Connect with us

ಸ್ಥಳೀಯ

Apoorva Abhikar-ಪ್ರಾಸ್ಟೇಟ್ ಕ್ಯಾನ್ಸರ್ ಕ್ಷೇತ್ರದಲ್ಲಿ ಮಹತ್ವದ ಸಂಶೋಧನೆ: ಅಪೂರ್ವ ಅಭಿಕಾರ್‌ಗೆ ಪಿಎಚ್.ಡಿ. ಪದವಿ

Published

on

Ad Widget

Ad Widget

Ad Widget

Ad Widget

ಪ್ರಾಸ್ಟೇಟ್ ಕ್ಯಾನ್ಸ‌ರ್ ಕ್ಷೇತ್ರದಲ್ಲಿ ನಡೆಸಿದ ಅತ್ಯುತ್ತಮ ಸಂಶೋಧನೆಗಾಗಿ ಅಪೂರ್ವ ಅಭಿಕಾರ್ ಅವರು ಪಿಎಚ್.ಡಿ. (ಡಾಕ್ಟರೇಟ್) ಪದವಿ ಪಡೆದಿದ್ದಾರೆ. ಬೆಂಗಳೂರಿನ ಸೆಂಟರ್ ಫಾರ್ ಹ್ಯೂಮನ್ ಜೆನೆಟಿಕ್ಸ್ (CHG) ಸಂಸ್ಥೆಯಲ್ಲಿ ಡಾ. ಪ್ರತಿಭಾ ರಂಗನಾಥನ್ ಅವರ ಮಾರ್ಗದರ್ಶನದಲ್ಲಿ ಅಪೂರ್ವ ಅವರು ತಮ್ಮ ಸಂಶೋಧನಾ ಪ್ರಬಂಧವನ್ನು ಮಂಡಿಸಿದ್ದರು. ಈ ಸಂಸ್ಥೆಯು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಗೆ ಸಂಯೋಜಿತವಾಗಿದೆ.

Ad Widget

Ad Widget

Ad Widget

Ad Widget

ಕಾಣಿಯೂರು: ಪ್ರಾಸ್ಟೇಟ್ ಕ್ಯಾನ್ಸ‌ರ್ ಕ್ಷೇತ್ರದಲ್ಲಿ ನಡೆಸಿದ ಅತ್ಯುತ್ತಮ ಸಂಶೋಧನೆಗಾಗಿ ಅಪೂರ್ವ ಅಭಿಕಾರ್ ಅವರು ಪಿಎಚ್.ಡಿ. (ಡಾಕ್ಟರೇಟ್) ಪದವಿ ಪಡೆದಿದ್ದಾರೆ. ಬೆಂಗಳೂರಿನ ಸೆಂಟರ್ ಫಾರ್ ಹ್ಯೂಮನ್ ಜೆನೆಟಿಕ್ಸ್ (CHG) ಸಂಸ್ಥೆಯಲ್ಲಿ ಡಾ. ಪ್ರತಿಭಾ ರಂಗನಾಥನ್ ಅವರ ಮಾರ್ಗದರ್ಶನದಲ್ಲಿ ಅಪೂರ್ವ ಅವರು ತಮ್ಮ ಸಂಶೋಧನಾ ಪ್ರಬಂಧವನ್ನು ಮಂಡಿಸಿದ್ದರು. ಈ ಸಂಸ್ಥೆಯು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಗೆ ಸಂಯೋಜಿತವಾಗಿದೆ.

Ad Widget

Ad Widget alt="Ad Widget"/>

Ad Widget

ಸಂಶೋಧನೆಯ ವಿಷಯ ಮತ್ತು ಮಹತ್ವ:
ಅಪೂರ್ವ ಅಭಿಕಾರ್ ಅವರು ‘ಪ್ರಾಸ್ಟೇಟ್ ಕ್ಯಾನ್ಸರ್‌ನಲ್ಲಿ ಚಿಕಿತ್ಸಾ ಪ್ರತಿರೋಧಕ್ಕೆ ಕಾರಣವಾಗುವ ಅಂಶಗಳು ಹಾಗೂ ಆಂಡ್ರೋಜನ್ ರಿಸೆಪ್ಟರ್ ರೂಪಾಂತರಗಳ ಕಾರ್ಯವಿಧಾನ’ (Mechanisms responsible for castrate resistance in prostate cancer: Androgen receptor and androgen receptor variant associated signaling and TME derived factors) ಎಂಬ ವಿಷಯದ ಕುರಿತು ಆಳವಾದ ಅಧ್ಯಯನ ನಡೆಸಿದ್ದಾರೆ. ಕ್ಯಾನ್ಸರ್ ಟ್ಯೂಮರ್‌ಗಳ ಬೆಳವಣಿಗೆ ಹಾಗೂ ಚಿಕಿತ್ಸೆಗೆ ಅವು ಒಡ್ಡಬಲ್ಲ ಅಡೆತಡೆಗಳ ಬಗ್ಗೆ ಇವರ ಸಂಶೋಧನೆಯು ಮಹತ್ವದ ಒಳನೋಟಗಳನ್ನು ನೀಡಿದೆ.

Ad Widget

Ad Widget <> Ad Widget

ಇವರ ಈ ಸಂಶೋಧನಾ ಲೇಖನಗಳು ಈಗಾಗಲೇ ಅಂತರರಾಷ್ಟ್ರೀಯ ಮಟ್ಟದ ವೈಜ್ಞಾನಿಕ ನಿಯತಕಾಲಿಕೆಗಳಲ್ಲಿ (Peer-reviewed Journals) ಪ್ರಕಟಗೊಂಡಿವೆ. ಅಲ್ಲದೆ, ವಿವಿಧ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ಪ್ರಬಂಧ ಮಂಡಿಸಿರುವ ಅಪೂರ್ವ ಅವರು ಹಲವು ಸಂಶೋಧನಾ ಪ್ರಶಸ್ತಿಗಳಿಗೂ ಭಾಜನರಾಗಿದ್ದಾರೆ.

ಅಪೂರ್ವ ಅಭಿಕಾರ್ ಅವರು ಚಾರ್ವಾಕ ಗ್ರಾಮದ ದಿವಂಗತ ನರೇಂದ್ರ ಅಭಿಕಾರ ಮತ್ತು ಪುತ್ತೂರು ಪಿಎಲ್‌ಡಿ ಬ್ಯಾಂಕ್ ನಿರ್ದೇಶಕಿ ಚಂದ್ರಾವತಿ ಅಭಿಕಾರ ಅವರ ಪುತ್ರಿ. ಇವರು ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕಡೀರ ಯಶ್ವಿನ್ ಅವರ ಪತ್ನಿಯಾಗಿದ್ದಾರೆ. ಕ್ಯಾನ್ಸರ್ ಸಂಶೋಧನಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇವರನ್ನು ಹಿತೈಷಿಗಳು ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.

Click to comment

Leave a Reply

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಬಿಎಂ.ಡಿ ಕ್ಯಾಂಪ್‌ ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಶಿಕ್ಷಣ

RTE-ಆರ್‌ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ

Published

on

Ad Widget

Ad Widget

Ad Widget

Ad Widget

ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget alt="Ad Widget"/>

Ad Widget

ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್‌ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್‌ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.

ಆರ್‌ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.

Ad Widget

Ad Widget

ಆದಾಯ ಮಿತಿ ಹೆಚ್ಚಳದಿಂದ ಹೆಚ್ಚಿನ ಕುಟುಂಬಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶ ಸಿಗುವ ನಿರೀಕ್ಷೆಯಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!