ಬೆಂಗಳೂರು
Bigg Boss Kannada-13-ಸೆ.6 ರಿಂದ ‘ಬಿಗ್‌ಬಾಸ್ ಕನ್ನಡ-13’ ಆರಂಭ: ಈ ಬಾರಿ ಕಿಚ್ಚನ ಅಂಗಳದಲ್ಲಿ ‘ಫ್ಲೈಟ್ ಥೀಮ್’ ಹವಾ..!
ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್‌ಬಾಸ್ ಕನ್ನಡ’ (Bigg Boss Kannada) ಸೀಸನ್ 13ರ ಆರಂಭಕ್ಕೆ ದಿನಾಂಕ ನಿಗದಿಯಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಸಾರಥ್ಯದಲ್ಲಿ ಈ ಬಾರಿಯ ಶೋ ಸೆಪ್ಟೆಂಬರ್ 6ರ ಸಂಜೆ 7 ಗಂಟೆಗೆ ಅದ್ಧೂರಿಯಾಗಿ ಚಾಲನೆ ಪಡೆಯಲಿದೆ.
ಬೆಂಗಳೂರು: ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್‌ಬಾಸ್ ಕನ್ನಡ’ (Bigg Boss Kannada) ಸೀಸನ್ 13ರ ಆರಂಭಕ್ಕೆ ದಿನಾಂಕ ನಿಗದಿಯಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಸಾರಥ್ಯದಲ್ಲಿ ಈ ಬಾರಿಯ ಶೋ ಸೆಪ್ಟೆಂಬರ್ 6ರ ಸಂಜೆ 7 ಗಂಟೆಗೆ ಅದ್ಧೂರಿಯಾಗಿ ಚಾಲನೆ ಪಡೆಯಲಿದೆ.
ಎಲ್ಲಿ ಪ್ರಸಾರ?
ಪ್ರತಿ ವರ್ಷದಂತೆ ಈ ವರ್ಷವೂ ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಶೋ ಪ್ರಸಾರವಾಗಲಿದ್ದು, ಡಿಜಿಟಲ್ ವೇದಿಕೆಗಳಾದ ಜಿಯೋ ಸಿನಿಮಾ ಹಾಗೂ ಹಾಟ್‌ಸ್ಟಾರ್‌ನಲ್ಲಿಯೂ ವೀಕ್ಷಕರು ಕಾರ್ಯಕ್ರಮವನ್ನು ಆನಂದಿಸಬಹುದಾಗಿದೆ.
ವಿಶೇಷತೆಗಳೇನು?
ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಟ ಸುದೀಪ್, ಈ ಬಾರಿ ಬಿಗ್‌ಬಾಸ್ ಮನೆಯನ್ನು ‘ಫ್ಲೈಟ್ ಥೀಮ್’ನಲ್ಲಿ (Flight Theme) ವಿನ್ಯಾಸಗೊಳಿಸಲಾಗಿದೆ ಎಂದು ತಿಳಿಸಿದರು. ಎಂದಿನಂತೆ ಈ ಸೀಸನ್ ಕೂಡ 100 ದಿನಗಳ ಕಾಲ ನಡೆಯಲಿದ್ದು, ಎಷ್ಟು ಮಂದಿ ಸ್ಪರ್ಧಿಗಳು ಭಾಗವಹಿಸಲಿದ್ದಾರೆ ಎಂಬ ಕುತೂಹಲಕ್ಕೆ ಸೆಪ್ಟೆಂಬರ್ 6ರಂದು ತೆರೆಬೀಳಲಿದೆ. ವಿಶೇಷವೆಂದರೆ, ‘ಬಿಗ್‌ಬಾಸ್ ಅಗ್ನಿ ಪರೀಕ್ಷೆ’ ಕಾರ್ಯಕ್ರಮದ ಮೂಲಕ ಈಗಾಗಲೇ ಮೂವರು ಸಾಮಾನ್ಯ ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗಿದ್ದು, ಉಳಿದಂತೆ ಸಿನಿಮಾ ಹಾಗೂ ಸೋಷಿಯಲ್ ಮೀಡಿಯಾ ಸೆಲೆಬ್ರಿಟಿಗಳು ಮನೆಯೊಳಗೆ ಪ್ರವೇಶಿಸಲಿದ್ದಾರೆ.
ದರ್ಶನ್ ಹಾಡುಗಳ ಬಗ್ಗೆ ಸುದೀಪ್ ಸ್ಪಷ್ಟನೆ:
ಬಿಗ್‌ಬಾಸ್ ಮನೆಯಲ್ಲಿ ನಟ ದರ್ಶನ್ ಅಭಿನಯದ ಹಾಡುಗಳನ್ನು ಪ್ಲೇ ಮಾಡದಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಸುದೀಪ್ ಅವರು ಬಹಳ ಮುತ್ಸದ್ದಿತನದಿಂದ ಉತ್ತರಿಸಿದರು. “ಹಾಡುಗಳನ್ನು ಹಾಕದಿರಲು ತಾಂತ್ರಿಕ ಕಾರಣಗಳಿರಬಹುದು ಅಥವಾ ಕೆಲವೊಮ್ಮೆ ಹಾಡು ಹಾಕಿದ್ದಕ್ಕೆ ಪ್ರಶ್ನಿಸುವವರು ಅಥವಾ ಬೆದರಿಕೆ ಹಾಕುವವರೂ ಇರಬಹುದು. ಆದರೆ, ನಮಗೆ ಚಿತ್ರರಂಗದ ಪ್ರತಿಯೊಬ್ಬರ ಮೇಲೂ ಪ್ರೀತಿ ಇದೆ. ಯಾರ ಮೇಲೂ ನಮಗೆ ದ್ವೇಷವಿಲ್ಲ” ಎಂದು ಹೇಳುವ ಮೂಲಕ ಸುದೀಪ್ ಅವರು ವಿವಾದಗಳಿಗೆ ತೆರೆ ಎಳೆದಿದ್ದಾರೆ.
ಅಪರಾಧ
FIR-‘ಬಸವ ಮಂಟಪ’ ಕೃತಿ ವಿವಾದ: ಲೇಖಕ ರವಿ ಹಂಜ್, ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಎಫ್‌ಐಆರ್
ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು: ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕಲ್ಯಾಣದ ಭಂಡಾರಿಯಾಗಿದ್ದ ಬಸವಣ್ಣನವರ ಮೇಲೆ ಜಾತಿವಾದಿಗಳು ಮಾಡಿದ್ದ ಸುಳ್ಳು ಆರೋಪಗಳನ್ನು ‘ಕಳ್ಳತನ’ ಎಂದು ವ್ಯಾಖ್ಯಾನಿಸಿರುವುದು ಹಾಗೂ ಕಲ್ಯಾಣ ಕ್ರಾಂತಿಯ ಐತಿಹಾಸಿಕ ಸಂಘರ್ಷಗಳನ್ನು ತಿರುಚಿ ಬಸವಣ್ಣನವರ ಮೇಲೆ ಆರೋಪ ಹೊರಿಸಿರುವುದು ಇತಿಹಾಸಕ್ಕೆ ಮಾಡಿದ ಅಪಚಾರ ಎಂದು ಬಸವ ಸಮಿತಿ ದೂರಿನಲ್ಲಿ ಆಕ್ಷೇಪಿಸಿದೆ.
ರವಿ ಹಂಜ್ ಅವರು ಇಂತಹ ಪೂರ್ವಾಗ್ರಹಪೀಡಿತ ಬರಹಗಳಿಗೆ ಸಂಶೋಧನೆಯ ಮುಖವಾಡ ತೊಡಿಸಿ ಸಮಾಜದಲ್ಲಿ ವಿಷಬೀಜ ಬಿತ್ತುವ ಪ್ರಯತ್ನ ಮಾಡುತ್ತಿದ್ದರೆ, ಪ್ರಕಾಶಕ ವಿಶ್ವೇಶ್ವರ ಭಟ್ ಅವರು ಕೃತಿಗೆ ಪ್ರಚಾರ ನೀಡುತ್ತಿದ್ದಾರೆ ಎಂದು ಸಮಿತಿ ಆರೋಪಿಸಿದೆ.
ಇಂತಹ ವಿವಾದಾತ್ಮಕ ಕೃತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಬಸವ ಸಮಿತಿ ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಿತ್ತು.
ಶಿಕ್ಷಣ
RTE-ಆರ್‌ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್‌ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್‌ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್‌ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
ಬಿಗ್ ನ್ಯೂಸ್
Transfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ, ಆರ್. ಹಿತೇಂದ್ರ, ಸೀಮಂತ್ ಕುಮಾರ್ ಸಿಂಗ್, ಹೇಮಂತ್ ಎಂ. ನಿಂಬಾಳ್ಕರ್ ಸೇರಿದಂತೆ 32 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ, ಆರ್. ಹಿತೇಂದ್ರ, ಸೀಮಂತ್ ಕುಮಾರ್ ಸಿಂಗ್, ಹೇಮಂತ್ ಎಂ. ನಿಂಬಾಳ್ಕರ್ ಸೇರಿದಂತೆ 32 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ವ್ಯವಸ್ಥೆಯಲ್ಲಿ ಹೊಸ ಆಯುಕ್ತರ ಹುದ್ದೆಗಳ ರಚನೆಯೊಂದಿಗೆ ಹಿರಿಯ ಅಧಿಕಾರಿಗಳ ಜವಾಬ್ದಾರಿಗಳಲ್ಲೂ ಬದಲಾವಣೆ ಮಾಡಲಾಗಿದೆ.
ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿಯಾಗಿದ್ದ ಆರ್. ಹಿತೇಂದ್ರ ಅವರನ್ನು ಬೆಂಗಳೂರು ನಗರದ ಮುಖ್ಯ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಸೀಮಂತ್ ಕುಮಾರ್ ಸಿಂಗ್ ಅವರನ್ನು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಎಡಿಜಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಸಿಐಡಿಯ ಎಡಿಜಿಪಿಯಾಗಿದ್ದ ಬಿಜಯ್ ಕುಮಾರ್ ಸಿಂಗ್ ಅವರನ್ನು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಹುದ್ದೆಗೆ ಹಾಗೂ ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣ ವಿಭಾಗದ ಎಡಿಜಿಪಿಯಾಗಿದ್ದ ಎಸ್. ಮುರುಗನ್ ಅವರನ್ನು ಲೋಕಾಯುಕ್ತ ಎಡಿಜಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿರೀಕ್ಷೆಯಲ್ಲಿದ್ದ ಹೇಮಂತ್ ಎಂ. ನಿಂಬಾಳ್ಕರ್ ಅವರನ್ನು ಬೆಂಗಳೂರು ನಗರ ಸಂಚಾರ ವಿಭಾಗದ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಜೊತೆಗೆ ರೌಡಿ ನಿಗ್ರಹ ಪಡೆಯ ಆಯುಕ್ತರ ಹೆಚ್ಚುವರಿ ಹೊಣೆಗಾರಿಕೆಯನ್ನೂ ನೀಡಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಎನ್. ಶಶಿಕುಮಾರ್ ಅವರನ್ನು ಪಶ್ಚಿಮ ವಲಯದ ಐಜಿಪಿಯಾಗಿ ಹಾಗೂ ಅನುಪಮ್ ಅಗರ್ವಾಲ್ ಅವರನ್ನು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್‌ಆರ್‌ಪಿ) ಐಜಿಪಿಯಾಗಿ ನೇಮಿಸಲಾಗಿದೆ.
ಲೋಕಾಯುಕ್ತ ಎಡಿಜಿಪಿಯಾಗಿದ್ದ ಮನೀಶ್ ಖರ್ಬಿಕರ್ ಅವರನ್ನು ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣ ವಿಭಾಗದ ಎಡಿಜಿಪಿಯಾಗಿ, ಕಲಬುರಗಿ ನಗರ ಪೊಲೀಸ್ ಆಯುಕ್ತ ಹಾಗೂ ಡಿಐಜಿಪಿಯಾಗಿದ್ದ ಡಾ. ಶರಣಪ್ಪ ಎಸ್.ಡಿ. ಅವರನ್ನು ರೈಲ್ವೆ ಡಿಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನಗರದ ಜಂಟಿ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ಕಲಬುರಗಿ ನಗರ ಡಿಐಜಿಪಿ ಹಾಗೂ ಪೊಲೀಸ್ ಆಯುಕ್ತರಾಗಿ ನೇಮಿಸಲಾಗಿದೆ.
ಕಲಬುರಗಿ ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲ ಎಂ. ಪುಟ್ಟಮಾದಯ್ಯ ಅವರನ್ನು ಮೈಸೂರು ದಕ್ಷಿಣ ವಲಯದ ಡಿಐಜಿಪಿಯಾಗಿ, ಜಲಸಂಪನ್ಮೂಲ ಇಲಾಖೆಯ ಜಾಗೃತ ದಳದ ಡಿಐಜಿಪಿ ಡಾ. ಎಂ. ಅಶ್ವಿನಿ ಅವರನ್ನು ನೇಮಕಾತಿ ವಿಭಾಗದ ಡಿಐಜಿಪಿಯಾಗಿ ಹಾಗೂ ರೈಲ್ವೆ ಡಿಐಜಿಪಿಯಾಗಿದ್ದ ಜೆ.ಕೆ. ರಶ್ಮಿ ಅವರನ್ನು ಜಲಸಂಪನ್ಮೂಲ ಇಲಾಖೆಯ ಜಾಗೃತ ದಳದ ಡಿಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಪೊಲೀಸ್ ವ್ಯವಸ್ಥೆಯಲ್ಲಿ ಹೊಸ ಆಯುಕ್ತರ ನೇಮಕ
ಬೆಂಗಳೂರು ನಗರದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಪುನರ್‌ರಚಿಸುವ ಹಿನ್ನೆಲೆಯಲ್ಲಿ ವಿವಿಧ ವಿಭಾಗಗಳಿಗೆ ಹೊಸ ಆಯುಕ್ತರನ್ನು ನೇಮಕ ಮಾಡಲಾಗಿದೆ.
- ಲಾಭೂ ರಾಮ್: ಕೇಂದ್ರ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕ.
- ಡಾ. ಪಿ.ಎಸ್. ಹರ್ಷ: ಪೂರ್ವ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕ.
- ವಿಕಾಸ್ ಕುಮಾರ್ ವಿಕಾಸ್: ಪಶ್ಚಿಮ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕ.
- ಡಾ. ಎಂ.ಬಿ. ಬೋರಲಿಂಗಯ್ಯ: ಉತ್ತರ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕ.
- ಸಿ. ವಂಶಿಕೃಷ್ಣ: ಬೆಂಗಳೂರು ನಗರದ ಜಂಟಿ ಪೊಲೀಸ್ ಆಯುಕ್ತರಾಗಿ ನೇಮಕ. ಜೊತೆಗೆ ದಕ್ಷಿಣ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
- ಬೆಂಗಳೂರು ನಗರದ ಸಂಚಾರ ವಿಭಾಗದ ಪಶ್ಚಿಮ ಡಿಸಿಪಿಯಾಗಿದ್ದ ಡಾ. ಅನೂಪ್ ಎ. ಶೆಟ್ಟಿ ಅವರನ್ನು ಪೂರ್ವ ಬೆಂಗಳೂರು ನಗರದ ಸಂಚಾರ ವಿಭಾಗದ ಡಿಸಿಪಿಯಾಗಿ, ವಿಜಯಪುರದ ಪೊಲೀಸ್ ಸೂಪರಿಂಟೆಂಡೆಂಟ್ ಲಕ್ಷ್ಮಣ್ ನಿಂಬರಗಿ ಅವರನ್ನು ಕೇಂದ್ರ ಬೆಂಗಳೂರು ನಗರದ ಸಿಟಿ ಆರ್ಮ್ಡ್ ರಿಸರ್ವ್ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.
ಮೈಸೂರು ಕರ್ನಾಟಕ ಪೊಲೀಸ್ ಅಕಾಡೆಮಿಯ ಉಪನಿರ್ದೇಶಕ ಚನ್ನಬಸವಣ್ಣ ಲಂಗೋಟಿ ಅವರನ್ನು ಕೇಂದ್ರ ಬೆಂಗಳೂರು ನಗರದ ಇಂದಿರಾನಗರ ಡಿಸಿಪಿಯಾಗಿ, ಬೆಂಗಳೂರು ನಗರದ ವಾಯುವ್ಯ ವಿಭಾಗದ ಡಿಸಿಪಿ ನಾಗೇಶ್ ಡಿ.ಎಲ್. ಅವರನ್ನು ಉತ್ತರ ಬೆಂಗಳೂರು ನಗರದ ಯಶವಂತಪುರ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಸಿಐಡಿ-2ರ ಪೊಲೀಸ್ ಸೂಪರಿಂಟೆಂಡೆಂಟ್ ಲೋಕೇಶ್ ಭರಮಪ್ಪ ಜಗಲಾಸರ್ ಅವರನ್ನು ಕೇಂದ್ರ ಬೆಂಗಳೂರು ನಗರದ ಸಂಚಾರ ವಿಭಾಗದ ಡಿಸಿಪಿಯಾಗಿ, ಬೆಂಗಳೂರು ನಗರದ ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಎನ್. ಅವರನ್ನು ಪಶ್ಚಿಮ ಬೆಂಗಳೂರು ನಗರದ ಕೆಂಗೇರಿ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.
ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಅಡಾವತ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಸೂಪರಿಂಟೆಂಡೆಂಟ್ ಆಗಿ ವರ್ಗಾವಣೆ ಮಾಡಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಶ್ರೀಹರಿ ಬಾಬು ಬಿ.ಎಲ್. ಅವರನ್ನು ವೈಟ್‌ಫೀಲ್ಡ್ ವಿಭಾಗದ ಡಿಸಿಪಿಯಾಗಿ ಹಾಗೂ ರಂಜಿತ್ ಕುಮಾರ್ ಬಂಡಾರು ಅವರನ್ನು ಬೆಂಗಳೂರು ನಗರದ ಆಡಳಿತ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬಿಎಂಟಿಎಫ್‌ನ ಎಸ್ಪಿಯಾಗಿದ್ದ ಡಾ. ಗೀತಾ ಎಂ.ಎಸ್. ಅವರನ್ನು ಪೂರ್ವ ಬೆಂಗಳೂರು ನಗರದ ಡಿಸಿಪಿಯಾಗಿ, ತುಮಕೂರು ಎಸ್ಪಿ ಅಶೋಕ್ ಕೆ.ವಿ. ಅವರನ್ನು ಪಶ್ಚಿಮ ಬೆಂಗಳೂರು ನಗರದ ಪೀಣ್ಯ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿಯೋಜನೆ ನಿರೀಕ್ಷೆಯಲ್ಲಿದ್ದ ಲಕ್ಷ್ಮೀ ಗಣೇಶ್ ಕೆ. ಅವರನ್ನು ಕೇಂದ್ರ ಬೆಂಗಳೂರು ನಗರದ ಗಾಂಧಿನಗರ ಡಿಸಿಪಿಯಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ನಗರದ ಪೂರ್ವ ವಿಭಾಗದ ಡಿಸಿಪಿಯಾಗಿದ್ದ ಅಮಟೆ ವಿಕ್ರಮ್ ಅವರನ್ನು ಉತ್ತರ ಬೆಂಗಳೂರು ನಗರದ ಡಿಸಿಪಿಯಾಗಿ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ ಲೋಕಾಯುಕ್ತ ಎಸ್ಪಿ ಪಿ.ವಿ. ಸ್ನೇಹಾ ಅವರನ್ನು ಪಶ್ಚಿಮ ಬೆಂಗಳೂರು ನಗರದ ಸಂಚಾರ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.
-
ಬಿಗ್ ನ್ಯೂಸ್19 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ21 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ4 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ3 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ3 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಚಿನ್ನ-ಬೆಳ್ಳಿ ದರ3 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ3 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
Uncategorized5 hours ago
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ















