ಘಟನೆಯ ವಿವರ:ಆಗಸ್ಟ್ 26ರಂದು ನಡೆಯಲಿರುವ ಈದ್ ಮಿಲಾದ್ ಅಂಗವಾಗಿ ನಗರದಲ್ಲಿ 40 ಅಡಿ ಎತ್ತರದ ಟಿಪ್ಪು […]" /> ಘಟನೆಯ ವಿವರ:ಆಗಸ್ಟ್ 26ರಂದು ನಡೆಯಲಿರುವ ಈದ್ ಮಿಲಾದ್ ಅಂಗವಾಗಿ ನಗರದಲ್ಲಿ 40 ಅಡಿ ಎತ್ತರದ ಟಿಪ್ಪು […]"> Tipu Cutout-ಟಿಪ್ಪು ಕಟೌಟ್ ಮುಂದೆ ಪಾಕ್ ಪರ ಹಾಡಿಗೆ ರೀಲ್ಸ್: ಚಿಕ್ಕಮಗಳೂರು ಪೊಲೀಸರಿಂದ ಸುಮೋಟೋ ಕೇಸ್ - Nikhara News | Kannada News Website
Connect with us

ಸ್ಥಳೀಯ

Tipu Cutout-ಟಿಪ್ಪು ಕಟೌಟ್ ಮುಂದೆ ಪಾಕ್ ಪರ ಹಾಡಿಗೆ ರೀಲ್ಸ್: ಚಿಕ್ಕಮಗಳೂರು ಪೊಲೀಸರಿಂದ ಸುಮೋಟೋ ಕೇಸ್

Published

on

Ad Widget

Ad Widget

Ad Widget

Ad Widget

ಈದ್ ಮಿಲಾದ್ ಮೆರವಣಿಗೆಯ ಸಿದ್ಧತೆಯ ನಡುವೆಯೇ ಚಿಕ್ಕಮಗಳೂರಿನಲ್ಲಿ ವಿವಾದಾತ್ಮಕ ರೀಲ್ಸ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಸಂಬಂಧ ನಗರ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಚಿಕ್ಕಮಗಳೂರು: ಈದ್ ಮಿಲಾದ್ ಮೆರವಣಿಗೆಯ ಸಿದ್ಧತೆಯ ನಡುವೆಯೇ ಚಿಕ್ಕಮಗಳೂರಿನಲ್ಲಿ ವಿವಾದಾತ್ಮಕ ರೀಲ್ಸ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಸಂಬಂಧ ನಗರ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಘಟನೆಯ ವಿವರ:
ಆಗಸ್ಟ್ 26ರಂದು ನಡೆಯಲಿರುವ ಈದ್ ಮಿಲಾದ್ ಅಂಗವಾಗಿ ನಗರದಲ್ಲಿ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಸಲಾಗಿತ್ತು. ಈ ಕಟೌಟ್ ಮುಂದೆ ನಿಂತು ಪಾಕಿಸ್ತಾನ ಸೇನೆಯನ್ನು ಗುಣಗಾನ ಮಾಡುವ ‘ಮುಜಾಹಿದ್’ ಎಂಬ ಹಾಡನ್ನು ಬಳಸಿ ಕೆಲ ಯುವಕರು ರೀಲ್ಸ್ ಮಾಡಿದ್ದಾರೆ. ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಇದು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget <> Ad Widget

ಪೊಲೀಸ್ ದೂರು ಮತ್ತು ಎಫ್‌ಐಆರ್:
ಇನ್ನೊಂದು ಕೋಮನ್ನು ಅಣಕಿಸುವ ಮತ್ತು ಉದ್ದೇಶಪೂರ್ವಕವಾಗಿ ಸಮಾಜದಲ್ಲಿ ದ್ವೇಷ ಹರಡುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂದು ಪರಿಗಣಿಸಿರುವ ನಗರ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಧನರಾಜ್ ಅವರು ಸುಮೋಟೋ ಕೇಸ್ ದಾಖಲಿಸಿದ್ದಾರೆ. ಧಾರ್ಮಿಕ ನಂಬಿಕೆಗೆ ಅಪಮಾನ ಹಾಗೂ ದೇಶವಿರೋಧಿ ಪ್ರಚೋದನೆಯ ಆರೋಪದಡಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 196 ಮತ್ತು 299ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹಿಂದೆ ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿಯೂ ಇಂತಹದ್ದೇ ಘಟನೆಗಳು ನಡೆದು ಕೋಮು ಸೌಹಾರ್ದಕ್ಕೆ ಧಕ್ಕೆ ತಂದಿದ್ದವು. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಶಾಂತಿ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

Click to comment

Leave a Reply

ರಾಜಕೀಯ

Priyanka Kharge-ಕರ್ನಾಟಕದ ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ; ಬೆಂಗಳೂರಿನ ಬೆಳವಣಿಗೆಯ ಅಂತರವನ್ನು ಕಡಿಮೆ ಮಾಡುವ ಸಾಮರ್ಥ್ಯ ಮಂಗಳೂರಿಗಿದೆ; ಹೂಡಿಕೆ, ಕೌಶಲ್ಯಾಭಿವೃದ್ಧಿ ಮತ್ತು ನವೋದ್ಯಮಗಳ ಮೂಲಕ ಬಿಯಾಂಡ್ ಬೆಂಗಳೂರು ಅಭಿಯಾನವನ್ನು ವೇಗಗೊಳಿಸಲು ಉದ್ಯಮ ವಲಯಕ್ಕೆ ಸಚಿವರ ಕರೆ

Published

on

Ad Widget

Ad Widget

Ad Widget

Ad Widget

ಕರ್ನಾಟಕದ ಪ್ರಾದೇಶಿಕ ಅಭಿವೃದ್ಧಿಯ ಅಂತರವನ್ನು ಕಡಿಮೆ ಮಾಡುವಲ್ಲಿ ಮಂಗಳೂರು ಮಹತ್ವದ ಪಾತ್ರ ವಹಿಸುವ ಸಾಮರ್ಥ್ಯ ಹೊಂದಿದೆ. ಮಂಗಳೂರನ್ನು ಪ್ರಮುಖ ತಂತ್ರಜ್ಞಾನ ಮತ್ತು ಆರ್ಥಿಕ ಬೆಳವಣಿಗೆಯ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸುವಂತೆ ಕರ್ನಾಟಕದ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ಉದ್ಯಮ ವಲಯದ ನಾಯಕರಿಗೆ ಕರೆ ನೀಡಿದರು.

Ad Widget

Ad Widget

Ad Widget

Ad Widget

ಬೆಂಗಳೂರು, ನ. 25,: ಕರ್ನಾಟಕದ ಪ್ರಾದೇಶಿಕ ಅಭಿವೃದ್ಧಿಯ ಅಂತರವನ್ನು ಕಡಿಮೆ ಮಾಡುವಲ್ಲಿ ಮಂಗಳೂರು ಮಹತ್ವದ ಪಾತ್ರ ವಹಿಸುವ ಸಾಮರ್ಥ್ಯ ಹೊಂದಿದೆ. ಮಂಗಳೂರನ್ನು ಪ್ರಮುಖ ತಂತ್ರಜ್ಞಾನ ಮತ್ತು ಆರ್ಥಿಕ ಬೆಳವಣಿಗೆಯ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸುವಂತೆ ಕರ್ನಾಟಕದ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ಉದ್ಯಮ ವಲಯದ ನಾಯಕರಿಗೆ ಕರೆ ನೀಡಿದರು.

Ad Widget

Ad Widget alt="Ad Widget"/>

Ad Widget

ಮಂಗಳೂರಿನಲ್ಲಿ ಡೆಲಾಯ್ಟ್ ಸಂಸ್ಥೆಯ ಭಾರತದ 27ನೇ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಬೆಂಗಳೂರು ನಂತರ ಕರ್ನಾಟಕದ ರಾಜ್ಯದ ಒಟ್ಟು ಆಂತರಿಕ ಉತ್ಪನ್ನಕ್ಕೆ ಎರಡನೇ ಅತಿ ಹೆಚ್ಚು ಕೊಡುಗೆ ನೀಡುವ ಜಿಲ್ಲೆಯಾಗಿ ದಕ್ಷಿಣ ಕನ್ನಡ ಗುರುತಿಸಿಕೊಂಡಿದೆ. ರಾಜ್ಯದ ಒಟ್ಟು ಆಂತರಿಕ ಉತ್ಪನ್ನಕ್ಕೆ ಜಿಲ್ಲೆಯ ಕೊಡುಗೆ ಶೇ. 5.3ರಷ್ಟಿದೆ ಎಂದು ತಿಳಿಸಿದರು. ಈ ಆರ್ಥಿಕ ಶಕ್ತಿ, ಈ ಭಾಗದ ಪ್ರತಿಭಾನ್ವಿತ ಮಾನವ ಸಂಪನ್ಮೂಲ, ಶೈಕ್ಷಣಿಕ ಸಂಸ್ಥೆಗಳು ಹಾಗೂ ಉತ್ತಮ ಜೀವನಮಟ್ಟದೊಂದಿಗೆ ಮಂಗಳೂರು, ಕರ್ನಾಟಕದ ಮುಂದಿನ ಹಂತದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಾಮರ್ಥ್ಯ ಹೊಂದಿದೆ ಎಂದು ಹೇಳಿದರು.

Ad Widget

Ad Widget <> Ad Widget

“ಕರ್ನಾಟಕದ ಪ್ರಮುಖ ಆರ್ಥಿಕ ಬೆಳವಣಿಗೆಯ ಕೇಂದ್ರವಾಗಿ ಹೊರಹೊಮ್ಮುವ ಅಪಾರ ಸಾಮರ್ಥ್ಯ ಮಂಗಳೂರಿಗಿದೆ. ಬಿಯಾಂಡ್ ಬೆಂಗಳೂರು ಮೂಲಕ ಪ್ರತಿಭೆಗಳು ಈಗಾಗಲೇ ಇರುವ ಪ್ರದೇಶಗಳಿಗೆ ಅವಕಾಶಗಳನ್ನು ಕೊಂಡೊಯ್ಯುವುದು ನಮ್ಮ ಉದ್ದೇಶವೇ ಹೊರತು, ಪ್ರತಿಭೆಗಳು ಬೆಂಗಳೂರಿಗೆ ಬರಬೇಕೆಂದು ನಿರೀಕ್ಷಿಸುವುದಲ್ಲ. ನಮ್ಮ ಪ್ರಾದೇಶಿಕ ನಗರಗಳಲ್ಲಿರುವ ಸಾಮರ್ಥ್ಯವನ್ನು ಉದ್ಯಮಗಳು ಗುರುತಿಸಿ, ಸದೃಢ ಆರ್ಥಿಕ ವ್ಯವಸ್ಥೆಗಳನ್ನು ನಿರ್ಮಿಸುವಲ್ಲಿ ನಮ್ಮೊಂದಿಗೆ ಕೈಜೋಡಿಸಬೇಕು,” ಎಂದು ಸಚಿವರು ಹೇಳಿದರು.

ಮಂಗಳೂರಿನಲ್ಲಿ ತನ್ನ ಕಚೇರಿಯನ್ನು ಸ್ಥಾಪಿಸುವ ಡೆಲಾಯ್ಟ್ ಸಂಸ್ಥೆಯ ನಿರ್ಧಾರವನ್ನು ಶ್ಲಾಘಿಸಿದ ಖರ್ಗೆ, ಈ ಹೂಡಿಕೆಯು ಸರ್ಕಾರದ ಬಿಯಾಂಡ್ ಬೆಂಗಳೂರು ದೃಷ್ಟಿಕೋನದಡಿ ಉತ್ತೇಜಿಸಲು ಬಯಸುತ್ತಿರುವ ಉದ್ಯಮ ವಲಯದ ಪಾಲ್ಗೊಳ್ಳುವಿಕೆಗೆ ಉತ್ತಮ ಉದಾಹರಣೆಯಾಗಿದೆ ಎಂದು ಹೇಳಿದರು.

Ad Widget

Ad Widget

“ಈ ಕಾರ್ಯ ಸಾಕಾರಗೊಳ್ಳಲು ವಿಶೇಷವಾಗಿ ಶ್ರಮಿಸಿದ ರೋಮಲ್ ಶೆಟ್ಟಿ ಮತ್ತು ಡೆಲಾಯ್ಟ್‌ನ ಇಡೀ ತಂಡವನ್ನು ನಾನು ಅಭಿನಂದಿಸಲು ಬಯಸುತ್ತೇನೆ. ಸರ್ಕಾರದ ಬಿಯಾಂಡ್ ಬೆಂಗಳೂರು ನೀತಿ ಉತ್ತೇಜಿಸಲು ಬಯಸುತ್ತಿರುವ ಉದ್ಯಮ ಸಹಭಾಗಿತ್ವ ಮತ್ತು ಬದ್ಧತೆ ಇದೇ ರೀತಿಯದ್ದಾಗಿದೆ. ಮಂಗಳೂರಿನಲ್ಲಿ ಅಪಾರ ಸಾಮರ್ಥ್ಯವಿದೆ ಎಂದು ನಾನು ಭಾವಿಸುತ್ತೇನೆ. ಇಂತಹ ಉಪಕ್ರಮಗಳು ಈ ಭಾಗದ ಅವಕಾಶಗಳನ್ನು ಅನಾವರಣಗೊಳಿಸಲು ನೆರವಾಗಲಿವೆ. ರೋಮಲ್ ಮತ್ತು ಡೆಲಾಯ್ಟ್‌ನ ಇಡೀ ತಂಡಕ್ಕೆ ನಾನು ಧನ್ಯವಾದ ಸಲ್ಲಿಸುತ್ತೇನೆ,” ಎಂದು ಅವರು ಹೇಳಿದರು.

ಬಿಯಾಂಡ್ ಬೆಂಗಳೂರು: ಪ್ರಾದೇಶಿಕ ನಗರಗಳಿಗೆ ಬೆಳವಣಿಗೆಯ ಅವಕಾಶ

ಸರ್ಕಾರದ ಬಿಯಾಂಡ್ ಬೆಂಗಳೂರು ಕಾರ್ಯತಂತ್ರವನ್ನು ವಿವರಿಸಿದ ಖರ್ಗೆ, ವಿವಿಧ ಪ್ರದೇಶಗಳ ಸಾಮರ್ಥ್ಯ ಮತ್ತು ಶಕ್ತಿಯನ್ನು ಬಳಸಿಕೊಂಡು ರಾಜ್ಯದಲ್ಲಿ ಬಹು ಆರ್ಥಿಕ ಬೆಳವಣಿಗೆಯ ಕೇಂದ್ರಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದರು.

ಮಂಗಳೂರಿನ ಇತಿಹಾಸದಲ್ಲೇ ಮೊದಲ ಬಾರಿಗೆ ನಗರದಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯನ್ನು ಉಲ್ಲೇಖಿಸಿದ ಅವರು, ಈ ಭಾಗದ ಪ್ರಮುಖ ಬೆಳವಣಿಗೆಯ ಅವಕಾಶಗಳನ್ನು ಗುರುತಿಸಲಾಗಿದ್ದು, ಪ್ರದೇಶದ ಅಭಿವೃದ್ಧಿಗಾಗಿ ಸುಮಾರು ₹6,000 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.

ಸ್ಥಳೀಯ ಆರ್ಥಿಕತೆಯ ವೇಗವರ್ಧನೆ ಕಾರ್ಯಕ್ರಮ (ಲೀಪ್) ಮೂಲಕ ಸ್ಥಳೀಯ ಸಾಮರ್ಥ್ಯಗಳನ್ನು ಗುರುತಿಸುವುದು, ಹೂಡಿಕೆಗಳಿಗೆ ಅವಕಾಶ ಕಲ್ಪಿಸುವುದು ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಪ್ರಾದೇಶಿಕ ಆರ್ಥಿಕ ಅಭಿವೃದ್ಧಿಗೆ ವೇಗ ನೀಡುವ ಉದ್ದೇಶ ಹೊಂದಿರುವುದಾಗಿ ಸಚಿವರು ತಿಳಿಸಿದರು.

“ಮಂಗಳೂರಿನಲ್ಲಿ ಅತ್ಯಂತ ಚುರುಕಾದ ಪ್ರತಿಭಾನ್ವಿತ ಮಾನವ ಸಂಪನ್ಮೂಲವಿದ್ದು, ದೇಶದ ಅತ್ಯುತ್ತಮ ಶೈಕ್ಷಣಿಕ ಸಂಸ್ಥೆಗಳು ಈ ಭಾಗಕ್ಕೆ ಬೆಂಬಲವಾಗಿವೆ. ಬೇರೆಡೆಗಳಲ್ಲಿ ಮರುಸೃಷ್ಟಿಸಲು ಕಷ್ಟವಾಗುವಂತಹ ಉತ್ತಮ ಜೀವನಮಟ್ಟವೂ ಇಲ್ಲಿದೆ. ಸಾಫ್ಟ್‌ವೇರ್ ಸಂಸ್ಥೆ ಇಜಿಯ ಡೆನ್ಮಾರ್ಕ್ ತಂಡವೊಂದು ಬೆಳಿಗ್ಗೆ ಸಸಿಹಿತ್ಲು ಕಡಲತೀರದಲ್ಲಿ ಅಲೆಗಳ ಮೇಲೆ ಸವಾರಿ ಮಾಡಿ, ನಂತರ ಕಚೇರಿಗೆ ಬಂದು ಕೆಲಸ ಮಾಡುವುದನ್ನು ನಾನು ಗಮನಿಸಿದ್ದೇನೆ. ಇಂತಹ ಅನುಕೂಲ ಬೇರೆ ಯಾವ ನಗರದಲ್ಲಿದೆ? ಇಂತಹ ಶಕ್ತಿಗಳನ್ನು ನಾವು ಬಳಸಿಕೊಳ್ಳಬೇಕು,” ಎಂದು ಅವರು ಹೇಳಿದರು.

ಕರ್ನಾಟಕವು ದೇಶದಲ್ಲೇ ಅತಿ ಹೆಚ್ಚು ವಲಸಿಗರನ್ನು ಆಕರ್ಷಿಸುತ್ತಿರುವುದರಿಂದ ಬೆಂಗಳೂರಿನ ಮೇಲೆ ಹೆಚ್ಚುತ್ತಿರುವ ಒತ್ತಡವನ್ನೂ ಅವರು ಪ್ರಸ್ತಾಪಿಸಿದರು. ಉತ್ತಮ ಉದ್ಯೋಗಾವಕಾಶಗಳಿರುವ ಇತರ ನಗರ ಕೇಂದ್ರಗಳನ್ನು ಅಭಿವೃದ್ಧಿಪಡಿಸುವುದರಿಂದ ರಾಜ್ಯದಾದ್ಯಂತ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚು ಸಮಾನವಾಗಿ ಹಂಚಿಕೆ ಮಾಡಲು ಸಾಧ್ಯವಾಗಲಿದೆ ಎಂದು ಹೇಳಿದರು.

ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಉದ್ಯಮ ಸಹಭಾಗಿತ್ವ

ಭವಿಷ್ಯದ ಅಗತ್ಯಗಳಿಗೆ ಸಿದ್ಧವಾಗಿರುವ ಮಾನವ ಸಂಪನ್ಮೂಲವನ್ನು ರೂಪಿಸುವಲ್ಲಿ ಉದ್ಯಮ ವಲಯದ ಪಾಲ್ಗೊಳ್ಳುವಿಕೆಯ ಮಹತ್ವವನ್ನು ಒತ್ತಿಹೇಳಿದ ಸಚಿವರು, ಉದ್ಯಮ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕರ್ನಾಟಕ ಸರ್ಕಾರ ಹಲವು ಕೌಶಲ್ಯಾಭಿವೃದ್ಧಿ ಉಪಕ್ರಮಗಳನ್ನು ಜಾರಿಗೊಳಿಸುತ್ತಿದೆ. ಪಠ್ಯಕ್ರಮ ರೂಪಿಸುವಲ್ಲಿ ಕಂಪನಿಗಳು ಪಾಲ್ಗೊಳ್ಳುವುದರ ಜೊತೆಗೆ, ತರಬೇತಿಯು ಬದಲಾಗುತ್ತಿರುವ ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿರುವುದನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ ಎಂದರು.

ಮಂಗಳೂರಿನಲ್ಲಿಯೇ ಉದ್ಯಮಕ್ಕೆ ಸಿದ್ಧವಾಗಿರುವ ಪ್ರತಿಭೆಗಳನ್ನು ರೂಪಿಸಲು ಡೆಲಾಯ್ಟ್‌ನಂತಹ ಕಂಪನಿಗಳು ಶೈಕ್ಷಣಿಕ ಸಂಸ್ಥೆಗಳು ಮತ್ತು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.

“ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಡೆಲಾಯ್ಟ್‌ನಂತಹ ಕಂಪನಿಯಲ್ಲಿ ಕೆಲಸ ಮಾಡಲು ಅಗತ್ಯವಾದ ಕೌಶಲ್ಯಗಳನ್ನು ಹೊಂದಿರಬಾರದೇ? ಉದ್ಯಮ ಮತ್ತು ಸರ್ಕಾರ ಒಟ್ಟಾಗಿ ಸಾಧಿಸಬಹುದಾದ ಅತ್ಯಂತ ಸುಲಭವಾದ ಅವಕಾಶವಿದು. ನಮ್ಮ ಶಿಕ್ಷಣ ಸಂಸ್ಥೆಗಳಿಂದ ಹೊರಬರುವ ಪ್ರತಿಭೆಗಳು ಇಲ್ಲಿಯೇ ಸೃಷ್ಟಿಯಾಗುತ್ತಿರುವ ಉದ್ಯೋಗಾವಕಾಶಗಳಿಗೆ ಸಿದ್ಧರಾಗಿರುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು,” ಎಂದು ಅವರು ಹೇಳಿದರು.

ಆರೋಗ್ಯ ಸೇವೆ ಮತ್ತು ಆರೋಗ್ಯ ವಿಜ್ಞಾನ ಕ್ಷೇತ್ರದಲ್ಲಿ ಈ ಪ್ರದೇಶ ಹೊಂದಿರುವ ಬಲವನ್ನು ಗಮನದಲ್ಲಿಟ್ಟುಕೊಂಡು, ಮಂಗಳೂರಿನಲ್ಲಿ ಆರೋಗ್ಯ ವಿಜ್ಞಾನಕ್ಕೆ ಆದ್ಯತೆ ನೀಡುವ ಉತ್ಕೃಷ್ಟತಾ ಕೇಂದ್ರ ಸ್ಥಾಪಿಸುವ ಸಾಧ್ಯತೆಯನ್ನು ಪರಿಶೀಲಿಸುವಂತೆಯೂ ಖರ್ಗೆ ಪ್ರಸ್ತಾಪಿಸಿದರು.

ನವೋದ್ಯಮ ಪರಿಸರ ವ್ಯವಸ್ಥೆಯನ್ನು ಬಲಪಡಿಸುವುದು

ಕರ್ನಾಟಕದ ಪ್ರಮುಖ ಎಲಿವೇಟ್ ಕಾರ್ಯಕ್ರಮವನ್ನು ಪ್ರಸ್ತಾಪಿಸಿದ ಸಚಿವರು, ಅರ್ಹ ನವೋದ್ಯಮಗಳಿಗೆ ಯಾವುದೇ ಪಾಲುದಾರಿಕೆ ಹಕ್ಕನ್ನು ನೀಡುವ ಅಗತ್ಯವಿಲ್ಲದೆ ₹1 ಕೋಟಿವರೆಗೆ ಅನುದಾನ ಒದಗಿಸಲಾಗುತ್ತಿದೆ. ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ತಮ್ಮ ಉದ್ಯಮಗಳನ್ನು ನಿರ್ಮಿಸಲು ಮತ್ತು ವಿಸ್ತರಿಸಲು ಈ ಭಾಗದ ಉದ್ಯಮಿಗಳಿಗೆ ಅವರು ಪ್ರೋತ್ಸಾಹ ನೀಡಿದರು.

ನಗರ ಸಂಚಾರ ಸೇರಿದಂತೆ ಸಾರ್ವಜನಿಕ ವಲಯದ ಸವಾಲುಗಳಿಗೆ ಪರಿಹಾರಗಳನ್ನು ಅಭಿವೃದ್ಧಿಪಡಿಸುವ ನವೋದ್ಯಮಗಳು ಸರ್ಕಾರದ ಸಹಭಾಗಿತ್ವದಲ್ಲಿ ತಮ್ಮ ನವೀನ ಪರಿಹಾರಗಳನ್ನು ಪ್ರಾಯೋಗಿಕವಾಗಿ ಪರೀಕ್ಷಿಸಲು ಅವಕಾಶ ಕಲ್ಪಿಸುವ ಸರ್ಕಾರದ ನಿಯಂತ್ರಣಾತ್ಮಕ ಪ್ರಯೋಗ ವ್ಯವಸ್ಥೆಯ ಬಗ್ಗೆಯೂ ಅವರು ವಿವರಿಸಿದರು.

ಈ ಉಪಕ್ರಮದಡಿ ಯಶಸ್ವಿಯಾಗುವ ಪ್ರಾಯೋಗಿಕ ಯೋಜನೆಗಳನ್ನು ಕರ್ನಾಟಕದಾದ್ಯಂತ ವಿಸ್ತರಿಸುವುದರ ಜೊತೆಗೆ ಇತರ ರಾಜ್ಯಗಳಿಗೂ ಕೊಂಡೊಯ್ಯುವ ಅವಕಾಶವಿದೆ. ಈಗಾಗಲೇ 16 ನವೋದ್ಯಮಗಳು ಈ ಕಾರ್ಯಕ್ರಮದಲ್ಲಿ ನೋಂದಾಯಿಸಿಕೊಂಡಿದ್ದು, ಈ ಸಂಖ್ಯೆಯನ್ನು 100ಕ್ಕೆ ಹೆಚ್ಚಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಪ್ರಾದೇಶಿಕ ಅಭಿವೃದ್ಧಿಗೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ ಖರ್ಗೆ, ಹೂಡಿಕೆಗಳಿಗೆ ಅನುಕೂಲ ಕಲ್ಪಿಸುವುದು, ಪ್ರತಿಭಾನ್ವಿತ ಮಾನವ ಸಂಪನ್ಮೂಲ ವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ಕರಾವಳಿ ಕರ್ನಾಟಕದಲ್ಲಿ ಉದ್ಯಮಗಳಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಉದ್ಯಮ ವಲಯದ ನಾಯಕರಿಗೆ ಭರವಸೆ ನೀಡಿದರು.

“ಕರ್ನಾಟಕದ ಮುಂದಿನ ಹಂತದ ಬೆಳವಣಿಗೆ ನಮ್ಮ ಪ್ರಾದೇಶಿಕ ನಗರಗಳಿಂದ ಬರಬೇಕು. ಬೆಂಗಳೂರಿನ ಆಚೆಗೂ ಇರುವ ಅವಕಾಶಗಳನ್ನು ಉದ್ಯಮಗಳು ಗುರುತಿಸಿ, ರಾಜ್ಯದಾದ್ಯಂತ ಸದೃಢ ಮತ್ತು ಸುಸ್ಥಿರ ಆರ್ಥಿಕ ವ್ಯವಸ್ಥೆಗಳನ್ನು ನಿರ್ಮಿಸುವಲ್ಲಿ ನಮ್ಮೊಂದಿಗೆ ಕೈಜೋಡಿಸಬೇಕು ಎಂಬುದು ನಮ್ಮ ಆಶಯ,” ಎಂದು ಅವರು ಹೇಳಿದರು.

Ad Widget
Continue Reading

ಬಿಗ್ ನ್ಯೂಸ್

Puttur-ಎಸ್‌ಐಆರ್ ರದ್ದುಗೊಳಿಸುವವರೆಗೆ ಯಾವುದೇ ಚುನಾವಣೆ ನಡೆಸಬಾರದು: ಅನ್ವರ್ ಸಾದಾತ್ ಎಸ್.; ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಲು ಹಾಗೂ ಎಸ್‌ಐಆರ್ ರದ್ದುಗೊಳಿಸಲು ಆಗ್ರಹಿಸಿ ಕಬಕದಲ್ಲಿ ಎಸ್‌ಡಿಪಿಐ ಜಂತರ್ ಮಂತರ್ ಪ್ರತಿಭಟನಾ ಧರಣಿ

Published

on

Ad Widget

Ad Widget

Ad Widget

Ad Widget

ಎಸ್‌ಐಆರ್ (SIR) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವವರೆಗೆ ದೇಶದಲ್ಲಿ ಯಾವುದೇ ಚುನಾವಣೆಯನ್ನು ನಡೆಸಬಾರದು. ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನ ಸಾಂವಿಧಾನಿಕ ಹಕ್ಕಾಗಿದ್ದು, ಆ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಎಸ್. ಆಗ್ರಹಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ಎಸ್‌ಐಆರ್ (SIR) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವವರೆಗೆ ದೇಶದಲ್ಲಿ ಯಾವುದೇ ಚುನಾವಣೆಯನ್ನು ನಡೆಸಬಾರದು. ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನ ಸಾಂವಿಧಾನಿಕ ಹಕ್ಕಾಗಿದ್ದು, ಆ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಎಸ್. ಆಗ್ರಹಿಸಿದರು.

Ad Widget

Ad Widget alt="Ad Widget"/>

Ad Widget

ನವೆಂಬರ್ 24ರಂದು ಕಬಕ ಜಂಕ್ಷನ್‌ನಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಂತರ್ ಮಂತರ್ ಪ್ರತಿಭಟನಾ ಧರಣಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

Ad Widget

Ad Widget <> Ad Widget

ಎಸ್‌ಐಆರ್ ಪ್ರಕ್ರಿಯೆಯಿಂದ ಅರ್ಹ ಮತದಾರರು ಮತದಾನದ ಹಕ್ಕನ್ನು ಕಳೆದುಕೊಳ್ಳುವ ಆತಂಕ ಎದುರಾಗಿದೆ. ಪ್ರಜಾಪ್ರಭುತ್ವದ ಮೂಲ ಆಶಯವಾದ ಮತದಾನದ ಹಕ್ಕನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಅರ್ಹ ಮತದಾರರಿಗೆ ಯಾವುದೇ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಯಂಗ್ ಡೆಮಾಕ್ರಟ್ಸ್ ಕೇರಳ ರಾಜ್ಯ ಸಮಿತಿ ಸದಸ್ಯರಾದ ಅಹ್ಮದ್ ನಿಸಾರ್ ಮಾತನಾಡಿ, ಸಂಘಪರಿವಾರದ ರಾಜಕೀಯ ನಿಲುವುಗಳು ಹಾಗೂ ಬಿಜೆಪಿ ಸರ್ಕಾರದ ನೀತಿಗಳನ್ನು ಟೀಕಿಸಿದರು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತು ಸಂವಿಧಾನ ನೀಡಿರುವ ಹಕ್ಕುಗಳನ್ನು ರಕ್ಷಿಸುವ ಅಗತ್ಯವನ್ನು ಒತ್ತಿಹೇಳಿದ ಅವರು, ಎಸ್‌ಐಆರ್ ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗಬಾರದು ಎಂದು ಆಗ್ರಹಿಸಿದರು.

Ad Widget

Ad Widget

SDPI ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಅಡ್ವೊಕೇಟ್ ಮಜೀದ್ ಖಾನ್ ಮಾತನಾಡಿ, ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಖಾತರಿಯಾಗಬೇಕು. ಎಸ್‌ಐಆರ್ ಪ್ರಕ್ರಿಯೆಯಿಂದ ಮತದಾರರ ಪಟ್ಟಿಯಲ್ಲಿ ಉಂಟಾಗಬಹುದಾದ ಲೋಪಗಳನ್ನು ತಡೆಯುವ ನಿಟ್ಟಿನಲ್ಲಿ ಈ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

WIM ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ ಮಾತನಾಡಿ, ಮಹಿಳೆಯರು ಸೇರಿದಂತೆ ಸಮಾಜದ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕು ಸಮಾನವಾಗಿ ದೊರೆಯಬೇಕು. ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಪರಿಸ್ಥಿತಿ ನಿರ್ಮಾಣವಾಗದಂತೆ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದರು.

ಮತದಾನ ವಂಚನೆ, ಬೆಲೆ ಏರಿಕೆ ವಿರುದ್ಧ ಹೆನ್ರಿ ಡಿಸೋಜಾ ಆಕ್ರೋಶ:
SDTU ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಹೆನ್ರಿ ಡಿಸೋಜಾ ಮಾತನಾಡಿ, ಮತದಾನದ ಹಕ್ಕು ಕಸಿಯುವ ಹುನ್ನಾರ ನಡೆಯುತ್ತಿದ್ದು, ಹಕ್ಕಿಗಾಗಿ ಹೋರಾಡುವವರನ್ನು ಜೈಲಿಗೆ ಹಾಕುವ ಪ್ರಯತ್ನ ಖಂಡನೀಯ ಎಂದರು. ಮತದಾನ ವಂಚನೆಯ ಆರೋಪ ಹೊತ್ತಿರುವ ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ಅಧಿಕಾರದಿಂದ ವಜಾಗೊಳಿಸಿ, ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸಮಾಜಸೇವಕ ಹರೇಕಳ ಹಾಜಬ್ಬ ಅವರಂತಹವರ ಹೆಸರೇ ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗಿದ್ದು, ಸುಮಾರು 13 ಕೋಟಿಗೂ ಅಧಿಕ ಮತದಾರರ ಹೆಸರುಗಳು ಪಟ್ಟಿಯಿಂದ ಡಿಲೀಟ್ ಆಗಿರುವುದು ಆತಂಕಕಾರಿಯಾಗಿದೆ ಎಂದರು. ಇದೇ ವೇಳೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಮಂಗಳೂರು ವಿಮಾನ ನಿಲ್ದಾಣದ ಖಾಸಗೀಕರಣ ಮತ್ತು ಪ್ರವೇಶ ಶುಲ್ಕ ವಸೂಲಾತಿಯ ವಿರುದ್ಧವೂ ಅವರು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು SDPI ಪುತ್ತೂರು ಕ್ಷೇತ್ರಾಧ್ಯಕ್ಷರಾದ ಅಶ್ರಫ್ ಬಾವು ವಹಿಸಿದ್ದರು.
ವೇದಿಕೆಯಲ್ಲಿ SDTU ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಹಮೀದ್ ಸಾಲ್ಮರ, SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು, ಕಾರ್ಯದರ್ಶಿಗಳಾದ ಅಶ್ರಫ್ ತಲಪಾಡಿ, ಶಾಕಿರ್ ಅಲಕೆಮಜಲು, ಉಪಾಧ್ಯಕ್ಷ ಇನಾಸ್ ರೊಡ್ರಿಗಸ್, ಸದಸ್ಯ ಸಿದ್ದೀಕ್ ಅಲೆಕ್ಕಾಡಿ, ಯಂಗ್ ಡೆಮಾಕ್ರಟ್ಸ್ ಮಂಗಳೂರು ಗ್ರಾಮಾಂತರ ಸದಸ್ಯರಾದ ಹಮ್ದಾ ಮೆಲ್ಕಾರ್, ಹಮೀದ್ ಪುತ್ತೂರು, SDPI ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಶಾಹುಲ್ ಹಮೀದ್ ಎಸ್.ಎಚ್., ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಇಸ್ಮಾಯಿಲ್ ಕೆಮ್ಮಾಯಿ ಉಪಸ್ಥಿತರಿದ್ದರು.

ಪ್ರತಿಭಟನೆಯಲ್ಲಿ ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ಸಿರಾಜ್ ಕೂರ್ನಡ್ಕ ಮತ್ತು ತಂಡ ಎಸ್‌ಐಆರ್ ವಿರೋಧಿ ಹಾಡುಗಳನ್ನು ಹಾಡುವ ಮೂಲಕ ಪ್ರತಿಭಟನೆಗೆ ಧ್ವನಿಗೂಡಿಸಿದರು.

ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಸ್ವಾಗತಿಸಿದರು. ಪುತ್ತೂರು ನಗರ ಸಮಿತಿ ಅಧ್ಯಕ್ಷ ತಾಜುದ್ದೀನ್ ಸಾಲ್ಮರ ವಂದಿಸಿದರು. ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಉಸ್ಮಾನ್ ಎ.ಕೆ. ಕಾರ್ಯಕ್ರಮ ನಿರೂಪಿಸಿದರು.

Ad Widget
Continue Reading

ಅಪರಾಧ

Mangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್‌ಐ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget alt="Ad Widget"/>

Ad Widget

ಬಂಧಿತ ಇಬ್ಬರು ಸಿಬ್ಬಂದಿಯಲ್ಲಿ ಒಬ್ಬರು ಮಂಗಳೂರು ಮೂಲದವರಾಗಿದ್ದು, ಮತ್ತೊಬ್ಬರು ಕಾಸರಗೋಡು ಮೂಲದವರು ಎಂದು ತಿಳಿದುಬಂದಿದೆ. ದುಬೈ ಹಾಗೂ ಕೇರಳ ಮೂಲದ ಚಿನ್ನ ಕಳ್ಳಸಾಗಣೆ ಜಾಲದೊಂದಿಗೆ ಸಂಪರ್ಕ ಹೊಂದಿ ಅಕ್ರಮ ಚಿನ್ನ ಸಾಗಾಟಕ್ಕೆ ನೆರವಾಗುತ್ತಿದ್ದ ಆರೋಪ ಇವರ ಮೇಲಿದೆ.

Ad Widget

Ad Widget <> Ad Widget

ವ್ಯವಸ್ಥಿತವಾಗಿ ನಡೆಯುತ್ತಿದ್ದ ಕಳ್ಳಸಾಗಣೆ
ದುಬೈ ಸೇರಿದಂತೆ ವಿದೇಶಗಳಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರು, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಲ್ಲಿ ಚಿನ್ನವನ್ನು ಅಡಗಿಸಿಟ್ಟು ತೆರಳುತ್ತಿದ್ದರು ಎನ್ನಲಾಗಿದೆ. ಬಳಿಕ ಈ ಮಾಹಿತಿಯನ್ನು ಜಾಲದ ಸಂಪರ್ಕದಲ್ಲಿದ್ದ ವಿಮಾನ ನಿಲ್ದಾಣದ ಸಿಬ್ಬಂದಿಗೆ ತಲುಪಿಸಲಾಗುತ್ತಿತ್ತು. ವಿಮಾನಗಳ ನಿರ್ವಹಣಾ ಕಾರ್ಯ ಮುಗಿದ ಬಳಿಕ ಸಿಬ್ಬಂದಿ ಶೌಚಾಲಯಕ್ಕೆ ತೆರಳಿ, ಅಲ್ಲಿ ಅಡಗಿಸಿಟ್ಟ ಚಿನ್ನವನ್ನು ಹೊರತೆಗೆದು ತಮ್ಮ ಸಂಪರ್ಕದಲ್ಲಿದ್ದ ಕಳ್ಳಸಾಗಣೆದಾರರಿಗೆ ಹಸ್ತಾಂತರಿಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಖಚಿತ ಮಾಹಿತಿಯ ಮೇರೆಗೆ ಡಿಆರ್‌ಐ ಅಧಿಕಾರಿಗಳು ಆರೋಪಿಗಳ ಮೇಲೆ ನಿಗಾ ಇರಿಸಿದ್ದರು. ಅದರಂತೆ ನ. 23ರಂದು ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಿಂದ ಚಿನ್ನದ ಪೇಸ್ಟ್ ರೂಪದ ಎರಡು ಪ್ಯಾಕ್‌ಗಳನ್ನು ಹೊರತೆಗೆಯುತ್ತಿದ್ದ ಮಂಗಳೂರು ಮೂಲದ ಸಿಬ್ಬಂದಿಯನ್ನು ಅಧಿಕಾರಿಗಳು ಹಿಡಿದಿದ್ದಾರೆ.

Ad Widget

Ad Widget

ಈ ಚಿನ್ನವನ್ನು ಆತ ಕಾಸರಗೋಡು ಮೂಲದ ಮತ್ತೊಬ್ಬ ಸಿಬ್ಬಂದಿಗೆ ಹಸ್ತಾಂತರಿಸಬೇಕಿತ್ತು. ಬಳಿಕ ಆ ಸಿಬ್ಬಂದಿ ವಿಮಾನ ನಿಲ್ದಾಣದಿಂದ ಸುಮಾರು ಎರಡು ಕಿ.ಮೀ. ದೂರದಲ್ಲಿರುವ ಸ್ಥಳಕ್ಕೆ ಚಿನ್ನವನ್ನು ಕೊಂಡೊಯ್ದು ಜಾಲದ ಮೂರನೇ ವ್ಯಕ್ತಿಗೆ ತಲುಪಿಸಲು ಯೋಜಿಸಿದ್ದ ಎನ್ನಲಾಗಿದೆ. ಅಧಿಕಾರಿಗಳು ತ್ವರಿತ ಕಾರ್ಯಾಚರಣೆ ನಡೆಸಿ ಉಳಿದ ಇಬ್ಬರನ್ನೂ ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ, 73 ಲಕ್ಷ ರೂ. ನಗದು, ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಡಿ. 7ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

ಇದಕ್ಕೂ ಮೊದಲು 1.77 ಕೋಟಿ ರೂ. ಮೌಲ್ಯದ ಚಿನ್ನ ವಶ
ಇದಕ್ಕೂ ಮುನ್ನ ನ. 14ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಕಾಸರಗೋಡು ಮೂಲದ ಇಬ್ಬರು ಪ್ರಯಾಣಿಕರು ದೇಹದೊಳಗೆ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದ ವೇಳೆ ಡಿಆರ್‌ಐ ಅಧಿಕಾರಿಗಳ ವಶಕ್ಕೆ ಸಿಕ್ಕಿದ್ದರು. ಅವರಿಂದ ಸುಮಾರು 1.77 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಿಖೆಯ ಹಿತದೃಷ್ಟಿಯಿಂದ ಬಂಧಿತ ಆರೋಪಿಗಳ ಹೆಸರುಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.

Ad Widget
Continue Reading
ರಾಜಕೀಯ42 minutes ago

Priyanka Kharge-ಕರ್ನಾಟಕದ ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ; ಬೆಂಗಳೂರಿನ ಬೆಳವಣಿಗೆಯ ಅಂತರವನ್ನು ಕಡಿಮೆ ಮಾಡುವ ಸಾಮರ್ಥ್ಯ ಮಂಗಳೂರಿಗಿದೆ; ಹೂಡಿಕೆ, ಕೌಶಲ್ಯಾಭಿವೃದ್ಧಿ ಮತ್ತು ನವೋದ್ಯಮಗಳ ಮೂಲಕ ಬಿಯಾಂಡ್ ಬೆಂಗಳೂರು ಅಭಿಯಾನವನ್ನು ವೇಗಗೊಳಿಸಲು ಉದ್ಯಮ ವಲಯಕ್ಕೆ ಸಚಿವರ ಕರೆ

ನಿಧನ ವಾರ್ತೆ55 minutes ago

Accident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು

ಬಿಗ್ ನ್ಯೂಸ್1 hour ago

Puttur-ಎಸ್‌ಐಆರ್ ರದ್ದುಗೊಳಿಸುವವರೆಗೆ ಯಾವುದೇ ಚುನಾವಣೆ ನಡೆಸಬಾರದು: ಅನ್ವರ್ ಸಾದಾತ್ ಎಸ್.; ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಲು ಹಾಗೂ ಎಸ್‌ಐಆರ್ ರದ್ದುಗೊಳಿಸಲು ಆಗ್ರಹಿಸಿ ಕಬಕದಲ್ಲಿ ಎಸ್‌ಡಿಪಿಐ ಜಂತರ್ ಮಂತರ್ ಪ್ರತಿಭಟನಾ ಧರಣಿ

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!