ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನೆ
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಸಹಯೋಗದಲ್ಲಿ ನಡೆದ ವಾಣಿಜ್ಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಕ್ಯಾಂಪ್ಕೋ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ವಿ. ಸತ್ಯನಾರಾಯಣ ಮಾತನಾಡಿದರು.
ಪುತ್ತೂರು, ಆ. 31: ಪ್ರಸ್ತುತ ದಿನಗಳಲ್ಲಿ ತಂತ್ರಜ್ಞಾನವು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಮುಖ ಪಾತ್ರ ವಹಿಸುತ್ತಿದೆ. ಸಮಾಜ ಮತ್ತು ಉದ್ಯೋಗ ಕ್ಷೇತ್ರದಲ್ಲಾಗುತ್ತಿರುವ ಬದಲಾವಣೆಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳು ಹೊಸ ಜ್ಞಾನ ಹಾಗೂ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಇಂತಹ ಜ್ಞಾನ ಸಂಪಾದನೆಗೆ ಇಂಟರ್ನ್ಶಿಪ್ಗಳನ್ನು ಮಾಡುವುದರಿಂದ ವಿದ್ಯಾರ್ಥಿಗಳಿಗೆ ಕಾರ್ಪೊರೇಟ್ ಕ್ಷೇತ್ರಕ್ಕೆ ಪ್ರವೇಶಿಸುವ ಮೊದಲು ವಿದ್ಯಾರ್ಥಿಗಳು ಆತ್ಮವಿಶ್ವಾಸ, ಸಂವಹನ ಕೌಶಲ್ಯ ಹಾಗೂ ವೃತ್ತಿಪರ ಗುಣಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಕ್ಯಾಂಪ್ಕೋ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ವಿ.ಸತ್ಯನಾರಾಯಣ ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಸಹಯೋಗದಲ್ಲಿ ನಡೆದ ವಾಣಿಜ್ಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ.ಕೆ.ಎನ್ ಮಾತನಾಡಿ, ವಿದ್ಯಾರ್ಥಿ ಜೀವನವು ಅತ್ಯಂತ ಶ್ರೇಷ್ಠವಾದ ಹಂತವಾಗಿದ್ದು, ಸಮಾಜದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ಹೇಗೆ ರೂಪಿಸಿಕೊಳ್ಳಬೇಕು ಎಂಬುದನ್ನು ವಿದ್ಯಾರ್ಥಿ ಜೀವನದಲ್ಲಿಯೇ ಅರಿತುಕೊಳ್ಳಬೇಕು. ನಾಲ್ಕು ಗೋಡೆಗಳ ನಡುವಿನ ಕಲಿಕೆಗಿಂತ ಪಠ್ಯೇತರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಜವಾಬ್ದಾರಿ ಹಾಗೂ ಅನುಭವವನ್ನು ಬೆಳೆಸಲು ಇಂತಹ ಸಂಘಗಳಿಂದ ಸಾಧ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಹಾಗೂ ಐಕ್ಯೂಎಸಿ ಸಂಯೋಜಕಿ ಮತ್ತು ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರವಿಕಲಾ ಕಾರ್ಯಕ್ರಮಕ್ಕೆ ಶುಭಕೋರಿದರು.
ವೇದಿಕೆಯಲ್ಲಿ ವಾಣಿಜ್ಯ ಸಂಘದ ಸಂಯೋಜಕ ಲೆ. ಭಾಮಿ ಅತುಲ್ ಶೆಣೈ ಉಪಸ್ಥಿತರಿದ್ದರು.
ಶಿಕ್ಷಣ
RTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
ಶಿಕ್ಷಣ
Vivekananda-ಸೂಕ್ಷ್ಮಾಣು ನಿರೋಧಕತೆ ವಿರುದ್ಧ ಜಾಗೃತಿ ಮೂಡಿಸಿದ ವಿವೇಕಾನಂದ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳು; ಜಾಗೃತಿ ಜಾಥಾ ಹಾಗೂ ಬೀದಿ ನಾಟಕದ ಮೂಲಕ ಪ್ರತಿಜೀವಕಗಳ ಜವಾಬ್ದಾರಿಯುತ ಬಳಕೆಯ ಸಂದೇಶ
ಪುತ್ತೂರಿನ ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ನಿರ್ದೇಶನದಂತೆ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ (National Pharmacy Week) ಆಚರಣೆಯ ಅಂಗವಾಗಿ ಸೂಕ್ಷ್ಮಾಣು ನಿರೋಧಕತೆ (Antimicrobial Resistance) ವಿಷಯದ ಕುರಿತು ಜಾಗೃತಿ ಜಾಥಾ ಹಾಗೂ ಬೀದಿ ನಾಟಕವನ್ನು ಪುತ್ತೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಆಯೋಜಿಸಲಾಯಿತು.
ಪುತ್ತೂರು, ನ. 18: ಪ್ರತಿಜೀವಕಗಳ (Antibiotics) ಅನಗತ್ಯ ಹಾಗೂ ಅತಿಯಾದ ಬಳಕೆಯಿಂದ ಸೂಕ್ಷ್ಮಾಣುಗಳು ಔಷಧಿಗಳಿಗೆ ಪ್ರತಿರೋಧ ಬೆಳೆಸಿಕೊಳ್ಳುವ ಅಪಾಯವಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪುತ್ತೂರಿನ ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ನಿರ್ದೇಶನದಂತೆ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ (National Pharmacy Week) ಆಚರಣೆಯ ಅಂಗವಾಗಿ ಸೂಕ್ಷ್ಮಾಣು ನಿರೋಧಕತೆ (Antimicrobial Resistance) ವಿಷಯದ ಕುರಿತು ಜಾಗೃತಿ ಜಾಥಾ ಹಾಗೂ ಬೀದಿ ನಾಟಕವನ್ನು ಆಯೋಜಿಸಲಾಯಿತು.

ಪುತ್ತೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಪುಷ್ಪ ನೀಡಿ ಸ್ವಾಗತಿಸಲಾಯಿತು. ಬಳಿಕ ಜಾಗೃತ ಕಾರ್ಯಕ್ರಮದ ಬ್ಯಾನರ್ ಅನಾವರಣಗೊಳಿಸಲಾಯಿತು. ವಿದ್ಯಾರ್ಥಿಗಳಿಂದ ಸೂಕ್ಷ್ಮಾಣು ನಿರೋಧಕತೆಯ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು. ನಂತರ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಅವರು ಜಾಗೃತಿ ಕರಪತ್ರವನ್ನು ಅನಾವರಣಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಆರಂಭಗೊಂಡ ಜಾಗೃತಿ ಜಾಥಾವು ಪುತ್ತೂರಿನ ಮುಖ್ಯ ರಸ್ತೆಯ ಮೂಲಕ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಸಾಗಿತು. ಜಾಥಾದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಜಾಗೃತಿ ಸಂದೇಶಗಳು ಹಾಗೂ ಕರಪತ್ರಗಳನ್ನು ವಿತರಿಸುವ ಮೂಲಕ ಸಾರ್ವಜನಿಕರಲ್ಲಿ ಪ್ರತಿಜೀವಕಗಳ ಸರಿಯಾದ ಬಳಕೆ, ವೈದ್ಯರ ಸಲಹೆಯಿಲ್ಲದೆ ಪ್ರತಿಜೀವಕಗಳನ್ನು ಸೇವಿಸದಿರುವುದು ಮತ್ತು ಔಷಧಿಗಳ ಪೂರ್ಣ ಅವಧಿಯ ಸೇವನೆಯ ಮಹತ್ವದ ಕುರಿತು ಅರಿವು ಮೂಡಿಸಿದರು.

ಕಾರ್ಯಕ್ರಮದ ಕೊನೆಯ ಭಾಗದ ಬೀದಿ ನಾಟಕವನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಪಂಜಿಗುಡ್ಡೆ ಈಶ್ವರ ಭಟ್ ಉಪಸ್ಥಿತರಿದ್ದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉದ್ಘಾಟನಾ ಹಾಗೂ ಮುಖ್ಯ ಅತಿಥಿಯಾಗಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಅತಿಥಿಗಳಾಗಿ ಪುತ್ತೂರು ಕೆಮಿಸ್ಟ್ ಆ್ಯಂಡ್ ಡ್ರಗ್ಗಿಸ್ಟ್ ಅಸೋಸಿಯೇಷನ್ ಅಧ್ಯಕ್ಷ ವಾಸುದೇವ ಭಟ್, ಕೆಎಸ್ಆರ್ಟಿಸಿ ಪುತ್ತೂರು ಡಿಪೋ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಕಾಶ್ ಎಂ. ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿವಿಜಯನಾರಾಯಣ ಕೆ. ಎಂ. ಉಪಸ್ಥಿತರಿದ್ದರು.

ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಗೋವಿಂದ ಪ್ರಕಾಶ್ ಸಾಯ, ಸದಸ್ಯರಾದ ರಾಮದಾಸ ಶೆಣೈ, ಡಾ. ಸಿ ಎಸ್ ಶಾಸ್ತ್ರೀ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ಗುರುರಾಜ ಎಂ. ಪಿ., ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಿಕ್ಷಣ
Narendra-ನರೇಂದ್ರ ಪ.ಪೂ. ಕಾಲೇಜಿನಲ್ಲಿ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ
ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ(ರಿ.) ಬೆಂಗಳೂರು, ಹಾಸನ ಜಿಲ್ಲಾ ಮತ್ತು ತಾಲೂಕು ಘಟಕ ಮತ್ತು ನರೇಂದ್ರ ಪ.ಪೂ. ಕಾಲೇಜು ತೆಂಕಿಲ ಪುತ್ತೂರು ಇದರ ಸಹಯೋಗದಲ್ಲಿ ನಡೆದ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ(ರಿ.) ಬೆಂಗಳೂರು ಇದರ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಜಿ.ಎಸ್. ಕಲಾವತಿ ಮಧುಸೂದನ್ ಅವರು ಮಾತನಾಡಿದರು.
ಕರ್ನಾಟಕ ಏಕೀಕರಣ ಎಂದರೆ ಇಂದಿನ ಕರ್ನಾಟಕ ರಾಜ್ಯ ಆಕಾರ ಪಡೆದು ಅನೇಕ ಭೌಗೋಳಿಕ ರಾಜಕೀಯ ಹಾಗೂ ಭಾಷಾ ಸವಾಲುಗಳನ್ನು ಜಯಿಸಿದ ಪ್ರಕ್ರಿಯೆ.ಭಾರತದ ಸ್ವಾತಂತ್ರ್ಯದ ಹೋರಾಟದ ಸಮಯದಲ್ಲಿಯೇ ಕನ್ನಡ ಭಾಷಾಭಿಮಾನಿಗಳು ವಿವಿಧ ಪ್ರಾಂತ್ಯಗಳಾಗಿ ಹಂಚಿ ಹೋಗಿದ್ದರು. ಹಲವು ಪ್ರಾಂತ್ಯಗಳಲ್ಲಿದ್ದ ಕನ್ನಡಿಗರ ಹಕ್ಕುಗಳು, ಭಾಷಾ ಮತ್ತು ಸಾಂಸ್ಕೃತಿಕ ಹಿತ ಚಿಂತನೆಗಳ ಪೋಷಣೆಗಾಗಿ ಏಕೀಕರಣವು ಅಗತ್ಯವಾಯಿತು.ಈ ಭಿನ್ನ ಪ್ರಾಂತ್ಯಗಳಲ್ಲಿ ಹಂಚಿ ಹೋಗಿದ್ದ ಕನ್ನಡಿಗರನ್ನು ಒಗ್ಗೂಡಿಸುವ ಹೋರಾಟವೇ ಕರ್ನಾಟಕ ಏಕೀಕರಣ. ಕನ್ನಡ ರಾಜ್ಯದ ಕನಸು ಸಾಕಾರಗೊಳ್ಳಲು ಹಲವು ಅಡೆತಡೆಗಳ ನಡುವೆಯೂ ಹೋರಾಟಗಾರರ ಶ್ರಮ, ಒತ್ತಡ ಮತ್ತು ನಿರಂತರ ಉತ್ಸಾಹದಿಂದ ಅದು ಕೊನೆಗೂ ಸಫಲವಾಯಿತು.ಇದು ನಮ್ಮ ಸಂಸ್ಕೃತಿ, ಭಾಷಾ ಗೌರವ , ಆರ್ಥಿಕ ಮತ್ತು ಸಾಮಾಜಿಕ ಹಿತದ ಸಂಕೇತ. ಈ ಐಕ್ಯತೆ , ಭ್ರಾತೃತ್ವ ಮತ್ತು ಪ್ರಾದೇಶಿಕ ಅಭಿಮಾನವನ್ನು ಮುಂದುವರೆಸಿ ಕನ್ನಡ ನಾಡಿನ ಸಮೃದ್ಧಿಗಾಗಿ ನಾವು ನಿರಂತರ ಪ್ರಯತ್ನಿಸಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ(ರಿ.) ಬೆಂಗಳೂರು ಇದರ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಜಿ.ಎಸ್. ಕಲಾವತಿ ಮಧುಸೂದನ್ ಇವರು ಹೇಳಿದರು.
ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ(ರಿ.) ಬೆಂಗಳೂರು, ಹಾಸನ ಜಿಲ್ಲಾ ಮತ್ತು ತಾಲೂಕು ಘಟಕ ಮತ್ತು ನರೇಂದ್ರ ಪ.ಪೂ. ಕಾಲೇಜು ತೆಂಕಿಲ ಪುತ್ತೂರು ಇದರ ಸಹಯೋಗದಲ್ಲಿ ನಡೆದ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕರ್ನಾಟಕದ ಏಕೀಕರಣ ವಿಚಾರಗೋಷ್ಠಿಯು ಕನ್ನಡ ಮಾತನಾಡುವ ಪ್ರದೇಶಗಳ ಐತಿಹಾಸಿಕ ಒಗ್ಗೂಡುವಿಕೆ, ಸಾಂಸ್ಕೃತಿಕ ಅಸ್ಮಿತೆ ಮತ್ತು ಆಧುನಿಕ ಕರ್ನಾಟಕದ ಅಭಿವೃದ್ಧಿಯನ್ನು ಚರ್ಚಿಸುವ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ವೇದಿಕೆಯಾಗಿದೆ. ಎಂದು ಹೇಳಿದರು.
ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ ಹಾಸನ ಇದರ ಸಂಘಟನಾ ಕಾರ್ಯದರ್ಶಿಯಾದ ಎನ್. ಗಿರಿಜಾಂಬ ಉಪಸ್ಥಿತರಿದ್ದರು.
ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಮಧುಶ್ರೀ, ಭವ್ಯಶ್ರೀ ಮತ್ತು ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಾನ್ವಿ ಇವರು ಈ ವಿಚಾರಗೋಷ್ಠಿಯಲ್ಲಿ ಭಾಗವಹಿಸಿ, ಈ ವಿಚಾರದ ಕುರಿತಾಗಿ ತಮ್ಮ ವಿಶ್ಲೇಷಣೆಯನ್ನು ನೀಡಿದರು.ಕರ್ಯಕ್ರಮದಲ್ಲಿ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕರಾದ ಕಾರ್ತಿಕ್ ಕುಮಾರ್ ಎನ್. ಇವರು ಸ್ವಾಗತಿಸಿದರು. ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಸ್ತುತಿ ವಂದಿಸಿದರು.
-
ರಾಜಕೀಯ23 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಬಿಗ್ ನ್ಯೂಸ್6 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಸಿನೆಮಾ23 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ23 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
Uncategorized5 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಕಾರ್ಯಕ್ರಮಗಳು23 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ23 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಬಿಗ್ ನ್ಯೂಸ್6 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್















