Connect with us

ಬಿಗ್ ನ್ಯೂಸ್

Puttur-ಮಾನವೀಯತೆಗೆ ಸಾಕ್ಷಿಯಾದ ಪುತ್ತೂರು ಸರಕಾರಿ ಆಸ್ಪತ್ರೆ: ರೋಟರಿ ಯುವದಿಂದ ಅನಾಥ, ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರಕ್ಷಣೆ ಹಾಗೂ ಪುನರ್ವಸತಿ; ಅನಾಥ ನಿರ್ಗತಿಕರ ಆಪದ್ಬಾಂಧವ ಪುತ್ತೂರು ಉಮೇಶ್ ನಾಯಕ್: ವಚನ ಜಯರಾಮ್

Published

on

Ad Widget

Ad Widget

Ad Widget

Ad Widget

ಆಸರೆಯಿಲ್ಲದೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು 52 ವರ್ಷದ ಅನಾಥ, ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯನ್ನು ರಕ್ಷಿಸಿ, ಮಂಗಳೂರಿನ ಕೈಕಂಬದಲ್ಲಿರುವ ‘ಜೀವದಾನ ಚಾರಿಟೇಬಲ್ ಟ್ರಸ್ಟ್’ ಪುನರ್ವಸತಿ ಕೇಂದ್ರಕ್ಕೆ ಸೇರ್ಪಡೆಗೊಳಿಸುವ ಮಾನವೀಯ ಕಾರ್ಯವನ್ನು ರೋಟರಿ ಕ್ಲಬ್ ಪುತ್ತೂರು ಯುವ ಸಂಸ್ಥೆಯ ಎಕ್ಸಿಕ್ಯೂಟಿವ್ ಸೆಕ್ರೆಟರಿ ಹಾಗೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರ ಸಾರಥ್ಯದಲ್ಲಿ ಯಶಸ್ವಿಯಾಗಿ ನೆರವೇರಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು, ಆ. 20, : ಆಸರೆಯಿಲ್ಲದೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು 52 ವರ್ಷದ ಅನಾಥ, ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯನ್ನು ರಕ್ಷಿಸಿ, ಮಂಗಳೂರಿನ ಕೈಕಂಬದಲ್ಲಿರುವ ‘ಜೀವದಾನ ಚಾರಿಟೇಬಲ್ ಟ್ರಸ್ಟ್’ ಪುನರ್ವಸತಿ ಕೇಂದ್ರಕ್ಕೆ ಸೇರ್ಪಡೆಗೊಳಿಸುವ ಮಾನವೀಯ ಕಾರ್ಯವನ್ನು ರೋಟರಿ ಕ್ಲಬ್ ಪುತ್ತೂರು ಯುವ ಸಂಸ್ಥೆಯ ಎಕ್ಸಿಕ್ಯೂಟಿವ್ ಸೆಕ್ರೆಟರಿ ಹಾಗೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರ ಸಾರಥ್ಯದಲ್ಲಿ ಯಶಸ್ವಿಯಾಗಿ ನೆರವೇರಿಸಲಾಗಿದೆ.

Ad Widget

Ad Widget alt="Ad Widget"/>

Ad Widget

ಮಾನವೀಯತೆಗೆ ಸಾಕ್ಷಿಯಾದ ಆಸ್ಪತ್ರೆ ಹಾಗೂ ಸಿಬ್ಬಂದಿ:

Ad Widget

Ad Widget <> Ad Widget

ಕಳೆದ 20 ದಿನಗಳಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈ ಮಹಿಳೆಗೆ ಸೂಕ್ತ ಚಿಕಿತ್ಸೆ ನೀಡಿ, ಪುನರ್ವಸತಿ ಕಲ್ಪಿಸುವಲ್ಲಿ ಪುತ್ತೂರು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸರ್ವ ಸಿಬ್ಬಂದಿಗಳು ಅತ್ಯಂತ ಮುತುವರ್ಜಿ ಮತ್ತು ಕಾಳಜಿ ವಹಿಸುವ ಮೂಲಕ ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವಧಿಯಲ್ಲಿ ಈ ಮಹಿಳೆಯು ಅಲ್ಲಿನ ಇತರ ಎಲ್ಲಾ ಒಳರೋಗಿಗಳ ಜೊತೆಗೆ ಅತ್ಯಂತ ಉತ್ತಮ ಒಡನಾಟ ಹಾಗೂ ಆತ್ಮೀಯ ಬಾಂಧವ್ಯವನ್ನು ಬೆಳೆಸಿಕೊಂಡಿದ್ದರು. ಇಂದು ಅವರನ್ನು ಪುನರ್ವಸತಿ ಕೇಂದ್ರಕ್ಕೆ ಕರೆದೊಯ್ಯುವ ಸಂದರ್ಭದಲ್ಲಿ ಆಸ್ಪತ್ರೆಯ ಎಲ್ಲಾ ಒಳರೋಗಿಗಳು ಹಾಗೂ ಸಿಬ್ಬಂದಿಗಳು ಅತ್ಯಂತ ಭಾವುಕರಾಗಿ ಅವರನ್ನು ಬಿಳ್ಕೊಟ್ಟರು.

Ad Widget

Ad Widget

ಈ ಸಂದರ್ಭದಲ್ಲಿ ಒಳ ರೋಗಿಗಳ ಪ್ರೀತಿಯನ್ನು ಗಮನಿಸಿದ ರೋಟರಿ ಕ್ಲಬ್ ಪುತ್ತೂರು ಯುವ ಇದರ ಸಮುದಾಯ ಸೇವಾ ವಿಭಾಗದ ಮುಖ್ಯಸ್ಥರಾದ ಅಭಿಷಯವರು ಸಿಹಿತಿಂಡಿಯನ್ನು ತಂದು ಎಲ್ಲರಿಗೂ ಹಂಚಿ ಸಂತೋಷವನ್ನು ಇನ್ನಷ್ಟು ಇಮ್ಮಡಿ ಗೊಳಿಸಿದರು.

ಉಮೇಶ್ ನಾಯಕ್ ನಿರ್ಗತಿಕರ ಆಪದ್ಬಾಂಧವ:

ಈ ಸಂದರ್ಭದಲ್ಲಿ ಕಾರ್ಯಾಚರಣೆಯ ಬಗ್ಗೆ ಮಾತನಾಡಿದ ರೋಟರಿ ಕ್ಲಬ್ ಪುತ್ತೂರು ಯುವದ ಅಧ್ಯಕ್ಷರಾದ ವಚನ ಜಯರಾಮ್ ಅವರು, “ನಮ್ಮ ಸಂಸ್ಥೆಯ ಎಕ್ಸಿಕ್ಯೂಟಿವ್ ಕಾರ್ಯದರ್ಶಿಯಾದ ಪುತ್ತೂರು ಉಮೇಶ್ ನಾಯಕ್ ಅವರು ಅನಾಥರು ಹಾಗೂ ನಿರ್ಗತಿಕರ ಪಾಲಿನ ನಿಜವಾದ ಆಪದ್ಬಾಂಧವರಾಗಿದ್ದಾರೆ. ಸಂಕಷ್ಟದಲ್ಲಿರುವವರನ್ನು ಕಂಡಾಗ ತಕ್ಷಣವೇ ಸ್ಪಂದಿಸುವ ಅವರ ನಿಸ್ವಾರ್ಥ ಸೇವಾ ಕಳಕಳಿ ಸಮಾಜಕ್ಕೆ ಮಾದರಿಯಾಗಿದೆ” ಎಂದು ಶ್ಲಾಘಿಸಿದರು.

“ಈ ಹಿಂದೆಯೂ 2021 ರಲ್ಲಿ ಉಮೇಶ್ ನಾಯಕ್ ಅವರು ಇದೇ ರೀತಿ,ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಹಾಗೂ ಆಕೆಯ ಮೂವರು ಅಪ್ರಾಪ್ತ ಮಕ್ಕಳನ್ನು ರಕ್ಷಿಸಿದ್ದರು. ಆ ಸಂದರ್ಭದಲ್ಲಿ 6 ತಿಂಗಳ ಮಗು ಹಾಗೂ 12 ವರ್ಷದ ಬಾಲಕರಿರೂ ಕೂಡ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವಿಚಾರಮನಗೊಂಡು ಅವರನ್ನು ಮಹಿಳಾ ಪೊಲೀಸ್ ಠಾಣೆಯ ಸಹಕಾರದಿಂದ ಸೂಕ್ತ ಪುನರ್ವಸತಿ ಕೇಂದ್ರಕ್ಕೆ ಸೇರಿಸಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ನೇತೃತ್ವದಲ್ಲಿ ಆ ಮೂವರೂ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಈ ನಿರಂತರ ಮಾನವೀಯ ಸೇವೆಗೆ ರೋಟರಿ ಸಂಸ್ಥೆ ಸದಾ ಬೆನ್ನೆಲುಬಾಗಿ ನಿಲ್ಲಲಿದೆ” ಎಂದು ಹೇಳಿದರು.

ವೈದ್ಯಾಧಿಕಾರಿ ಡಾ. ಯಧು ರಾಜ್ ಆಸ್ಪತ್ರೆ ಸಿಬ್ಬಂದಿಗಳ ಅವರ ಮಾನವೀಯ ಸ್ಪಂದನೆ :

ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಈ ಮಹಿಳೆಗೆ ಕುಟುಂಬದ ಬೆಂಬಲವಿಲ್ಲದೆ ಅನಾಥರಾಗಿದ್ದನ್ನು ಗಮನಿಸಿದ ಮುಖ್ಯ ವೈದ್ಯಾಧಿಕಾರಿ ಡಾ. ಯಧುರಾಜ್ ಅವರು, ರೋಗಿಯ ಸೂಕ್ತ ಆರೈಕೆ ಹಾಗೂ ಸುರಕ್ಷಿತ ಆಶ್ರಯಕ್ಕಾಗಿ ಕಾಳಜಿ ವಹಿಸಿ ಉಮೇಶ್ ನಾಯಕ್ ಅವರನ್ನು ಸಂಪರ್ಕಿಸಿದ್ದರು.
ಆಸ್ಪತ್ರೆಯ ಆಪ್ತ ಸಲಹಾ ಕೇಂದ್ರದ ಆಪ್ತ ಸಮಾಲೋಚಕರಾದ ತಾರಾನಾಥ್ ಅವರು ಈ ಮಹಿಳೆಗೆ ಆಪ್ತ ಸಲಹೆಯನ್ನು ನೀಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು ಪಡೆಯುವಲ್ಲಿ ಮನವರಿಕೆ ಮಾಡಿದ್ದರು ಮಾತ್ರವಲ್ಲದೆ ಹೆಚ್ಚುವರಿ ಚಿಕಿತ್ಸೆಗೂ ಕೂಡ ಸರ್ವ ರೀತಿಯ ಸಹಕಾರವನ್ನು ನೀಡಿದ್ದರು. ಆಸ್ಪತ್ರೆಯ ಸರ್ವ ವೈದ್ಯರು ಮತ್ತು ಸಿಬ್ಬಂದಿ ವರ್ಗದವರು ಈ ಮಹಿಳೆಗೆ ಅತ್ಯಂತ ಪ್ರೀತಿ-ಆದರಗಳಿಂದ ಆರೈಕೆ ಮಾಡಿ ಉತ್ತಮ ಚಿಕಿತ್ಸೆ ನೀಡಿದ್ದಾರೆ. ಅಲ್ಲದೆ, ಈ ರಕ್ಷಣಾ ಕಾರ್ಯಾಚರಣೆಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಾಗೂ ಪುತ್ತೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀ ಹರೀಶ್ ಹಾಗೂ ಶ್ರೀಮತಿ ಮಂಗಳ ಕಾಳೆ ಹಾಗೂ ಕಚೇರಿಯ ಸಿಬ್ಬಂದಿಗಳು ಕಾನೂನುಬದ್ಧ ದಾಖಲಾತಿಗೆ ಸಂಪೂರ್ಣ ಸಹಕಾರ ನೀಡಿದ್ದಾರೆ.

ರೋಟರಿ ಯುವ ಸಂಸ್ಥೆ, ಆಸ್ಪತ್ರೆ ಆಡಳಿತ ಹಾಗೂ ವಿವಿಧ ಇಲಾಖೆಗಳ ಜಂಟಿ ಮುತುವರ್ಜಿಯಿಂದಾಗಿ ಮಹಿಳೆಗೆ ಮಂಗಳೂರಿನ ಕೈಕಂಬದಲ್ಲಿರುವ ‘ಜೀವದಾನ’ ಆಶ್ರಮದಲ್ಲಿ ಸುರಕ್ಷಿತ ವಸತಿ ಮತ್ತು ಆರೈಕೆಯ ವ್ಯವಸ್ಥೆ ಕಲ್ಪಿಸಲಾಗಿದೆ. ಈ ರೀತಿಯ ರೋಗಿಗಳ ಆರೈಕೆ ಹಾಗೆ ಹಾಗೂ ಅವರ ಪುನರ್ವಸತಿ ಗಾಗಿ ಜೀವದಾನ ಸೇವಾ ಸಂಸ್ಥೆಯ ಕೊಡುಗೆ ಅಪಾರವಾಗಿದೆ.

ಈ ಕಾರ್ಯಾಚರಣೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ ಇದರ ಕಾರ್ಯದರ್ಶಿ ಅನುಪ್, ಸಮುದಾಯ ಸೇವಾ ವಿಭಾಗದ ಮುಖ್ಯಸ್ಥರಾದ ಅಭಿಶ್, ಹಾಗೂ ಮಹಿಳಾ ಪೊಲೀಸ್ ಠಾಣೆಯ ಪರವಾಗಿ ಗೃಹರಕ್ಷಕ ದಳದ ಚೈತ್ರ ಉಪಸ್ಥಿತರಿದ್ದು ಸಹಕರಿಸಿದರು.

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ

Published

on

Ad Widget

Ad Widget

Ad Widget

Ad Widget

ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget alt="Ad Widget"/>

Ad Widget

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

Ad Widget

Ad Widget <> Ad Widget

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 18 ಶಾಖೆಗಳನ್ನು ಹೊಂದಿರುವ ಈ ಸಂಘವು ಕುಂಬಾರಿಕೆ ಉದ್ಯಮದ ಉತ್ತೇಜನ ಹಾಗೂ ಗ್ರಾಮೀಣ ಕುಶಲಕರ್ಮಿಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದೆ.

ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ಸಂಘವು ಕುಂಬಾರಿಕೆ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದೆ. ಇಲ್ಲಿ ಗ್ರಾಮೀಣ ಕುಂಬಾರಿಕೆಯ ಉತ್ಪಾದನೆ ಹಾಗೂ ತರಬೇತಿ ನೀಡಲಾಗುತ್ತಿದ್ದು, ಇಂತಹ ಸೌಲಭ್ಯ ಹೊಂದಿರುವ ರಾಜ್ಯದ ಏಕೈಕ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Ad Widget

Ad Widget

ಸಂಘದ ಅಧ್ಯಕ್ಷ ಭಾಸ್ಕರ್ ಪೆರುವಾಯಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜನಾರ್ದನ ಮೂಲ್ಯ ಅವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!