Connect with us

ಬಿಗ್ ನ್ಯೂಸ್

Ashok Rai-ಹಕೀಂ ಕೂರ್ನಡ್ಕ ವಿರುದ್ಧ ಆಕ್ರೋಶ | ಪ್ರೆಸ್‌ ಕ್ಲಬ್‌ ಮುಂಭಾಗ ನಿಜಕ್ಕೂ ನಡೆದದ್ದೇನು ? ಅಹಿತಕರ ಘಟನೆ ನಡೆಯಬಾರದೆಂದು ಗುಂಪನ್ನು ವಾಪಸ್ಸು ಕಳುಹಿಸಿದ್ದೇನೆ : ಅಶೋಕ್‌ ರೈ

Published

on

Ad Widget

Ad Widget

Ad Widget

Ad Widget

ಶಾಸಕ ಅಶೋಕ್ ಕುಮಾರ್ ರೈ ಅವರ ಹಾಗೂ ಅವರ ಬೆಂಬಲಿಗರ ವಿರುದ್ಧ ನಿರಂತರವಾಗಿ ನಿಂದನೆ ಹಾಗೂ ತೇಜೋವಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹಕೀಂ ಕೂರ್ನಡ್ಕ ವಿರುದ್ಧ ಶಾಸಕ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಪುತ್ತೂರು ಪ್ರೆಸ್‌ ಕ್ಲಬ್‌ ಬಳಿ ಮಂಗಳವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿತು.

Ad Widget

Ad Widget

Ad Widget

Ad Widget

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ಹಾಗೂ ಅವರ ಬೆಂಬಲಿಗರ ವಿರುದ್ಧ ನಿರಂತರವಾಗಿ ನಿಂದನೆ ಹಾಗೂ ತೇಜೋವಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹಕೀಂ ಕೂರ್ನಡ್ಕ ವಿರುದ್ಧ ಶಾಸಕ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಪುತ್ತೂರು ಪ್ರೆಸ್‌ ಕ್ಲಬ್‌ ಬಳಿ ಮಂಗಳವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿತು.

Ad Widget

Ad Widget alt="Ad Widget"/>

Ad Widget

ಕಳೆದ ಎರಡು ವರ್ಷಗಳಿಂದ ಹಕೀಂ ಕೂರ್ನಡ್ಕ ಅವರು ಶಾಸಕ ಅಶೋಕ್ ಕುಮಾರ್ ರೈ ಹಾಗೂ ಅವರ ಬೆಂಬಲಿಗರ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಕಾರ್ಯಕರ್ತರು ಆರೋಪಿಸಿದರು. ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸುವುದರ ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಧ್ವನಿ ಸಂದೇಶಗಳನ್ನು ರವಾನಿಸಿ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಅವಹೇಳನಕಾರಿ ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

Ad Widget

Ad Widget <> Ad Widget

ಹಕೀಂ ಕೂರ್ನಡ್ಕ ಅವರಿಗೆ ಕಾಂಗ್ರೆಸ್‌ನಲ್ಲಿ ಯಾವುದೇ ಹುದ್ದೆ ಇಲ್ಲ ಹಾಗೂ ಅವರು ಪಕ್ಷದ ಕಾರ್ಯಕರ್ತರಲ್ಲ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಈಗಾಗಲೇ ಸ್ಪಷ್ಟನೆ ನೀಡಿದೆ ಎಂದು ಕಾರ್ಯಕರ್ತರು ತಿಳಿಸಿದರು.

ಮಂಗಳವಾರ ಮಧ್ಯಾಹ್ನ ಹಕೀಂ ಕೂರ್ನಡ್ಕ ಅವರು ಪುತ್ತೂರು ಪ್ರೆಸ್‌ ಕ್ಲಬ್‌ಗೆ ಪತ್ರಿಕಾಗೋಷ್ಟಿ ನಡೆಸಲು ಆಗಮಿಸಿದ ವೇಳೆ ಹೈಡ್ರಾಮ ನಡೆದಿದೆ. ಶಾಸಕ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆದರೇ ಅದಕ್ಕೂ ಮೊದಲು ಪ್ರೆಸ್‌ ಕ್ಲಬ್‌ ಬಳಿ ಶಾಸಕರ ಬೆಂಬಲಿಗರಲ್ಲಿ ಹಕೀಂ ಕೂರ್ನಡ್ಕ ಪ್ರಚೊಧನಕಾರಿಯಾಗಿ ಮಾತನಾಡಿದ್ದು, ಹೀಗಾಗಿ ಇದನ್ನು ವಿಚಾರಿಸಲೆಂದು ಅವರು ಬಂದಿರುವುದಾಗಿ ಹೇಳಲಾಗುತ್ತಿದೆ.

Ad Widget

Ad Widget

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರು ತಮ್ಮ ಬೆಂಬಲಿಗರನ್ನು ಸಮಾಧಾನಪಡಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದರು. ಇದೇ ವೇಳೆ ಪರಿಸ್ಥಿತಿ ಉದ್ವಿಗ್ನಗೊಳ್ಳುವ ಸಾಧ್ಯತೆ ಕಂಡು ಹಕೀಂ ಕೂರ್ನಡ್ಕ ಅವರು ಪೊಲೀಸರಿಗೆ ಮಾಹಿತಿ ನೀಡಿದರು ಎನ್ನಲಾಗಿದೆ.

ಸ್ಥಳಕ್ಕೆ ಧಾವಿಸಿದ ಪುತ್ತೂರು ನಗರ ಠಾಣೆ ಪೊಲೀಸರು ಹಕೀಂ ಕೂರ್ನಡ್ಕ ಅವರನ್ನು ತಮ್ಮ ವಾಹನದಲ್ಲಿ ಸುರಕ್ಷಿತವಾಗಿ ಠಾಣೆಗೆ ಕರೆದೊಯ್ದರು. ಶಾಸಕ ಹಾಗೂ ಪಕ್ಷದ ಮುಖಂಡರ ವಿರುದ್ಧ ನಿಂದನೆ ಮಾಡಿರುವ ಕುರಿತು ಈ ಹಿಂದೆ ಪೊಲೀಸರಿಗೆ ದೂರು ನೀಡಲಾಗಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಈ ಸಂದರ್ಭದಲ್ಲಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು.

ಆರೋಗ್ಯ ಸಮಸ್ಯೆ; ಮಂಗಳೂರಿಗೆ ತೆರಳಿದ ಹಕೀಂ
ಠಾಣೆಗೆ ಕರೆದೊಯ್ಯಲಾದ ಬಳಿಕ ತನಗೆ ರಕ್ತದೊತ್ತಡ ಕಡಿಮೆಯಾಗಿದ್ದು ಆರೋಗ್ಯ ಸಮಸ್ಯೆ ಉಂಟಾಗಿದೆ ಎಂದು ಹಕೀಂ ಕೂರ್ನಡ್ಕ ತಿಳಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಅವರ ಸ್ನೇಹಿತನೊಂದಿಗೆ ಮಂಗಳೂರಿಗೆ ತೆರಳಲು ಪೊಲೀಸರು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಮಂಗಳವಾರ ಸಂಜೆವರೆಗೆ ಎರಡೂ ಕಡೆಯವರು ಪೊಲೀಸ್ ಠಾಣೆಗೆ ಯಾವುದೇ ದೂರು ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.

‘ಅಹಿತಕರ ಘಟನೆ ನಡೆಯದಂತೆ ಕಾರ್ಯಕರ್ತರನ್ನು ಸಮಾಧಾನಪಡಿಸಿದೆ’
ಘಟನೆ ಕುರಿತು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ‘ನಾನು ಕಚೇರಿಯಲ್ಲಿದ್ದ ವೇಳೆ ನಮ್ಮ ಕಾರ್ಯಕರ್ತರು ಇಂದಿರಾ ಕ್ಯಾಂಟೀನ್ ಬಳಿ ಊಟಕ್ಕೆ ತೆರಳಿದ್ದಾಗ ಹಕೀಂ ಕೂರ್ನಡ್ಕ ಅವರು ಕಾರಿನಲ್ಲಿ ಬಂದು ಅವರನ್ನು ಪ್ರಚೋದಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಕಾರ್ಯಕರ್ತರು ನನಗೆ ತಿಳಿಸಿದ್ದಾರೆ’ ಎಂದರು.

‘ಕಾರ್ಯಕರ್ತರ ಜಾತಕವನ್ನು ಪ್ರೆಸ್‌ ಕ್ಲಬ್‌ನಲ್ಲಿ ಬಹಿರಂಗಪಡಿಸುವುದಾಗಿ ಹಾಗೂ ತನಗೆ ಹಿರಿಯ ಅಧಿಕಾರಿಗಳ ಪರಿಚಯವಿರುವುದಾಗಿ ಹೇಳಿ ಪ್ರಚೋದನಕಾರಿ ಮಾತುಗಳನ್ನಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕಾರ್ಯಕರ್ತರ ಕುಟುಂಬ ಸದಸ್ಯರ ಬಗ್ಗೆಯೂ ಕೀಳುಮಟ್ಟದಲ್ಲಿ ಮಾತನಾಡಲಾಗಿದೆ ಎಂಬ ಆರೋಪವಿದೆ’ ಎಂದು ಹೇಳಿದರು.

‘ಮಹಿಳೆಯರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಬರೆಯಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ನಮ್ಮೊಂದಿಗೆ ಇರುವ ಸಾಮಾನ್ಯ ಜನರನ್ನು ನಿರಂತರವಾಗಿ ನಿಂದಿಸಿದರೆ ಅವರಿಗೆ ಆಕ್ರೋಶ ಉಂಟಾಗುವುದು ಸಹಜ. ಆದರೆ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂಬ ಉದ್ದೇಶದಿಂದ ನಾನು ಸ್ಥಳಕ್ಕೆ ಆಗಮಿಸಿ ಎಲ್ಲರನ್ನೂ ಸಮಾಧಾನಪಡಿಸಿ ವಾಪಸ್ ಕಳುಹಿಸಿದ್ದೇನೆ’ ಎಂದು ಶಾಸಕ ತಿಳಿಸಿದರು.

‘ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಸಹಜ. ಆದರೆ ಒಬ್ಬರನ್ನು ಹೀಯಾಳಿಸುವುದರಿಂದ ಯಾವುದೇ ಪ್ರಯೋಜನವಿಲ್ಲ. ನನಗೆ ಹಕೀಂ ಕೂರ್ನಡ್ಕ ಅವರೊಂದಿಗೆ ವೈಯಕ್ತಿಕ ದ್ವೇಷವಿಲ್ಲ. ಅಭಿವೃದ್ಧಿ ಮತ್ತು ಸಾರ್ವಜನಿಕರ ಹಿತದ ವಿಚಾರಗಳಿಗೆ ಆದ್ಯತೆ ನೀಡಬೇಕು’ ಎಂದರು.

ಈ ರೀತಿಯ ವಿವಾದಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಎಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ವಿಶೇಷವಾಗಿ ಮಹಿಳೆಯರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಬರಹಗಳು ಅಥವಾ ಸಂದೇಶಗಳು ಬಂದರೆ ಸಾರ್ವಜನಿಕರಲ್ಲಿ ಆಕ್ರೋಶ ಉಂಟಾಗುತ್ತದೆ ಎಂದು ಶಾಸಕ ಹೇಳಿದರು.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!