Connect with us

ಸ್ಥಳೀಯ

Mahim Das-ಬೇಟೆಗಾರರೆಂದು ಎನ್ಕೌಂಟರ್: ಬದುಕುಳಿದ ಮಹಿಮ್ ದಾಸ್ ವಿಡಿಯೋ ಹೇಳಿಕೆ ಭಾರಿ ವೈರಲ್..!

Published

on

Ad Widget

Ad Widget

Ad Widget

Ad Widget

ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಬಹುಚರ್ಚಿತ ಶೂಟೌಟ್ ಪ್ರಕರಣಕ್ಕೆ ಈಗ ಹೊಸ ತಿರುವು ಸಿಕ್ಕಿದೆ. ಪ್ರಕರಣದ ನಾಲ್ಕನೇ ಆರೋಪಿ ಎನ್ನಲಾದ ಮಹಿಮ ದಾಸ್ ಎಂಬಾತ ಆಸ್ಪತ್ರೆಯೊಂದರಿಂದ ವಿಡಿಯೋ ಬಿಡುಗಡೆ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇದು ಭಾರಿ ವೈರಲ್ ಆಗುತ್ತಿದೆ.

Ad Widget

Ad Widget

Ad Widget

Ad Widget

ಚಾಮರಾಜನಗರ: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಬಹುಚರ್ಚಿತ ಶೂಟೌಟ್ ಪ್ರಕರಣಕ್ಕೆ ಈಗ ಹೊಸ ತಿರುವು ಸಿಕ್ಕಿದೆ. ಪ್ರಕರಣದ ನಾಲ್ಕನೇ ಆರೋಪಿ ಎನ್ನಲಾದ ಮಹಿಮ ದಾಸ್ ಎಂಬಾತ ಆಸ್ಪತ್ರೆಯೊಂದರಿಂದ ವಿಡಿಯೋ ಬಿಡುಗಡೆ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇದು ಭಾರಿ ವೈರಲ್ ಆಗುತ್ತಿದೆ.

Ad Widget

Ad Widget alt="Ad Widget"/>

Ad Widget

ವಿಡಿಯೋದಲ್ಲೇನಿದೆ?:
ವೈರಲ್ ಆಗಿರುವ ವಿಡಿಯೋದಲ್ಲಿ ಘಟನೆಯ ಬಗ್ಗೆ ವಿವರಿಸಿರುವ ಮಹಿಮ ದಾಸ್, “ಶೂಟೌಟ್ ನಡೆದ ದಿನ ಬೆಳಿಗ್ಗೆ ಸುಮಾರು 5:20ಕ್ಕೆ ನಾನು ಬೆಟ್ಟದಿಂದ ಕೆಳಗಿಳಿದು ಬರುತ್ತಿದ್ದೆ. ಆಗ ಅಲ್ಲಿಗೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಏಕಾಏಕಿ ಗುಂಡು ಹಾರಿಸಲು ಆರಂಭಿಸಿದರು. ಇದರಿಂದ ಗಾಬರಿಗೊಂಡು ಪ್ರಾಣ ಉಳಿಸಿಕೊಳ್ಳಲು ಅಲ್ಲಿಂದ ಓಡಿಹೋದೆ” ಎಂದು ಹೇಳಿಕೊಂಡಿದ್ದಾನೆ.

Ad Widget

Ad Widget <> Ad Widget

ಘಟನಾ ಸ್ಥಳದಿಂದ ತಪ್ಪಿಸಿಕೊಂಡ ಬಳಿಕ ತಾನು ಅಸ್ವಸ್ಥನಾಗಿದ್ದರಿಂದ ಮನೆಗೆ ತೆರಳಿ, ನಂತರ ಆಸ್ಪತ್ರೆಗೆ ದಾಖಲಾದೆ ಎಂದು ಆತ ತಿಳಿಸಿದ್ದಾನೆ. ಅಲ್ಲದೆ, ಅರಣ್ಯ ಇಲಾಖೆ ಸಿಬ್ಬಂದಿ ತನ್ನನ್ನು ವಿಚಾರಣೆ ನೆಪದಲ್ಲಿ ಹುಡುಕುತ್ತಿರುವುದು ಭಯ ಮೂಡಿಸಿದೆ ಎಂದು ಹೇಳಿರುವ ಮಹಿಮ ದಾಸ್, ತನಗೆ ಪೊಲೀಸ್ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾನೆ.

ಗೊಂದಲ ಮೂಡಿಸಿದ ಆಸ್ಪತ್ರೆ ವಾಸ:
ಮಹಿಮ ವಿಡಿಯೋ ರೆಕಾರ್ಡ್ ಮಾಡಿರುವ ಹಿನ್ನೆಲೆಯನ್ನು ಗಮನಿಸಿದರೆ ಆತ ಆಸ್ಪತ್ರೆಯಲ್ಲಿದ್ದಾನೆ ಎಂಬುದು ಸ್ಪಷ್ಟವಾಗುತ್ತದೆ. ಇತ್ತೀಚೆಗೆ ಸಚಿವ ಪುಟ್ಟರಂಗಶೆಟ್ಟಿ ಅವರು ಮೈಸೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದಾಗ ಮಹಿಮ ದಾಸ್ ಯಾವ ಶರ್ಟ್ ಧರಿಸಿದ್ದನೋ, ಅದೇ ಶರ್ಟ್ ವಿಡಿಯೋದಲ್ಲೂ ಕಂಡುಬಂದಿದೆ. ಆದರೆ, ಆತ ಈಗಲೂ ಅದೇ ಆಸ್ಪತ್ರೆಯಲ್ಲಿದ್ದಾನೆಯೇ ಅಥವಾ ಬೇರೆಡೆಗೆ ಸ್ಥಳಾಂತರವಾಗಿದ್ದಾನೆಯೇ ಎಂಬುದು ನಿಗೂಢವಾಗಿದೆ.

Ad Widget

Ad Widget

ಒಂದೆಡೆ ಪೊಲೀಸರು ಮತ್ತು ಅರಣ್ಯಾಧಿಕಾರಿಗಳು ಆರೋಪಿಗಾಗಿ ತಲಾಶ್ ನಡೆಸುತ್ತಿದ್ದರೆ, ಇನ್ನೊಂದೆಡೆ ಆರೋಪಿ ತಾನಿದ್ದ ಸ್ಥಳವನ್ನು ಬಹಿರಂಗಪಡಿಸದೆ ವಿಡಿಯೋ ಬಿಡುಗಡೆ ಮಾಡಿರುವುದು ತನಿಖಾ ತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ. ಸದ್ಯ ಈ ವಿಡಿಯೋ ಪ್ರಕರಣದ ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸುವ ಸಾಧ್ಯತೆಯಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!