Connect with us

ದಕ್ಷಿಣ ಕನ್ನಡ

ಪುತ್ತೂರು : ‘ಬಂದ್’ ಬಗ್ಗೆ ಪ್ರಚೋದನಕಾರಿ ವಾಟ್ಸ್‌ಆ್ಯಪ್‌ ಸಂದೇಶ: ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ಪುತ್ತೂರು: ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಹಾಗೂ ಪ್ರಚೋದನಕಾರಿ ಸುಳ್ಳು ಸುದ್ದಿಯನ್ನು ವಾಟ್ಸ್‌ಆ್ಯಪ್‌ ಮೂಲಕ ಪ್ರಸಾರ ಮಾಡಿದ ಆರೋಪದಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

‘ಮಂಜುನಾಥ್’ ಎಂಬ ಹೆಸರಿನ ವಾಟ್ಸ್‌ಆ್ಯಪ್‌ ಖಾತೆಯಿಂದ ರಾಜಕೀಯ ಪಕ್ಷವೊಂದರ ಹೆಸರಿನಲ್ಲಿ ಆಗಸ್ಟ್‌ 26ರಂದು ಪುತ್ತೂರು ಬಂದ್‌ ನಡೆಸುವಂತೆ ಸವಾಲು ಹಾಕುವ ರೀತಿಯ ಪ್ರಚೋದನಕಾರಿ ಸಂದೇಶವನ್ನು ಪ್ರಸಾರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಾರ್ವಜನಿಕ ಶಾಂತಿ, ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಹಾಗೂ ಜನರಲ್ಲಿ ಪ್ರಚೋದನೆ ಉಂಟುಮಾಡುವ ರೀತಿಯಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Ad Widget

Ad Widget <> Ad Widget

ಈ ಸಂಬಂಧ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ 103/2026ರಡಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) 2023ರ ಕಲಂ 353(2)ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ವಾಟ್ಸ್‌ಆ್ಯಪ್‌ ಖಾತೆಯ ಹಿಂದಿರುವ ವ್ಯಕ್ತಿಯನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.



Ad Widget
Ad Widget
Click to comment

Leave a Reply

ಅಪರಾಧ

ಪುತ್ತೂರು ಲಾಡ್ಜ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ ಆರೋಪ

Published

on



Ad Widget

Ad Widget

Ad Widget

Ad Widget

ಪುತ್ತೂರು: ನಗರದ ಲಾಡ್ಜ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮೂವರು ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿರುವ ಆರೋಪ ಕೇಳಿಬಂದಿದೆ.

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ (27) ಹಲ್ಲೆಗೊಳಗಾದವರು ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಅ. 17ರಂದು ರಾತ್ರಿ ರಿಫಾಯಿ ಅವರು ಪುತ್ತೂರಿನ ಲಾಡ್ಜ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಫಾರೂಕ್, ಸೋನು ಹಾಗೂ ಇಷಾನ್ ಎಂಬವರು ಅಲ್ಲಿಗೆ ಬಂದು ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಒಡ್ಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

Ad Widget

Ad Widget <> Ad Widget

ಈ ಸಂಬಂಧ ರಿಫಾಯಿ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), 2023ರ ಕಲಂ 126(2), 352, 351(2) ಹಾಗೂ 115(2)ರಂತೆ ಪ್ರಕರಣ ದಾಖಲಾಗಿದೆ.



Ad Widget

ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

Continue Reading

ಅಪರಾಧ

ಸೌತಡ್ಕ ದೇವಸ್ಥಾನದ ಹೂವಿನ ಅಂಗಡಿ ವಿಚಾರದಲ್ಲಿ ಮಾರಾಮಾರಿ; ಮಹಿಳೆಯರ ಮೇಲೆ ಹಲ್ಲೆ ಆರೋಪ

Published

on



Ad Widget

Ad Widget

Ad Widget

Ad Widget

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹೊರಭಾಗದಲ್ಲಿರುವ ಅಂಗಡಿಯ ವಿಚಾರವಾಗಿ ಹೂವಿನ ವ್ಯಾಪಾರಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ವರದಿಯಾಗಿದೆ. ಈ ವೇಳೆ ಮಹಿಳೆಯರ ಮೇಲೂ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Ad Widget

Ad Widget

Ad Widget

Ad Widget

ದೇವಸ್ಥಾನದ ಟ್ರಸ್ಟ್‌ಗೆ ಸೇರಿದ ಅಂಗಡಿಗಳ ಏಲಂ ಪ್ರಕ್ರಿಯೆಯ ಮೂಲಕ ರಾಘವ ಎಂಬವರು ಹೂವಿನ ಸ್ಟಾಲ್‌ ಪಡೆದಿದ್ದರು ಎನ್ನಲಾಗಿದೆ. ಆದರೆ, ಏಲಂ ಪ್ರಕ್ರಿಯೆ ಪೂರ್ಣಗೊಂಡ ಬಳಿಕವೂ ಈ ಹಿಂದೆ ಅಂಗಡಿ ನಡೆಸುತ್ತಿದ್ದ ವ್ಯಾಪಾರಿ ಅಂಗಡಿಯನ್ನು ತೆರವುಗೊಳಿಸದೆ ಮುಂದುವರಿದಿದ್ದರು ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ರಾಘವ ಭಂಡಾರಿ ಎಂಬವರು ಅಂಗಡಿಗೆ ಏಕಾಏಕಿ ಪ್ರವೇಶಿಸಿದ ಸಂದರ್ಭದಲ್ಲಿ ಎರಡೂ ಕಡೆಯ ವ್ಯಾಪಾರಿಗಳ ನಡುವೆ ಮಾತಿನ ಚಕಮಕಿ ನಡೆದು, ಅದು ಮಾರಾಮಾರಿಗೆ ತಿರುಗಿದೆ ಎಂದು ಆರೋಪಿಸಲಾಗಿದೆ. ಈ ವೇಳೆ ಮಹಿಳೆಯರ ಮೇಲೆಯೂ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

Ad Widget

Ad Widget <> Ad Widget

ಘಟನೆಗೆ ಸಂಬಂಧಿಸಿದಂತೆ ರಾಘವ ಭಂಡಾರಿ ಅವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣದ ಕುರಿತು ಪೊಲೀಸರ ಮುಂದಿನ ಕ್ರಮದ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ.



Ad Widget
Ad Widget
Continue Reading

ದಕ್ಷಿಣ ಕನ್ನಡ

ಬಂಟ್ವಾಳ : ಹಣ ವಾಪಸ್ ಕೇಳಿದ್ದಕ್ಕೆ ಚೂರಿ ಇರಿತ ಆರೋಪ: ಆರೋಪಿ ಪೊಲೀಸ್ ವಶಕ್ಕೆ

Published

on



Ad Widget

Ad Widget

Ad Widget

Ad Widget

ಬಂಟ್ವಾಳ: ಹಣದ ವಿಚಾರವಾಗಿ ಉಂಟಾದ ವಿವಾದದಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದ ಆರೋಪದ ಮೇಲೆ ವ್ಯಕ್ತಿಯೊರ್ವನನ್ನು  ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳದ ಅಜಿತ್ ಕುಮಾರ್ ಶೆಟ್ಟಿ (28)  ವಶಕ್ಕೆ ಪಡೆಯಲಾದ ವ್ಯಕ್ತಿ

Ad Widget

Ad Widget

Ad Widget

Ad Widget

ಪೊಲೀಸ್ ಮೂಲಗಳ ಪ್ರಕಾರ, ಬಂಟ್ವಾಳ ಬಿ ಮೂಡಾ ಗ್ರಾಮದ ಉದಯ್ ಎಂಬವರಿಂದ ಆರೋಪಿಯು  ಹಣ ಪಡೆದಿದ್ದು, ಅದನ್ನು  ಪಾವತಿಸಲು ಬಾಕಿಯಿತ್ತು. ಈ ಹಣವನ್ನು ವಾಪಸ್ ನೀಡುವಂತೆ ಉದಯ್ ಕೇಳುತ್ತಿದ್ದರು ಎನ್ನಲಾಗಿದೆ. ಅ. 17ರ ರಾತ್ರಿ ಹಣವನ್ನು ವಾಪಸ್ ನೀಡುವುದಾಗಿ ತಿಳಿಸಿದ ಆರೋಪಿ, ಉದಯ್ ಅವರನ್ನು ಪಲ್ಲಮಜಲಿಗೆ ಬರುವಂತೆ ಹೇಳಿದ್ದಾನೆ.

Ad Widget

Ad Widget

Ad Widget alt="Ad Widget"/>

Ad Widget

ಅದರಂತೆ ಉದಯ್ ಹಣ ಪಡೆಯುವ ಸಲುವಾಗಿ ಪಲ್ಲಮಜಲು ಜಂಕ್ಷನ್‌ಗೆ ತೆರಳಿದ್ದು, ತನ್ನ ಸಹೋದರ ಲೋಕೇಶ್ (27) ಅವರನ್ನೂ ಸ್ಥಳಕ್ಕೆ ಬರುವಂತೆ ತಿಳಿಸಿದ್ದರು. ಲೋಕೇಶ್ ಸ್ಥಳಕ್ಕೆ ತಲುಪಿದಾಗ ಆರೋಪಿ ಅಜಿತ್ ಉದಯ್ ಅವರಿಗೆ ಚೂರಿಯಿಂದ ಇರಿಯುತ್ತಿರುವುದು ಕಂಡುಬಂದಿದೆ ಎನ್ನಲಾಗಿದೆ. ಈ ವೇಳೆ ತಡೆಯಲು ಮುಂದಾದ ಲೋಕೇಶ್ ಅವರನ್ನು ಆರೋಪಿ ಅಟ್ಟಿಸಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Ad Widget

Ad Widget <> Ad Widget

ಬಳಿಕ ಸ್ಥಳೀಯರು ಗಾಯಗೊಂಡ ಉದಯ್ ಅವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.



Ad Widget

ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ  ಭಾರತೀಯ ನ್ಯಾಯ ಸಂಹಿತೆ (BNS), 2023ರ ಕಲಂ 118(2), 109(1) ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

ಪ್ರಕರಣದ ಆರೋಪಿ ಪಲ್ಲಮಜಲು ನಿವಾಸಿ ಅಜಿತ್ ಕುಮಾರ್ ಶೆಟ್ಟಿ (28) ಅವರನ್ನು ಅ. 18ರಂದು ಪೊಲೀಸರು ತನಿಖೆಗಾಗಿ ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading