ಉಡುಪಿ
Murder-ಬ್ರಹ್ಮಾವರ ಡಬಲ್ ಮರ್ಡರ್: ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಮಗ..!
ಕ್ಷುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಮಗನೇ ತನ್ನ ತಂದೆ-ತಾಯಿಯನ್ನು ಸುತ್ತಿಗೆಯಿಂದ ಬರ್ಬರವಾಗಿ ಹೊಡೆದು ಹತ್ಯೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ಬ್ರಹ್ಮಾವರದ ಗಾಂಧಿನಗರದಲ್ಲಿ ರವಿವಾರ ರಾತ್ರಿ ನಡೆದಿದೆ.
ಬ್ರಹ್ಮಾವರ: ಕ್ಷುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಮಗನೇ ತನ್ನ ತಂದೆ-ತಾಯಿಯನ್ನು ಸುತ್ತಿಗೆಯಿಂದ ಬರ್ಬರವಾಗಿ ಹೊಡೆದು ಹತ್ಯೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ಬ್ರಹ್ಮಾವರದ ಗಾಂಧಿನಗರದಲ್ಲಿ ರವಿವಾರ ರಾತ್ರಿ ನಡೆದಿದೆ.
ಗಾಂಧಿನಗರದ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಅವರ ಪತ್ನಿ ಶಂಶಾದ್ ಬೇಗಂ ಕೊಲೆಯಾದ ದಂಪತಿ. ಇವರನ್ನು ಮಗ ಶಾಹಿದ್ ಅಲಿ ಎಂಬಾತನೇ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ವಿವರ:
ಮೃತ ಮೆಹಬೂಬ್ ಅಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರೆ, ಮಗ ಶಾಹಿದ್ ಅಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ರವಿವಾರ ರಾತ್ರಿ ಯಾವುದೋ ಹಳೆಯ ವಿಚಾರಕ್ಕೆ ಮನೆಯಲ್ಲಿ ಜಗಳ ನಡೆದಿದೆ. ಈ ವೇಳೆ ಸಿಟ್ಟಿನ ಭರದಲ್ಲಿ ಶಾಹಿದ್ ಅಲಿ, ಮನೆಯಲ್ಲಿದ್ದ ಸುತ್ತಿಗೆಯಿಂದ ತಂದೆ ಮತ್ತು ತಾಯಿಯ ತಲೆಗೆ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ಹಲ್ಲೆಯ ತೀವ್ರತೆಗೆ ದಂಪತಿ ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಬಿದ್ದು ಮೃತಪಟ್ಟಿದ್ದಾರೆ.
ಪೊಲೀಸರಿಗೆ ಮಾಹಿತಿ ನೀಡಿದ ಆರೋಪಿ:
ಹತ್ಯೆ ಮಾಡಿದ ಬಳಿಕ ಆರೋಪಿಯೇ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎಂದು ತಿಳಿದುಬಂದಿದೆ. ಮಾಹಿತಿ ಸಿಗುತ್ತಿದ್ದಂತೆಯೇ ಬ್ರಹ್ಮಾವರ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿ ಶಾಹಿದ್ ಅಲಿಯನ್ನು ವಶಕ್ಕೆ ಪಡೆದಿದ್ದಾರೆ.
ಉಡುಪಿ
Manipal-ಮಣಿಪಾಲ: ಕೆಎಂಸಿ ಆಸ್ಪತೆಯ 4ನೇ ಮಹಡಿಯಿಂದ ಬಿದ್ದ ವ್ಯಕ್ತಿಗೆ ಗಂಭೀರ ಗಾಯ
ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.
ಉಡುಪಿ, ಸೆ.30: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.
ಪತ್ನಿಯೊಂದಿಗೆ ನಡೆದ ಜಗಳದ ಬಳಿಕ ಕೆಲವು ದಿನಗಳ ಹಿಂದೆ ರಾಜೇಶ್ ವಿಷ ಸೇವಿಸಿದ್ದರು ಎನ್ನಲಾಗಿದ್ದು, ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಡಿಸ್‌ಚಾರ್ಜ್‌ಗೆ ಸಿದ್ಧತೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.
ಬುಧವಾರ ಆಸ್ಪತ್ರೆ ಸಿಬ್ಬಂದಿಯೊಂದಿಗೆ ವಾಕಿಂಗ್‌ಗೆ ತೆರಳುವುದಾಗಿ ಹೇಳಿ ಕೊಠಡಿಯಿಂದ ರಾಜೇಶ್ ಹೊರಬಂದಿದ್ದರು. ಬಳಿಕ ಕಿಟಕಿಯ ಬಳಿ ತೆರಳಿ ಗ್ರಿಲ್ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಜಾಲರಿಯನ್ನು ಹರಿದು ಕೆಳಗೆ ಇಳಿಯುತ್ತಿದ್ದಾಗ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ
Clarification-ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿ ಹತ್ಯೆ? ಪೊಲೀಸರಿಂದ ಮಹತ್ವದ ಸ್ಪಷ್ಟನೆ
ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮ ಸೇರಿದಂತೆ ಕೆಲವು ಸ್ಥಳೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಉಡುಪಿ: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮ ಸೇರಿದಂತೆ ಕೆಲವು ಸ್ಥಳೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಉಡುಪಿ ಮೂಲದ ವ್ಯಕ್ತಿಯೊಬ್ಬರು ಯುಎಇಯ ಶಾರ್ಜಾದಲ್ಲಿ ಹತ್ಯೆಯಾಗಿದ್ದಾರೆ ಎಂಬ ವರದಿಗಳು ಪ್ರಸಾರವಾಗುತ್ತಿವೆ. ಆದರೆ, ಈ ಕುರಿತು ಶಾರ್ಜಾ ಪೊಲೀಸ್ ಇಲಾಖೆ ಅಥವಾ ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ/ಕಾನ್ಸುಲೇಟ್‌ನಿಂದ ಉಡುಪಿ ಜಿಲ್ಲಾ ಪೊಲೀಸರಿಗೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಅಥವಾ ದೃಢೀಕರಣ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕೃತ ಮಾಹಿತಿ ಲಭ್ಯವಾದಲ್ಲಿ, ಅದನ್ನು ಪರಿಶೀಲಿಸಿದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಹೀಗಾಗಿ, ಸದ್ಯ ಸಾಮಾಜಿಕ ಮಾಧ್ಯಮ ಹಾಗೂ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಶಾರ್ಜಾ ಹತ್ಯೆ ಕುರಿತ ಸುದ್ದಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ
Murder-ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಕೊಲೆ; ಕಾರಿನಲ್ಲಿ ತುಂಡು ತುಂಡಾದ ಮೃತದೇಹ ಪತ್ತೆ; ಪತ್ನಿ, ಅಪ್ರಾಪ್ತ ಮಗ ನಾಪತ್ತೆ
ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಕೊಲೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಯಾದ ವ್ಯಕ್ತಿಯ ಪತ್ನಿ ಹಾಗೂ ಅಪ್ರಾಪ್ತ ಮಗ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಉಡುಪಿ, ಸೆ.22: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಕೊಲೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಯಾದ ವ್ಯಕ್ತಿಯ ಪತ್ನಿ ಹಾಗೂ ಅಪ್ರಾಪ್ತ ಮಗ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಮೃತರನ್ನು ಉಡುಪಿ ಮೂಲದ ಪ್ರಕಾಶ್ ಕುಂದರ್ ಎಂದು ಗುರುತಿಸಲಾಗಿದೆ. ಅವರು ಶಾರ್ಜಾದಲ್ಲಿ ಪತ್ನಿ ಟೀನಾ ಹಾಗೂ ಅಪ್ರಾಪ್ತ ಮಗನೊಂದಿಗೆ ವಾಸಿಸುತ್ತಿದ್ದರು. ಪ್ರಕಾಶ್ ಅವರ ಸಾವಿನ ಬಳಿಕ ಪತ್ನಿ ಹಾಗೂ ಮಗನ ಸಂಪರ್ಕವೂ ಲಭ್ಯವಾಗದಿರುವುದು ಪ್ರಕರಣದ ಬಗ್ಗೆ ಮತ್ತಷ್ಟು ಕುತೂಹಲ ಮೂಡಿಸಿದೆ.
ವರದಿಗಳ ಪ್ರಕಾರ, ಜುಲೈ 20ರ ಸುಮಾರಿಗೆ ಪ್ರಕಾಶ್ ತಮ್ಮ ಸಹೋದರನನ್ನು ಸಂಪರ್ಕಿಸಲು ಪ್ರಯತ್ನಿಸಿದ್ದರು. ಸಾಮಾನ್ಯವಾಗಿ ವಾಯ್ಸ್ ಮೆಸೇಜ್ ಮೂಲಕ ಪ್ರತಿಕ್ರಿಯಿಸುತ್ತಿದ್ದ ಅವರು, ಆ ದಿನ ಟೆಕ್ಸ್ಟ್ ಮೆಸೇಜ್ ಕಳುಹಿಸಿದ್ದರು. ಸಹೋದರರು ದೂರವಾಣಿ ಮೂಲಕ ಮಾತನಾಡುವಂತೆ ಒತ್ತಾಯಿಸಿದಾಗ ಸಂಭಾಷಣೆ ಕಡಿತಗೊಂಡಿತ್ತು ಎನ್ನಲಾಗಿದೆ.
ಇದರಿಂದ ಆತಂಕಗೊಂಡ ಸಂಬಂಧಿಕರು ಪ್ರಕಾಶ್ ಕೆಲಸ ಮಾಡುತ್ತಿದ್ದ ಕಂಪನಿಯನ್ನು ಸಂಪರ್ಕಿಸಿದ್ದಾರೆ. ಈ ವೇಳೆ ಅವರು ಭಾರತಕ್ಕೆ ತೆರಳಿದ್ದಾರೆ ಎಂದು ಕಂಪನಿ ತಿಳಿಸಿತ್ತು. ಆದರೆ ಪ್ರಕಾಶ್ ತಮ್ಮ ಸ್ವಗ್ರಾಮಕ್ಕೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರಿಗೆ ಅನುಮಾನ ಮೂಡಿದ್ದು, ಶಾರ್ಜಾ ಅಧಿಕಾರಿಗಳನ್ನು ಸಂಪರ್ಕಿಸಿ ನಾಪತ್ತೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ ಶಾರ್ಜಾ ಪೊಲೀಸರು ತನಿಖೆ ಆರಂಭಿಸಿದ್ದು, ಹುಡುಕಾಟದ ವೇಳೆ ಪ್ರಕಾಶ್ ಅವರದ್ದೇ ಕಾರಿನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ಅವರನ್ನು ಕೊಲೆ ಮಾಡಲಾಗಿದ್ದು, ಮೃತದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಲಾಗಿತ್ತು ಎನ್ನಲಾಗಿದೆ.
ಪ್ರಕಾಶ್ ಅವರ ಪತ್ನಿ ಟೀನಾ ಹಾಗೂ ಅಪ್ರಾಪ್ತ ಮಗ ಪ್ರಸ್ತುತ ಪತ್ತೆಯಾಗದ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳ ಗಮನ ಅವರತ್ತವೂ ಹರಿದಿದೆ. ಕೊಲೆ ಪ್ರಕರಣದಲ್ಲಿ ಟೀನಾ ಅವರ ಪಾತ್ರವಿದೆಯೇ ಅಥವಾ ಬೇರೆ ಕಾರಣಗಳಿಂದ ಅವರು ಮಗನೊಂದಿಗೆ ಶಾರ್ಜಾದಿಂದ ತೆರಳಿದ್ದಾರೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು ಶಾರ್ಜಾದಿಂದ ತೆರಳಿ ಭಾರತಕ್ಕೆ ಬಂದಿರುವ ಸಾಧ್ಯತೆಯ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಪ್ರಕಾಶ್ ಶಾರ್ಜಾ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ಟೀನಾ ಶಿಕ್ಷಕಿಯಾಗಿ ಉದ್ಯೋಗದಲ್ಲಿದ್ದರು. ದಂಪತಿಗೆ ಸುಮಾರು 20 ವರ್ಷಗಳ ಹಿಂದೆ ವಿವಾಹವಾಗಿದ್ದು, 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪುತ್ರನಿದ್ದಾನೆ.
ದಂಪತಿಗಳ ನಡುವೆ ಯಾವುದೇ ಗಂಭೀರ ವೈಮನಸ್ಸು ಅಥವಾ ವಿವಾದವಿದ್ದ ಬಗ್ಗೆ ತಿಳಿದಿರಲಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಪ್ರಕಾಶ್ ಕಳೆದ ವರ್ಷ ಡಿಸೆಂಬರ್‌ನಲ್ಲಿ ಭಾರತಕ್ಕೆ ಬಂದು ತೆರಳಿದ್ದರು ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಾರ್ಜಾ ಪೊಲೀಸರು ತನಿಖೆ ಮುಂದುವರಿಸಿದ್ದು, ಪ್ರಕಾಶ್ ಅವರ ಪತ್ನಿ ಹಾಗೂ ಮಗನ ಇರುವಿಕೆ ಸೇರಿದಂತೆ ಕೊಲೆಯ ಹಿಂದಿನ ನಿಖರ ಕಾರಣಗಳ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗವಾಗಬೇಕಿದೆ. ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಪ್ರಕಾಶ್ ಅವರ ಮೃತದೇಹವನ್ನು ತಾಯ್ನಾಡಿಗೆ ತರಲು ಕುಟುಂಬಸ್ಥರು ಕಾಯುತ್ತಿದ್ದಾರೆ.
-
ಪುತ್ತೂರು22 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್24 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಅಪರಾಧ23 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
Uncategorized3 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized2 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ


















