Connect with us

Uncategorized

Vivekanandaವಿವೇಕಾನಂದ ಕಾಲೇಜಿನಲ್ಲಿ ವೃತ್ತಿ ಅವಕಾಶಗಳು, ಉದ್ಯೋಗ ಮತ್ತು ಉನ್ನತ ಶಿಕ್ಷಣ ಕಾರ್ಯಾಗಾರ; ಉತ್ತಮ ಸಂವಹನ ಕೌಶಲ್ಯಗಳು ವೃತ್ತಿ ಜೀವನವನ್ನು ಉತ್ತಮಗೊಳಿಸುತ್ತವೆ – ನೀಮಾ

Published

on

Ad Widget

Ad Widget

Ad Widget

Ad Widget

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ಗಣಕ ಶಾಸ್ತ್ರ ವಿಭಾಗ, ಐಕ್ಯೂಎಸಿ ಘಟಕ ಹಾಗೂ ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ಘಟಕ ಆಯೋಜಿಸಿದ ಬಿ.ಸಿ.ಎ ನಂತರದ ವೃತ್ತಿ ಅವಕಾಶಗಳು, ಉದ್ಯೋಗ ಮತ್ತು ಉನ್ನತ ಶಿಕ್ಷಣ ಎಂಬ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕಿ ನೀಮಾ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ಆ. 21: ಆತ್ಮವಿಶ್ವಾಸ, ಹೊಂದಿಕೊಳ್ಳುವಿಕೆ, ಜವಾಬ್ದಾರಿತನ, ಶ್ರೇಷ್ಠತೆ, ಉದ್ಯೋಗಾರ್ಹತೆ ಕೌಶಲ್ಯಗಳು ಹಾಗೂ ಸವಾಲುಗಳನ್ನು ಎದುರಿಸುವುದು ಪ್ರತಿಯೊಬ್ಬರ ವೃತ್ತಿಜೀವನದಲ್ಲಿ ಮುಖ್ಯ ಅಂಶಗಳಾಗಿವೆ. ಸಂವಹನ ಕೌಶಲ್ಯಗಳು ನಮ್ಮ ಜೀವನವನ್ನು ಉತ್ತಮಗೊಳಿಸುತ್ತವೆ ಜೊತೆಗೆ ತಾಂತ್ರಿಕ ಕೌಶಲ್ಯಗಳು, ನಿರಂತರ ಅಭ್ಯಾಸ ವೃತ್ತಿ ಬೆಳವಣಿಗೆಗೆ ಸಹಾಯ ಮಾಡುತ್ತವೆ. ಯಾವುದೇ ಕಂಪನಿಗಳಾದರೂ ಉದ್ಯೋಗಿಯ ಆತ್ಮವಿಶ್ವಾಸ, ಸಂವಹನ ಕೌಶಲ್ಯ, ಆತ್ಮಶಿಸ್ತು ಮತ್ತು ಜವಾಬ್ದಾರಿಯುತ ನಡವಳಿಕೆಗೆ ಹೆಚ್ಚಿನ ಮಹತ್ವವನ್ನು ನೀಡುತ್ತವೆ. ವಿಶೇಷವಾಗಿ ಅಂತಹ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಮಾತನಾಡುವುದು, ಪ್ರಸ್ತುತೀಕರಣ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಮತ್ತು ಒಳ್ಳೆಯ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದು ಅತ್ಯಗತ್ಯ.

Ad Widget

Ad Widget alt="Ad Widget"/>

Ad Widget

ವಿದ್ಯಾರ್ಥಿಗಳು ಉತ್ತಮ ಉದ್ಯೋಗ ಪಡೆಯಲು ಪಠ್ಯಕ್ರಮದ ಜೊತೆಗೆ ಕೌಶಲ್ಯ ಆಧಾರಿತ ಕಲಿಕೆಗೆ ಹೆಚ್ಚಿನ ಪ್ರಯತ್ನವನ್ನು ಮಾಡಬೇಕು. ಹಾಗಾಗಿ ತಮ್ಮ ಸಾಮರ್ಥ್ಯಗಳನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಳ್ಳುವುದು ಮುಖ್ಯ. ಸ್ವಯಂ ಹಾಗೂ ಇತರ ಆನ್‌ಲೈನ್ ಕಲಿಕಾ ವೇದಿಕೆಗಳ ಮೂಲಕ ಹೆಚ್ಚುವರಿ ಜ್ಞಾನವನ್ನು ಸಂಪಾದಿಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಕುತೂಹಲವನ್ನು ಹೆಚ್ಚಿಸಿಕೊಂಡು, ಉಪಯುಕ್ತ ಮಾಹಿತಿಯನ್ನು ಸಂಗ್ರಹಿಸಿ, ಅದರ ಮಹತ್ವವನ್ನು ಅರಿತುಕೊಳ್ಳುವುದರಿಂದ ಈ ಕಾರ್ಯಾಗಾರವು ಯಶಸ್ಸಿನ ಜೊತೆಗೆ ಕ್ಯಾಂಪಸ್ ಪ್ಲೇಸ್‌ಮೆಂಟ್ ಪಡೆಯಲು ನೆರವಾಗುತ್ತವೆ ಎಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕಿ ನೀಮಾ ಹೇಳಿದರು.

Ad Widget

Ad Widget <> Ad Widget

ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ಗಣಕ ಶಾಸ್ತ್ರ ವಿಭಾಗ, ಐಕ್ಯೂಎಸಿ ಘಟಕ ಹಾಗೂ ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ಘಟಕ ಆಯೋಜಿಸಿದ ಬಿ.ಸಿ.ಎ ನಂತರದ ವೃತ್ತಿ ಅವಕಾಶಗಳು, ಉದ್ಯೋಗ ಮತ್ತು ಉನ್ನತ ಶಿಕ್ಷಣ ಎಂಬ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಮಾತನಾಡಿ, ಅಂತಿಮ ವರ್ಷದ ಬಿ.ಸಿ.ಎ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವುದು ಒಂದು ಉತ್ತಮ ಅವಕಾಶ. ಉದ್ಯೋಗಾವಕಾಶಗಳು ಮತ್ತು ಪ್ಲೇಸ್‌ಮೆಂಟ್‌ಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅಗತ್ಯವಾದ ಮಾಹಿತಿ ಹಾಗೂ ಮಾರ್ಗದರ್ಶನ ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

Ad Widget

Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರೊ. ಶ್ರೀ ಕೃಷ್ಣ ಗಣರಾಜ್ ಭಟ್ ಸಂಪನ್ಮೂಲ ವ್ಯಕ್ತಿ ನೀಮಾರವರಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಿದರು.

ವೇದಿಕೆಯಲ್ಲಿ ವಿವೇಕಾನಂದ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರಕಾಶ್ ಕುಮಾರ್ ಮತ್ತು ಕಾರ್ಡಿನೇಟರ್ ದೀಪಿಕಾ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ತೃತೀಯ ಬಿ.ಸಿ.ಎ ವಿಭಾಗದ ವಿದ್ಯಾರ್ಥಿನಿ ಕೆ. ದೀಪಿಕಾ ಪ್ರಭು ಸ್ವಾಗತಿಸಿ, ನಿರೂಪಿಸಿದರು.

Ad Widget
Click to comment

Leave a Reply

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!