ಮೈಸೂರು
Mysuru-ಮೈಸೂರು ದಸರಾ ಗಜಪಡೆ ಪಟ್ಟಿ ಬಿಡುಗಡೆ: ʻಕ್ಯಾಪ್ಟನ್ʼ ಅಭಿಮನ್ಯು, ಜನಮೆಚ್ಚಿದ ಭೀಮ ಔಟ್..!
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮೆರವಣಿಗೆಯ ಪ್ರಮುಖ ಆಕರ್ಷಣೆಯಾದ 12 ಆನೆಗಳ ಅಧಿಕೃತ ಪಟ್ಟಿಯನ್ನು ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಅವರು ಬಿಡುಗಡೆ ಮಾಡಿದ್ದಾರೆ. ಈ ಬಾರಿಯ ಗಜಪಡೆಯಲ್ಲಿ ಭಾರಿ ಬದಲಾವಣೆಗಳಾಗಿದ್ದು, ಅನುಭವಿ ಕ್ಯಾಪ್ಟನ್ ಅಭಿಮನ್ಯು ಮತ್ತು ಜನಪ್ರಿಯ ಆನೆ ಭೀಮನನ್ನು ತಂಡದಿಂದ ಹೊರಗಿಟ್ಟಿರುವುದು ಕುತೂಹಲ ಮೂಡಿಸಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮೆರವಣಿಗೆಯ ಪ್ರಮುಖ ಆಕರ್ಷಣೆಯಾದ 12 ಆನೆಗಳ ಅಧಿಕೃತ ಪಟ್ಟಿಯನ್ನು ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಅವರು ಬಿಡುಗಡೆ ಮಾಡಿದ್ದಾರೆ. ಈ ಬಾರಿಯ ಗಜಪಡೆಯಲ್ಲಿ ಭಾರಿ ಬದಲಾವಣೆಗಳಾಗಿದ್ದು, ಅನುಭವಿ ಕ್ಯಾಪ್ಟನ್ ಅಭಿಮನ್ಯು ಮತ್ತು ಜನಪ್ರಿಯ ಆನೆ ಭೀಮನನ್ನು ತಂಡದಿಂದ ಹೊರಗಿಟ್ಟಿರುವುದು ಕುತೂಹಲ ಮೂಡಿಸಿದೆ.
ಅಭಿಮನ್ಯು, ಭೀಮಗಿಲ್ಲ ಅವಕಾಶ:
ಕಳೆದ ಹಲವು ವರ್ಷಗಳಿಂದ ಯಶಸ್ವಿಯಾಗಿ ಚಿನ್ನದ ಅಂಬಾರಿ ಹೊತ್ತಿದ್ದ 61 ವರ್ಷದ ‘ಕ್ಯಾಪ್ಟನ್’ ಅಭಿಮನ್ಯುವಿಗೆ ವಯಸ್ಸಿನ ಕಾರಣದಿಂದ ಈ ಬಾರಿ ವಿಶ್ರಾಂತಿ ನೀಡಲಾಗಿದೆ. ಇನ್ನು ದಸರಾ ಪ್ರೇಮಿಗಳ ನೆಚ್ಚಿನ ಆನೆ ಭೀಮ ‘ಮಸ್ತಿ’ (Musth) ಪ್ರಕ್ರಿಯೆಯಲ್ಲಿದ್ದ ಕಾರಣ ತಂಡದಿಂದ ಹೊರಗುಳಿಯಬೇಕಾಗಿದೆ. ಈ ಇಬ್ಬರು ದಿಗ್ಗಜರ ಅನುಪಸ್ಥಿತಿಯಲ್ಲಿ, ಸೌಮ್ಯ ಮತ್ತು ಧೈರ್ಯಶಾಲಿ ಸ್ವಭಾವದ ‘ಮಹೇಂದ್ರ’ ಆನೆ ಈ ಬಾರಿಯ ಗಜಪಡೆಯನ್ನು ಮುನ್ನಡೆಸುವ (ಕ್ಯಾಪ್ಟನ್ಸಿ) ಸಾಧ್ಯತೆಗಳಿವೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.
ಆಯ್ಕೆಯಾದ 12 ಆನೆಗಳು:
ದುಬಾರೆಯ ಧನಂಜಯ, ಪ್ರಶಾಂತ, ಗೋಪಿ, ಶ್ರೀರಾಮ, ಸುಗ್ರೀವ, ಕಾವೇರಿ ಹಾಗೂ ಬಳ್ಳೆ ಶಿಬಿರದ ಮಹೇಂದ್ರ, ಲಕ್ಷ್ಮೀ, ಮತ್ತಿಗೋಡಿನ ಏಕಲವ್ಯ, ಶ್ರೀಕಂಠ ಮತ್ತು ದೊಡ್ಡಹರವೆ ರೂಪಾ, ರಾಮಾಪುರದ ಚೈತ್ರ ಆನೆಗಳನ್ನು ದಸರೆಗೆ ಕರೆತರಲು ನಿರ್ಧರಿಸಲಾಗಿದೆ.
ಗಜಪಯಣದ ತಯಾರಿ:
ಸಾಮಾನ್ಯವಾಗಿ ದಸರೆಗೆ 14 ಆನೆಗಳನ್ನು ಕರೆತರಲಾಗುತ್ತಿತ್ತು. ಆದರೆ ಈ ಬಾರಿ ತಂಡದ ಗಾತ್ರವನ್ನು 12ಕ್ಕೆ ಇಳಿಸಲಾಗಿದೆ. ಮೊದಲ ತಂಡದಲ್ಲಿ ಧನಂಜಯ, ಮಹೇಂದ್ರ, ಏಕಲವ್ಯ ಸೇರಿದಂತೆ ಒಟ್ಟು 9 ಆನೆಗಳು ‘ಗಜಪಯಣ’ದ ಮೂಲಕ ಅರಮನೆ ನಗರಿಗೆ ಆಗಮಿಸಲಿವೆ. ತುರ್ತು ಸಂದರ್ಭಕ್ಕಾಗಿ ಮತ್ತಿಗೋಡಿನ ಭೀಮ ಮತ್ತು ದುಬಾರೆಯ ಹರ್ಷನನ್ನು ‘ಮೀಸಲು ಆನೆ’ಗಳಾಗಿ (Buffer list) ಇರಿಸಲಾಗಿದೆ.
ಶೀಘ್ರದಲ್ಲೇ ಈ ಗಜಪಡೆ ಶಿಬಿರಗಳಿಂದ ಹೊರಟು ಮೈಸೂರು ತಲುಪಲಿದ್ದು, ಅಲ್ಲಿ ತಾಲೀಮು ಮತ್ತು ವಿಶೇಷ ಸತ್ಕಾರಗಳನ್ನು ಪಡೆಯಲಿವೆ.
ಮೈಸೂರು
H. Vishwanath-ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ಸಂಚಲನ: ಎಚ್. ವಿಶ್ವನಾಥ್
ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಮೈಸೂರು: ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈಗಾಗಲೇ ಜನರು ರಾಜಕೀಯದ ಬಗ್ಗೆ ಸಾಕಷ್ಟು ಅಸಹ್ಯಪಟ್ಟುಕೊಂಡಿದ್ದಾರೆ. ನನ್ನ ಪುಸ್ತಕ ಬಿಡುಗಡೆಯಾದರೆ ರಾಜಕೀಯದ ಬಗ್ಗೆ ಜನರಲ್ಲಿ ಮತ್ತಷ್ಟು ಅಸಹ್ಯ ಮೂಡುವ ಸಾಧ್ಯತೆಯಿದೆ” ಎಂದು ಹೇಳಿದರು.
ಯತೀಂದ್ರ ಇತಿಹಾಸ ತಿಳಿದು ಮಾತನಾಡಲಿ
ರಾಜವಂಶಸ್ಥರ ಕುರಿತು ಸಚಿವ ಡಾ. ಯತೀಂದ್ರ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ವಿಶ್ವನಾಥ್, “ಅನುಭವ ಇಲ್ಲದವರಿಗೆ ಜವಾಬ್ದಾರಿ ನೀಡಿದರೆ ಏನಾಗುತ್ತದೆ ಎಂಬುದಕ್ಕೆ ರಾಜವಂಶಸ್ಥರ ಕುರಿತು ಯತೀಂದ್ರ ಮಾತನಾಡಿರುವ ಹಗುರವಾದ ಹೇಳಿಕೆಯೇ ಸಾಕ್ಷಿ. ಸಿದ್ದರಾಮಯ್ಯ ಮತ್ತು ಅವರ ಪುತ್ರ ಮೈಸೂರು ರಾಜಮನೆತನದ ಇತಿಹಾಸ ಹಾಗೂ ಹಿನ್ನೆಲೆಯನ್ನು ತಿಳಿದುಕೊಳ್ಳಬೇಕು” ಎಂದು ಹೇಳಿದರು.
“ಚಾಮುಂಡೇಶ್ವರಿ ಉಪಚುನಾವಣೆಯ ಪ್ರಚಾರಕ್ಕೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಆಗಮಿಸದೇ ಇದ್ದಿದ್ದರೆ ಸಿದ್ದರಾಮಯ್ಯ ಗೆಲುವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ಅವರು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ” ಎಂದು ಎಚ್. ವಿಶ್ವನಾಥ್ ಟೀಕಿಸಿದರು.
ಮೈಸೂರು
Siddaramaiah–Vijayendra-ಸ್ಟಿಂಗ್ ಮತ್ತು ಪರಿಷತ್ ಫಲಿತಾಂಶ ನಡುವೆಯೇ ಒಂದೇ ವೇದಿಕೆಯಲ್ಲಿ ಸಿದ್ದರಾಮಯ್ಯ–ವಿಜಯೇಂದ್ರ; ಗಮನ ಸೆಳೆದ ಗೌರವ ವಿನಿಮಯ
ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
ಮೈಸೂರು, ಅ.28: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
ಮೈಸೂರಿನ ಕೆ.ಆರ್. ನಗರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ವಿಜಯೇಂದ್ರ ಅಕ್ಕಪಕ್ಕದಲ್ಲಿ ಕುಳಿತುಕೊಂಡಿದ್ದರು. ಈ ವೇಳೆ ವಿಜಯೇಂದ್ರ ಅವರು ಸಿದ್ದರಾಮಯ್ಯ ಅವರಿಗೆ ಎರಡೂ ಕೈಗಳನ್ನು ಜೋಡಿಸಿ ನಮಸ್ಕರಿಸಿದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ವಿಜಯೇಂದ್ರ ಅವರ ಬೆನ್ನು ತಟ್ಟಿದರು.
ರಾಜಕೀಯವಾಗಿ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿರುವ ಸಂದರ್ಭದಲ್ಲಿ ಇಬ್ಬರು ನಾಯಕರು ವೇದಿಕೆಯಲ್ಲಿ ಪರಸ್ಪರ ಗೌರವ ವಿನಿಮಯ ಮಾಡಿಕೊಂಡ ದೃಶ್ಯ ಗಮನ ಸೆಳೆಯಿತು.
ಮೈಸೂರು
Mysuru-ಮೈಸೂರು ದಸರಾ ವಿವಾದ: ಪ್ರಮೋದಾದೇವಿ ಒಡೆಯರ್‌ಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು
ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮೈಸೂರು: ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
‘ಅರಮನೆ ಮಂಡಳಿ ಸರಕಾರದ್ದು, ಅರಮನೆ ಜಾಗವೂ ಸರಕಾರದ್ದು. ಅವರಿಗೆ ಉಳಿದುಕೊಳ್ಳಲು ಒಂದಿಷ್ಟು ಜಾಗ ಕೊಟ್ಟಿದ್ದೇವೆ ಅಷ್ಟೆ’ ಎಂದು ಸಚಿವರು ಹೇಳಿದ್ದು, ಈ ಹೇಳಿಕೆ ರಾಜಮನೆತನ ಮತ್ತು ಸರಕಾರದ ನಡುವಿನ ಚರ್ಚೆಗೆ ಹೊಸ ತಿರುವು ನೀಡಿದೆ.
ರವಿವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದ ಪ್ರಮೋದಾದೇವಿ ಒಡೆಯರ್, ದಸರಾ ಸಂದರ್ಭದಲ್ಲಿ ರಾಜಮನೆತನ ಮತ್ತು ಅಧಿಕಾರಿಗಳ ನಡುವೆ ಸಮನ್ವಯದ ಕೊರತೆಯಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಅವರು ಪ್ರಸ್ತಾಪಿಸಿರುವ ಸಮಸ್ಯೆಗಳನ್ನು ಬಗೆಹರಿಸಲು ಸರಕಾರ ಸಿದ್ಧವಿದೆ. ಆದರೆ, ಅವರು ಹೇಳಿರುವ ಎಲ್ಲ ವಿಚಾರಗಳನ್ನೂ ಒಪ್ಪಲು ಸಾಧ್ಯವಿಲ್ಲ ಎಂದರು.
‘ಸರಕಾರದ ದಸರಾಕ್ಕೂ ಇತಿಹಾಸವಿದೆ’
‘ಅವರು ಹೇಳಿದಂತೆ ಏಳು ದಿನ ದಸರಾ ಆಚರಿಸಲು ಸಾಧ್ಯವಿಲ್ಲ. ಸರಕಾರದ ದಸರಾ ಅಲ್ಲ ಎಂಬ ಪದ ಬಳಕೆಯೂ ಸರಿಯಲ್ಲ. ಸರಕಾರದ ದಸರಾಕ್ಕೂ ಇತಿಹಾಸವಿದೆ. ಅದನ್ನು ದಸರಾ ಅಲ್ಲ ಎಂದು ಹೇಳುವುದನ್ನು ನಾವು ಒಪ್ಪುವುದಿಲ್ಲ’ ಎಂದು ಸಚಿವರು ಸ್ಪಷ್ಟಪಡಿಸಿದರು.
ಅಂಬಾರಿಯನ್ನು ಸರಕಾರ ಉಚಿತವಾಗಿ ಪಡೆಯುತ್ತಿಲ್ಲ. ಅದಕ್ಕೂ ಸರಕಾರ ಹಣ ಪಾವತಿಸುತ್ತದೆ ಎಂದು ತಿಳಿಸಿದ ಅವರು, ಪ್ರಮೋದಾದೇವಿ ಒಡೆಯರ್ ಅವರಿಗೆ ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ಸರಕಾರದ ಗಮನಕ್ಕೆ ತರಬಹುದಿತ್ತು ಎಂದರು.
‘ನಾವು ನಿರಂತರವಾಗಿ ಅವರ ಸಂಪರ್ಕದಲ್ಲಿದ್ದೆವು. ಆದರೆ, ನಮ್ಮ ಗಮನಕ್ಕೆ ಯಾವುದೇ ವಿಚಾರವನ್ನು ತಂದಿರಲಿಲ್ಲ. ಸರಕಾರಕ್ಕೆ ಪತ್ರ ಬರೆಯದೆ ಏಕಾಏಕಿ ಮಾಧ್ಯಮಗಳಿಗೆ ಪತ್ರ ಬರೆದರೆ ಹೇಗೆ?’ ಎಂದು ಪ್ರಶ್ನಿಸಿದರು.
ಅಗತ್ಯವಿದ್ದರೆ ಸರಕಾರದ ವತಿಯಿಂದ ಪ್ರತಿನಿಧಿಗಳನ್ನು ರಾಜಮನೆತನದವರ ಬಳಿಗೆ ಕಳುಹಿಸಲಾಗುವುದು. ಮುಖ್ಯಮಂತ್ರಿ ಅವರು ಈ ಕುರಿತು ಕ್ರಮ ಕೈಗೊಳ್ಳಲಿದ್ದಾರೆ. ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಸರಕಾರ ಸಿದ್ಧವಿದೆ ಎಂದು ತಿಳಿಸಿದರು.
ಅಂಬಾರಿ ಆನೆ ಆಯ್ಕೆಯಲ್ಲಿ ಗೊಂದಲ
ಅಂಬಾರಿ ಹೊರುವ ಆನೆಯ ಆಯ್ಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಯಾವ ಆನೆಯನ್ನು ಆಯ್ಕೆ ಮಾಡಲಾಗಿದೆ ಎಂಬುದನ್ನು ರಾಜಮನೆತನಕ್ಕೆ ತಿಳಿಸುವ ಕಾನೂನುಬದ್ಧ ಅಗತ್ಯವಿಲ್ಲ ಎಂದು ಹೇಳಿದರು.
ಆರಂಭದಲ್ಲಿ ಮಹೇಂದ್ರ, ಬಳಿಕ ಧನಂಜಯ ಹಾಗೂ ನಂತರ ಪ್ರಶಾಂತ್ ಆನೆಯ ಹೆಸರುಗಳು ಚರ್ಚೆಗೆ ಬಂದಿದ್ದವು. ಈ ವಿಚಾರದಲ್ಲಿ ಗೊಂದಲ ಉಂಟಾಗಿದ್ದರಿಂದ ಅಂಬಾರಿ ಆನೆಯ ಆಯ್ಕೆ ವಿಳಂಬವಾಯಿತು ಎಂದು ಅವರು ವಿವರಿಸಿದರು.
ಜೆಟ್ಟಿ ಕಾಳಗ ರದ್ದತಿ ವಿಚಾರ ಪರಿಶೀಲನೆ
ದಸರಾ ಸಂದರ್ಭದಲ್ಲಿ ಜೆಟ್ಟಿ ಕಾಳಗ ರದ್ದಾದ ವಿಚಾರವಾಗಿ ಪ್ರಮೋದಾದೇವಿ ಒಡೆಯರ್ ಅವರು ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳಿಗೂ, ಪೊಲೀಸರು ನೀಡಿರುವ ಮಾಹಿತಿಗೂ ವ್ಯತ್ಯಾಸವಿದೆ ಎಂದು ಸಚಿವರು ಹೇಳಿದರು.
ಜೆಟ್ಟಿಗಳು ತಡವಾಗಿ ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆ ತೊಂದರೆಯಾಯಿತು; ಪೊಲೀಸರಿಂದ ಯಾವುದೇ ಸಮಸ್ಯೆಯಾಗಿಲ್ಲ ಎಂಬುದು ಪೊಲೀಸರ ಹೇಳಿಕೆಯಾಗಿದೆ. ಈ ಕುರಿತು ಸರಕಾರ ಪರಿಶೀಲನೆ ನಡೆಸುತ್ತಿದ್ದು, ಎಲ್ಲಿ ತಪ್ಪಾಗಿದೆ ಎಂಬುದನ್ನು ಗಮನಿಸಲಾಗುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
-
ರಾಜಕೀಯ21 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ21 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ21 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಬಿಗ್ ನ್ಯೂಸ್4 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕಾರ್ಯಕ್ರಮಗಳು21 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ21 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಬಿಗ್ ನ್ಯೂಸ್4 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು4 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು















