Connect with us

ಸ್ಥಳೀಯ

Dr. Mahendra Kumar Shetty-ಪತ್ರಕರ್ತನ ಮೇಲೆ ಹಲ್ಲೆ: ಸರ್ಕಾರಿ ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅಮಾನತು

Published

on

Ad Widget

Ad Widget

Ad Widget

Ad Widget

ಕುಂದಾಪುರದ ಹೋಟೆಲ್ ಒಂದರಲ್ಲಿ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಸರ್ಕಾರಿ ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಸೇವೆಯಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಗುರುದತ್ ಹೆಗಡೆ ಈ ಶಿಸ್ತು ಕ್ರಮದ ಆದೇಶ ಹೊರಡಿಸಿದ್ದಾರೆ.

Ad Widget

Ad Widget

Ad Widget

Ad Widget

ಕುಂದಾಪುರ: ಇಲ್ಲಿನ ಹೋಟೆಲ್ ಒಂದರಲ್ಲಿ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಸರ್ಕಾರಿ ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಸೇವೆಯಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಗುರುದತ್ ಹೆಗಡೆ ಈ ಶಿಸ್ತು ಕ್ರಮದ ಆದೇಶ ಹೊರಡಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಘಟನೆಯ ಹಿನ್ನೆಲೆ:
ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರು ಈ ಹಿಂದೆ ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕರಾಗಿದ್ದರು. ಆ ಸಮಯದಲ್ಲಿ ಅವರು ರೋಗಿಗಳಿಂದ ಹಣ ಪಡೆಯುತ್ತಿದ್ದಾರೆ ಎಂಬ ಬಗ್ಗೆ ಪತ್ರಕರ್ತರು ವರದಿ ಮಾಡಿದ್ದರು. ಈ ದ್ವೇಷವನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ವೈದ್ಯರು, ಶುಕ್ರವಾರ ಬೆಳಿಗ್ಗೆ ಕುಂದಾಪುರದ ಹೋಟೆಲ್‌ನಲ್ಲಿ ಪತ್ನಿಯೊಂದಿಗೆ ಚಹಾ ಕುಡಿಯುತ್ತಿದ್ದ ಪತ್ರಕರ್ತನ ಬಳಿ ಬಂದು ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

Ad Widget

Ad Widget <> Ad Widget

ರಜೆಯ ಅವಧಿಯಲ್ಲಿ ಕೃತ್ಯ:
ಡಾ. ಮಹೇಂದ್ರ ಕುಮಾರ್ ಪ್ರಸ್ತುತ ಕಾರ್ಕಳದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿಯೋಜನೆ ಮೇಲೆ ಕೆಲಸ ಮಾಡುತ್ತಿದ್ದರು. ಅಕ್ಟೋಬರ್ 4 ರಿಂದ ಸೆಪ್ಟೆಂಬರ್ 30ರ ವರೆಗೆ ಒಟ್ಟು 58 ದಿನಗಳ ಕಾಲ ವೈದ್ಯಕೀಯ ಚಿಕಿತ್ಸೆಗಾಗಿ ರಜೆಯಲ್ಲಿದ್ದ ಅವರು, ರಜೆ ಅವಧಿಯಲ್ಲೇ ಈ ಕಾನೂನು ಬಾಹಿರ ಕೃತ್ಯ ಎಸಗಿದ್ದಾರೆ. ಇದು ಕರ್ನಾಟಕ ನಾಗರಿಕ ಸೇವಾ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿರುವುದರಿಂದ ತನಿಖೆ ಬಾಕಿ ಇರಿಸಿ ಅವರನ್ನು ಅಮಾನತು ಮಾಡಲಾಗಿದೆ.

ಕಾನೂನು ಕ್ರಮ ಮತ್ತು ಪ್ರತಿಭಟನೆ:
ಪತ್ರಕರ್ತರು ನೀಡಿದ ದೂರಿನ ಮೇರೆಗೆ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಘಟನೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹಾಗೂ ಆರೋಗ್ಯ ಇಲಾಖೆಗೆ ಮನವಿ ಸಲ್ಲಿಸಿತ್ತು. ಅಲ್ಲದೆ, ಡಿವೈಎಫ್‌ಐ ಸಂಘಟನೆಯು ಕುಂದಾಪುರದ ಶಾಸ್ತ್ರಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತ್ತು.

Ad Widget

Ad Widget

ಸಚಿವರ ಪ್ರತಿಕ್ರಿಯೆ:
ಈ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್, “ಪತ್ರಕರ್ತರ ಮೇಲೆ ಮಾತ್ರವಲ್ಲ, ಯಾರ ಮೇಲೂ ಹಲ್ಲೆ ಮಾಡುವುದು ಖಂಡನೀಯ. ತಪ್ಪಿತಸ್ಥ ವೈದ್ಯನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದ್ದಾರೆ.

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಶಿಕ್ಷಣ

RTE-ಆರ್‌ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ

Published

on

Ad Widget

Ad Widget

Ad Widget

Ad Widget

ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget alt="Ad Widget"/>

Ad Widget

ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್‌ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್‌ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.

ಆರ್‌ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.

Ad Widget

Ad Widget

ಆದಾಯ ಮಿತಿ ಹೆಚ್ಚಳದಿಂದ ಹೆಚ್ಚಿನ ಕುಟುಂಬಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶ ಸಿಗುವ ನಿರೀಕ್ಷೆಯಿದೆ.

Ad Widget
Continue Reading

ಸುಳ್ಯ

Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.

ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!