ಉಡುಪಿ
Malpe-ಬೋಟ್ನಲ್ಲಿ ಮೀನುಗಾರನ ಭೀಕರ ಕೊಲೆ; ಉಡುಪಿ ರೈಲ್ವೆ ನಿಲ್ದಾಣದಲ್ಲಿ ಆರೋಪಿ ಪೊಲೀಸರ ವಶಕ್ಕೆ
ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಕೆರೆ ದಕ್ಕೆಯಲ್ಲಿ ಲಂಗರು ಹಾಕಲಾಗಿದ್ದ ಬೋಟ್ನಲ್ಲಿ ಮೀನುಗಾರಿಕಾ ಕಾರ್ಮಿಕನೋರ್ವನನ್ನು ಕೊಲೆ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಉಡುಪಿ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಮೃತಪಟ್ಟವರನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ.
ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಕೆರೆ ದಕ್ಕೆಯಲ್ಲಿ ಲಂಗರು ಹಾಕಲಾಗಿದ್ದ ಬೋಟ್ನಲ್ಲಿ ಮೀನುಗಾರಿಕಾ ಕಾರ್ಮಿಕನೋರ್ವನನ್ನು ಕೊಲೆ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಉಡುಪಿ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಮೃತಪಟ್ಟವರನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ.
ಮೃತ ಅಭಿಷೇಕ್ ಹಾಗೂ ಆರೋಪಿ ಗೋವಿಂದ ರಾಜು ಇಬ್ಬರೂ ‘ಶ್ರೀ ಮಹಾಕಾಳಿ’ ಎಂಬ ಬೋಟ್ನಲ್ಲಿ ಮೀನುಗಾರಿಕಾ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಆಗಸ್ಟ್ 24ರಂದು ರಾತ್ರಿ ಇಬ್ಬರ ನಡುವೆ ಯಾವುದೋ ವಿಷಯಕ್ಕೆ ತೀವ್ರ ಗಲಾಟೆ ನಡೆದಿತ್ತು. ಈ ಜಗಳದ ಮುಂದುವರಿದ ಭಾಗವಾಗಿ, ಆಗಸ್ಟ್ 25ರ ಬೆಳಿಗ್ಗೆ ಗೋವಿಂದ ರಾಜು ಎಂಬಾತ ಅಭಿಷೇಕ್ನನ್ನು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದ.
ಪೊಲೀಸರ ಸಿನಿಮೀಯ ಕಾರ್ಯಾಚರಣೆ:
ಕೊಲೆ ನಡೆದ ಸುಳಿವು ಸಿಗುತ್ತಿದ್ದಂತೆಯೇ ಮಲ್ಪೆ ಠಾಣೆಯ ಪಿಎಸ್ಐ ಅನೀಲ್ ಕುಮಾರ್ ಡಿ., ಸಿಬ್ಬಂದಿಗಳಾದ ಆದರ್ಶ ಮತ್ತು ಕುಬೇರ ಅವರು ಕಾರ್ಯಾಚರಣೆ ಆರಂಭಿಸಿದರು. ಆರೋಪಿ ರೈಲು ಹತ್ತಿ ಮುಂಬೈ ಅಥವಾ ಹೈದರಾಬಾದ್ಗೆ ತಪ್ಪಿಸಿಕೊಳ್ಳಲು ಯೋಜಿಸುತ್ತಿದ್ದಾನೆ ಎಂಬ ಮಾಹಿತಿ ಆಧರಿಸಿ ಬೆನ್ನಟ್ಟಿದ ಪೊಲೀಸರು, ಉಡುಪಿ ರೈಲ್ವೆ ನಿಲ್ದಾಣದಲ್ಲಿ ಆತನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾದರು.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
ಉಡುಪಿ
H.D.K.-ಕರಾವಳಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕೆ. ಟೆಂಪಲ್ ರನ್: ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ನವಚಂಡಿಕಾಯಾಗ
ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಉಡುಪಿ: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕುಟುಂಬದ ದೋಷ ಪರಿಹಾರ ಹಾಗೂ ಹರಕೆ ತೀರಿಸುವ ಉದ್ದೇಶದಿಂದ ಕುಮಾರಸ್ವಾಮಿ ಅವರು ನವಚಂಡಿಕಾಯಾಗ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ಹರಕೆ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇದೀಗ ಯಾಗ ನೆರವೇರಿಸುತ್ತಿದ್ದಾರೆ ಎನ್ನಲಾಗಿದೆ.
ಅರ್ಚಕ ಶ್ರೀಕಾಂತ್ ಅಡಿಗ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಯಿಂದ 10 ಗಂಟೆಯವರೆಗೆ ನವಚಂಡಿಕಾಯಾಗ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಪೂರ್ಣಾಹುತಿ ನೆರವೇರಲಿದೆ.
ಕುಮಾರಸ್ವಾಮಿ ಅವರು ಪತ್ನಿ, ಪುತ್ರ ಹಾಗೂ ಸೊಸೆಯೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಯಾಗದಲ್ಲಿ ಭಾಗವಹಿಸಲಿದ್ದಾರೆ.
ಉಡುಪಿ
Udupi-ಉಡುಪಿ: ತಾಯಿ ಅಂತ್ಯಕ್ರಿಯೆಗೆ ಹಾಜರಾಗಲು ಭೂಗತ ಪಾತಕಿ ರವಿ ಪೂಜಾರಿಗೆ ಕೋರ್ಟ್ ಅನುಮತಿ
ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ನ್ಯಾಯಾಲಯ ಸೂಚಿಸಿದೆ.
ಉಡುಪಿ: ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ.
ರವಿ ಪೂಜಾರಿ ಅವರ ತಾಯಿ ಸುಶೀಲಾ ಪೂಜಾರಿ ಅವರು ನವೆಂಬರ್ 12ರ ರಾತ್ರಿ ನಿಧನರಾಗಿದ್ದಾರೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ ನ್ಯಾಯಾಲಯ ಅನುಮತಿ ನೀಡಿದ್ದು, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ಸೂಚಿಸಿದೆ.
ಮಲ್ಪೆ ಸಮೀಪದ ನೆರ್ಗಿಯಲ್ಲಿರುವ ಕುಟುಂಬದ ಹಿರಿಯರ ಮನೆಯಲ್ಲಿ ಬೆಳಗ್ಗೆ ಅಂತ್ಯಕ್ರಿಯೆ ನಡೆಯಲಿದೆ. ಭದ್ರತೆಯ ಜವಾಬ್ದಾರಿಯನ್ನು ಬೆಂಗಳೂರು ಕಾರಾಗೃಹ ಸಿಬ್ಬಂದಿ ವಹಿಸಿಕೊಳ್ಳಲಿದ್ದು, ಹೆಚ್ಚುವರಿ ಭದ್ರತೆಯನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಒದಗಿಸಲಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
ಸುಮಾರು 26 ವರ್ಷಗಳ ಕಾಲ ಭೂಗತ ಜಗತ್ತಿನಲ್ಲಿ ಪ್ರಭಾವ ಹೊಂದಿದ್ದ ರವಿ ಪೂಜಾರಿ 2019ರ ಜನವರಿ 19ರಂದು ಆಫ್ರಿಕಾದ ಸೆನೆಗಲ್ನಲ್ಲಿ ಬಂಧಿತನಾಗಿದ್ದ. ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಬೆಂಗಳೂರಿಗೆ ಕರೆತರಲಾಗಿತ್ತು.
ಕರ್ನಾಟಕ ಮತ್ತು ಮುಂಬೈ ಸೇರಿದಂತೆ ವಿವಿಧೆಡೆ ರವಿ ಪೂಜಾರಿ ವಿರುದ್ಧ 120ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆಂಧ್ರಪ್ರದೇಶ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿಯೂ ಈತನ ವಿರುದ್ಧ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕಲ್ಮಾಡಿಯ ಬಪ್ಪು ತೋಟದ ನಿವಾಸಿಯಾಗಿರುವ ರವಿ ಪೂಜಾರಿ, ಚಿಕ್ಕ ವಯಸ್ಸಿನಲ್ಲೇ ತಂದೆಯೊಂದಿಗೆ ಮುಂಬೈಗೆ ತೆರಳಿದ್ದ. 1992ರಲ್ಲಿ ಬಂಧನಕ್ಕೊಳಗಾಗಿದ್ದ ಈತ ಬಳಿಕ ಅಲ್ಲಿಂದ ತಪ್ಪಿಸಿಕೊಂಡಿದ್ದ.
-
ರಾಜಕೀಯ20 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ20 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ20 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಬಿಗ್ ನ್ಯೂಸ್3 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕ್ರೀಡೆ24 hours agoIPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
-
ಕಾರ್ಯಕ್ರಮಗಳು20 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ20 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಶಿಕ್ಷಣ24 hours agoGovernment schools-ಎಲ್ಕೆಜಿ, ಯುಕೆಜಿ ತರಗತಿಗಳಿಗೆ ನಿರೀಕ್ಷೆಗೂ ಮೀರಿದ ಬೇಡಿಕೆ; ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಕ್ಕೆ ಸರ್ಕಾರ ಚಿಂತನೆ..!















