ಅತ್ಯಗತ್ಯ. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಸಕ್ರಿಯರಾಗಿ ಅಧ್ಯಯನ ನಡೆಸಿ ಎಲ್ಲಾ ರೀತಿಯಿಂದಲೂ ಸಿದ್ಧರಾಗಿ ಪರೀಕ್ಷೆಯನ್ನು ಜಯಿಸಬೇಕು ಎಂದು ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ತಿಳಿಸಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ ಅಧ್ಯಾಪಕ ವೃತ್ತಿಯನ್ನು ಬಯಸಿ ಹೋಗುವವರಿಗೆ, ಸಂಶೋಧನಾ ಕ್ಷೇತ್ರವನ್ನು ಆರಿಸುವವರಿಗೆ ನೆಟ್ ಹಾಗೂ ಕೆ-ಸೆಟ್ ಪರೀಕ್ಷೆಗಳನ್ನು ಪೂರ್ಣಗೊಳಿಸುವುದು ಅಗತ್ಯ. ಪರೀಕ್ಷೆಗೆ ಸಿದ್ಧರಾಗಲು ನಿರಂತರವಾಗಿ ಓದಿನಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಇವುಗಳ ಪಠ್ಯಕ್ರಮಗಳನ್ನು ಅಭ್ಯಾಸಿಸಿ ಪರಿಣತರಿಂದ ಮಾರ್ಗದರ್ಶನವನ್ನು ಪಡೆದು ಯಶಸ್ಸು ಗಳಿಸಬೇಕಿದೆ ಎಂದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ.ಬಿ ಸ್ವಾಗತಿಸಿ ಪ್ರಥಮ ಎಂಕಾಂ ವಿದ್ಯಾರ್ಥಿ ಧನರಾಜ್ ವಂದಿಸಿದರು. ಪ್ರಥಮ ಎಂಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಯು.ಕೆ ನಿರೂಪಿಸಿದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಯಿದೆ ದೇವುಸ್ ಚರ್ಚ್ ಸಹಾಯಕ ಧರ್ಮಗುರು
ಫಾ. ಮರ್ವಿನ್ ಲೋಬೊ ಮಾತನಾಡಿ, ಗಾಂಧೀಜಿಯವರ ಜೀವನ ನಮಗೆ ದಾರಿದೀಪವಾಗಿದ್ದು, ಪ್ರತಿಯೊಬ್ಬರು ಅವರು ತೋರಿಸಿಕೊಟ್ಟ ಹಾದಿಯಲ್ಲಿ ಮುನ್ನಡೆಯಬೇಕು.
ಮುಖ್ಯವಾಗಿ ಸತ್ಯ ಮತ್ತು ಅಹಿಂಸೆ ಗಾಂಧೀಜಿಯವರು ತೋರಿಸಿದ ಎರಡು ಮಾರ್ಗಗಳು. ಇಂದು ಅಹಿಂಸೆ ಕೇವಲ ಭೌತಿಕವಾಗಿ ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಗಳಲ್ಲಿ ಕೂಡ ಪಾಲನೆಯನ್ನು ಮಾಡಬೇಕಾಗಿದೆ. ಗಾಂಧೀಜಿಯ ಮರಣದ 78 ವರ್ಷಗಳ ನಂತರವೂ ಗಾಂಧೀಜಿಯವರ ಜೀವನ ಅತ್ಯಂತ ಪ್ರಸ್ತುತವಾಗಿದೆ ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಮಹಾತ್ಮಾ ಗಾಂದೀಜಿಯವರ ಸರಳ ಜೀವನ ನಮಗೆ ಪಾಠವಾಗಬೇಕು. ಅವರಿಗೆ ಅತ್ಯಂತ ವಿಲಾಸಿ ಜೀವನವನ್ನು ನಡೆಸುವ ಅವಕಾಶ ಇದ್ದರೂ, ಕೂಡ ಭಾರತೀಯರಿಗಾಗಿ ಅವರು ಸರಳ ಮತ್ತು ನ್ಯಾಯ ಸಮ್ಮತ ಜೀವನವನ್ನು ಆಯ್ಕೆ ಮಾಡಿಕೊಂಡರು.

ಸತ್ಯದೊಂದಿಗಿನ ನನ್ನ ಪ್ರಯೋಗಗಳು ಎನ್ನುವ ಪುಸ್ತಕದಲ್ಲಿ ಅವರು ಅವರ ಜೀವನದಲ್ಲಿ ನಡೆದಂತಹ ಘಟನೆಗಳನ್ನು ವಿವರಿಸಿದ್ದು, ಇಂದಿನ ಯುವಕರು ಕಡ್ಡಾಯವಾಗಿ ಈ ಪುಸ್ತಕವನ್ನು ಓದಬೇಕೆಂದು ತಿಳಿಸಿದರು.
ಉಪನ್ಯಾಸಕರಾದ ಭರತ್ ಕುಮಾರ್ ಗಾಂಧೀಜಿಯವರ ತತ್ವ, ಸಿದ್ಧಾಂತಗಳ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಉಪನ್ಯಾಸಕರಾದ ಯಶವಂತ್ ಎಂ ಡಿ ಹಾಗೂ ಗೋವಿಂದ್ ಪ್ರಕಾಶ್ ಸಿ. ಏಚ್ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾಲೇಜಿನ ಬೋಧಕ/ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕರಾದ ಸುಮಾ ಡಿ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.


















