Connect with us

ಶಿಕ್ಷಣ

Kanyana-ಕನ್ಯಾನ ಬಂಡಿತ್ತಡ್ಕ ಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ‍್ಯೋತ್ಸವ ಸಹಿತ ವಿವಿಧ ಕಾರ್ಯಕ್ರಮ

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 50ನೇ ವರ್ಷದ ಸ್ವಾತಂತ್ರ‍್ಯೋತ್ಸವ, ಆಟಿದ ಕೂಟ ಹಾಗೂ ಗಣಿತ ಮೆಟ್ರಿಕ್ ಮೇಳವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಕಮರುನ್ನಿಸ ದ್ವಜಾರೋಹಣ ಮಾಡಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 50ನೇ ವರ್ಷದ ಸ್ವಾತಂತ್ರ‍್ಯೋತ್ಸವ, ಆಟಿದ ಕೂಟ ಹಾಗೂ ಗಣಿತ ಮೆಟ್ರಿಕ್ ಮೇಳವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಕಮರುನ್ನಿಸ ದ್ವಜಾರೋಹಣ ಮಾಡಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದಲ್ಲಿ ್ಲ ಕನ್ಯಾನ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷರಾದ ರೇಖಾ ರಮೇಶ್, ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಕೃಷ್ಣಕುಮಾರ್ ಕಮ್ಮಜೆ, ಅಧ್ಯಕ್ಷ ಇಸ್ಮಾಯಿಲ್ ಕುಕ್ಕಾಜೆ, ಮಹಮ್ಮದ್ ಅಲಿ, ಸಿಆರ್‌ಪಿ ಚಂದ್ರಶೇಖರ್, ಗ್ರಾಮಪಂಚಾಯತ್ ಮಾಜಿ ಸದಸ್ಯೆ ಬುಶ್ರಿಯ ಕನ್ಯಾನ, ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ಡಿ. ಕೆ ಶಾಹುಲ್ ಹಮೀದ್ , ಕನ್ಯಾನ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ರೋಹಿತ್ ಉಪಸ್ಥಿತರಿದ್ದರು.

Ad Widget

Ad Widget <> Ad Widget

ಪ್ರಸಕ್ತ ವರ್ಷದಲ್ಲಿ ಶಾಲೆಗೆ ದಾಖಲಾತಿ ಪಡೆದ 13 ವಿದ್ಯಾರ್ಥಿಗಳ ಖಾತೆಗೆ ಠೇವಣಿ ಇಟ್ಟ ಪ್ರತಿಗಳನ್ನು ಹಿರಿಯ ವಿದ್ಯಾರ್ಥಿ ಸಂಘದಿಂದ ಮಕ್ಕಳ ಪೋಷಕರಿಗೆ ಹಸ್ತಾಂತರಿಸಲಾಯಿತು. ಮಕ್ಕಳ ಪೋಷಕರು ಅಟಿಕೂಟದಲ್ಲಿ ಸುಮಾರು 30ಕ್ಕೂ ಹೆಚ್ಚು ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸಿ ಆಟಿಕೂಟಕ್ಕೆ ಹೊಸ ಮೆರುಗನ್ನು ತಂದರು. ಗಣಿತ ಮೆಟ್ರಿಕ್ ಮೇಳದಲ್ಲಿ 24 ಮಂದಿ ವಿದ್ಯಾರ್ಥಿಗಳು ಐದು ತಂಡಗಳಾಗಿ ವ್ಯಾಪಾರ ವಹಿವಾಟು ನಡೆಸಿದರು. ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸೆಕೀನ ಎಸ್ ಪ್ರಾಸ್ತಾವನೆಗೈದು ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಶಾರದಾ ಕೇಪುಳಗುಡ್ಡೆ ಧನ್ಯವಾದ ಸಮರ್ಪಿಸಿದರು. ಶಿಕ್ಷಕಿ ವನಿತಾ ಕನ್ಯಾನ ಕಾರ್ಯಕ್ರಮ ನಿರೂಪಿಸಿದರು.



Ad Widget
Ad Widget

ಶಿಕ್ಷಣ

Narendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.

Ad Widget

Ad Widget <> Ad Widget

ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.



Ad Widget

ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.

Ad Widget

Ad Widget

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು,ಅ.1: ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಸರ್ಟಿಫಿಕೇಟ್ ಮಾತ್ರವಲ್ಲ, ಉಜ್ವಲ ಭವಿಷ್ಯ, ಒಳ್ಳೆಯ ವೇತನ ಹಾಗೂ ಹೆಸರು ಇತ್ಯಾದಿಗಳೆಲ್ಲವೂ ಲಭಿಸಲಿದೆ. ಇಂದಿನ ಕಾಲದಲ್ಲಿ ಕಲಿಕೆಗೆ ಬೇಕಾದ ಅನೇಕ ಸಂಪನ್ಮೂಲಗಳು ಲಭ್ಯವಿರುವಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪೂರ್ವಸಿದ್ಧತೆ ಎಂಬುದು ನಾವು ಉತ್ತೀರ್ಣರಾಗಲು ಅತ್ಯಗತ್ಯ. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಸಕ್ರಿಯರಾಗಿ ಅಧ್ಯಯನ ನಡೆಸಿ ಎಲ್ಲಾ ರೀತಿಯಿಂದಲೂ ಸಿದ್ಧರಾಗಿ ಪರೀಕ್ಷೆಯನ್ನು ಜಯಿಸಬೇಕು ಎಂದು ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ತಿಳಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ ಅಧ್ಯಾಪಕ ವೃತ್ತಿಯನ್ನು ಬಯಸಿ ಹೋಗುವವರಿಗೆ, ಸಂಶೋಧನಾ ಕ್ಷೇತ್ರವನ್ನು ಆರಿಸುವವರಿಗೆ ನೆಟ್ ಹಾಗೂ ಕೆ-ಸೆಟ್ ಪರೀಕ್ಷೆಗಳನ್ನು ಪೂರ್ಣಗೊಳಿಸುವುದು ಅಗತ್ಯ. ಪರೀಕ್ಷೆಗೆ ಸಿದ್ಧರಾಗಲು ನಿರಂತರವಾಗಿ ಓದಿನಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಇವುಗಳ ಪಠ್ಯಕ್ರಮಗಳನ್ನು ಅಭ್ಯಾಸಿಸಿ ಪರಿಣತರಿಂದ ಮಾರ್ಗದರ್ಶನವನ್ನು ಪಡೆದು ಯಶಸ್ಸು ಗಳಿಸಬೇಕಿದೆ ಎಂದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ.ಬಿ ಸ್ವಾಗತಿಸಿ ಪ್ರಥಮ ಎಂಕಾಂ ವಿದ್ಯಾರ್ಥಿ ಧನರಾಜ್ ವಂದಿಸಿದರು. ಪ್ರಥಮ ಎಂಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಯು.ಕೆ ನಿರೂಪಿಸಿದರು.



Ad Widget
Ad Widget
Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಯಿದೆ ದೇವುಸ್ ಚರ್ಚ್ ಸಹಾಯಕ ಧರ್ಮಗುರು
ಫಾ. ಮರ್ವಿನ್ ಲೋಬೊ ಮಾತನಾಡಿ, ಗಾಂಧೀಜಿಯವರ ಜೀವನ ನಮಗೆ ದಾರಿದೀಪವಾಗಿದ್ದು, ಪ್ರತಿಯೊಬ್ಬರು ಅವರು ತೋರಿಸಿಕೊಟ್ಟ ಹಾದಿಯಲ್ಲಿ ಮುನ್ನಡೆಯಬೇಕು.

Ad Widget

Ad Widget <> Ad Widget

ಮುಖ್ಯವಾಗಿ ಸತ್ಯ ಮತ್ತು ಅಹಿಂಸೆ ಗಾಂಧೀಜಿಯವರು ತೋರಿಸಿದ ಎರಡು ಮಾರ್ಗಗಳು. ಇಂದು ಅಹಿಂಸೆ ಕೇವಲ ಭೌತಿಕವಾಗಿ ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಗಳಲ್ಲಿ ಕೂಡ ಪಾಲನೆಯನ್ನು ಮಾಡಬೇಕಾಗಿದೆ. ಗಾಂಧೀಜಿಯ ಮರಣದ 78 ವರ್ಷಗಳ ನಂತರವೂ ಗಾಂಧೀಜಿಯವರ ಜೀವನ ಅತ್ಯಂತ ಪ್ರಸ್ತುತವಾಗಿದೆ ಎಂದು ತಿಳಿಸಿದರು.



Ad Widget

ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಮಹಾತ್ಮಾ ಗಾಂದೀಜಿಯವರ ಸರಳ ಜೀವನ ನಮಗೆ ಪಾಠವಾಗಬೇಕು. ಅವರಿಗೆ ಅತ್ಯಂತ ವಿಲಾಸಿ ಜೀವನವನ್ನು ನಡೆಸುವ ಅವಕಾಶ ಇದ್ದರೂ, ಕೂಡ ಭಾರತೀಯರಿಗಾಗಿ ಅವರು ಸರಳ ಮತ್ತು ನ್ಯಾಯ ಸಮ್ಮತ ಜೀವನವನ್ನು ಆಯ್ಕೆ ಮಾಡಿಕೊಂಡರು.

Ad Widget

Ad Widget

ಸತ್ಯದೊಂದಿಗಿನ ನನ್ನ ಪ್ರಯೋಗಗಳು ಎನ್ನುವ ಪುಸ್ತಕದಲ್ಲಿ ಅವರು ಅವರ ಜೀವನದಲ್ಲಿ ನಡೆದಂತಹ ಘಟನೆಗಳನ್ನು ವಿವರಿಸಿದ್ದು, ಇಂದಿನ ಯುವಕರು ಕಡ್ಡಾಯವಾಗಿ ಈ ಪುಸ್ತಕವನ್ನು ಓದಬೇಕೆಂದು ತಿಳಿಸಿದರು.

ಉಪನ್ಯಾಸಕರಾದ ಭರತ್ ಕುಮಾರ್ ಗಾಂಧೀಜಿಯವರ ತತ್ವ, ಸಿದ್ಧಾಂತಗಳ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಉಪನ್ಯಾಸಕರಾದ ಯಶವಂತ್ ಎಂ ಡಿ ಹಾಗೂ ಗೋವಿಂದ್ ಪ್ರಕಾಶ್ ಸಿ. ಏಚ್ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾಲೇಜಿನ ಬೋಧಕ/ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕರಾದ ಸುಮಾ ಡಿ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading