ನಿಧನ ವಾರ್ತೆ
Electrician-ಬಂಟ್ವಾಳ: ವಿದ್ಯುತ್ ಟ್ರಾನ್ಸ್‌ಫಾರ್ಮರ್ ಬಳಿ ಎಲೆಕ್ಟ್ರಿಷಿಯನ್ ಶವ ಪತ್ತೆ – ರಾತ್ರಿ ಮಲಗಿದ್ದ ವ್ಯಕ್ತಿ ಬೆಳಿಗ್ಗೆ ಎದ್ದು ನೋಡಿದಾಗ ಮನೆಯಲ್ಲಿರಲಿಲ್ಲ ! ಕೇಸ್ ದಾಖಲು
ಬಂಟ್ವಾಳ: ತಾಲೂಕಿನ ಕರಿಯಂಗಳ ಗ್ರಾಮದ ತಂತ್ರಿಬೆಟ್ಟು ಎಂಬಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಬಳಿ ಆ.17ರಂದು ಬೆಳಗ್ಗೆ ಯುವಕನೊಬ್ಬನ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು ತಂತ್ರಿಬೆಟ್ಟು ನಿವಾಸಿ, ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಆಗಿದ್ದ ಹರೀಶ್ ಟಿ. (38) ಎಂದು ಗುರುತಿಸಲಾಗಿದೆ.
ಬಂಟ್ವಾಳ: ತಾಲೂಕಿನ ಕರಿಯಂಗಳ ಗ್ರಾಮದ ತಂತ್ರಿಬೆಟ್ಟು ಎಂಬಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಬಳಿ ಆ.17ರಂದು ಬೆಳಗ್ಗೆ ಯುವಕನೊಬ್ಬನ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ಮೃತರನ್ನು ತಂತ್ರಿಬೆಟ್ಟು ನಿವಾಸಿ, ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಆಗಿದ್ದ ಹರೀಶ್ ಟಿ. (38) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಹರೀಶ್ ಅವರು ವಿದ್ಯುತ್ ಶಾಕ್‌ನಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ನಿಖರ ಕಾರಣ ತಿಳಿದುಬರಬೇಕಿದೆ.
ಘಟನೆಯ ವಿವರ:
ವೃತ್ತಿಯಿಂದ ಎಲೆಕ್ಟ್ರಿಷಿಯನ್ ಆಗಿದ್ದ ಹರೀಶ್ ಅವರು ಆ.16ರಂದು ಕೆಲಸ ಮುಗಿಸಿ ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ಮರಳಿದ್ದರು. ರಾತ್ರಿ ಊಟ ಮಾಡಿ ಮಲಗಿದ್ದ ಅವರು, ಆ.17ರಂದು ಮುಂಜಾನೆ ಮನೆಯಲ್ಲಿ ಇರಲಿಲ್ಲ. ಮನೆಯವರು ಹುಡುಕಾಡುತ್ತಿದ್ದ ಸಂದರ್ಭದಲ್ಲಿ, ಬೆಳಗ್ಗೆ 7:30ರ ಸುಮಾರಿಗೆ ಸ್ಥಳೀಯರಾದ ಪುರುಷೋತ್ತಮ ಎಂಬವರು ಮಾಹಿತಿ ನೀಡಿದ್ದಾರೆ.
ತಂತ್ರಿಬೆಟ್ಟಿನ ಟ್ರಾನ್ಸ್‌ಫಾರ್ಮರ್ ಬಳಿ ಭಾರಿ ಸದ್ದು ಕೇಳಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ, ಹರೀಶ್ ಅವರ ಮೋಟಾರ್ ಸೈಕಲ್ ಕಂಡುಬಂದಿದೆ. ಅಲ್ಲದೆ, ಹರೀಶ್ ಅವರು ಟ್ರಾನ್ಸ್‌ಫಾರ್ಮರ್ ಕೆಳಗೆ ಬಿದ್ದಿರುವುದು ಬೆಳಕಿಗೆ ಬಂದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಮನೆಯವರು ಪರೀಕ್ಷಿಸಿದಾಗ ಅವರು ಮೃತಪಟ್ಟಿರುವುದು ದೃಢಪಟ್ಟಿದೆ.
ಮುಂದುವರಿದ ತನಿಖೆ:
ಬೆಳಗ್ಗೆ 6:30 ರಿಂದ 7:30ರ ನಡುವಿನ ಅವಧಿಯಲ್ಲಿ ಹರೀಶ್ ಅವರು ಅಲ್ಲಿಗೆ ತೆರಳಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ, ನುರಿತ ಎಲೆಕ್ಟ್ರಿಷಿಯನ್ ಆಗಿದ್ದ ಅವರು ಅಷ್ಟು ಮುಂಜಾನೆ ಟ್ರಾನ್ಸ್‌ಫಾರ್ಮರ್ ಬಳಿ ಯಾಕೆ ತೆರಳಿದರು? ಎಂಬ ಪ್ರಶ್ನೆ ಸದ್ಯ ನಿಗೂಢವಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಸಹೋದರ ದಿನೇಶ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ನಿಧನ ವಾರ್ತೆ
Kadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಕಡಬ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ.
ಹೆದ್ದಾರಿಯಲ್ಲಿ ಕಾರೊಂದು ಸಂಚರಿಸುತ್ತಿದ್ದ ವೇಳೆ ಏಕಾಏಕಿ ಅಡ್ಡ ಬಂದ ಕಡವೆಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಈ ಭಾಗದಲ್ಲಿ ಕಾಡುಪ್ರಾಣಿಗಳ ಸಂಚಾರ ಸಾಮಾನ್ಯವಾಗಿರುವ ಹಿನ್ನೆಲೆಯಲ್ಲಿ ಘಟನೆ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ರಾತ್ರಿ ಹಾಗೂ ಮುಂಜಾನೆ ವೇಳೆ ಕಾಡುಪ್ರಾಣಿಗಳು ಹೆದ್ದಾರಿಗೆ ಬರುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾದ ಅಗತ್ಯವಿದೆ.
ಈ ಹಿಂದೆಯೂ ಇದೇ ಪರಿಸರದಲ್ಲಿ ಕಾಡುಪ್ರಾಣಿಗಳಿಂದ ವಾಹನ ಸವಾರರಿಗೆ ಅಪಾಯ ಉಂಟಾದ ಘಟನೆಗಳು ನಡೆದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಾಡುಪ್ರಾಣಿಗಳ ಸಂಚಾರವಿರುವ ಪ್ರದೇಶಗಳಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದರ ಜತೆಗೆ, ರಸ್ತೆ ಬದಿಯ ಪೊದೆಗಳನ್ನು ತೆರವುಗೊಳಿಸಿ ವಾಹನ ಸವಾರರಿಗೆ ದೂರದಿಂದಲೇ ಪ್ರಾಣಿಗಳು ಕಾಣುವಂತೆ ಮಾಡುವ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾಡುಪ್ರಾಣಿಗಳು ಹೆದ್ದಾರಿಗೆ ಬರುವುದರಿಂದ ಉಂಟಾಗುವ ಅಪಘಾತಗಳನ್ನು ತಡೆಯಲು ಕ್ರಮ ವಹಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.
ನಿಧನ ವಾರ್ತೆ
Kasaragod-ಕಾಸರಗೋಡು: ಬೈಕ್-ಕಾರು ಮುಖಾಮುಖಿ ಡಿಕ್ಕಿ; ಸವಾರ ಸಾವು, ಪತ್ನಿ ಗಂಭೀರ
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ.
ಕಾಸರಗೋಡು: ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರ ಪತ್ನಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಮುಹಮ್ಮದ್ ಅಶ್ರಫ್ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಮುಖಾಮುಖಿಯಾಗಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಅಶ್ರಫ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ನಿಧನ ವಾರ್ತೆ
Mangalore-ಮಂಗಳೂರು: ನ್ಯಾಯಾಧೀಶರ ಕಾರು, ಗೂಡ್ಸ್ ಆಟೋ, ಬೈಕ್ ನಡುವೆ ಸರಣಿ ಅಪಘಾತ; ಗೂಡ್ಸ್ ಆಟೋ ಚಾಲಕ ಮೃತ್ಯು
ಮಂಗಳೂರು ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ. ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.
ಮಂಗಳೂರು: ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ.
ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿನಯ್ ಡಿ. ಅವರು ಕಾರಿನಲ್ಲಿ (ಕೆಎ-05-ಎನ್‌ಕೆ-2504) ಬೆಳಗ್ಗೆ ನ್ಯಾಯಾಲಯದತ್ತ ತೆರಳುತ್ತಿದ್ದರು. ಕರಂಗಲ್ಪಾಡಿಯ ರಾಧಾ ಮೆಡಿಕಲ್ಸ್ ಎದುರಿನ ತಿರುವಿನಲ್ಲಿ ಸಾಗುತ್ತಿದ್ದಾಗ, ಗೂಡ್ಸ್ ಆಟೋ ರಿಕ್ಷಾ (ಕೆಎ-19-ಎಡಿ-4395) ನಿಯಂತ್ರಣ ತಪ್ಪಿ ನ್ಯಾಯಾಧೀಶರ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಬಳಿಕ ಗೂಡ್ಸ್ ಆಟೋ ರಿಕ್ಷಾ ಅದೇ ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ (ಕೆಎ-19-ಎಚ್‌ವೈ-1664)ಕ್ಕೂ ಢಿಕ್ಕಿ ಹೊಡೆದು ಮಗುಚಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಚಂದ್ರ ಕೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಗೂಡ್ಸ್ ಆಟೋ ರಿಕ್ಷಾ ಢಿಕ್ಕಿಯಿಂದ ದ್ವಿಚಕ್ರ ವಾಹನ ಸವಾರ ಪ್ಲೆವಿಯನ್ ಮೆರ್ವಿನ್ ಅವರಿಗೂ ಗಾಯಗಳಾಗಿವೆ. ಅಪಘಾತದಲ್ಲಿ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನ ಜಖಂಗೊಂಡಿವೆ.
ಅಪಘಾತದಲ್ಲಿ ನ್ಯಾಯಾಧೀಶ ವಿನಯ್ ಡಿ. ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ನ್ಯಾಯಾಧೀಶ ವಿನಯ್ ಡಿ. ಅವರು ನೀಡಿದ ದೂರಿನ ಆಧಾರದ ಮೇಲೆ ಕದ್ರಿ ಟ್ರಾಫಿಕ್ ಈಸ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
-
Uncategorized20 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized12 hours ago
ಚಿನ್ನಾಭರಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ
-
Uncategorized19 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ
-
ದಕ್ಷಿಣ ಕನ್ನಡ14 hours ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು
-
ಅಪರಾಧ22 minutes agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಬಿಗ್ ನ್ಯೂಸ್3 minutes agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ


















