ಬಂಟ್ವಾಳ
Bantwal-ಬಂಟ್ವಾಳ: ಶಾಲಾ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ವ್ಯಕ್ತಿ ಪೊಲೀಸ್ ವಶ
ಶಾಲಾ ಬಾಲಕಿಯೊಬ್ಬಳನ್ನು ನಿರಂತರವಾಗಿ ಹಿಂಬಾಲಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಮಧ್ಯವಯಸ್ಕ ವ್ಯಕ್ತಿಯನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಂಟ್ವಾಳದ ಸರಪಾಡಿ ನಿವಾಸಿ ಜಯಂತ್ (47) ಬಂಧಿತ ಆರೋಪಿ.
ಬಂಟ್ವಾಳ: ಶಾಲಾ ಬಾಲಕಿಯೊಬ್ಬಳನ್ನು ನಿರಂತರವಾಗಿ ಹಿಂಬಾಲಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಮಧ್ಯವಯಸ್ಕ ವ್ಯಕ್ತಿಯನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಬಂಟ್ವಾಳದ ಸರಪಾಡಿ ನಿವಾಸಿ ಜಯಂತ್ (47) ಬಂಧಿತ ಆರೋಪಿ.
ಘಟನೆಯ ಹಿನ್ನೆಲೆ:
ಬಂಟ್ವಾಳ ನಗರ ವ್ಯಾಪ್ತಿಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ 16 ವರ್ಷದ ಬಾಲಕಿಯನ್ನು ಕಳೆದ ಕೆಲವು ದಿನಗಳಿಂದ ಈತ ಬಸ್ಸಿನಲ್ಲಿ ಹಿಂಬಾಲಿಸುತ್ತಿದ್ದ ಎನ್ನಲಾಗಿದೆ.
ದಿನಾಂಕ 19.08.2026ರಂದು ಸಂಜೆ ಬಾಲಕಿ ಕಲ್ಲಡ್ಕ ಬಸ್ ನಿಲ್ದಾಣಕ್ಕೆ ಬಂದಾಗಲೂ, ಅಪರಿಚಿತ ವ್ಯಕ್ತಿ ಆಕೆಯನ್ನೇ ತದೇಕಚಿತ್ತದಿಂದ ಗಮನಿಸುತ್ತಿದ್ದನು. ಇದರಿಂದ ತೀವ್ರ ಭಯಗೊಂಡ ಬಾಲಕಿ, ತಕ್ಷಣ ತನ್ನ ತಾಯಿ ಕೆಲಸ ಮಾಡುತ್ತಿದ್ದ ಕಚೇರಿಗೆ ತೆರಳಿ ವಿಷಯ ತಿಳಿಸಿದ್ದಾಳೆ.
ಸ್ಥಳದಲ್ಲೇ ವಿಚಾರಣೆ:
ಬಾಲಕಿಯ ತಾಯಿ ಮತ್ತು ಅವರ ಕಚೇರಿಯ ಮಾಲೀಕರು ಕೂಡಲೇ ಬಸ್ ನಿಲ್ದಾಣಕ್ಕೆ ಧಾವಿಸಿ, ಅಲ್ಲಿದ್ದ ವ್ಯಕ್ತಿಯನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ತನ್ನ ಹೆಸರು ಜಯಂತ್ ಎಂದು ಹೇಳಿ ಅಲ್ಲಿಂದ ಕಾಲ್ಕಿತ್ತಿದ್ದನು. ಈ ಘಟನೆಯ ಬಗ್ಗೆ ಬಾಲಕಿಯ ತಾಯಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಕಾನೂನು ಕ್ರಮ:
ದೂರಿನ ಅನ್ವಯ ಪೊಲೀಸರು ಭಾರತೀಯ ನ್ಯಾಯ ಸಂಹಿತೆ 2023ರ (BNS) ಕಲಂ 78 ಹಾಗೂ ಪೋಕ್ಸೋ (POCSO) ಕಾಯ್ದೆಯ ಕಲಂ 12ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಜಯಂತ್‌ನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಅಪರಾಧ
Bantwala-ಬಂಟ್ವಾಳ: ತಲವಾರು ತೋರಿಸಿ ₹8.35 ಲಕ್ಷ ದರೋಡೆ ಪ್ರಕರಣ: ಮೂವರು ಅಂದರ್, ₹2.01 ಲಕ್ಷ ವಶ
ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯೊಂದರ ಉದ್ಯೋಗಿಗೆ ತಲವಾರು ತೋರಿಸಿ ₹8.35 ಲಕ್ಷ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹2.01 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಬಂಟ್ವಾಳ: ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯೊಂದರ ಉದ್ಯೋಗಿಗೆ ತಲವಾರು ತೋರಿಸಿ ₹8.35 ಲಕ್ಷ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹2.01 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ಶಕ್ತಿನಗರದ ಪ್ರವಿತ್ ಶೆಟ್ಟಿ, ಉಳ್ಳಾಲ ಕೋಡಿಯ ಉಮ್ಮರ್ ಫಾರೂಕ್ ಹಾಗೂ ಉಳ್ಳಾಲ ಹರೇಕಳದ ಶಾಕೀರ್ ಬಂಧಿತ ಆರೋಪಿಗಳು.
ಮಂಗಳೂರಿನ ಕಣ್ಣೂರಿನಲ್ಲಿರುವ ಸಿಮೆಂಟ್ ಮತ್ತು ಕಬ್ಬಿಣ ಮಾರಾಟದ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮಯ್ಯದಿ (40) ಅವರು ಸಂಸ್ಥೆಯ ವ್ಯವಹಾರದ ಹಣ ಸಂಗ್ರಹಿಸುವ ಕೆಲಸ ನಿರ್ವಹಿಸುತ್ತಿದ್ದರು. ಅದರಂತೆ 2026ರ ಆಗಸ್ಟ್ 20ರಂದು ವಿವಿಧ ಅಂಗಡಿಗಳಿಂದ ಹಣ ಸಂಗ್ರಹಿಸಲು ಬೈಕ್‌ನಲ್ಲಿ ತೆರಳಿದ್ದರು.
ಹಲವು ಅಂಗಡಿಗಳಿಂದ ನಗದು ಸಂಗ್ರಹಿಸಿಕೊಂಡು ಬಂಟ್ವಾಳದ ಕಕ್ಕೆಪದವಿನಿಂದ ಪಾಣೆಮಂಗಳೂರಿಗೆ ಹಿಂತಿರುಗುತ್ತಿದ್ದ ವೇಳೆ ಮಧ್ಯಾಹ್ನ ಸುಮಾರು 1 ಗಂಟೆಗೆ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡ ಎಂಬಲ್ಲಿ ಘಟನೆ ನಡೆದಿದೆ.
ಈ ಸಂದರ್ಭದಲ್ಲಿ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಅಪರಿಚಿತರು ಮಯ್ಯದಿ ಅವರಿಗೆ ತಲವಾರು ತೋರಿಸಿ ಬೆದರಿಸಿದ್ದಾರೆ. ಬಳಿಕ ಅವರ ಬಳಿಯಿದ್ದ ₹8,35,000 ನಗದನ್ನು ದರೋಡೆ ಮಾಡಿ ಪರಾರಿಯಾಗಿದ್ದರು. ಈ ಕುರಿತು ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 115/2026ರ ಅಡಿಯಲ್ಲಿ ಬಿಎನ್‌ಎಸ್ ಕಲಂ 309(6) ಹಾಗೂ ಆರ್ಮ್ಸ್ ಆಕ್ಟ್ ಕಲಂ 25(1)(A)ರಂತೆ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಮಂಗಳೂರು ಶಕ್ತಿನಗರದ ಪ್ರವಿತ್ ಶೆಟ್ಟಿ, ಉಳ್ಳಾಲ ಕೋಡಿಯ ಉಮ್ಮರ್ ಫಾರೂಕ್ ಹಾಗೂ ಉಳ್ಳಾಲ ಹರೇಕಳದ ಶಾಕೀರ್ ಎಂಬವರನ್ನು ನವೆಂಬರ್ 11ರಂದು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಸೀತಾರಾಮ ಪಿ. ಅವರ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.
ಬಂಧಿತ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಪ್ರಕರಣದ ವಿಚಾರಣೆಗಾಗಿ ನವೆಂಬರ್ 16ರವರೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ವಿಚಾರಣೆ ವೇಳೆ ಆರೋಪಿಗಳಿಂದ ₹2,01,000 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವಿತ್ ರಾಜ್ ಶೆಟ್ಟಿ ಎಂಬಾತನ ಗುರುತು ಪತ್ತೆ ಪರೇಡ್ ಕೂಡ ನಡೆಸಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಪೊಲೀಸರು ಕೈಗೊಳ್ಳುತ್ತಿದ್ದಾರೆ.
ನಿಧನ ವಾರ್ತೆ
Melkar-ಮೆಲ್ಕಾರ್: ಸ್ವರಾಜ್ ಸ್ಟುಡಿಯೋ ಮಾಲೀಕರ ಪುತ್ರಿ ನಿಧನ
ಪಾಣೆಮಂಗಳೂರು-ಮೆಲ್ಕಾರ್‌ನ ಸ್ವರಾಜ್ ಸ್ಟುಡಿಯೋ ಮಾಲೀಕ ರಾಜರತ್ನ ಅವರ ಪುತ್ರಿ ನೇಹಾ (29) ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಕಳೆದ ಒಂದು ವರ್ಷದಿಂದ ತಲೆಗೆ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಬಂಟ್ವಾಳ: ಪಾಣೆಮಂಗಳೂರು-ಮೆಲ್ಕಾರ್‌ನ ಸ್ವರಾಜ್ ಸ್ಟುಡಿಯೋ ಮಾಲೀಕ ರಾಜರತ್ನ ಅವರ ಪುತ್ರಿ ನೇಹಾ (29) ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ.
ಕಳೆದ ಒಂದು ವರ್ಷದಿಂದ ತಲೆಗೆ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ನೇಹಾ ಅವರು ಪತಿ ಪ್ರತೀಕ್ ಅವರೊಂದಿಗೆ ಉದ್ಯೋಗ ನಿಮಿತ್ತ ಕುವೈತ್‌ನಲ್ಲಿ ನೆಲೆಸಿದ್ದರು. ಮೃತರು ಪತಿ, ತಂದೆ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಕ್ರೈಂ
Mani-ಮಾಣಿ: ವ್ಯಕ್ತಿಯ ಮೇಲೆ ಜೀಪು ಹತ್ತಿಸಲು ಯತ್ನಿಸಿ ಕೊಲೆ ಬೆದರಿಕೆ; ಆರೋಪಿ ಜಗದೀಶ್ ಜೈನ್ ಬಂಧನ
ಮಾಣಿ ಜಂಕ್ಷನ್‌ನ ಮೈದಾನದ ಬಳಿ ನಿಂತಿದ್ದ ವ್ಯಕ್ತಿಗೆ ಬೊಲೆರೋ ಜೀಪಿನಿಂದ ಡಿಕ್ಕಿ ಹೊಡೆಯಲು ಯತ್ನಿಸಿ, ಬಳಿಕ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜಗದೀಶ್ ಜೈನ್ ಎಂದು ಗುರುತಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬಂಟ್ವಾಳ: ಮಾಣಿ ಜಂಕ್ಷನ್‌ನ ಮೈದಾನದ ಬಳಿ ನಿಂತಿದ್ದ ವ್ಯಕ್ತಿಗೆ ಬೊಲೆರೋ ಜೀಪಿನಿಂದ ಡಿಕ್ಕಿ ಹೊಡೆಯಲು ಯತ್ನಿಸಿ, ಬಳಿಕ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜಗದೀಶ್ ಜೈನ್ ಎಂದು ಗುರುತಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಘಟನೆಯ ವಿವರದಂತೆ, ಬಂಟ್ವಾಳ ಮಾಣಿ ನಿವಾಸಿ ವಿಕೇಶ್ ಕೆ. (32) ಅವರು ನ.9ರಂದು ಸಂಜೆ ಮಾಣಿ ಜಂಕ್ಷನ್‌ನ ಮೈದಾನದಲ್ಲಿರುವ ಪಟಾಕಿ ಅಂಗಡಿಯ ಬಳಿ ನಿಂತಿದ್ದರು. ಈ ವೇಳೆ ಅವರಿಗೆ ಪರಿಚಯವಿದ್ದ ಜಗದೀಶ್ ಜೈನ್ ಎಂಬಾತ ಬೊಲೆರೋ ಜೀಪನ್ನು ಅತಿವೇಗವಾಗಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆಯಲು ಯತ್ನಿಸಿದ್ದಾನೆ ಎನ್ನಲಾಗಿದೆ.
ಜೀಪು ತಮ್ಮತ್ತ ಬರುತ್ತಿರುವುದನ್ನು ಗಮನಿಸಿದ ವಿಕೇಶ್ ಅವರು ಬೊಲೆರೋ ವಾಹನದ ಬಾನೆಟ್ ಮೇಲೆ ಹಾರಿ, ಬಳಿಕ ಅಲ್ಲಿಯೇ ಇದ್ದ ಮಣ್ಣಿನ ಮೇಲೆ ಬಿದ್ದು ಅಪಾಯದಿಂದ ಪಾರಾಗಿದ್ದಾರೆ. ಈ ವೇಳೆ ಅವರ ಎಡಕಾಲಿನ ಮೊಣಗಂಟಿಗೆ ಗಾಯವಾಗಿದೆ. ವಿಕೇಶ್ ಅವರ ಸಂಬಂಧಿಕ ತೀರ್ಥಪ್ರಸಾದ್ ಅವರಿಗೂ ಜೀಪಿನಿಂದ ಡಿಕ್ಕಿ ಹೊಡೆಯಲು ಆರೋಪಿ ಯತ್ನಿಸಿದ್ದು, ಅವರು ಕೂಡ ತಪ್ಪಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನಾ ಸ್ಥಳದಲ್ಲಿ ಜನರು ಸೇರುವುದನ್ನು ಕಂಡ ಆರೋಪಿ ಜಗದೀಶ್ ಜೈನ್, ವಿಕೇಶ್ ಅವರನ್ನು ಅವಾಚ್ಯವಾಗಿ ನಿಂದಿಸಿ, ಮುಂದಕ್ಕೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿ ಸ್ಥಳದಿಂದ ತೆರಳಿದ್ದಾನೆ ಎಂದು ಆರೋಪಿಸಲಾಗಿದೆ.
-
ರಾಜಕೀಯ21 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ22 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ21 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಬಿಗ್ ನ್ಯೂಸ್4 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕಾರ್ಯಕ್ರಮಗಳು21 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ22 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಬಿಗ್ ನ್ಯೂಸ್5 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು4 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು















