ಪುತ್ತೂರು
Kishore Kumar-ಪ್ರೆಸ್ ಕ್ಲಬ್ ಮುಂದೆಯೇ ಕಾಂಗ್ರೆಸ್ ಗೂಂಡಾಗಿರಿ: ‘ಕಿಸೆಯಲ್ಲಿ ಸಂವಿಧಾನ, ಕೃತ್ಯದಲ್ಲಿ ಸರ್ವಾಧಿಕಾರ’ ಇದುವೇ ಕಾಂಗ್ರೆಸ್ ಸಂಸ್ಕೃತಿ – ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಕಿಡಿ
ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಇರುವ ‘ವಾಕ್ ಸ್ವಾತಂತ್ರ್ಯ’ವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಪುತ್ತೂರು ಪತ್ರಿಕಾ ಭವನದ ಎದುರೇ ಕಾಂಗ್ರೆಸ್ ಕಾರ್ಯಕರ್ತರು ಗೂಂಡಾಗಿರಿ ನಡೆಸಿರುವ ಘಟನೆಯನ್ನು ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಅವರು ಅತ್ಯುಗ್ರವಾಗಿ ಖಂಡಿಸಿದ್ದಾರೆ.
ಪುತ್ತೂರು: ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಇರುವ ‘ವಾಕ್ ಸ್ವಾತಂತ್ರ್ಯ’ವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಪುತ್ತೂರು ಪತ್ರಿಕಾ ಭವನದ ಎದುರೇ ಕಾಂಗ್ರೆಸ್ ಕಾರ್ಯಕರ್ತರು ಗೂಂಡಾಗಿರಿ ನಡೆಸಿರುವ ಘಟನೆಯನ್ನು ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಅವರು ಅತ್ಯುಗ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಮಾತನಾಡಿದ ಕಿಶೋರ್ ಅವರು, ಶಾಸಕ ಅಶೋಕ್ ಕುಮಾರ್ ರೈ ಅವರ ಬೆಂಬಲಿಗರ ರೌಡಿಸಂ ಹಾಗೂ ರಾಜ್ಯದಲ್ಲಿ ಕುಸಿಯುತ್ತಿರುವ ಕಾನೂನು ಸುವ್ಯವಸ್ಥೆಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಟೀಕಿಸಿದವರ ಮೇಲೆ ಹಲ್ಲೆ ಮಾಡುವುದು ಸರ್ವಾಧಿಕಾರ:
“ಪ್ರಜಾಪ್ರಭುತ್ವದಲ್ಲಿ ಒಬ್ಬರ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲು ಮತ್ತು ಪ್ರಜಾಸತ್ತಾತ್ಮಕವಾಗಿ ಟೀಕಿಸಲು ಎಲ್ಲರಿಗೂ ಹಕ್ಕಿದೆ. ಶಾಸಕರನ್ನು ಟೀಕಿಸಲು ಬಂದ ಹಕೀಮ್ ಕೂರ್ನಡ್ಕ ಎಂಬುವವರ ಮೇಲೆ ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾದ ಪತ್ರಿಕಾ ಪ್ರತಿನಿಧಿಗಳ ಮುಂದೆಯೇ ಹಲ್ಲೆಗೆ ಯತ್ನಿಸಿರುವುದು ಕಾಂಗ್ರೆಸ್‌ನ ಅಹಂಕಾರವನ್ನು ತೋರಿಸುತ್ತದೆ. ಸಾರ್ವಜನಿಕ ಜೀವನದಲ್ಲಿರುವಾಗ ಟೀಕೆಗಳು ಸಹಜ. ನನ್ನನ್ನೂ ಅನೇಕರು ಟೀಕಿಸುತ್ತಾರೆ. ಹಾಗೆಂದ ಮಾತ್ರಕ್ಕೆ ಟೀಕಿಸಿದವರನ್ನೆಲ್ಲಾ ಹಿಡಿದು ಹೊಡೆಯಲು ಹೋದರೆ ಅದು ಪ್ರಜಾಪ್ರಭುತ್ವವಾಗುವುದಿಲ್ಲ, ಬದಲಾಗಿ ಸರ್ವಾಧಿಕಾರವಾಗುತ್ತದೆ. ಪುತ್ತೂರಿನಂತಹ ಪುಣ್ಯಭೂಮಿಯಲ್ಲಿ ಇಂತಹ ಕೃತ್ಯಗಳು ನಡೆಯುತ್ತಿರುವುದು ಶೋಚನೀಯ. ಶಾಸಕರು ಟೀಕೆಗಳಿಗೆ ಗೂಂಡಾಗಿರಿಯ ಮೂಲಕ ಉತ್ತರಿಸಬಾರದು” ಎಂದು ಕಿಶೋರ್ ಕುಮಾರ್ ಪುತ್ತೂರು ತೀಕ್ಷ್ಣವಾಗಿ ನುಡಿದಿದ್ದಾರೆ.
ತುರ್ತು ಪರಿಸ್ಥಿತಿಯ ನೆನಪು ತರಿಸಿದ ಕಾಂಗ್ರೆಸ್:
“ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿಯ ಸಮಯದಲ್ಲಿ ಪತ್ರಿಕೆಗಳಲ್ಲಿ ಏನೂ ಪ್ರಕಟವಾಗದಂತೆ ನಿರ್ಬಂಧ ಹೇರಿ ಮಾಧ್ಯಮಗಳ ಕತ್ತು ಹಿಸುಕಲಾಗಿತ್ತು. ಇಂದು ಅದೇ ಕಾಂಗ್ರೆಸ್ ಪಕ್ಷದವರು, ಪತ್ರಿಕಾಗೋಷ್ಠಿಯಲ್ಲಿ ಸತ್ಯ ಮಾತನಾಡಲು ಬರುವವರ ಬಾಯಿ ಮುಚ್ಚಿಸಲು ಗೂಂಡಾಗಿರಿ ಮಾಡುತ್ತಿದ್ದಾರೆ. ಇದು ಅಘೋಷಿತ ತುರ್ತು ಪರಿಸ್ಥಿತಿಯಲ್ಲದೇ ಮತ್ತೇನು?” ಎಂದು ಶಾಸಕರು ಪ್ರಶ್ನಿಸಿದ್ದಾರೆ.
ಕಿಸೆಯಲ್ಲಿ ಸಂವಿಧಾನ, ಕೃತ್ಯದಲ್ಲಿ ದಬ್ಬಾಳಿಕೆ:
“ಯಾವಾಗಲೂ ಕಿಸೆಯಲ್ಲಿ ಸಂವಿಧಾನದ ಸಣ್ಣ ಪುಸ್ತಕವನ್ನು ಇಟ್ಟುಕೊಂಡು ಪ್ರದರ್ಶನ ಮಾಡುವ ಕಾಂಗ್ರೆಸ್ ನಾಯಕರು, ಅದೇ ಸಂವಿಧಾನ ನೀಡಿರುವ ‘ವಾಕ್ ಸ್ವಾತಂತ್ರ್ಯ’ದ ಹಕ್ಕನ್ನು ಕಸಿದುಕೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ಯೂತ್ ಕಾಂಗ್ರೆಸ್‌ನ ಕಾರ್ಯಕರ್ತರು ಓರ್ವ ಡಿಸಿಪಿ ಮಟ್ಟದ ಪೊಲೀಸ್ ಅಧಿಕಾರಿಯ ಮೇಲೆಯೇ ಹಲ್ಲೆ ಮಾಡಿದರೂ, ಅವರ ಮೇಲೆ ಒಂದು ದೂರು ದಾಖಲಾಗುವುದಿಲ್ಲ. ಇತ್ತ ಪುತ್ತೂರಿನಲ್ಲಿ ಪೊಲೀಸ್ ಜೀಪಿಗೆ ಹೊಡೆಯಲು ಮುಂದಾಗುತ್ತಾರೆ. ಪೊಲೀಸರ ಮೇಲೆಯೇ ಹಲ್ಲೆ ಮಾಡುವ ಕಾಂಗ್ರೆಸ್ಸಿಗರಿಗೆ ರಕ್ಷಣೆ ಸಿಗುತ್ತಿದೆ ಎಂದರೆ, ಈ ರಾಜ್ಯದಲ್ಲಿ ಕಾನೂನು ಇದೆಯೋ ಸತ್ತಿದೆಯೋ?” ಎಂದು ಕಿಡಿಕಾರಿದ್ದಾರೆ.
ದಶಕಗಳ ಬಳಿಕ ಗೂಂಡಾ ಸಂಸ್ಕೃತಿಯ ಮರುಕಳಿಕೆ:
“ಪುತ್ತೂರಿನ ಶಾಸಕರು ಅಭಿವೃದ್ಧಿಯ ಹೆಸರಿನಲ್ಲಿ ಬರೀ ಪೋಸ್ ಕೊಡುತ್ತಿದ್ದಾರೆ. ಹತ್ತಾರು ಮಂದಿ ಬೆಂಬಲಿಗರನ್ನು ಇಟ್ಟುಕೊಂಡು ಕೇವಲ ಫೋಟೋ ಮತ್ತು ವಿಡಿಯೋ ರೀಲ್ಸ್ ಮಾಡಲು ಸುತ್ತಾಡುತ್ತಾರೆಯೇ ಹೊರತು, ಪುತ್ತೂರು ಕ್ಷೇತ್ರಕ್ಕೆ ಇವರಿಂದ ಯಾವುದೇ ನೈಜ ಅಭಿವೃದ್ಧಿ ಆಗಿಲ್ಲ. ದಶಕಗಳ ಕಾಲ ನೆಮ್ಮದಿ ಹಾಗೂ ಶಾಂತಿಯಿಂದಿದ್ದ ಪುತ್ತೂರಿನಲ್ಲಿ ಶಾಸಕರು ಮತ್ತೆ ಗೂಂಡಾ ಸಂಸ್ಕೃತಿಯನ್ನು ಮರುಕಳಿಸುವಂತೆ ಮಾಡುತ್ತಿದ್ದಾರೆ” ಎಂದು ಶಾಸಕರು ಗಂಭೀರ ಆರೋಪ ಮಾಡಿದ್ದಾರೆ.
ಪೊಲೀಸ್ ಇಲಾಖೆಗೆ ಎಚ್ಚರಿಕೆ:
ಪೊಲೀಸರ ಸಮ್ಮುಖದಲ್ಲೇ ಗೂಂಡಾಗಿರಿ ನಡೆಯುತ್ತಿದ್ದರೂ ಪೊಲೀಸರು ಮೂಕಪ್ರೇಕ್ಷಕರಾಗಿರುವುದು ಆತಂಕಕಾರಿ. ಪೊಲೀಸ್ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಪ್ರೆಸ್ ಕ್ಲಬ್ ಎದುರು ದಾಂಧಲೆ ಮಾಡಿದ ಗೂಂಡಾಗಳನ್ನು ಬಂಧಿಸಬೇಕು. ವಾಕ್ ಸ್ವಾತಂತ್ರ್ಯದ ಹರಣ ಹಾಗೂ ಪೊಲೀಸ್ ಅಧಿಕಾರಿಗಳ ಮೇಲಿನ ದಬ್ಬಾಳಿಕೆಯನ್ನು ರಾಜ್ಯದ ಜನತೆ ಸಹಿಸುವುದಿಲ್ಲ. ಮುಂದಿನ ದಿನಗಳಲ್ಲಿ ಭಾರತೀಯ ಜನತಾ ಪಾರ್ಟಿಯು ಈ ಸರ್ವಾಧಿಕಾರಿ ಧೋರಣೆಯ ವಿರುದ್ಧ ಬೀದಿಗಿಳಿದು ಹೋರಾಡಲಿದೆ ಎಂದು ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಎಚ್ಚರಿಸಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್‌ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್‌ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.
-
ಬಿಗ್ ನ್ಯೂಸ್18 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್10 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ16 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು18 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized17 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್18 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ16 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್17 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















