Connect with us

ಅಪರಾಧ

Mangalore-ಮಂಗಳೂರು: ಅಪ್ರಾಪ್ತ ಬಾಲಕಿಯ ವಿವಾಹ ತಡೆದ ಅಧಿಕಾರಿಗಳು

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದ ಹೊರವಲಯದ ಕಣ್ಣೂರಿನಲ್ಲಿ ಅಪ್ರಾಪ್ತ ವಯಸ್ಸಿನ ಹುಡುಗಿಯೊಂದಿಗೆ ನಡೆಯುತ್ತಿದ್ದ ಬಾಲ್ಯ ವಿವಾಹವೊಂದನ್ನು ಜಿಲ್ಲಾಡಳಿತದ ವಿವಿಧ ಘಟಕಗಳ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ತಡೆದಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಹೊರವಲಯದ ಕಣ್ಣೂರಿನಲ್ಲಿ ಅಪ್ರಾಪ್ತ ವಯಸ್ಸಿನ ಹುಡುಗಿಯೊಂದಿಗೆ ನಡೆಯುತ್ತಿದ್ದ ಬಾಲ್ಯ ವಿವಾಹವೊಂದನ್ನು ಜಿಲ್ಲಾಡಳಿತದ ವಿವಿಧ ಘಟಕಗಳ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ತಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಮತ್ತು ಪೊಲೀಸ್ ಅಧಿಕಾರಿಗಳ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.

Ad Widget

Ad Widget <> Ad Widget

ಘಟನೆಯ ವಿವರ:
ಕಾಸರಗೋಡು ಮೂಲದ ಅಪ್ರಾಪ್ತ ಯುವತಿಯೊಂದಿಗೆ ಮಂಗಳೂರಿನ ಯುವಕನ ವಿವಾಹವನ್ನು ಕಣ್ಣೂರಿನಲ್ಲಿ ರವಿವಾರ ಸಂಜೆ ಆಯೋಜಿಸಲಾಗಿತ್ತು. ಮದುವೆಗೆ ಎರಡು ಕಡೆಯ ಸಂಬಂಧಿಕರು ಆಗಮಿಸಿ ಸಿದ್ಧತೆ ನಡೆಸುತ್ತಿದ್ದರು. ಆದರೆ, ವಧುವಿಗೆ ಇನ್ನೂ 18 ವರ್ಷ ತುಂಬಿಲ್ಲ ಎಂಬ ದೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ತಲುಪಿತ್ತು.



Ad Widget

ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು ವಿವಾಹ ಸ್ಥಳಕ್ಕೆ ಭೇಟಿ ನೀಡಿ ವಧುವಿನ ದಾಖಲೆಗಳನ್ನು ಪರಿಶೀಲಿಸಿದಾಗ, ಆಕೆಗೆ 18 ವರ್ಷ ತುಂಬಲು ಇನ್ನೂ ನಾಲ್ಕು ತಿಂಗಳು ಬಾಕಿ ಇರುವುದು ಕಂಡುಬಂದಿದೆ.

Ad Widget

Ad Widget

ಪೋಷಕರಿಗೆ ಎಚ್ಚರಿಕೆ:
ಬಾಲ್ಯ ವಿವಾಹದ ಕಾನೂನುಬಾಹಿರ ಅಂಶಗಳ ಬಗ್ಗೆ ಅಧಿಕಾರಿಗಳು ವಧು-ವರರ ಪೋಷಕರಿಗೆ ಮನವರಿಕೆ ಮಾಡಿ, ವಿವಾಹವನ್ನು ತಡೆದಿದ್ದಾರೆ. ಹುಡುಗಿ ಕಾಸರಗೋಡು ಮೂಲದವಳಾದ ಕಾರಣ, ಅಲ್ಲಿನ ಸಂಬಂಧಪಟ್ಟ ಇಲಾಖೆ ಮತ್ತು ಪೊಲೀಸರಿಗೂ ಮಾಹಿತಿ ನೀಡಿ ಪ್ರಕರಣವನ್ನು ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ad Widget
Click to comment

Leave a Reply

ಅಪರಾಧ

ಪುತ್ತೂರು ಲಾಡ್ಜ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ ಆರೋಪ

Published

on



Ad Widget

Ad Widget

Ad Widget

Ad Widget

ಪುತ್ತೂರು: ನಗರದ ಲಾಡ್ಜ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮೂವರು ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿರುವ ಆರೋಪ ಕೇಳಿಬಂದಿದೆ.

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ (27) ಹಲ್ಲೆಗೊಳಗಾದವರು ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಅ. 17ರಂದು ರಾತ್ರಿ ರಿಫಾಯಿ ಅವರು ಪುತ್ತೂರಿನ ಲಾಡ್ಜ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಫಾರೂಕ್, ಸೋನು ಹಾಗೂ ಇಷಾನ್ ಎಂಬವರು ಅಲ್ಲಿಗೆ ಬಂದು ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಒಡ್ಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

Ad Widget

Ad Widget <> Ad Widget

ಈ ಸಂಬಂಧ ರಿಫಾಯಿ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), 2023ರ ಕಲಂ 126(2), 352, 351(2) ಹಾಗೂ 115(2)ರಂತೆ ಪ್ರಕರಣ ದಾಖಲಾಗಿದೆ.



Ad Widget

ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

Continue Reading

ಅಪರಾಧ

ಸೌತಡ್ಕ ದೇವಸ್ಥಾನದ ಹೂವಿನ ಅಂಗಡಿ ವಿಚಾರದಲ್ಲಿ ಮಾರಾಮಾರಿ; ಮಹಿಳೆಯರ ಮೇಲೆ ಹಲ್ಲೆ ಆರೋಪ

Published

on



Ad Widget

Ad Widget

Ad Widget

Ad Widget

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹೊರಭಾಗದಲ್ಲಿರುವ ಅಂಗಡಿಯ ವಿಚಾರವಾಗಿ ಹೂವಿನ ವ್ಯಾಪಾರಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ವರದಿಯಾಗಿದೆ. ಈ ವೇಳೆ ಮಹಿಳೆಯರ ಮೇಲೂ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Ad Widget

Ad Widget

Ad Widget

Ad Widget

ದೇವಸ್ಥಾನದ ಟ್ರಸ್ಟ್‌ಗೆ ಸೇರಿದ ಅಂಗಡಿಗಳ ಏಲಂ ಪ್ರಕ್ರಿಯೆಯ ಮೂಲಕ ರಾಘವ ಎಂಬವರು ಹೂವಿನ ಸ್ಟಾಲ್‌ ಪಡೆದಿದ್ದರು ಎನ್ನಲಾಗಿದೆ. ಆದರೆ, ಏಲಂ ಪ್ರಕ್ರಿಯೆ ಪೂರ್ಣಗೊಂಡ ಬಳಿಕವೂ ಈ ಹಿಂದೆ ಅಂಗಡಿ ನಡೆಸುತ್ತಿದ್ದ ವ್ಯಾಪಾರಿ ಅಂಗಡಿಯನ್ನು ತೆರವುಗೊಳಿಸದೆ ಮುಂದುವರಿದಿದ್ದರು ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ರಾಘವ ಭಂಡಾರಿ ಎಂಬವರು ಅಂಗಡಿಗೆ ಏಕಾಏಕಿ ಪ್ರವೇಶಿಸಿದ ಸಂದರ್ಭದಲ್ಲಿ ಎರಡೂ ಕಡೆಯ ವ್ಯಾಪಾರಿಗಳ ನಡುವೆ ಮಾತಿನ ಚಕಮಕಿ ನಡೆದು, ಅದು ಮಾರಾಮಾರಿಗೆ ತಿರುಗಿದೆ ಎಂದು ಆರೋಪಿಸಲಾಗಿದೆ. ಈ ವೇಳೆ ಮಹಿಳೆಯರ ಮೇಲೆಯೂ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

Ad Widget

Ad Widget <> Ad Widget

ಘಟನೆಗೆ ಸಂಬಂಧಿಸಿದಂತೆ ರಾಘವ ಭಂಡಾರಿ ಅವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣದ ಕುರಿತು ಪೊಲೀಸರ ಮುಂದಿನ ಕ್ರಮದ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ.



Ad Widget
Ad Widget
Continue Reading

ಅಪರಾಧ

Uppinangadi-ಬೈಕ್ ಅಡ್ಡಗಟ್ಟಿ ಚೂರಿ ತೋರಿಸಿ ಬೆದರಿಸಿ ನಗದು, ಮೊಬೈಲ್ ದರೋಡೆ; ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ಬೈಕ್‌ನಲ್ಲಿ ತೆರಳುತ್ತಿದ್ದ ಯುವಕ ಹಾಗೂ ಮಹಿಳೆಯನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ, ಚೂರಿ ತೋರಿಸಿ ಬೆದರಿಸಿ ನಗದು ಮತ್ತು ಮೊಬೈಲ್ ಫೋನ್‌ಗಳನ್ನು ದೋಚಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕೋನಾಜೆ ಗ್ರಾಮದ ಸಿ.ಆರ್.ಸಿ. ಕಾಲೋನಿ ನಿವಾಸಿ ಮಿಥಿಲೇಶ್ (18) ಅವರು ನೀಡಿದ ದೂರಿನ ಪ್ರಕಾರ, ಅ.16ರಂದು ಬೆಳಗ್ಗೆ 11.45ರ ಸುಮಾರಿಗೆ ಈ ಘಟನೆ ನಡೆದಿದೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ಬೈಕ್‌ನಲ್ಲಿ ತೆರಳುತ್ತಿದ್ದ ಯುವಕ ಹಾಗೂ ಮಹಿಳೆಯನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ, ಚೂರಿ ತೋರಿಸಿ ಬೆದರಿಸಿ ನಗದು ಮತ್ತು ಮೊಬೈಲ್ ಫೋನ್‌ಗಳನ್ನು ದೋಚಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಡಬ ತಾಲೂಕಿನ ಕೋನಾಜೆ ಗ್ರಾಮದ ಸಿ.ಆರ್.ಸಿ. ಕಾಲೋನಿ ನಿವಾಸಿ ಮಿಥಿಲೇಶ್ (18) ಅವರು ನೀಡಿದ ದೂರಿನ ಪ್ರಕಾರ, ಅ.16ರಂದು ಬೆಳಗ್ಗೆ 11.45ರ ಸುಮಾರಿಗೆ ಈ ಘಟನೆ ನಡೆದಿದೆ.

Ad Widget

Ad Widget <> Ad Widget

ಮಿಥಿಲೇಶ್ ಅವರು ತಮ್ಮ ಅತ್ತೆ ಮಹಾದೇವಿ ಅವರೊಂದಿಗೆ ಪಡಿತರ ಚೀಟಿಯ ಕೆವೈಸಿಗಾಗಿ ಹೆಬ್ಬೆಟ್ಟು ನೀಡಲು ಬೈಕ್‌ನಲ್ಲಿ ಬಳಂಜದಿಂದ ಕೋನಾಜೆಗೆ ತೆರಳುತ್ತಿದ್ದರು. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಹಲೇಜಿ ಎಂಬಲ್ಲಿ ಗುರುವಾಯನಕೆರೆ–ಉಪ್ಪಿನಂಗಡಿ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಕಾರಿನಲ್ಲಿ ಬಂದ ಆರೋಪಿಗಳು ಬೈಕ್‌ಗೆ ಅಡ್ಡಗಟ್ಟಿ ನಿಲ್ಲಿಸಿದ್ದಾರೆ ಎನ್ನಲಾಗಿದೆ.



Ad Widget

ಈ ವೇಳೆ ತನ್ನೀಶ್ ಹಾಗೂ ಇತರ ಇಬ್ಬರು ಕಾರಿನಿಂದ ಇಳಿದು, ಹಣದ ವಿಚಾರವಾಗಿ ಪ್ರಶ್ನಿಸಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅವರೊಂದಿಗೆ ಇದ್ದ ಮತ್ತೊಬ್ಬ ವ್ಯಕ್ತಿ ಚೂರಿ ತೋರಿಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

Ad Widget

Ad Widget

ಬಳಿಕ ಮಿಥಿಲೇಶ್ ಅವರ ಪ್ಯಾಂಟ್ ಕಿಸೆಯಲ್ಲಿದ್ದ ಜಿಯೋ ಸಿಮ್ ಹೊಂದಿದ್ದ ಸುಮಾರು 3,000 ರೂ. ಮೌಲ್ಯದ ಮೊಬೈಲ್ ಫೋನ್ ಹಾಗೂ ಅಂಗಿಯ ಕಿಸೆಯಲ್ಲಿದ್ದ 5,200 ರೂ. ನಗದನ್ನು ಬಲವಂತವಾಗಿ ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನು ಪ್ರಶ್ನಿಸಿದ ಮಿಥಿಲೇಶ್ ಅವರ ಅತ್ತೆಯ ಕೈಯಲ್ಲಿದ್ದ ಜಿಯೋ ಸಿಮ್ ಹೊಂದಿದ್ದ ಸುಮಾರು 2,000 ರೂ. ಮೌಲ್ಯದ ಮೊಬೈಲ್ ಫೋನ್‌ನ್ನೂ ಕಿತ್ತುಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 134/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), 2023ರ ಕಲಂ 126(2), 308(5) ಹಾಗೂ 3(5)ರ ಪ್ರಕಾರ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading