ಅಪರಾಧ
Uppinangadi-ಉಪ್ಪಿನಂಗಡಿ: ಡೀಸೆಲ್ ಕದಿಯುತ್ತಿದ್ದ ಇಬ್ಬರ ಬಂಧನ..!
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚರಿಸುವ ವಾಹನ ಸವಾರರ ನಿದ್ದೆಗೆಡಿಸಿದ್ದ ಡೀಸೆಲ್ ಕಳ್ಳರ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಬಳಿ ಟ್ಯಾಂಕರ್‌ನಿಂದ ಡೀಸೆಲ್ ಕದಿಯುತ್ತಿದ್ದ ಇಬ್ಬರನ್ನು ಪೊಲೀಸರು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚರಿಸುವ ವಾಹನ ಸವಾರರ ನಿದ್ದೆಗೆಡಿಸಿದ್ದ ಡೀಸೆಲ್ ಕಳ್ಳರ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಬಳಿ ಟ್ಯಾಂಕರ್‌ನಿಂದ ಡೀಸೆಲ್ ಕದಿಯುತ್ತಿದ್ದ ಇಬ್ಬರನ್ನು ಪೊಲೀಸರು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಬಂಧಿತರ ವಿವರ:
ಬಂಧಿತರನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತೊಪ್ಪನಹಳ್ಳಿ ಗ್ರಾಮದ ಜೈಮುತ್ತಾ (23) ಹಾಗೂ ಮುತ್ತು (28) ಎಂದು ಗುರುತಿಸಲಾಗಿದೆ. ಇದೇ ಗ್ರಾಮದ ಮತ್ತೊಬ್ಬ ಆರೋಪಿ ಮಹಾದೇವ ಟಿ.ಕೆ. (27) ಪೊಲೀಸರನ್ನು ಕಂಡು ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ಮುಂದುವರಿದಿದೆ.
ಸತತ ಕಳ್ಳತನದಿಂದ ಸವಾಲಾಗಿದ್ದ ಪ್ರಕರಣ:
ಕಳೆದ ಕೆಲವು ಸಮಯಗಳಿಂದ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗುತ್ತಿದ್ದ ಲಾರಿ ಹಾಗೂ ಟ್ಯಾಂಕರ್‌ಗಳಿಂದ ಭಾರಿ ಪ್ರಮಾಣದಲ್ಲಿ ಡೀಸೆಲ್ ಕಳವಾಗುತ್ತಿತ್ತು. ಇದು ಪೊಲೀಸರಿಗೆ ದೊಡ್ಡ ಸವಾಲಾಗಿತ್ತು. ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸರು ರಾತ್ರಿ ವೇಳೆ ಗಸ್ತನ್ನು ಚುರುಕುಗೊಳಿಸಿದ್ದರು.
ಕಾರ್ಯಾಚರಣೆ ನಡೆದದ್ದು ಹೀಗೆ:
ಬುಧವಾರ ರಾತ್ರಿ ಪೊಲೀಸರು ಅಲಂಪಾಡಿ ಕ್ರಾಸ್ ಬಳಿ ಗಸ್ತು ತಿರುಗುತ್ತಿದ್ದಾಗ, ರಸ್ತೆ ಬದಿಯಲ್ಲಿದ್ದ ಟ್ಯಾಂಕರ್ ಒಂದರ ಬಳಿ ಬೊಲೇರೋ ಪಿಕಪ್ ವಾಹನವು ಅನುಮಾನಾಸ್ಪದವಾಗಿ ನಿಂತಿರುವುದು ಕಂಡುಬಂದಿದೆ. ಪೊಲೀಸರು ಹತ್ತಿರ ಹೋಗುತ್ತಿದ್ದಂತೆಯೇ ಮೂವರು ಆರೋಪಿಗಳು ಓಡಲು ಯತ್ನಿಸಿದ್ದಾರೆ. ತಕ್ಷಣ ಬೆನ್ನಟ್ಟಿದ ಪೊಲೀಸರು ಇಬ್ಬರನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾದರು. ವಿಚಾರಣೆ ವೇಳೆ ಆರೋಪಿಗಳು ತಾವು ಸತತವಾಗಿ ಇದೇ ರೀತಿ ಡೀಸೆಲ್ ಕಳ್ಳತನ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ.
ವಶಪಡಿಸಿಕೊಂಡ ವಸ್ತುಗಳು:
ಆರೋಪಿಗಳಿಂದ ಕೃತ್ಯಕ್ಕೆ ಬಳಸುತ್ತಿದ್ದ ಬೊಲೇರೋ ಪಿಕಪ್ ವಾಹನ, ಡೀಸೆಲ್ ಕಳವಿಗೆ ಬಳಸುತ್ತಿದ್ದ ರಬ್ಬರ್ ಪೈಪುಗಳು, ಟರ್ಪಾಲ್ ಹಾಗೂ 35 ಲೀಟರ್ ಸಾಮರ್ಥ್ಯದ 40 ಕ್ಯಾನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪೈಕಿ ಒಂದು ಕ್ಯಾನ್‌ನಲ್ಲಿ ಆಗಷ್ಟೇ ಕಳವು ಮಾಡಿದ್ದ 20 ಲೀಟರ್ ಡೀಸೆಲ್ ಪತ್ತೆಯಾಗಿದೆ.
ಮಂಡ್ಯದಿಂದ ಬಂದು ದಕ್ಷಿಣ ಕನ್ನಡದ ಹೆದ್ದಾರಿಯಲ್ಲಿ ಕೈಚಳಕ ತೋರುತ್ತಿದ್ದ ಈ ತಂಡದ ಬಂಧನದಿಂದ ವಾಹನ ಚಾಲಕರು ನಿಟ್ಟುಸಿರು ಬಿಟ್ಟಿದ್ದಾರೆ. ಉಪ್ಪಿನಂಗಡಿ ಠಾಣಾ ಎಸ್‌ಐ ಸುತೇಶ್ ಅವರ ನೇತೃತ್ವದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ಅಪರಾಧ
FIR-‘ಬಸವ ಮಂಟಪ’ ಕೃತಿ ವಿವಾದ: ಲೇಖಕ ರವಿ ಹಂಜ್, ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಎಫ್‌ಐಆರ್
ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು: ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕಲ್ಯಾಣದ ಭಂಡಾರಿಯಾಗಿದ್ದ ಬಸವಣ್ಣನವರ ಮೇಲೆ ಜಾತಿವಾದಿಗಳು ಮಾಡಿದ್ದ ಸುಳ್ಳು ಆರೋಪಗಳನ್ನು ‘ಕಳ್ಳತನ’ ಎಂದು ವ್ಯಾಖ್ಯಾನಿಸಿರುವುದು ಹಾಗೂ ಕಲ್ಯಾಣ ಕ್ರಾಂತಿಯ ಐತಿಹಾಸಿಕ ಸಂಘರ್ಷಗಳನ್ನು ತಿರುಚಿ ಬಸವಣ್ಣನವರ ಮೇಲೆ ಆರೋಪ ಹೊರಿಸಿರುವುದು ಇತಿಹಾಸಕ್ಕೆ ಮಾಡಿದ ಅಪಚಾರ ಎಂದು ಬಸವ ಸಮಿತಿ ದೂರಿನಲ್ಲಿ ಆಕ್ಷೇಪಿಸಿದೆ.
ರವಿ ಹಂಜ್ ಅವರು ಇಂತಹ ಪೂರ್ವಾಗ್ರಹಪೀಡಿತ ಬರಹಗಳಿಗೆ ಸಂಶೋಧನೆಯ ಮುಖವಾಡ ತೊಡಿಸಿ ಸಮಾಜದಲ್ಲಿ ವಿಷಬೀಜ ಬಿತ್ತುವ ಪ್ರಯತ್ನ ಮಾಡುತ್ತಿದ್ದರೆ, ಪ್ರಕಾಶಕ ವಿಶ್ವೇಶ್ವರ ಭಟ್ ಅವರು ಕೃತಿಗೆ ಪ್ರಚಾರ ನೀಡುತ್ತಿದ್ದಾರೆ ಎಂದು ಸಮಿತಿ ಆರೋಪಿಸಿದೆ.
ಇಂತಹ ವಿವಾದಾತ್ಮಕ ಕೃತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಬಸವ ಸಮಿತಿ ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಿತ್ತು.
ಅಪರಾಧ
Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಸ್ಥಳೀಯ
Baindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಮೊಬೈಲ್ ಫೋನ್ ಕಳವು ಮಾಡಿ, ಅದರಲ್ಲಿದ್ದ UPI ಆ್ಯಪ್ ಬಳಸಿ ಹಣವನ್ನು ಅಕ್ರಮವಾಗಿ ವರ್ಗಾಯಿಸುತ್ತಿದ್ದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಲಾಗಿದ್ದ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾಸ್ತಾನ ಐರೋಡಿ ಗ್ರಾಮದ ಗೋಳಿಬೆಟ್ಟು ನಿವಾಸಿ ಪ್ರಹ್ಲಾದ್ (32) ಬಂಧಿತ ಆರೋಪಿ.
ಬೈಂದೂರು, ನ.19: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಮೊಬೈಲ್ ಫೋನ್ ಕಳವು ಮಾಡಿ, ಅದರಲ್ಲಿದ್ದ UPI ಆ್ಯಪ್ ಬಳಸಿ ಹಣವನ್ನು ಅಕ್ರಮವಾಗಿ ವರ್ಗಾಯಿಸುತ್ತಿದ್ದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಲಾಗಿದ್ದ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸಾಸ್ತಾನ ಐರೋಡಿ ಗ್ರಾಮದ ಗೋಳಿಬೆಟ್ಟು ನಿವಾಸಿ ಪ್ರಹ್ಲಾದ್ (32) ಬಂಧಿತ ಆರೋಪಿ.
ಕಳೆದ ಆಗಸ್ಟ್ 2ರಂದು ರೊಬಿನ್ ಫೆರ್ನಾಂಡಿಸ್ ಅವರು ಮಂಗಳೂರಿನಿಂದ ಮಡಗಾಂವ್‌ಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಬೆಳಗಿನ ಜಾವ ಸುಮಾರು 2 ಗಂಟೆಗೆ ರೈಲು ಬೈಂದೂರು ನಿಲ್ದಾಣದ ಬಳಿ ತಲುಪಿದ ಸಂದರ್ಭದಲ್ಲಿ ಅವರ 17 ಸಾವಿರ ರೂ. ಮೌಲ್ಯದ ಮೊಬೈಲ್ ಫೋನ್ ಕಳವಾಗಿತ್ತು. ಬಳಿಕ ಕಳವು ಮಾಡಿದ ಮೊಬೈಲ್‌ನಲ್ಲಿದ್ದ UPI ಆ್ಯಪ್ ಮೂಲಕ ಆರೋಪಿಯು 19,847 ರೂ. ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ನೇತೃತ್ವದ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ವಿಚಾರಣೆ ವೇಳೆ ಪ್ರಹ್ಲಾದ್, ತನ್ನ ಸಹಚರ ಜೋಶಿ ನಾರಾಯಣ ನಾಯಕ್ ಜೊತೆ ಸೇರಿ ಬೈಂದೂರು ಸಮೀಪ ಆಗಸ್ಟ್ 2, ಅಕ್ಟೋಬರ್ 13 ಹಾಗೂ ಮಾರ್ಚ್ 6ರಂದು ರೈಲು ಪ್ರಯಾಣಿಕರ ಮೊಬೈಲ್ ಫೋನ್‌ಗಳನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
-
ಬಿಗ್ ನ್ಯೂಸ್21 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ23 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ6 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ5 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಚಿನ್ನ-ಬೆಳ್ಳಿ ದರ5 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ5 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ5 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಸಿನೆಮಾ4 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು















