Connect with us

ಅಪರಾಧ

Crime Update : ಬೆಳ್ತಂಗಡಿ : ತಂಡವೊಂದರಿಂದ  ತಮ್ಮನ ರಕ್ಷಿಸಲು ಹೋದ ಅಣ್ಣನ ಸಾವು ಕೊಲೆಯಲ್ಲದ ಮಾನವ ಹತ್ಯೆ – ನಾಲ್ವರ ವಿರುದ್ದ  ಪ್ರಕರಣ ದಾಖಲು | ಎಸ್ಸಿ ಎಸ್ಟಿ ದೌರ್ಜನ್ಯ ತಡೆ  ಕಾಯ್ದೆಯಡಿಯಲ್ಲೂ ಪ್ರಕರಣ  

Published

on



Ad Widget

Ad Widget

Ad Widget

Ad Widget

ಬೆಳ್ತಂಗಡಿ : ಜು 23 :  ತಮ್ಮನ  ಜತೆ  ತಂಡವೊಂದು ಗಲಾಟೆ ನಡೆಸುತ್ತಿದ್ದ ವಿಚಾರ ತಿಳಿದು ಅದನ್ನು  ಬಿಡಿಸಲು ಹೋದ ಅಣ್ಣ    ಹಲ್ಲೆಗೆ ಒಳಗಾಗಿ ಮೃತಪಟ್ಟ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ನಾಲ್ವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ . ಬೆಳ್ತಂಗಡಿ ತಾಲೂಕು ಇಂದಬೆಟ್ಟು ಗ್ರಾಮ ಕುವೆತ್ಯಾರು ನಿವಾಸಿ ಜಾರಪ್ಪ ನಾಯ್ಕ (55) ಮೃತಪಟ್ಟವರು

Ad Widget

Ad Widget

Ad Widget

Ad Widget

ಚಂದ್ರಕಾಂತ ನಾಯ್ಕ, ಮನೋಹರ ಗೌಡ,  ಹರಿಪ್ರಸಾದ ಪೂಜಾರಿ ಹಾಗೂ ದೀಪಕ್ ಶೆಟ್ಟಿ ಎಂಬವರ ವಿರುದ್ದ ಐಪಿಸಿ  ಕಲಂ: 304 (culpable homicide not amounting to murder  ಕೊಲೆಯಲ್ಲದ ಮಾನವ ಹತ್ಯೆ.) ಜೊತೆಗೆ 34  ಹಾಗೂ  3(2)(v),3(2)(v-a) sc st act 2015.ರಂತೆ ಪ್ರಕರಣ ದಾಖಲಾಗಿದೆ . ಮೃತ ಜಾರಪ್ಪ ನಾಯ್ಕರವರ ಪುತ್ರ ಬೆಳ್ತಂಗಡಿ ತಾಲೂಕು ಇಂದಬೆಟ್ಟು ಗ್ರಾಮ ಕುವೆತ್ಯಾರು ನಿವಾಸಿ ರಾಜಶೇಖರ ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ

Ad Widget

Ad Widget

Ad Widget alt="Ad Widget"/>

Ad Widget

ಇಂದಬೆಟ್ಟು ಗ್ರಾಮದ ಶಾಂತಿನಗರ  ಎಂಬಲ್ಲಿ  ರಾಜ ಶೇಖರ್‌ ಅವರಿಗೆ    ಜಮೀನಿದ್ದು  ಅದರಲ್ಲಿ  ಅವರ ತಂದೆಯವರ ಅನುಮತಿಯ ಮೇರೆಗೆ  ಚಿಕ್ಕಪ್ಪ ನಾರಾಯಣ ನಾಯ್ಕ ವಾಸವಾಗಿದ್ದರು .   ಜು 22 ರಂದು  6.15 ಗಂಟೆಗೆ  ರಾಜಶೇಖರ್‌ ಅವರ ಮೊಬೈಲ್ ಗೆ ವಿಜಯ ಎಂಬವರು ಕರೆಮಾಡಿ ನಿನ್ನ ಚಿಕ್ಕಪ್ಪ ಹಾಗೂ ಇತರರಿಗೆ  ಶಾಂತಿನಗರ ಎಂಬಲ್ಲಿ ಗಲಾಟೆ ಆಗುತ್ತಿದ್ದು ನೀನು  ಕೂಡಲೇ ಬರುವಂತೆ ತಿಳಿಸಿದ್ದಾರೆ.

Ad Widget

Ad Widget <> Ad Widget

 ಹೀಗಾಗಿ ರಾಜಶೇಖರ್‌ ಹಾಗೂ ಅವರ  ತಂದೆ ಜಾರಪ್ಪ ನಾಯ್ಕ ರವರು ಘಟನಾ ಸ್ಥಳಕ್ಕೆ  ತೆರಳಿದ್ದಾರೆ . ಅಲ್ಲಿ   ಆರೋಪಿಗಳಿಗೆ ಮತ್ತು ನಾರಾಯಣ ನಾಯ್ಕ ರವರಿಗೆ ಗಲಾಟೆ ಆಗುತ್ತಿತ್ತು.   ಆಗ  ಜಾರಪ್ಪ ನಾಯ್ಕ ರವರು ಗಲಾಟೆ ಯಾಕೇ ಮಾಡುತ್ತೀರಿ ಎಂದು  ವಿಚಾರಿಸಿದಾಗ ಆರೋಪಿಗಳು ನಿನ್ನ ತಮ್ಮ ನಾರಾಯಣ ನಾಯ್ಕ ಇಲ್ಲಿ ಇರಬಾದೆಂದು ತಗಾದೆ ತೆಗೆದಿದ್ದಾರೆ.



Ad Widget

 ಈ ವಿಚಾರವಾಗಿ ವಾಗ್ವಾದ ನಡೆದು  ಮನೋಹರ ಗೌಡ ಎಂಬವನು ಜಾರಪ್ಪ ನಾಯ್ಕ ರವರನ್ನು  ಕೈಯಿಂದ ದೂಡಿದಾಗ ಅವರು ನೆಲಕ್ಕೆ ಬೀಳುವ ಹಂತದಲ್ಲಿರುವಾಗ  ರಾಜಶೇಖರ್‌ ಹಾಗೂ  ಜಾರಪ್ಪ ನಾಯ್ಕ ರವರು ಅವರನ್ನು  ಹಿಂದಿನಿಂದ ಕೆಳಕ್ಕೆ ಬೀಳದಂತೆ  ಹಿಡಿದುಕೊಂಡಿದ್ದಾರೆ. ಈ ವೇಳೆ  ಜಾರಪ್ಪ ನಾಯ್ಕ ರವರು ತೀವ್ರ ಅಸ್ವಸ್ಥಗೊಂಡಿದ್ದು ಕೂಡಲೇ ಮಗ ಅವರನ್ನು  ವಾಹನವೊಂದಲ್ಲಿ ಆಸ್ಪತ್ರೆಗೆ ಕರೆದುಕೊಂಡು  ಹೋಗಿದ್ದಾರೆ. ಅಲ್ಲಿ ವೈದ್ಯರು ಜಾರಪ್ಪ ನಾಯ್ಕರವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ

Ad Widget

Ad Widget

 ಜಾರಪ್ಪ ನಾಯ್ಕ ರವರು ಪರಿಶಿಷ್ಟ ಪಂಗಡಕ್ಕೆ  ಸೇರಿದ ವ್ಯಕ್ತಿಯೆಂದು ಗೊತ್ತಿದ್ದು ಹಲ್ಲೆ ನಡೆಸಲು ಮುಂದಾಗಿ ಜಾರಪ್ಪ ನಾಯ್ಕ ರವರ ಮರಣಕ್ಕೆ ಕಾರಣವಾಗಿರುತ್ತಾರೆ ಎಂದು ರಾಜ ಶೇಖರ್‌ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ

Ad Widget
Click to comment

Leave a Reply

ಅಂತರ ರಾಜ್ಯ

Honeytrap-ಪಾಕ್ ಮಹಿಳೆಯಿಂದ ಹನಿಟ್ರ್ಯಾಪ್: ರಹಸ್ಯ ಮಾಹಿತಿ ಸೋರಿಕೆ ಮಾಡಿದ ನೌಕಾಪಡೆ ಸಿಬ್ಬಂದಿ ಬಂಧನ

Published

on



Ad Widget

Ad Widget

Ad Widget

Ad Widget

ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪಾಕಿಸ್ತಾನದ ಮಹಿಳೆಯೊಬ್ಬರು ನಡೆಸಿದ ‘ಹನಿಟ್ರ್ಯಾಪ್’ಗೆ ಸಿಲುಕಿ ಆರೋಪಿ ರಹಸ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ ಪ್ರದೀಪ್ ಮುಖರ್ಜಿ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಕೊಯಮತ್ತೂರು: ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪಾಕಿಸ್ತಾನದ ಮಹಿಳೆಯೊಬ್ಬರು ನಡೆಸಿದ ‘ಹನಿಟ್ರ್ಯಾಪ್’ಗೆ ಸಿಲುಕಿ ಆರೋಪಿ ರಹಸ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ ಪ್ರದೀಪ್ ಮುಖರ್ಜಿ (31) ಎಂದು ಗುರುತಿಸಲಾಗಿದೆ. 2014ರಲ್ಲಿ ನೌಕಾಪಡೆಗೆ ಸೇರ್ಪಡೆಯಾಗಿದ್ದ ಮುಖರ್ಜಿ, ವಿಶಾಖಪಟ್ಟಣದಲ್ಲಿರುವ ಈಸ್ಟರ್ನ್ ನೇವಲ್ ಕಮಾಂಡ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಎನ್ನಲಾಗಿದೆ.

Ad Widget

Ad Widget <> Ad Widget

ಕೆಲವು ತಿಂಗಳ ಹಿಂದೆ ಪಾಕಿಸ್ತಾನದ ಗುಪ್ತಚರ ಏಜೆಂಟ್ ಎಂದು ಶಂಕಿಸಲಾಗಿರುವ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದ ಮೂಲಕ ಮುಖರ್ಜಿಯನ್ನು ಸಂಪರ್ಕಿಸಿದ್ದಳು. ಬಳಿಕ ಆಕೆಯೊಂದಿಗೆ ಸಂಪರ್ಕ ಬೆಳೆಸಿಕೊಂಡಿದ್ದ ಆತ, ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಆಕೆಗೆ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.



Ad Widget

ಈ ಪ್ರಕರಣದ ಕುರಿತು ತನಿಖೆ ಮುಂದುವರಿದಿದ್ದು, ಹನಿಟ್ರ್ಯಾಪ್ ಮೂಲಕ ಭಾರತದ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಳ್ಳಲಾಗಿತ್ತೇ ಎಂಬ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Ad Widget

Ad Widget

ಪಾಕಿಸ್ತಾನಕ್ಕೆ ಮಾಹಿತಿ ಸೋರಿಕೆ ಆರೋಪ: ಅಸ್ಸಾಂನಲ್ಲಿ ಇಬ್ಬರ ಬಂಧನ

ಗುವಾಹಟಿ: ಪಾಕಿಸ್ತಾನಕ್ಕೆ ಭಾರತೀಯ ಸೇನೆಗೆ ಸಂಬಂಧಿಸಿದ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದ ಆರೋಪದ ಮೇಲೆ ಅಸ್ಸಾಂನಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಒಬ್ಬರು ನಿವೃತ್ತ ಯೋಧ ಎಂದು ತಿಳಿದುಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಶರ್ಮಾ, ಬಂಧಿತರನ್ನು ಶೀಘ್ರದಲ್ಲೇ ಕೇಂದ್ರ ತನಿಖಾ ಸಂಸ್ಥೆಗಳ ವಶಕ್ಕೆ ಒಪ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Ad Widget
Continue Reading

ಅಪರಾಧ

Puttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ

Published

on



Ad Widget

Ad Widget

Ad Widget

Ad Widget

ಅಕ್ರಮವಾಗಿ ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದು, 11 ಗೋವುಗಳನ್ನು ರಕ್ಷಿಸಿದ್ದಾರೆ ಹಾಗೂ ಒರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಅಕ್ರಮವಾಗಿ ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದು, 11 ಗೋವುಗಳನ್ನು ರಕ್ಷಿಸಿದ್ದಾರೆ ಹಾಗೂ ಒರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರಿಂದ ಪೊಲೀಸರಿಗೆ ದೊರೆತ ಮಾಹಿತಿಯ ಆಧಾರದ ಮೇಲೆ ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಪುತ್ತೂರು ತಾಲೂಕಿನ ಕುಂಜೂರುಪಂಜ ದೇವಶ್ಯದ ಮಯ್ಯ ಫಾರ್ಮ್ಸ್ನಿಂದ ಮುಂಜಾನೆ ಸುಮಾರು 3 ಗಂಟೆಗೆ ಬುಳೇರಿಕಟ್ಟೆ ಮಾರ್ಗವಾಗಿ ಗೋವುಗಳನ್ನು ಕೇರಳದತ್ತ ಸಾಗಿಸಲಾಗುತ್ತಿತ್ತು. ಗೋವುಗಳ ಕೈಕಾಲುಗಳನ್ನು ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ವಾಹನದಲ್ಲಿ ತುಂಬಿಸಿಕೊಂಡು ಸಾಗಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.



Ad Widget

ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಪತ್ತೆಹಚ್ಚಿ 11 ಗೋವುಗಳನ್ನು ರಕ್ಷಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ವಾಹನದಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.

Ad Widget

Ad Widget

ಈ ಸಂಬಂಧ ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Ad Widget
Continue Reading

ಅಪರಾಧ

Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget <> Ad Widget

ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.



Ad Widget

ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.

ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.

ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading