Connect with us

ಮಂಗಳೂರು

Alvas-16ನೇ ‘ಆಳ್ವಾಸ್ ಪ್ರಗತಿ’ ಯಶಸ್ವಿ: 2,416 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ, 6,183 ಮಂದಿ ಶಾರ್ಟ್‌ಲಿಸ್ಟ್..!

Published

on

Ad Widget

Ad Widget

Ad Widget

Ad Widget

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗಿದ್ದ 16ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳ ‘ಆಳ್ವಾಸ್‌ ಪ್ರಗತಿ’ ಅಭೂತಪೂರ್ವ ಯಶಸ್ಸು ಕಂಡಿದೆ. ಈ ಮೇಳದಲ್ಲಿ ಒಟ್ಟು 2,416 ಅಭ್ಯರ್ಥಿಗಳು ಸ್ಥಳದಲ್ಲೇ ಉದ್ಯೋಗದ ಆಫರ್ ಪತ್ರ ಪಡೆದುಕೊಂಡಿದ್ದು, 6,183 ಅಭ್ಯರ್ಥಿಗಳು ವಿವಿಧ ಹಂತದ ನೇಮಕಾತಿ ಪ್ರಕ್ರಿಯೆಗಳಿಗೆ ಆಯ್ಕೆಯಾಗಿದ್ದಾರೆ (ಶಾರ್ಟ್‌ಲಿಸ್ಟ್) ಎಂದು ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗಿದ್ದ 16ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳ ‘ಆಳ್ವಾಸ್‌ ಪ್ರಗತಿ’ ಅಭೂತಪೂರ್ವ ಯಶಸ್ಸು ಕಂಡಿದೆ. ಈ ಮೇಳದಲ್ಲಿ ಒಟ್ಟು 2,416 ಅಭ್ಯರ್ಥಿಗಳು ಸ್ಥಳದಲ್ಲೇ ಉದ್ಯೋಗದ ಆಫರ್ ಪತ್ರ ಪಡೆದುಕೊಂಡಿದ್ದು, 6,183 ಅಭ್ಯರ್ಥಿಗಳು ವಿವಿಧ ಹಂತದ ನೇಮಕಾತಿ ಪ್ರಕ್ರಿಯೆಗಳಿಗೆ ಆಯ್ಕೆಯಾಗಿದ್ದಾರೆ (ಶಾರ್ಟ್‌ಲಿಸ್ಟ್) ಎಂದು ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಮೇಳದಲ್ಲಿ ಒಟ್ಟು 332 ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿದ್ದು, 15,539 ಉದ್ಯೋಗಾಕಾಂಕ್ಷಿಗಳು ನೋಂದಾಯಿಸಿಕೊಂಡಿದ್ದರು ಎಂದು ಮಾಹಿತಿ ನೀಡಿದರು.

Ad Widget

Ad Widget <> Ad Widget

ಮೇಳದಲ್ಲಿ ಭಾಗವಹಿಸಿದ್ದ 301 ಕಂಪನಿಗಳ ಫಲಿತಾಂಶಗಳನ್ನು ವೆಬ್‌ ಸೈಟ್ (www.alvaspragati.com)ನಲ್ಲಿ ಪ್ರಕಟಿಸಲಾಗಿದೆ. ಉಳಿದ ಕಂಪನಿಗಳ ಹಾಗೂ ಅಭ್ಯರ್ಥಿಗಳ ಫಲಿತಾಂಶಗಳನ್ನು ನೇಮಕಾತಿ ಸಂಸ್ಥೆಗಳಿಂದ ಮಾಹಿತಿ ಲಭ್ಯವಾದಂತೆ ಪ್ರಕಟಿಸಲಾಗುವುದು. ಉದ್ಯೋಗ ಮೇಳದಂದು ಸ್ಥಳದಲ್ಲೇ ನೋಂದಣಿ ಮಾಡಿದಂತಹ ಎಸೆಸೆಲ್ಸಿ, ಪಿಯುಸಿ ಹಾಗೂ ಐಟಿಐ ಅಭ್ಯರ್ಥಿಗಳ ನೇಮಕಾತಿ ವಿವರಗಳನ್ನು ಆಳ್ವಾಸ್ ತಂಡದಿಂದ ದೂರವಾಣಿ ಕರೆ ಹಾಗೂ ಎಸ್ಎಂಎಸ್ ಮೂಲಕ ನೇರವಾಗಿ ತಲುಪಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಈ ಬಾರಿ ಉತ್ಪಾದನಾ ವಲಯದಲ್ಲಿ 75 ಕಂಪನಿಗಳು ಭಾಗವಹಿಸಿ 924 ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿಕೊಂಡು 523 ಅಭ್ಯರ್ಥಿಗಳನ್ನು ಆಯ್ಕೆ ಮಾಡಿವೆ. ಟಾಟಾ ಎಲೆಕ್ಟ್ರಾನಿಕ್ಸ್ ಸಿಸ್ಟಮ್ಸ್ ಸಂಸ್ಥೆಯು 216 ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡಿದ್ದು, ಅವರಲ್ಲಿ ಬಹುತೇಕರು ಮಹಿಳಾ ಅಭ್ಯರ್ಥಿಗಳಾಗಿದ್ದಾರೆ. ಎಚ್ ಎಲ್ ಮಾಂಡೊ ಸಂಸ್ಥೆಯು ಇಇಇ, ಇಸಿಇ ಹಾಗೂ ಮೆಕ್ಯಾನಿಕಲ್ ವಿಭಾಗಗಳ 99 ಎಂಜಿನಿಯರಿಂಗ್ ಪದವೀಧರರನ್ನು ಚೆನ್ನೈಯಲ್ಲಿ ಉದ್ಯೋಗಕ್ಕೆ ಆಯ್ಕೆ ಮಾಡಿದೆ. ಟೊಯೋಟಾ ಕಿರ್ಲೋಸ್ಕರ್ ಮೋಟರ್ ಸಂಸ್ಥೆಯು ಚಾರ್ಟಡ್್ರ ಅಕೌಂಟೆಂಟ್ ಅಭ್ಯರ್ಥಿಯೊಬ್ಬರನ್ನು ಶಾರ್ಟ್ನಲಿಸ್ಟ್ ಮಾಡಿದೆ. ಎಕ್ಸಿಕಾಮ್ ಟೆಲಿ-ಸಿಸ್ಟಮ್ಸ್ ಲಿಮಿಟೆಡ್ ಸಂಸ್ಥೆಯು 30 ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಐಟಿ ಮತ್ತು ಐಟಿಇಎಸ್ ಕ್ಷೇತ್ರದಲ್ಲಿ 34 ಕಂಪನಿಗಳು ಭಾಗವಹಿಸಿದ್ದು, 1,301 ಅಭ್ಯರ್ಥಿಗಳು ಶಾರ್ಟ್‌ಲಿಸ್ಟ್ ಗೊಂಡಿದ್ದರೆ, 96 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗದ NEW ಆಫರ್ ದೊರೆತಿದೆ. ವುಡ್‌ರಾಕ್ ಇನ್ಫೋಟೆಕ್ ಕಂಪೆನಿಯು 17 ಜನರನ್ನು ಶಾರ್ಟ್‌ಲಿಸ್ಟಗೊಳಿಸಿದೆ. ಪ್ರೋಟಾಕ್ ಸೊಲ್ಯೂಷನ್ಸ್‌ ಚೆನ್ನೈಯಲ್ಲಿ ಉದ್ಯೋಗಕ್ಕಾಗಿ 39 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಇಲೋಜಿಕ್ಸಾ ಸಂಸ್ಥೆಯು ಆಫ್ರಿಕಾದ ಕಾಂಗೋದಲ್ಲಿ ಒರ್ವ ಅಭ್ಯರ್ಥಿಗೆ ಉದ್ಯೋಗ ಒದಗಿಸಿದೆ.

Ad Widget

Ad Widget

ಬ್ಯಾಂಕಿಂಗ್, ಹಣಕಾಸು ಸೇವೆಗಳು ಮತ್ತು ವಿಮಾ ಕ್ಷೇತ್ರದಲ್ಲಿ 913 ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟಗೊಳಿಸಲಾಗಿದ್ದು, 211 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ ದೊರಕಿದೆ. ಪ್ರಮುಖ ಬಹುರಾಷ್ಟ್ರೀಯ ಕಂಪೆನಿಯಾದ ಇಎಕ್ಸ್‌ಎಲ್ ಸರ್ವಿಸಸ್ ಮಾನವ ಸಂಪನ್ಮೂಲ, ಅಕೌಂಟ್ಸ್ ರಿಸೀವಬಲ್ ಮತ್ತು ಅಕೌಂಟ್ಸ್ ಪೇಯಬಲ್ ವಿಭಾಗಗಳಲ್ಲಿ 38 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡಿದೆ. ಔಷಧೀಯ ಕ್ಷೇತ್ರದಲ್ಲಿ ಯೂರೋಫಿನ್ಸ್, ಆರ್.ಎಲ್. ಫೈನ್ ಕೆಮ್, ಸೋಲಾರಾ ಆಕ್ಟಿವ್ ಫಾರ್ಮಾ ಸೈನ್ಸಸ್, ಮೆಡಾರ್ಗ್ಯಾನಿಕ್ಸ್ ಇಂಡಿಯಾ, ಸಾಮಿ ನ್ಯೂಟ್ರಾಸ್ಯುಟಿಕಲ್ಸ್ ವಸುಧಾ ಲೈಫ್ ಸೈನ್ಸ್, ಬಯೋಕಾನ್ ಹಾಗೂ ಗ್ರೂಪ್ ಫಾರ್ಮಾಸ್ಯುಟಿಕಲ್ಸ್ ಸೇರಿದಂತೆ 159 ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿದ್ದು, 40 ಅಭ್ಯರ್ಥಿಗಳನ್ನು ಆಯ್ಕೆ ಮಾಡಿವೆ.

ಆರೋಗ್ಯ ಕ್ಷೇತ್ರದಲ್ಲಿ ಮುಂಬೈನ ಬೆಥನಿ ಆಸ್ಪತ್ರೆಯು 103 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಸೀನಿಕ್ ಸಮಿಟ್ ರೆಸಾರ್ಟ್ ಸಂಸ್ಥೆಯು ಪ್ರಕೃತಿ ಚಿಕಿತ್ಸಾ ವಿಭಾಗದ ಪದವೀಧರರನ್ನು ವೆಲ್‌ನೆಸ್ ಥೆರಪಿಸ್ಟ್ ಹುದ್ದೆಗಳಿಗೆ ನೇಮಕ ಮಾಡಿಕೊಂಡಿದೆ.

ಜಿಬಿಎಂಟಿ ಸೆಕ್ಟರಲ್ ಸ್ಟೀಲ್ ಮ್ಯಾನುಫ್ಯಾಕ್ಟರಿಂಗ್ ಇಂಡಸ್ಟ್ರೀಸ್ ಸಂಸ್ಥೆಯು ಐಟಿಐ, ಡಿಪ್ಲೊಮಾ ಹಾಗೂ ಪದವಿ ಪಡೆದ 9 ಅಭ್ಯರ್ಥಿಗಳನ್ನು ಯುಎಇಯಲ್ಲಿನ ಉದ್ಯೋಗಾವಕಾಶಗಳಿಗೆ ಆಯ್ಕೆ ಮಾಡಿದೆ. ಎಕ್ಸ್‌ಪರ್ಟ್ರೆಸ್ ಕಾಂಟ್ರಾಕ್ಟಿಂಗ್ ಸಂಸ್ಥೆಯು 117 ಅಭ್ಯರ್ಥಿಗಳನ್ನು ಶಾರ್ಟ್‌ಸ್ಟ್ ಮಾಡಿ, ಸೌದಿ ಅರೇಬಿಯಾ ಹಾಗೂ ಗುಜರಾತ್‌ನ ಅದಾನಿ ಮುಂದ್ರಾದ ಯೋಜನೆಗಳಿಗೆ 13 ಅಭ್ಯರ್ಥಿಗಳನ್ನು ಸ್ಥಳದಲ್ಲೇ ಆಯ್ಕೆ ಮಾಡಿದೆ. ಗೋ ಪಿಡಬ್ಲ್ಯುಡಿ ಸಂಸ್ಥೆಯು ಇಬ್ಬರು ವಿಶೇಷ ಚೇತನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಕೋಡ್ಯಂಗ್ ಸಂಸ್ಥೆಯು ಆಯ್ಕೆಯಾದ ಆರು ಅಭ್ಯರ್ಥಿಗಳನ್ನು ಲುಲು ಇಂಟರ್‌ನ್ಯಾಷನಲ್ ಶಾಪಿಂಗ್ ಮಾಲ್ಸ್ ಪ್ರೈವೇಟ್ ಲಿಮಿಟೆಡ್ 45 ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ ಎಂದು ಅವರು ವಿವರ ನೀಡಿದರು.

ಗೋಷ್ಟಿಯಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಆಳ್ವಾಸ್ ಪುಗತಿ-2026 ಉತ್ಪಾದನಾ ವಲಯ ಮುಖ್ಯಸ್ಥ ಡಾ. ಕುಮಾರಸ್ವಾಮಿ, ಉದ್ಯೋಗ ನಿಯೋಜನಾ ವಿಭಾಗ ರಂಜಿತಾ ಆಚಾರ್ಯ, ಆಳ್ವಾಸ್‌ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಪ್ರಸಾದ್ ಶೆಟ್ಟಿ, ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಸಾರ್ವಜನಿಕ ಸಂಪರ್ಕಾಧಿಕಾರಿ ದಿಶಾ ಶೆಟ್ಟಿ ಉಪಸ್ಥಿತರಿದ್ದರು.

Ad Widget
Click to comment

Leave a Reply

ಮಂಗಳೂರು

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

Published

on

Ad Widget

Ad Widget

Ad Widget

Ad Widget

ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.

Ad Widget

Ad Widget

ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

Ad Widget
Continue Reading

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ಅಪರಾಧ

Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ

Published

on

Ad Widget

Ad Widget

Ad Widget

Ad Widget

ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.

Ad Widget

Ad Widget <> Ad Widget

ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.

Ad Widget

Ad Widget

ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.

ಆರೋಪಿಗೆ ವಿಧಿಸಿದ ಶಿಕ್ಷೆ:

  • ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
  • ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
  • ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.

ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!