Connect with us

ಸ್ಥಳೀಯ

Sumant-ಮಡಂತ್ಯಾರು: ಬಾಲಕ ಸುಮಂತ್ ನಿಗೂಢ ಸಾವು: ಸಹೋದರ, ಮಾವಂದಿರ ‘ಬ್ರೈನ್ ಮ್ಯಾಪಿಂಗ್’ ಪೂರ್ಣ

Published

on

Ad Widget

Ad Widget

Ad Widget

Ad Widget

ಗೇರುಕಟ್ಟೆ ಸಮೀಪದ ಸಂಬೋಳ್ಯದ ಪ್ರತಿಭಾವಂತ ವಿದ್ಯಾರ್ಥಿ ಸುಮಂತ್ (15) ಅವರ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸ್ ಇಲಾಖೆ, ಇದೀಗ ಮಂಪರು ಪರೀಕ್ಷೆಯ (Brain Mapping) ಮೊರೆ ಹೋಗಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (FSL) ಸುಮಂತ್ ಕುಟುಂಬಸ್ಥರ ಮತ್ತು ಸಂಬಂಧಿಕರ ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ನಡೆದಿದೆ.

Ad Widget

Ad Widget

Ad Widget

Ad Widget

ಮಡಂತ್ಯಾರು: ಗೇರುಕಟ್ಟೆ ಸಮೀಪದ ಸಂಬೋಳ್ಯದ ಪ್ರತಿಭಾವಂತ ವಿದ್ಯಾರ್ಥಿ ಸುಮಂತ್ (15) ಅವರ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸ್ ಇಲಾಖೆ, ಇದೀಗ ಮಂಪರು ಪರೀಕ್ಷೆಯ (Brain Mapping) ಮೊರೆ ಹೋಗಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (FSL) ಸುಮಂತ್ ಕುಟುಂಬಸ್ಥರ ಮತ್ತು ಸಂಬಂಧಿಕರ ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೂವರ ಬ್ರೈನ್ ಮ್ಯಾಪಿಂಗ್ ಪೂರ್ಣ:
ಬೆಂಗಳೂರಿನ ಮಡಿವಾಳದಲ್ಲಿರುವ ಪ್ರಯೋಗಾಲಯದಲ್ಲಿ ಆ. 28ರಂದು ಸುಮಂತ್ ಸಹೋದರ ಸುದರ್ಶನ್ ಅವರನ್ನು ಸುಮಾರು 4 ಗಂಟೆಗಳ ಕಾಲ ಪರೀಕ್ಷೆಗೆ ಒಳಪಡಿಸಲಾಯಿತು. ನಂತರ ಆ. 29ರಂದು ಮಾವ ರಾಧಾಕೃಷ್ಣ ಹಾಗೂ ಸೆ. 1ರಂದು ಮತ್ತೊಬ್ಬ ಸಂಬಂಧಿ ಲಕ್ಷ್ಮಿನಾರಾಯಣ ಅವರ ಬ್ರೈನ್ ಮ್ಯಾಪಿಂಗ್ ನಡೆಸಲಾಯಿತು. ಇವರಿಬ್ಬರನ್ನೂ ತಲಾ 3 ಗಂಟೆಗಳ ಕಾಲ ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಸದ್ಯ ಪ್ರಕ್ರಿಯೆ ಮುಗಿಸಿ ಅವರು ಊರಿಗೆ ಮರಳಿದ್ದಾರೆ.

Ad Widget

Ad Widget <> Ad Widget

ಪ್ರಕರಣದ ಹಿನ್ನೆಲೆ:
ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್, 2026ರ ಜನವರಿ 14ರಂದು ಮುಂಜಾನೆ ದೇವಸ್ಥಾನಕ್ಕೆಂದು ತೆರಳಿದ್ದಾಗ ನಿಗೂಢವಾಗಿ ನಾಪತ್ತೆಯಾಗಿದ್ದರು. ನಂತರ ಅವರ ಮೃತದೇಹ ಮನೆಯ ಸಮೀಪದ ಕೆರೆಯೊಂದರಲ್ಲಿ ಪತ್ತೆಯಾಗಿತ್ತು. ಇದೊಂದು ವ್ಯವಸ್ಥಿತ ಕೊಲೆ ಎಂಬ ಬಲವಾದ ಶಂಕೆ ವ್ಯಕ್ತವಾಗಿದ್ದರೂ, ಪೊಲೀಸರಿಗೆ ಯಾವುದೇ ಸಾಕ್ಷ್ಯಗಳು ಲಭ್ಯವಾಗಿರಲಿಲ್ಲ.

ತನಿಖಾ ತಂಡದ ಹರಸಾಹಸ:
ಪ್ರಕರಣದ ನಿಗೂಢತೆ ಬಯಲಿಗೆಳೆಯಲು ಸರ್ಕಲ್ ಇನ್ಸ್‌ಪೆಕ್ಟರ್ ರವಿ ಬಿ.ಎಸ್. ನೇತೃತ್ವದ ತಂಡ ಹರಸಾಹಸ ಪಡುತ್ತಿದೆ. ಸ್ಥಳೀಯ ತನಿಖೆಯಲ್ಲಿ ಯಾವುದೇ ಸುಳಿವು ಸಿಗದ ಕಾರಣ, ನ್ಯಾಯಾಲಯದ ಅನುಮತಿ ಪಡೆದು ಶಂಕಿತರ ಮಂಪರು ಪರೀಕ್ಷೆ ನಡೆಸಲು ತೀರ್ಮಾನಿಸಲಾಯಿತು. ಮೊದಲ ಹಂತದಲ್ಲಿ ಪೋಷಕರು ಸೇರಿದಂತೆ ಐವರನ್ನು ವಿಚಾರಣೆ ನಡೆಸಲಾಗಿದ್ದು, ಇದೀಗ ವೈಜ್ಞಾನಿಕ ಪರೀಕ್ಷೆಗಳ ಮೂಲಕ ಸತ್ಯಾಂಶ ಹೊರಹಾಕಲು ಪ್ರಯತ್ನಿಸಲಾಗುತ್ತಿದೆ.

Ad Widget

Ad Widget

ತಂದೆಯ ವಿಶ್ವಾಸ ಮತ್ತು ಮನವಿ:
ಪೊಲೀಸರ ತನಿಖೆಯ ಬಗ್ಗೆ ಸುಮಂತ್ ತಂದೆ ಸುಬ್ರಹ್ಮಣ್ಯ ನಾಯಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಮನೆಯವರ ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಮುಗಿದ ತಕ್ಷಣವೇ, ಈ ಪ್ರಕರಣದಲ್ಲಿ ನಮಗೆ ಸಂಶಯವಿರುವ ಇತರ ಶಂಕಿತರನ್ನೂ ಇಂತಹದ್ದೇ ಪರೀಕ್ಷೆಗೆ ಒಳಪಡಿಸಬೇಕು. ಆಗ ಮಾತ್ರ ನನ್ನ ಮಗನ ಸಾವಿಗೆ ನ್ಯಾಯ ಸಿಗಲು ಸಾಧ್ಯ” ಎಂದು ಅವರು ಮನವಿ ಮಾಡಿದ್ದಾರೆ.

Ad Widget

ಶಿಕ್ಷಣ

Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ

Published

on

Ad Widget

Ad Widget

Ad Widget

Ad Widget

ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ಮಂಗಳೂರು

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

Published

on

Ad Widget

Ad Widget

Ad Widget

Ad Widget

ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.

Ad Widget

Ad Widget

ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!