ಸ್ಥಳೀಯ
Patte-ಪಟ್ಟೆ ಶ್ರೀಕೃಷ್ಣ ಸಮೂಹ ಸಂಸ್ಥೆಗಳಲ್ಲಿ “ಮಾಯಕದ ಬಿನ್ನೆದಿ” ತುಳು ಯಕ್ಷಗಾನ
ಪಟ್ಟೆಯ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಸಭಾಭವನದಲ್ಲಿ ತುಳು ವರ್ಲ್ಡ್ ಫೌಂಡೇಶನ್ ಕಟೀಲು, ತುಳುವ ಮಹಾಸಭೆ ಪುತ್ತೂರು ವಲಯ, ತುಳುವೇಶ್ವರಿ ಆಟ ಕೂಟ ಆಶ್ರಯದಲ್ಲಿ ಆ. 22, ಶನಿವಾರದಂದು ಸೋಣದ ದುನಿಪು ಮತ್ತು ತುಳುವ ವಾಲ್ಮೀಕಿ ಮಂದಾರ ಕೇಶವ ಭಟ್ ಬರೆದ ಮಾಯಕದ ಬಿನ್ನೆದಿ ಎಂಬ ಯಕ್ಷಗಾನವು ಜರಗಿತು.
ಪಟ್ಟೆ ಬಡಗನ್ನೂರು: “ತುಳು ಭಾಷೆಗೆ ಅಂತಾರಾಷ್ಟ್ರೀಯ ಮನ್ನಣೆ ದೊರೆಯುವಂತಾಗಬೇಕು . ಈ ಮೂಲಕ ತುಳು ಭಾಷೆಗೆ ವಿಶ್ವ ಮಾನ್ಯತೆ ದೊರೆಯುವಂತಾಗಬೇಕು. ಗಂಡು ಕಲೆ ಎಂದು ಹೆಸರಾದ ಯಕ್ಷಗಾನಕ್ಕೆ ಹೆಚ್ಚಿನ ಪ್ರೋತ್ಸಾಹವನ್ನು ನೀಡಬೇಕು. ” ಎಂದು ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಹೇಳಿದರು.
ಆ. 22, ಶನಿವಾರದಂದು ಪಟ್ಟೆಯ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಸಭಾಭವನದಲ್ಲಿ ತುಳು ವರ್ಲ್ಡ್ ಫೌಂಡೇಶನ್ ಕಟೀಲು, ತುಳುವ ಮಹಾಸಭೆ ಪುತ್ತೂರು ವಲಯ, ತುಳುವೇಶ್ವರಿ ಆಟ ಕೂಟ ಆಶ್ರಯದಲ್ಲಿ ಸೋಣದ ದುನಿಪು ಮತ್ತು ತುಳುವ ವಾಲ್ಮೀಕಿ ಮಂದಾರ ಕೇಶವ ಭಟ್ ಬರೆದ ಮಾಯಕದ ಬಿನ್ನೆದಿ ಎಂಬ ಯಕ್ಷಗಾನವು ಜರಗಿತು.
ಈ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶ್ರೀಮತಿ ಭಾನುಮತಿ ಶೆಟ್ಟಿ ಕಕ್ವಗುತ್ತು “ಯಕ್ಷಗಾನದ ಮೂಲಕ ನಮ್ಮ ಸಂಸ್ಕೃತಿಯನ್ನು ಮಕ್ಕಳು ಅರ್ಥ ಮಾಡಿಕೊಳ್ಳಬೇಕು”ಎಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾದ ತುಳು ವರ್ಲ್ಡ್ ಫೌಂಡೇಶನ್ ನಿರ್ದೇಶಕರಾದ ಡಾ. ರಾಜೇಶ್ ಕೃಷ್ಣ ಆಳ್ವ ಅವರು “ಸೋಣದ ದುನಿಪು”ನ ಕುರಿತು ಮಾತನಾಡಿ, “ಆಟಿ ತಿಂಗಳ ಕಷ್ಟದ ದಿನಗಳನ್ನು, ಸೋಣ ತಿಂಗಳ ಹಬ್ಬದ ದಿನಗಳನ್ನು, ಆಚಾರ ವಿಚಾರಗಳನ್ನು, ಆಹಾರ ಪದ್ಧತಿಗಳನ್ನು ತಿಳಿಯಪಡಿಸಿದರು.”
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರಿನ ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕರಾದ ಶ್ರೀ ಹೇಮನಾಥ ಶೆಟ್ಟಿ ಅವರು “ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಡು ಸಂಸ್ಥೆಯ ಹೆಸರನ್ನು ಜನಪ್ರಿಯಗೊಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಸಂಸ್ಕಾರ ನೀಡಿ ದೇಶದ ಉತ್ತಮ ಪ್ರಜೆಗಳನ್ನಾಗಿ ಮಾಡುವಲ್ಲಿ ಸಂಸ್ಥೆಯ ಆಡಳಿತ ಮಂಡಳಿಯವರು ಶ್ರಮ ವಹಿಸುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರ ” ಎಂದು ಹೇಳಿದರು.
ಮಂದಾರ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಪ್ರಮೋದ್ ಸಪ್ರೆ, ಪುತ್ತೂರು ವಲಯದ ತುಳುವ ಮಹಾಸಭೆಯ ಸಂಚಾಲಕರಾದ ಮನೋಹರ ರೈ ಮನವಳಿಕೆ, ಪುತ್ತೂರು ವಲಯದ ತುಳುವ ಮಹಾಸಭೆಯ ಅಧ್ಯಕ್ಷರಾದ ಶ್ರೀಮತಿ ವೇದಾವತಿ ರಾಜೇಶ, ಪುತ್ತೂರು ತುಳುವ ಮಹಾಸಭೆಯ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ, ತುಳು ವಲ್ಡ್ ಫೌಂಡೇಶನ್ ಪ್ರಧಾನ ಕಾರ್ಯದರ್ಶಿ ವಸಂತ್ ರೈ, ತುಳುವೇಶ್ವರಿ ದೇವಸ್ಥಾನ ಬಸ್ರೂರು ಇಲ್ಲಿನ ಪ್ರಧಾನ ಸಂಚಾಲಕರಾದ ಅರವಿಂದ ಬೆಳ್ಚಡ ಉಪಸ್ಥಿತರಿದ್ದರು. ದ್ವಾರಕಾ ಪ್ರತಿಷ್ಠಾನ ಪುತ್ತೂರು ಇದರ ಕಾರ್ಯದರ್ಶಿ, ಪಟ್ಟೆ ವಿದ್ಯಾ ಸಂಸ್ಥೆಗಳ ನಿರ್ದೇಶಕರಾದ ಗಣರಾಜ ಕುಂಬ್ಳೆ ಅವರು ಸ್ವಾಗತಿಸಿ, ಧನ್ಯವಾದಗಳನ್ನು ಅರ್ಪಿಸಿದರು.
ಪ್ರಶಾಂತ್ ರೈ ಮುಂಡಾಳಗುತ್ತು, ಪ್ರಮೋದ್ ಕುಮಾರ್, ರೋಹಿತ್ ಉಚ್ಚಿಲ, ಅಕ್ಷಯ್ ಮಾರ್ನಡ್ , ಶಶಿಕಿರಣ್ ಕಾವು, ಚಂದ್ರಶೇಖರ್ ಧರ್ಮಸ್ಥಳ, ಸಂಸ್ಥೆ ವಿದ್ಯಾರ್ಥಿಗಳಾದ 10ನೇ ತರಗತಿಯ ಆದಿತ್ಯಕೃಷ್ಣ , 9ನೇ ತರಗತಿಯ ಸ್ವರೂಪ್, ಅಹನ ಮತ್ತು ಪಲ್ಲವಿ ಕಲಾವಿದರಾಗಿ ಭಾಗವಹಿಸಿದರು.
ಪಟ್ಟೆ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಿಘ್ನೇಶ್ ಹಿರಣ್ಯ, ಶಿಕ್ಷಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು, ಊರಿನ ಯಕ್ಷಗಾನ ಕಲಾ ಭಿಮಾನಿಗಳು, ನಿವೃತ್ತ ಶಿಕ್ಷಕರು ಭಾಗವಹಿಸಿದ್ದರು.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್17 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್9 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ15 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು17 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized16 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್17 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ15 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್16 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















