ರಾಜಕೀಯ
Puttur-ಪುತ್ತೂರು: ಸೆ.5ಕ್ಕೆ ‘ಪ್ರಜಾಸೇವೆ ಆಂದೋಲನ’ಕ್ಕೆ ಚಾಲನೆ; ಅಧಿಕಾರಿಗಳಿಗೆ ಶಾಸಕ ಅಶೋಕ್ ಕುಮಾರ್ ರೈ ಖಡಕ್ ಸೂಚನೆ..!
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಒದಗಿಸುವ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಜಾಸೇವೆ ಆಂದೋಲನ’ಕ್ಕೆ ಪುತ್ತೂರಿನಲ್ಲಿ ಸೆಪ್ಟೆಂಬರ್ 5ರಂದು ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಲಿದ್ದಾರೆ. ಈ ನಿಟ್ಟಿನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.
ಪುತ್ತೂರು: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಒದಗಿಸುವ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಜಾಸೇವೆ ಆಂದೋಲನ’ಕ್ಕೆ ಪುತ್ತೂರಿನಲ್ಲಿ ಸೆಪ್ಟೆಂಬರ್ 5ರಂದು ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಲಿದ್ದಾರೆ. ಈ ನಿಟ್ಟಿನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.
ಪುತ್ತೂರು ತಾಲೂಕು ಕಚೇರಿ ಸಭಾಂಗಣದಲ್ಲಿ ಸೆ.1ರಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಅಶೋಕ್ ಕುಮಾರ್ ರೈ, “ಸಾರ್ವಜನಿಕರ ಅಹವಾಲು ಸ್ವೀಕರಿಸುವ ಸಭೆಯಲ್ಲಿ ಅಧಿಕಾರಿಗಳು ಸಕಲ ಸಿದ್ಧತೆಯೊಂದಿಗೆ ಬರಬೇಕು. ಸ್ಥಳದಲ್ಲಿ ಉತ್ತರ ನೀಡಲಾಗದೆ ಮುಜುಗರಕ್ಕೊಳಗಾಗುವ ಪರಿಸ್ಥಿತಿ ನಿರ್ಮಿಸಿಕೊಳ್ಳಬೇಡಿ. ಹಳೆಯ ಕಡತಗಳನ್ನು ಶೀಘ್ರ ವಿಲೇವಾರಿ ಮಾಡಿ, ಜನರಿಗೆ ನ್ಯಾಯ ಒದಗಿಸಿ,” ಎಂದು ಎಚ್ಚರಿಸಿದರು.
ಶಾಸಕ ಅಶೋಕ್ ಕುಮಾರ್ ರೈ ಅವರು ಮಾತನಾಡಿ ಸಾರ್ವಜನಿಕರ ಸಮಸ್ಯೆಗಳು, ಅಹವಾಲುಗಳನ್ನು ಸೆ.5ರ ಸಭೆಯಲ್ಲಿ ಸ್ವೀಕಾರ ಮಾಡಲಿದ್ದೇವೆ. ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಸೀಮಿತವಾದ ಸಾರ್ವಜನಿಕರು ಪ್ರಯೋಜನ ಪಡೆಯಬಹುದು.ಸಾಧ್ಯವಾದ ಪ್ರಕರಣಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವ ಕಾರ್ಯವಾಗಲಿದೆ.

ಸ್ಥಳದಲ್ಲಿ ಮುಜುಗರ ಆಗದಂತೆ ಅಧಿಕಾರಿಗಳು ಮೊದಲೇ ಎಚ್ಚರ ವಹಿಸುವುದು ಉತ್ತಮ ಎಂದರು. ತಿಂಗಳ ಎರಡನೇ ಹಾಗೂ ನಾಲ್ಕನೇ ಶನಿವಾರ ಶಾಸಕರ ನೇತೃತ್ವದಲ್ಲಿ ಹೋಬಳಿ ಮಟ್ಟದಲ್ಲಿ ಸಭೆ ನಡೆಯಲಿದೆ. ಹಳೆಯ ಕಡತಗಳಿಗೆ ಯಾವ ರೀತಿ ಪರಿಹಾರ ನೀಡಬಹುದೆಂಬುದನ್ನು ಆಲೋಚಿಸಬೇಕಾಗಿದೆ. ಕಡತ, ಮನವಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರಕಾರ ಯೋಜನೆ, ಸೇವೆಗಳನ್ನು ಜಾರಿಗೆ ತರುವ ಪ್ರಯತ್ನವಾಗಿ ಪ್ರಜಾ ಸೇವೆ ಇರಲಿದೆ.
ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರಿಗೆ 5 ಲಕ್ಷ ಮೀನು ಮರಿ ಕೊಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕು. ಅರಣ್ಯ ಇಲಾಖೆಯಿಂದ ಹಣ್ಣಿನ ಗಿಡಗಳ ವಿತರಣೆಗೆ ಕ್ರಮವಹಿಸಬೇಕು. ಮೆಸ್ಕಾಂ, ಕೆಎಸ್‌ಆರ್ ಟಿಸಿ, ಕಂದಾಯ ಇಲಾಖೆಗೆ ಸಂಬಂಧಿಸಿ ಬಹಳಷ್ಟು ಸಮಸ್ಯೆಯಿದ್ದು, ಇದಕ್ಕೆ ಅಗತ್ಯ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಗಡಿಭಾಗದಿಂದ ಬಸ್ ರೂಟ್ ಮಾಡಿ ಮಕ್ಕಳಿಗೆ ಸಮಸ್ಯೆಯಾಗದಂತೆ ನೋಡಬೇಕು. ಪುತ್ತೂರಿನಲ್ಲಿ ಸಮಸ್ಯೆಗಳು ಕಡಿಮೆ ಇರಬೇಕು ಎಂದು ಶಾಸಕರು ತಿಳಿಸಿದರು.
ಸಹಾಯಕ ಕಮಿಷನರ್ ಸ್ಟೆಲ್ಲಾ ವರ್ಗೀಸ್, ತಾಲೂಕು ಗ್ಯಾರೆಂಟಿ ಯೋಜನಾ ಅನುಷ್ಟಾನ ಸಮಿತಿ ಅಧ್ಯಕ್ಷ ಉಮಾನಾಥ್ ಶೆಟ್ಟಿ ಪೆರ್ನೆ, ತಹಶೀಲ್ದಾರ್ ಬಿ.ಎಸ್ ಕೂಡಲಗಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ, ಪೌರಾಯುಕ್ತ ವಿದ್ಯಾ ಎಂ ಕಾಳೆ, ಬಂಟ್ವಾಳ ತಹಶೀಲ್ದಾರ್ ಮಂಜುನಾಥ್, ಇನ್‌ಸ್ಪೆಕ್ಟರ್ ಜಾನ್ಸನ್ ಡಿ’ಸೋಜ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ರೇಖಾ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಜೇಶ್ ರೈ, ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್, ಸಿಡಿಪಿಒ ಹರೀಶ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಮೆಸ್ಕಾಂ ಕಾರ್ಯನಿರ್ವಹಣಾಧಿಕಾರಿ ರಾಮಚಂದ್ರ, ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಅಕ್ಷರದಾಸೋಹ, ಭೂಮಾಪನಾ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ, ಮೀನುಗಾರಿಕೆ ಇಲಾಖೆ ಸಹಿತ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.
ಮುತುವರ್ಜಿಯಿಂದ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ
ಸೆ.5ರಿಂದ 1ನೇ ಮತ್ತು 3ನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ, ಸ್ಥಳೀಯ ಶಾಸಕರ ಉಪಸ್ಥಿತಿಯಲ್ಲಿ ತಾಲೂಕು ಮಟ್ಟದ ಸಭೆಗಳು ಜರಗಲಿವೆ. 2ನೇ ಮತ್ತು 4ನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕತೆಯಲ್ಲಿ ಹೋಬಳಿ, ಗ್ರಾ.ಪಂ. ಕೇಂದ್ರಗಳಲ್ಲಿ ಸಭೆಗಳನ್ನು ಆಯೋಜಿಸಲಾಗುವುದು. ಸಾರ್ವಜನಿಕರು ಪ್ರಜಾಸೇವೆ ಆಂದೋಲನ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಆಹವಾಲು ಸಲ್ಲಿಸಬಹುದು. ಸರಕಾರದ ವಿವಿಧ ಯೋಜನೆಗಳ ಸವಲತ್ತು ಸಾರ್ವಜನಿಕರಿಗೆ ದೊರೆಯಲು ಅಧಿಕಾರಿಗಳು ಮುತುವರ್ಜಿಯಿಂದ ಕೆಲಸ ಮಾಡಬೇಕು.ಸಭೆ ನಡೆಯುವ ಸ್ಥಳಗಳಲ್ಲಿ ಗಣಕಯಂತ್ರ, ಇಂಟರ್‌ನೆಟ್, ಪೀಠೋಪಕರಣ ಸಹಿತ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವುದರೊಂದಿಗೆ ಇಲಾಖಾವಾರು ಕೌಂಟರ್‌ಗಳನ್ನು ಸ್ಥಾಪಿಸಬೇಕು ಎಂದು ಶಾಸಕರು ಸೂಚಿಸಿದರು.
ಸಭೆಗಳಲ್ಲಿ ಪ್ರಮುಖ ಇಲಾಖೆಗಳು ವಸ್ತು ಪ್ರದರ್ಶನದ ಮಳಿಗೆಗಳನ್ನು ಸ್ಥಾಪಿಸಿ, ಇಲಾಖೆಯಿಂದ ದೊರೆಯುವ ಸೇವೆ, ಸೌಲಭ್ಯಗಳ ಕುರಿತು ಮಾಹಿತಿ ನೀಡಬೇಕು. ಫಲಾನುಭವಿಗಳಿಗೆ ಯಾವುದೇ ಸೌಲಭ್ಯ ವಿತರಣೆ ಇದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷ ದಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ತಾಲೂಕು ಮಟದ ಸಭೆಗಳಲ್ಲಿ ವಿತರಿಸಲು ಅಗತ್ಯ ತಯಾರಿ ಮಾಡಿಟ್ಟುಕೊಳ್ಳಬೇಕು. ಪ್ಲಾಟಿಂಗ್ ವಿಚಾರವಾಗಿ ಬಾಕಿ ಉಳಿದ ಕಡತಗಳನ್ನು ವಿಲೇವಾರಿ ಮಾಡುವುದಕ್ಕೆ ಅಗತ್ಯ ಕ್ರಮವಹಿಸಲಾಗುವುದು. ಆನ್‌ಲೈನ್ ನೊಂದಾವಣೆಯಾದರೆ, ದೂರುಗಳಿಗೆ ಸರಿಯಾದ ಪರಿಹಾರ ಲಭಿಸಲಿದೆ.
- ಸ್ಟೆಲ್ಲಾ ವರ್ಗೀಸ್, ಎಸಿ ಪುತ್ತೂರು
ಸ್ಥಳೀಯ
Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ
ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.
ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.
ರಾಜಕೀಯ
U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್
ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಬಿಚ್ಚಿಟ್ಟಿದ್ದಾರೆ
ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.
ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ
ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548
ಅಂತರ ರಾಜ್ಯ
Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್
ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.
ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.
ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.
ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.
ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.
ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.
ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.
ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.
-
ನಿಧನ ವಾರ್ತೆ23 hours agoKadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
-
ಬಿಗ್ ನ್ಯೂಸ್18 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಪುತ್ತೂರು15 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಮಂಗಳೂರು17 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
Uncategorized23 hours agoಅ.6: ಮಂಗಳೂರಿನ ಪುರಭವನದಲ್ಲಿ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ
-
ಅಂತರ ರಾಜ್ಯ21 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಬಿಗ್ ನ್ಯೂಸ್16 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ರಾಜ್ಯ20 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!


















