Connect with us

ಶಿಕ್ಷಣ

Philomina-ಫಿಲೋಮಿನಾ ಪ. ಪೂ ಕಾಲೇಜಿಗೆ ಮೈಟ್ ‘ಕಲ್ಚರಲ್ ಫೆಸ್ಟ್’; ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

Published

on

Ad Widget

Ad Widget

Ad Widget

Ad Widget

ಮೈಟ್ ಟೆಕ್ನಿಕಲ್ ಅಂಡ್ ಪ್ರೊಫೆಷನಲ್ ಕಾಲೇಜು, ಮಂಗಳೂರು ಇದರ ಆಶ್ರಯದಲ್ಲಿ ಸೆ 2 ರಂದು ನಡೆದ ‘ಕಲ್ಚರಲ್ ಫೆಸ್ಟ್’ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.  

Ad Widget

Ad Widget

Ad Widget

Ad Widget

ಪುತ್ತೂರು: ಮೈಟ್ ಟೆಕ್ನಿಕಲ್ ಅಂಡ್ ಪ್ರೊಫೆಷನಲ್ ಕಾಲೇಜು, ಮಂಗಳೂರು ಇದರ ಆಶ್ರಯದಲ್ಲಿ ಸೆ 2 ರಂದು ನಡೆದ ‘ಕಲ್ಚರಲ್ ಫೆಸ್ಟ್’ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ
ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.  

Ad Widget

Ad Widget alt="Ad Widget"/>

Ad Widget

ಪ್ರಥಮ ವಿಜ್ಞಾನ ವಿಭಾಗದ ಜೀತನ್ ಕೆ, ಪ್ರಗ್ಯಾನ್ ಡೆಲ್ವಿನ್ ಡಿಸೋಜಾ ಹಾಗೂ  ದ್ವಿತೀಯ ವಾಣಿಜ್ಯ ವಿಭಾಗದ ಧ್ಯಾನ್ ಬಿ ಟ್ರೆಶರ್ ಹಂಟ್ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ರಸಪ್ರಶ್ನೆ  ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ  ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.

Ad Widget
Click to comment

Leave a Reply

ಶಿಕ್ಷಣ

Vivekananda-ವಿವೇಕಾನಂದ ಪಾಲಿಟೆಕ್ನಿಕ್‌ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ

Published

on

Ad Widget

Ad Widget

Ad Widget

Ad Widget

ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

Ad Widget

Ad Widget alt="Ad Widget"/>

Ad Widget

ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು.

Ad Widget

Ad Widget <> Ad Widget

ಸದಸ್ಯರಾಗಿ: ಶ್ರೀಮತಿ ತ್ರಿವೇಣಿ ಪೆರ್ವೋಡಿ , ಶಮಂತ ಕೃಷ್ಣ ಕೆ ಉರಿಮಜಲು, ಕೇಶವ ಅಮೈ , ರವಿರಾಜ ಶೆಟ್ಟಿ, ಬಿ ರೋಹಿತ್ ಕುಮಾರ್, ಶ್ರೀಮತಿ ಮೋಹಿನಿ ದಿವಾಕರ ಜವಾಬ್ದಾರಿ ವಹಿಸಿಕೊಂಡರು.

ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕೃಷ್ಣಕುಮಾರ್ ಶೆಟ್ಟಿ, ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ., ಜತೆ ಕಾರ್ಯದರ್ಶಿ ಭರತ್ ಪೈ, ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಪ್ರಸಾದ್, ಹಿಂದಿನ ಆಡಳಿತ ಮಂಡಳಿಯ ಸಂಚಾಲಕರು, ಸದಸ್ಯರು, ಪ್ರಾಂಶುಪಾಲರು ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

Continue Reading

ಶಿಕ್ಷಣ

RTE-ಆರ್‌ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ

Published

on

Ad Widget

Ad Widget

Ad Widget

Ad Widget

ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget alt="Ad Widget"/>

Ad Widget

ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್‌ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್‌ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.

ಆರ್‌ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.

Ad Widget

Ad Widget

ಆದಾಯ ಮಿತಿ ಹೆಚ್ಚಳದಿಂದ ಹೆಚ್ಚಿನ ಕುಟುಂಬಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶ ಸಿಗುವ ನಿರೀಕ್ಷೆಯಿದೆ.

Ad Widget
Continue Reading

ಶಿಕ್ಷಣ

Vivekananda-ಸೂಕ್ಷ್ಮಾಣು ನಿರೋಧಕತೆ ವಿರುದ್ಧ ಜಾಗೃತಿ ಮೂಡಿಸಿದ ವಿವೇಕಾನಂದ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳು; ಜಾಗೃತಿ ಜಾಥಾ ಹಾಗೂ ಬೀದಿ ನಾಟಕದ ಮೂಲಕ ಪ್ರತಿಜೀವಕಗಳ ಜವಾಬ್ದಾರಿಯುತ ಬಳಕೆಯ ಸಂದೇಶ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ನಿರ್ದೇಶನದಂತೆ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ (National Pharmacy Week) ಆಚರಣೆಯ ಅಂಗವಾಗಿ ಸೂಕ್ಷ್ಮಾಣು ನಿರೋಧಕತೆ (Antimicrobial Resistance) ವಿಷಯದ ಕುರಿತು ಜಾಗೃತಿ ಜಾಥಾ ಹಾಗೂ ಬೀದಿ ನಾಟಕವನ್ನು ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು, ನ. 18: ಪ್ರತಿಜೀವಕಗಳ (Antibiotics) ಅನಗತ್ಯ ಹಾಗೂ ಅತಿಯಾದ ಬಳಕೆಯಿಂದ ಸೂಕ್ಷ್ಮಾಣುಗಳು ಔಷಧಿಗಳಿಗೆ ಪ್ರತಿರೋಧ ಬೆಳೆಸಿಕೊಳ್ಳುವ ಅಪಾಯವಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪುತ್ತೂರಿನ ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ನಿರ್ದೇಶನದಂತೆ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ (National Pharmacy Week) ಆಚರಣೆಯ ಅಂಗವಾಗಿ ಸೂಕ್ಷ್ಮಾಣು ನಿರೋಧಕತೆ (Antimicrobial Resistance) ವಿಷಯದ ಕುರಿತು ಜಾಗೃತಿ ಜಾಥಾ ಹಾಗೂ ಬೀದಿ ನಾಟಕವನ್ನು ಆಯೋಜಿಸಲಾಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಪುಷ್ಪ ನೀಡಿ ಸ್ವಾಗತಿಸಲಾಯಿತು. ಬಳಿಕ ಜಾಗೃತ ಕಾರ್ಯಕ್ರಮದ ಬ್ಯಾನರ್ ಅನಾವರಣಗೊಳಿಸಲಾಯಿತು. ವಿದ್ಯಾರ್ಥಿಗಳಿಂದ  ಸೂಕ್ಷ್ಮಾಣು ನಿರೋಧಕತೆಯ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು. ನಂತರ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.  ದೀಪಕ್ ರೈ ಅವರು ಜಾಗೃತಿ ಕರಪತ್ರವನ್ನು ಅನಾವರಣಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ  ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಆರಂಭಗೊಂಡ ಜಾಗೃತಿ ಜಾಥಾವು ಪುತ್ತೂರಿನ ಮುಖ್ಯ ರಸ್ತೆಯ ಮೂಲಕ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಸಾಗಿತು. ಜಾಥಾದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಜಾಗೃತಿ ಸಂದೇಶಗಳು ಹಾಗೂ ಕರಪತ್ರಗಳನ್ನು ವಿತರಿಸುವ ಮೂಲಕ ಸಾರ್ವಜನಿಕರಲ್ಲಿ ಪ್ರತಿಜೀವಕಗಳ ಸರಿಯಾದ ಬಳಕೆ, ವೈದ್ಯರ ಸಲಹೆಯಿಲ್ಲದೆ ಪ್ರತಿಜೀವಕಗಳನ್ನು ಸೇವಿಸದಿರುವುದು ಮತ್ತು ಔಷಧಿಗಳ ಪೂರ್ಣ ಅವಧಿಯ ಸೇವನೆಯ ಮಹತ್ವದ ಕುರಿತು ಅರಿವು ಮೂಡಿಸಿದರು.

ಕಾರ್ಯಕ್ರಮದ ಕೊನೆಯ ಭಾಗದ ಬೀದಿ ನಾಟಕವನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಪಂಜಿಗುಡ್ಡೆ ಈಶ್ವರ ಭಟ್ ಉಪಸ್ಥಿತರಿದ್ದು ಶುಭ ಹಾರೈಸಿದರು.

Ad Widget

Ad Widget

ಕಾರ್ಯಕ್ರಮದಲ್ಲಿ ಉದ್ಘಾಟನಾ ಹಾಗೂ ಮುಖ್ಯ ಅತಿಥಿಯಾಗಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಅತಿಥಿಗಳಾಗಿ ಪುತ್ತೂರು ಕೆಮಿಸ್ಟ್ ಆ್ಯಂಡ್ ಡ್ರಗ್ಗಿಸ್ಟ್ ಅಸೋಸಿಯೇಷನ್ ಅಧ್ಯಕ್ಷ ವಾಸುದೇವ ಭಟ್, ಕೆಎಸ್‌ಆರ್‌ಟಿಸಿ ಪುತ್ತೂರು ಡಿಪೋ ಮ್ಯಾನೇಜರ್ ಸುಬ್ರಹ್ಮಣ್ಯ  ಪ್ರಕಾಶ್ ಎಂ. ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿವಿಜಯನಾರಾಯಣ ಕೆ. ಎಂ. ಉಪಸ್ಥಿತರಿದ್ದರು.

ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಗೋವಿಂದ ಪ್ರಕಾಶ್ ಸಾಯ, ಸದಸ್ಯರಾದ ರಾಮದಾಸ ಶೆಣೈ, ಡಾ. ಸಿ ಎಸ್ ಶಾಸ್ತ್ರೀ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ಗುರುರಾಜ ಎಂ. ಪಿ., ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!