Uncategorized
ಪುತ್ತೂರು : ಲ್ಯಾಮಿನೇಷನ್ ಗೆ ತಂದ ದಾಖಲೆ ಸುಟ್ಟು ಹೋದ ವಿಚಾರ: ಅಂಗಡಿ ಮಾಲೀಕರು–ಗ್ರಾಹಕಿಯರ ನಡುವೆ ವಾಗ್ವಾದ, ಹಲ್ಲೆ – ದೂರು , ಪ್ರತಿ ದೂರು ದಾಖಲು

ಪುತ್ತೂರು: ದಾಖಲಾತಿಯೊಂದು ತಾಂತ್ರಿಕ ದೋಷದಿಂದ ಸುಟ್ಟುಹೋದ ವಿಚಾರಕ್ಕೆ ಸಂಬಂಧಿಸಿ ಅಂಗಡಿ ಮಾಲೀಕರು ಹಾಗೂ ಗ್ರಾಹಕರ ನಡುವೆ ವಾಗ್ವಾದ ನಡೆದು, ಬಳಿಕ ಪರಸ್ಪರ ಹಲ್ಲೆ ನಡೆದ ಘಟನೆ ಶುಕ್ರವಾರ ಮಧ್ಯಾಹ್ನ ಪುತ್ತೂರು ದರ್ಭೆಯಲ್ಲಿ ನಡೆದಿದೆ.
ಸುಳ್ಯ ತಾಲೂಕಿನ ಮಂಡೆಕೋಲು ನಿವಾಸಿಗಳಾದ ಮುಬಾಶಿರ, ಫಾತೀಮಾ ಹಾಗೂ ಮುಬಾಶಿರ್ ಅವರು ದರ್ಭೆಯಲ್ಲಿರುವ ಅಂಜನಾ ಪೈ ಅವರ ‘ಡ್ರೀಮ್ ಡೆಸ್ಟಿನೇಷನ್ ಡಿಜಿಟಲ್ ಸೇವಾ ಕೇಂದ್ರ’ಕ್ಕೆ ತೆರಳಿ ಕೆಲವು ದಾಖಲಾತಿಗಳನ್ನು ಝೆರಾಕ್ಸ್ ಹಾಗೂ ಲ್ಯಾಮಿನೇಷನ್ ಮಾಡಿಸಲು ನೀಡಿದ್ದರು. ಈ ಪೈಕಿ ಒಂದು ದಾಖಲಾತಿ ತಾಂತ್ರಿಕ ದೋಷದಿಂದ ಸುಟ್ಟುಹೋಗಿದೆ ಎನ್ನಲಾಗಿದೆ.
ಈ ವಿಚಾರವಾಗಿ ಮುಬಾಶಿರ, ಫಾತೀಮಾ ಹಾಗೂ ಮುಬಾಶಿರ್ ಮತ್ತು ಅಂಗಡಿ ಮಾಲೀಕೆ ಅಂಜನಾ ಪೈ ಹಾಗೂ ಅವರ ಪುತ್ರ ಸುದರ್ಶನ್ ಪೈ ನಡುವೆ ವಾಗ್ವಾದ ನಡೆದಿದೆ. ಬಳಿಕ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಎರಡೂ ಕಡೆಯವರು ಪರಸ್ಪರ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ವೇಳೆ ಸ್ಥಳದಲ್ಲಿ ಜನರು ಗುಂಪುಗೂಡಿದ್ದರಿಂದ ಕೆಲಕಾಲ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ಪಡೆದ ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಎರಡೂ ಕಡೆಯವರಿಗೆ ಠಾಣೆಗೆ ಬಂದು ದೂರು ನೀಡುವಂತೆ ಪೊಲೀಸರು ಸೂಚಿಸಿದರು.
ವಿಚಾರಣೆಗಾಗಿ ಸುದರ್ಶನ್ ಪೈ ಅವರನ್ನು ಠಾಣೆಗೆ ಕರೆತರುವ ಸಂದರ್ಭದಲ್ಲಿ ಸ್ಥಳದಲ್ಲಿ ಸೇರಿದ್ದ ಕೆಲವರು ಪೊಲೀಸರನ್ನು ತಡೆದಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿಯೂ ಪ್ರತ್ಯೇಕ ದೂರು ದಾಖಲಿಸಲಾಗುತ್ತಿದೆ.
ಘಟನೆಗೆ ಸಂಬಂಧಿಸಿ ಎರಡೂ ಕಡೆಯಿಂದ ದೂರು ಹಾಗೂ ಪ್ರತಿದೂರು ದಾಖಲಾಗುತ್ತಿದ್ದು, ಪ್ರಕರಣಗಳ ಸಂಪೂರ್ಣ ವಿವರವನ್ನು ಪ್ರಕರಣ ದಾಖಲಿಸಿದ ಬಳಿಕ ಪೊಲೀಸರು ಬಹಿರಂಗಪಡಿಸುವುದಾಗಿ ತಿಳಿಸಿದ್ದಾರೆ.
ಘಟನೆ ನಡೆದ ಅಂಗಡಿಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದು, ದೃಶ್ಯಾವಳಿಗಳನ್ನು ಪರಿಶೀಲಿಸಿದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಇದೇ ವೇಳೆ ಘಟನೆಯ ಕುರಿತು ಯಾವುದೇ ಸುಳ್ಳು ವದಂತಿ ಅಥವಾ ತಪ್ಪು ಮಾಹಿತಿಯನ್ನು ಪ್ರಸಾರ ಮಾಡಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
Uncategorized
Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.
ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.
ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.
ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.
ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Uncategorized
Soujanya case-Big Breaking: ಸೌಜನ್ಯ ಪ್ರಕರಣ: ಎಸ್ಐಟಿ ಕಚೇರಿಯಲ್ಲಿ ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳ ಹೇಳಿಕೆ ದಾಖಲು
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ಮಂಗಳೂರಿನ ಎಸ್ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ. ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ಮಂಗಳೂರಿನ ಎಸ್ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ.
ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ.
ಈ ಪೈಕಿ ಸೌಜನ್ಯಾಳ ಮಾವ ವಿಠಲ ಗೌಡ ಹಾಗೂ ಪುರಂದರ ಗೌಡ ಅವರು ವಿಚಾರಣೆಗೆ ಹಾಜರಾಗಿದ್ದು, ಕೃಷ್ಣಪ್ಪ, ಯಶೋಧಾ ಮತ್ತು ಪ್ರತೀಕ್ ಅವರು ಜೀಪಿನಲ್ಲಿ ಆಗಮಿಸಿದ್ದಾರೆ.
ಇಂದು ಐವರ ಹೇಳಿಕೆಗಳನ್ನು ಎಸ್ಐಟಿ ತಂಡ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.
Uncategorized
Modi visit effect-ಮೋದಿ ಭೇಟಿ ಎಫೆಕ್ಟ್: ಬೆಂಗಳೂರಿನಲ್ಲಿ ಭಾರಿ ಟ್ರಾಫಿಕ್ ಜಾಮ್, ಗಂಟೆಗಟ್ಟಲೆ ಪರದಾಡಿದ ವಾಹನ ಸವಾರರು..!
ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಭದ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿದ್ದರಿಂದ ದಕ್ಷಿಣ ಬೆಂಗಳೂರಿನಾದ್ಯಂತ ತೀವ್ರ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ಪರದಾಡುವಂತಾಯಿತು.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಭದ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿದ್ದರಿಂದ ದಕ್ಷಿಣ ಬೆಂಗಳೂರಿನಾದ್ಯಂತ ತೀವ್ರ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ಪರದಾಡುವಂತಾಯಿತು.
ಬನ್ನೇರುಘಟ್ಟ ಮುಖ್ಯರಸ್ತೆ, ಆಡುಗೋಡಿ, ಜಯನಗರ, ಜೆ.ಪಿ.ನಗರ, ತಲಘಟ್ಟಪುರ ಹಾಗೂ ಹುಳಿಮಾವು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹಾಗೂ ಮಾರ್ಗ ಬದಲಾವಣೆ ಮಾಡಲಾಗಿತ್ತು.
ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ತಾವರೆಕೆರೆ ಮೆಟ್ರೋ ನಿಲ್ದಾಣದ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದಲೂ ತಪಾಸಣೆ ನಡೆಸಲಾಗಿತ್ತು.
ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದರಿಂದ ಐಐಎಂಬಿ ಹಾಗೂ ಜಯದೇವ ಆಸ್ಪತ್ರೆ ಮಾರ್ಗವಾಗಿ ಸಂಚರಿಸುವವರು ತೀವ್ರ ತೊಂದರೆ ಅನುಭವಿಸಿದರು. ಮುಖ್ಯ ರಸ್ತೆಗೆ ಬ್ಯಾರಿಕೇಡ್ ಅಳವಡಿಸಿದ್ದರಿಂದ ವಾಹನ ಸವಾರರು ಬಿಟಿಎಂ ಬಡಾವಣೆ, ಜೆ.ಪಿ.ನಗರ ಮತ್ತು ಜಯನಗರದ ಒಳರಸ್ತೆಗಳ ಮೂಲಕ ಸಂಚರಿಸಬೇಕಾಯಿತು. ಇದರಿಂದ ಕಿರಿದಾದ ವಸತಿ ಪ್ರದೇಶಗಳ ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿ ಹಲವು ಜಂಕ್ಷನ್ಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಸಿಲ್ಕ್ ಬೋರ್ಡ್ ಮೇಲ್ಸೇತುವೆ ಸಂಪರ್ಕ ರಸ್ತೆಗಳು, ಬಿಟಿಎಂ ಬಡಾವಣೆ ಒಳರಸ್ತೆಗಳಲ್ಲಿ ತೀವ್ರ ಸಂಚಾರ ದಟ್ಟಣೆ ಕಂಡುಬಂದಿತು. ಡೇರಿ ವೃತ್ತ, ಮೈಕೋ ಲೇಔಟ್, ಹುಳಿಮಾವು ಹಾಗೂ ಜಯನಗರದ ಪ್ರಮುಖ ರಸ್ತೆಗಳಲ್ಲಿ ವಾಹನಗಳು ನಿಧಾನವಾಗಿ ಚಲಿಸಿದವು.
ಬೆಳಿಗ್ಗೆ 9 ಗಂಟೆಗೆ ಹುಳಿಮಾವಿನಿಂದ ಹೊರಟು ಡೇರಿ ವೃತ್ತದಲ್ಲಿ 11 ಗಂಟೆಗೆ ನಡೆಯಬೇಕಿದ್ದ ಸಭೆಗೆ ತೆರಳುತ್ತಿದ್ದರೂ ಮಧ್ಯಾಹ್ನ 1 ಗಂಟೆಯಾದರೂ ತಲುಪಲು ಸಾಧ್ಯವಾಗಲಿಲ್ಲ ಎಂದು ಪ್ರಯಾಣಿಕ ರಮೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಪರ್ಯಾಯ ಮಾರ್ಗಗಳಲ್ಲಿಯೂ ವಾಹನ ದಟ್ಟಣೆ ಇತ್ತು. ಯಾವ ರಸ್ತೆಯಲ್ಲಿ ಸಂಚರಿಸಬೇಕು ಎಂಬುದರ ಕುರಿತು ಸ್ಪಷ್ಟ ಸೂಚನಾ ಫಲಕಗಳಿರಲಿಲ್ಲ ಎಂದು ಅವರು ದೂರಿದರು.
ಸಂಚಾರ ನಿರ್ಬಂಧದಿಂದ ಉದ್ಯೋಗಿಗಳಿಗೆ ತೊಂದರೆಯಾಗುವುದನ್ನು ಗಮನದಲ್ಲಿಟ್ಟುಕೊಂಡು ನಗರದ ಹಲವು ಐಟಿ ಕಂಪನಿಗಳು ಶುಕ್ರವಾರ ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ (ವರ್ಕ್ ಫ್ರಂ ಹೋಮ್) ಸೂಚಿಸಿದ್ದವು.
ಮಾರ್ಗ ಬದಲಾವಣೆ ಕುರಿತು ಎಫ್ಎಂ ರೇಡಿಯೊ, ಸುದ್ದಿವಾಹಿನಿಗಳು ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಮುಂಚಿತವಾಗಿಯೇ ಮಾಹಿತಿ ನೀಡಲಾಗಿತ್ತು. ಆದರೂ ಪರ್ಯಾಯ ಮಾರ್ಗಗಳ ಪರಿಚಯವಿಲ್ಲದವರು ಕಿರಿದಾದ ಒಳರಸ್ತೆಗಳಿಗೆ ಪ್ರವೇಶಿಸಿದ್ದರಿಂದ ಗೊಂದಲ ಉಂಟಾಗಿ ಸಂಚಾರ ದಟ್ಟಣೆ ಹೆಚ್ಚಾಯಿತು ಎಂದು ಹಿರಿಯ ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹೆಚ್ಚು ಸಂಚಾರ ದಟ್ಟಣೆ ಕಂಡುಬಂದ ಪ್ರದೇಶಗಳು:
ಸಿಲ್ಕ್ ಬೋರ್ಡ್ ಮೇಲ್ಸೇತುವೆ ಸಂಪರ್ಕ ರಸ್ತೆಗಳು
ಬಿಟಿಎಂ ಬಡಾವಣೆ ಒಳರಸ್ತೆಗಳು
ಜೆ.ಪಿ.ನಗರ ಮತ್ತು ಜಯನಗರದ ಒಳರಸ್ತೆಗಳು
ಮೈಕೋ ಲೇಔಟ್ ಜಂಕ್ಷನ್ಗಳು
ಹುಳಿಮಾವು ಜಂಕ್ಷನ್ಗಳು
ಡೇರಿ ವೃತ್ತ
ಜಯದೇವ ಆಸ್ಪತ್ರೆ ಮತ್ತು ಐಐಎಂಬಿ ಮುಂಭಾಗದ ರಸ್ತೆಗಳು
-
ಬಿಗ್ ನ್ಯೂಸ್15 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್7 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ13 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು15 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized14 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್15 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ13 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್14 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















